Union Budget 2024: 15 ಲಕ್ಷ ರೂವರೆಗಿನ ಆದಾಯಕ್ಕೆ ತೆರಿಗೆ ಕಡಿತಗೊಳಿಸಲಾಗುತ್ತಾ? ಇಲ್ಲಿದೆ ಡೀಟೇಲ್ಸ್

Union Budget 2024, income tax news: ಕೇಂದ್ರ ಬಜೆಟ್​ನಲ್ಲಿ 15 ಲಕ್ಷ ರೂವರೆಗಿನ ಆದಾಯದ ಸ್ಲ್ಯಾಬ್ ದರಗಳನ್ನು ಪರಿಷ್ಕರಿಸಬಹುದು. ಮಧ್ಯಮವರ್ಗದವರಿಗೆ ಇರುವ ತೆರಿಗೆ ಹೊರೆಯನ್ನು ಇಳಿಸಬಹುದು ಎನ್ನುವ ಸುದ್ದಿ ಕೇಳಿಬರುತ್ತಿದೆ. ಆದರೆ, ಸರ್ಕಾರಿ ಅಧಿಕಾರಿಯೊಬ್ಬರು ಈ ಸುದ್ದಿಯನ್ನು ತಳ್ಳಿಹಾಕಿದ್ದು, ಆ ಮಟ್ಟಕ್ಕೆ ತೆರಿಗೆ ಇಳಿಕೆ ಅಸಾಧ್ಯ ಎಂದಿದ್ದಾರೆ.

Union Budget 2024: 15 ಲಕ್ಷ ರೂವರೆಗಿನ ಆದಾಯಕ್ಕೆ ತೆರಿಗೆ ಕಡಿತಗೊಳಿಸಲಾಗುತ್ತಾ? ಇಲ್ಲಿದೆ ಡೀಟೇಲ್ಸ್
ಬಜೆಟ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 24, 2024 | 4:18 PM

ನವದೆಹಲಿ, ಜೂನ್ 24: ಮುಂಬರುವ ಕೇಂದ್ರ ಮುಂಗಡ ಪತ್ರದಲ್ಲಿ (Union Budget 2024) ಆದಾಯ ತೆರಿಗೆ ಪರಿಷ್ಕರಣೆ ಮಾಡಲಾಗುತ್ತದೆ ಎನ್ನುವ ಸುದ್ದಿಗೆ ರೆಕ್ಕೆ ಪುಕ್ಕಗಳು ಅಂಟಿಕೊಂಡಂತಿವೆ. ಒಂದು ವರದಿ ಪ್ರಕಾರ ವರ್ಷಕ್ಕೆ 15 ಲಕ್ಷ ರೂವರೆಗಿನ ಆದಾಯಕ್ಕೆ ತೆರಿಗೆ ಪ್ರಮಾಣ ಕಡಿತಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸರ್ಕಾರಿ ಅಧಿಕಾರಿಯೊಬ್ಬರು ಈ ಸುದ್ದಿಯನ್ನು ಅಲ್ಲಗಳೆದಿದ್ದಾರೆ. ಈ ಮಟ್ಟದವರೆಗಿನ ಆದಾಯಕ್ಕೆ ತೆರಿಗೆಯನ್ನು ಇಳಿಸುವುದರಿಂದ ಸರ್ಕಾರ ಬೊಕ್ಕಸಕ್ಕೆ ದೊಡ್ಡ ಆದಾಯ ಕೈತಪ್ಪುತ್ತದೆ. ಅಂಥ ಕ್ರಮಕ್ಕೆ ಸರ್ಕಾರ ಮುಂದಾಗುವುದಿಲ್ಲ ಎಂದು ತಮಗೆ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾಗಿ ಸಿಎನ್​ಬಿಸಿ ಟಿವಿ18 ಸುದ್ದಿಸಂಸ್ಥೆ ವರದಿ ಮಾಡಿದೆ.

ಸದ್ಯ 15 ಲಕ್ಷ ರೂವರೆಗಿನ ಆದಾಯಕ್ಕೆ ಶೇ. 20ರವರೆಗೂ ಟ್ಯಾಕ್ಸ್ ಸ್ಲ್ಯಾಬ್​ ದರಗಳಿವೆ. 15 ಲಕ್ಷ ರೂಗಿಂತ ಮೇಲ್ಪಟ್ಟ ಆದಾಯಕ್ಕೆ ತೆರಿಗೆ ಮೊತ್ತ ಶೇ. 30 ಆಗುತ್ತದೆ. ಕೆಲ ವರದಿಗಳ ಪ್ರಕಾರ ಶೇ. 20 ಮತ್ತು ಶೇ. 30ರಷ್ಟು ತೆರಿಗೆ ಇರುವ ಸ್ಲ್ಯಾಬ್​ಗಳಲ್ಲಿ ದರ ಪರಿಷ್ಕರಣೆ ಆಗಬಹುದು. ಆದರೆ, ಅಧಿಕೃತವಾಗಿ ಯಾರೂ ಈ ಬಗ್ಗೆ ಮಾಹಿತಿ ನೀಡಿಲ್ಲ.

ಇದನ್ನೂ ಓದಿ: ನೀವು ಇನ್ಕಮ್ ಟ್ಯಾಕ್ಸ್ ರಿಟರ್ನ್ ಫೈಲ್ ಮಾಡದಿದ್ದರೆ ಏನಾಗುತ್ತೆ? ಈ ಪರಿಣಾಮಗಳನ್ನು ತಿಳಿದಿರಿ

ಹೊಸ ಟ್ಯಾಕ್ಸ್ ರೆಜಿಮಿಯಲ್ಲಿ ಈಗಿರುವ ದರಗಳ ವಿವರ

  • 3 ಲಕ್ಷ ರೂವರೆಗಿನ ಆದಾಯಕ್ಕೆ ತೆರಿಗೆ ಇರುವುದಿಲ್ಲ
  • 3ರಿಂದ 6 ಲಕ್ಷ ರೂವರೆಗಿನ ಆದಾಯ: ಶೇ. 5 ತೆರಿಗೆ
  • 6ರಿಂದ 9 ಲಕ್ಷ ರೂವರೆಗಿನ ಆದಾಯ: ಶೇ. 10
  • 9ರಿಂದ 12 ಲಕ್ಷ ರೂವರೆಗಿನ ಆದಾಯ: ಶೇ. 15
  • 12ರಿಂದ 15 ಲಕ್ಷ ರೂವರೆಗಿನ ಆದಾಯ: ಶೇ. 20
  • 15 ಲಕ್ಷ ರೂ ಮೇಲ್ಪಟ್ಟ ಆದಾಯಕ್ಕೆ: ಶೇ. 30ರಷ್ಟು ತೆರಿಗೆ

ಇಲ್ಲಿ ಏಳು ಲಕ್ಷ ರೂವರೆಗಿನ ಆದಾಯಕ್ಕೆ ಟ್ಯಾಕ್ಸ್ ರಿಬೇಟ್ ಇದೆ. ಜೊತೆಗೆ 50,000 ರೂ ಸ್ಟ್ಯಾಂಡರ್ಡ್ ಡಿಡಕ್ಷನ್ ಇರುತ್ತದೆ. ನಿಮ್ಮ ಸಂಬಳ 7.5 ಲಕ್ಷ ರೂ ಒಳಗಿದ್ದರೆ ನೀವು ತೆರಿಗೆ ಕಟ್ಟಬೇಕಿಲ್ಲ.

ಇದನ್ನೂ ಓದಿ: ಟರ್ಮ್ ಇನ್ಷೂರೆನ್ಸ್ ಮತ್ತು ಲೈಫ್ ಇನ್ಷೂರೆನ್ಸ್ ಮಧ್ಯೆ ವ್ಯತ್ಯಾಸ ಏನು? ಯಾವುದು ಬೆಟರ್? ಎರಡರ ಹೋಲಿಕೆ ಇಲ್ಲಿದೆ…

ಹಳೆಯ ಟ್ಯಾಕ್ಸ್ ರೆಜಿಮೆಯಲ್ಲ ಟ್ಯಾಕ್ಸ್ ರಿಬೇಟ್ ಅವಕಾಶ ಇಲ್ಲ. ಅಲ್ಲಿ ನಿಮಗೆ ಟ್ಯಾಕ್ಸ್ ಡಿಡಕ್ಷನ್ ಅವಕಾಶಗಳುಂಟು. ಸೆಕ್ಷನ್ 80ಸಿ ಮೊದಲಾದವುಗಳಿಂದ ಒಂದೂವರೆ ಲಕ್ಷ ರೂವರೆಗೆ ಡಿಡಕ್ಷನ್ ಪಡೆಯಬಹುದು. ಎನ್​ಪಿಎಸ್, ಮೆಡಿಕಲ್ ಇನ್ಷೂರೆನ್ಸ್ ಮಾಡಿಸಿ ಹೆಚ್ಚುವರಿ ಡಿಡಕ್ಷನ್ ಪಡೆಯಬಹುದು. ಪಿಪಿಎಫ್​ ಇತ್ಯಾದಿ ಯೋಜನೆಗಳು ಸೆಕ್ಷನ್ 80 ಸಿ ಅಡಿಗೆ ಬರುತ್ತವೆ.

ಜುಲೈ 22 ಅಥವಾ ಆ ತಿಂಗಳ ಕೊನೆಯ ವಾರದಲ್ಲಿ ಬಜೆಟ್ ಮಂಡನೆ ಆಗಬಹುದು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈಗಾಗಲೇ ವಿವಿಧ ಇಲಾಖೆಗಳು, ಉದ್ಯಮಗಳ ಪ್ರತಿನಿಧಿಗಳು ಮೊದಲಾದವರನ್ನು ಭೇಟಿಯಾಗಿ ಸಮಾಲೋಚನೆ ನಡೆಸುತ್ತಿದ್ದಾರೆ.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ