Union Budget 2024: ಬುಡಕಟ್ಟು ಕಲ್ಯಾಣಕ್ಕಾಗಿ ‘ಜನ್​​​ಜಾತೀಯ ಉನ್ನತ್ ಗ್ರಾಮ ಅಭಿಯಾನ’

ದೂರದ ಪ್ರದೇಶಗಳಲ್ಲಿನ ಬುಡಕಟ್ಟು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು, ಏಕಲವ್ಯ ಮಾದರಿ ವಸತಿ ಶಾಲೆಗಳು ಅಥವಾ ಇಎಂಆರ್‌ಎಸ್ ಸ್ಥಾಪಿಸಲು ₹ 6,399 ಮೌಲ್ಯದ ಹಣವನ್ನು ನಿಗದಿಪಡಿಸಲಾಗಿದೆ.  1997-98 ರಲ್ಲಿ ಸ್ಥಾಪಿತವಾದ EMRS ದೂರದ ಪ್ರದೇಶಗಳ ಎಸ್​​ಟಿ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಮತ್ತು ಉದ್ಯೋಗಾವಕಾಶಗಳಿಗಾಗಿ ತಲುಪಲು ಸಾಧ್ಯವಾಗುವಂತೆ ಮಾಡುವ ಗುರಿಯನ್ನು ಹೊಂದಿದೆ.

Union Budget 2024: ಬುಡಕಟ್ಟು ಕಲ್ಯಾಣಕ್ಕಾಗಿ 'ಜನ್​​​ಜಾತೀಯ ಉನ್ನತ್ ಗ್ರಾಮ ಅಭಿಯಾನ'
ನಿರ್ಮಲಾ ಸೀತಾರಾಮನ್
Follow us
ರಶ್ಮಿ ಕಲ್ಲಕಟ್ಟ
|

Updated on: Jul 23, 2024 | 8:03 PM

ದೆಹಲಿ ಜುಲೈ 23: ದೇಶದ ಬುಡಕಟ್ಟು ಸಮುದಾಯಗಳ ಸಾಮಾಜಿಕ-ಆರ್ಥಿಕ ಪರಿಸ್ಥಿತಿಗಳನ್ನು ಸುಧಾರಿಸಲು ಪ್ರಧಾನ ಮಂತ್ರಿ ‘ಜನ್​​​ಜಾತೀಯ ಉನ್ನತ್ ಗ್ರಾಮ ಅಭಿಯಾನ’ವನ್ನು (Janjatiya Unnat Gram Abhiyan) ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮಂಗಳವಾರ ಘೋಷಿಸಿದ್ದಾರೆ. ಸಚಿವರು ಬಜೆಟ್ ಮಂಡನೆ ಸಂದರ್ಭದಲ್ಲಿ ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ಸುಮಾರು 70 ಪ್ರತಿಶತದಷ್ಟು ಬಜೆಟ್ ಹಂಚಿಕೆಯನ್ನು ಹೆಚ್ಚಿಸಿದರು.

63,000 ಬುಡಕಟ್ಟು ಗ್ರಾಮಗಳನ್ನು ಒಳಗೊಂಡಿರುವ ಈ ಕಾರ್ಯಕ್ರಮವು ಐದು ಕೋಟಿ ಬುಡಕಟ್ಟು ಜನರಿಗೆ ಪ್ರಯೋಜನವನ್ನು ನೀಡುತ್ತದೆ, ಮುಖ್ಯವಾಗಿ ಬುಡಕಟ್ಟು ಕುಟುಂಬಗಳು ವಾಸಿಸುವ ಗ್ರಾಮಗಳು ಮತ್ತು ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ (ಬಡ ಸಾಮಾಜಿಕ-ಆರ್ಥಿಕ ಸೂಚಕಗಳಿಂದ ಪ್ರಭಾವಿತವಾಗಿರುವ ಜಿಲ್ಲೆಗಳು) ಸ್ಯಾಚುರೇಶನ್ ವ್ಯಾಪ್ತಿಯನ್ನು ಸಾಧಿಸುವ ಗುರಿಯನ್ನು ಹೊಂದಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಹಿಂದಿನ ಹಣಕಾಸು ವರ್ಷದಲ್ಲಿ ₹ 7,605 ಕೋಟಿಗೆ ಹೋಲಿಸಿದರೆ ಈ ವರ್ಷ ₹ 13,000 ಕೋಟಿ ಹಣವನ್ನು ಸರ್ಕಾರವು ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ಹಂಚಿಕೆ ಮಾಡಿದೆ.

ದೂರದ ಪ್ರದೇಶಗಳಲ್ಲಿನ ಬುಡಕಟ್ಟು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು, ಏಕಲವ್ಯ ಮಾದರಿ ವಸತಿ ಶಾಲೆಗಳು ಅಥವಾ ಇಎಂಆರ್‌ಎಸ್ ಸ್ಥಾಪಿಸಲು ₹ 6,399 ಮೌಲ್ಯದ ಹಣವನ್ನು ನಿಗದಿಪಡಿಸಲಾಗಿದೆ.  1997-98 ರಲ್ಲಿ ಸ್ಥಾಪಿತವಾದ EMRS ದೂರದ ಪ್ರದೇಶಗಳ ಎಸ್​​ಟಿ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಮತ್ತು ಉದ್ಯೋಗಾವಕಾಶಗಳಿಗಾಗಿ ತಲುಪಲು ಸಾಧ್ಯವಾಗುವಂತೆ ಮಾಡುವ ಗುರಿಯನ್ನು ಹೊಂದಿದೆ. ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಅಧಿಕೃತ ವೆಬ್‌ಸೈಟ್ ಪ್ರಕಾರ, ಪ್ರತಿ ಶಾಲೆಯು 6 ರಿಂದ 12 ನೇ ತರಗತಿಯವರೆಗೆ 480 ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಹೊಂದಿದೆ.

ಇದನ್ನೂ ಓದಿ: ಕಾರ್ಪೊರೇಟ್ ತೆರಿಗೆ 5 ಪ್ರತಿಶತದಷ್ಟು ಇಳಿಕೆ; ಏಂಜೆಲ್ ಟ್ಯಾಕ್ಸ್ ರದ್ದು; ಉದ್ಯಮ ವಲಯಕ್ಕೆ ತುಸು ರಿಲೀಫ್

ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಇತರ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಬಜೆಟ್ ಹಂಚಿಕೆಯನ್ನು 2023-24ರಲ್ಲಿ ₹2,959.43 ಕೋಟಿಯಿಂದ 2024-25ರಲ್ಲಿ ₹6,611.69 ಕೋಟಿಗೆ ಹೆಚ್ಚಿಸಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ. ಪ್ರಧಾನ ಮಂತ್ರಿ ಆದಿ ಆದರ್ಶ ಗ್ರಾಮ ಯೋಜನೆ (PMAAGY) ಗಾಗಿ ಹಣಕಾಸಿನ ಬೆಂಬಲವನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಧಿಸೂಚಿತ ಎಸ್ಟಿ ಜನಸಂಖ್ಯೆಗೆ 2023-24 ರಲ್ಲಿ ₹ 300 ಕೋಟಿಯಿಂದ 2024-25 ರಲ್ಲಿ ₹ 1,000 ಕೋಟಿಗೆ ಹೆಚ್ಚಿಸಲಾಗಿದೆ. PMAAGY ನಿಧಿಯನ್ನು ಬುಡಕಟ್ಟು ಜನರ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ, ಶಿಕ್ಷಣ, ಆರೋಗ್ಯ, ಕೃಷಿ, ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ-ಆದಾಯ ಉತ್ಪಾದನೆಯಂತಹ ವಿವಿಧ ಕ್ಷೇತ್ರಗಳಲ್ಲಿನ ಅಂತರವನ್ನು ಕಡಿಮೆ ಮಾಡುವ ಪ್ರಯತ್ನದಲ್ಲಿ ಬಳಸಲಾಗುತ್ತದೆ.

ಆದಾಗ್ಯೂ, 2023-24ರಲ್ಲಿ ₹ 230 ಕೋಟಿಯಿಂದ 2024-25ರಲ್ಲಿ ₹ 165 ಕೋಟಿಗೆ ಕುಸಿದಿದೆ, “ಎಸ್‌ಟಿ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ರಾಷ್ಟ್ರೀಯ ಫೆಲೋಶಿಪ್ ಮತ್ತು ವಿದ್ಯಾರ್ಥಿವೇತನ” ಗಾಗಿ ಬಜೆಟ್ ಹಂಚಿಕೆ ಕಡಿಮೆಯಾಗಿದೆ.

ಕೇಂದ್ರ ಬಜೆಟ್ ಲೈವ್ ಬ್ಲಾಗ್ ಲಿಂಕ್

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ