AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2025: ಗ್ರಾಮೀಣ ಪ್ರದೇಶಗಳ ಎಲ್ಲಾ ಸರ್ಕಾರಿ ಶಾಲೆಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕ: ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಣೆ

ಈ ಕಾರ್ಯಕ್ರಮವು ಭಾರತ್‌ನೆಟ್ ಯೋಜನೆಯ ಭಾಗವಾಗಿರುತ್ತದೆ. ಡಿಸೆಂಬರ್ 2024 ರ ಹೊತ್ತಿಗೆ, 6.92 ಲಕ್ಷ ಕಿಲೋಮೀಟರ್ ಆಪ್ಟಿಕಲ್ ಫೈಬರ್ ಕೇಬಲ್ ಹಾಕಲಾಗಿದೆ, 2.14 ಲಕ್ಷ ಗ್ರಾಮ ಪಂಚಾಯಿತಿಗಳು ಈಗ ಈ ಸೇವೆಗೆ ಸಿದ್ಧವಾಗಿವೆ. ಇದು ದೂರದ ಪ್ರದೇಶಗಳಿಗೆ ತುಂಬಾ ಉಪಕಾರಿ ಆಗಿದೆ.

Budget 2025: ಗ್ರಾಮೀಣ ಪ್ರದೇಶಗಳ ಎಲ್ಲಾ ಸರ್ಕಾರಿ ಶಾಲೆಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕ: ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಣೆ
Budget 2025
ಪ್ರೀತಿ ಭಟ್​, ಗುಣವಂತೆ
| Edited By: |

Updated on:Feb 01, 2025 | 5:31 PM

Share

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್​ ಮಂಡನೆ ಆರಂಭಿಸಿದ್ದಾರೆ. ತಮ್ಮ ಎಂಟನೇ ಬಜೆಟ್ ಭಾಷಣದಲ್ಲಿ ವಿತ್ತ ಸಚಿವೆ ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕವನ್ನು ವಿಸ್ತರಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಈ ಕಾರ್ಯಕ್ರಮವು ಭಾರತ್‌ನೆಟ್ ಯೋಜನೆಯ ಭಾಗವಾಗಿರುತ್ತದೆ. ಡಿಸೆಂಬರ್ 2024 ರ ಹೊತ್ತಿಗೆ, 6.92 ಲಕ್ಷ ಕಿಲೋಮೀಟರ್ ಆಪ್ಟಿಕಲ್ ಫೈಬರ್ ಕೇಬಲ್ ಹಾಕಲಾಗಿದೆ, 2.14 ಲಕ್ಷ ಗ್ರಾಮ ಪಂಚಾಯಿತಿಗಳು ಈಗ ಈ ಸೇವೆಗೆ ಸಿದ್ಧವಾಗಿವೆ. ಇದು ದೂರದ ಪ್ರದೇಶಗಳಿಗೆ ತುಂಬಾ ಉಪಕಾರಿ ಆಗಿದೆ.

ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಿ..

Published On - 11:56 am, Sat, 1 February 25