AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒ ಇದ್ದಲ್ಲೆಲ್ಲ ಸೊನ್ನೆ ಹಾಕಿದ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ; ಕೇಂದ್ರ ಬಜೆಟ್​​ಗೆ ನೀಡಿದ ಪ್ರತಿಕ್ರಿಯೆ ಇದು !

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಸುಮಾರು 39.45 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್​ನ್ನು  ಮಂಡನೆ ಮಾಡಿದ್ದಾರೆ. ಬಹುತೇಕ ಎಲ್ಲ ಕ್ಷೇತ್ರಗಳಿಗೂ ಅನುದಾನ ನೀಡಲಾಗಿದ್ದರೂ, ಪ್ರತಿಪಕ್ಷ ಕಾಂಗ್ರೆಸ್​ ಇದೊಂದು ಮಧ್ಯಮ ವರ್ಗ ವಿರೋಧಿ ಬಜೆಟ್​ ಎಂದು ವಿವರಿಸಿದೆ.

ಒ ಇದ್ದಲ್ಲೆಲ್ಲ ಸೊನ್ನೆ  ಹಾಕಿದ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ; ಕೇಂದ್ರ ಬಜೆಟ್​​ಗೆ ನೀಡಿದ ಪ್ರತಿಕ್ರಿಯೆ ಇದು !
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ
TV9 Web
| Updated By: Digi Tech Desk|

Updated on:Feb 01, 2022 | 4:42 PM

Share

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (FM Nirmala Sitharaman)​ ಇಂದು ಮಂಡಿಸಿದ ಬಜೆಟ್​ ಶೂನ್ಯ ಲೆಕ್ಕದ ಬಜೆಟ್​ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಇಂದು ಬಜೆಟ್​ ಹೆಸರಲ್ಲಿ ಮಾಡಲಾದ ಘೋಷಣೆಯಲ್ಲಿ  ವೇತನ ವರ್ಗಕ್ಕೆ, ಮಧ್ಯಮ ವರ್ಗಕ್ಕೆ, ಬಡವರು ಮತ್ತು ಸೌಲಭ್ಯ ವಂಚಿತರಿಗೆ, ಯುವಕರು, ರೈತರಿಗೆ, ಎಂಎಸ್​ಎಂಇಗಳಿಗೆ ಏನೂ ಇಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, M0di G0vernment’s Zer0 Sum Budget! ಎಂದು ಹೇಳಿ, ಅದರಡಿಯಲ್ಲಿ Nothing for (ಏನೂ ಇಲ್ಲ) Salaried class (ವೇತನ ವರ್ಗ), Middle class (ಮಧ್ಯಮ ವರ್ಗ), The poor & deprived (ಬಡವರು ಮತ್ತು ಸೌಕರ್ಯ ವಂಚಿತರು), Youth (ಯುವಜನರು), Farmers (ರೈತರು) ಮತ್ತು MSMEs (ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು) ಎಂದು ಬರೆದುಕೊಂಡಿದ್ದಾರೆ. ಇದರಲ್ಲಿ G0vernment’s Zer0 Sum Budget! ಎಂಬ ವಾಕ್ಯದಲ್ಲಿ ಇಂಗ್ಲಿಷ್​ ವರ್ಣಮಾಲೆಯ ಒ ಅಕ್ಷರ ಎಲ್ಲೆಲ್ಲಿ ಬರಬೇಕಿತ್ತೋ, ಅಲ್ಲೆಲ್ಲ ಶೂನ್ಯವನ್ನು ಹಾಕಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್​ ಮಾಡಿ, ಬಜೆಟ್​ನ್ನು ಟೀಕಿಸಿದ್ದಾರೆ. ‘ರೈತರ ಆದಾಯವನ್ನು ದ್ವಿಗುಣಗೊಳಿಸುವುದಿಲ್ಲ, ಮಧ್ಯಮ ವರ್ಗದವರಿಗೆ ತೆರಿಗೆ ವಿನಾಯಿತಿ ಇಲ್ಲ, ಹಣದುಬ್ಬರ (ಬೆಲೆ ಏರಿಕೆ) ಇಳಿಕೆಯಿಲ್ಲ, ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಯಾವುದೇ ಕ್ರಮವೂ ಇಲ್ಲ,  ಯುವಕರಿಗೆ ಉದ್ಯೋಗ ಅವಕಾಶ ನೀಡಲಾಗಿಲ್ಲ. ಈ ಬಾರಿಯೂ ಹಳೇ ಸುಳ್ಳುಗಳನ್ನೇ ಹೇಳಲಾಗಿದೆ ಮತ್ತು ಸಬ್ಸಿಡಿ ಮೇಲೆ ಪ್ರಹಾರ ನಡೆಸಲಾಗಿದೆ. ಇದು ಮೋದಿ ಸರ್ಕಾರದ ಈ ಬಾರಿಯ ಬಜೆಟ್ ಸಾರಾಂಶ ಎಂದು ವ್ಯಂಗ್ಯವಾಡಿದ್ದಾರೆ.

ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಸುಮಾರು 39.45 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್​ನ್ನು  ಮಂಡನೆ ಮಾಡಿದ್ದಾರೆ. ಬಹುತೇಕ ಎಲ್ಲ ಕ್ಷೇತ್ರಗಳಿಗೂ ಅನುದಾನ ನೀಡಲಾಗಿದ್ದರೂ, ಪ್ರತಿಪಕ್ಷ ಕಾಂಗ್ರೆಸ್​ ಇದೊಂದು ಮಧ್ಯಮ ವರ್ಗ ವಿರೋಧಿ ಬಜೆಟ್​ ಎಂದು ವಿವರಿಸಿದೆ.  ಕೇಂದ್ರ ಸರ್ಕಾರ ಮಧ್ಯಮ ವರ್ಗದವರಿಗೆ ನಂಬಿಕೆ ದ್ರೋಹ ಮಾಡಿದೆ. ದೇಶದ ವೇತನ ಮತ್ತು ಮಧ್ಯಮ ವರ್ಗಕ್ಕೆ ನಿರಾಸೆಯಾಗಿದೆ. ಸಾಂಕ್ರಾಮಿಕದಿಂದ ತುಂಬ ಹೊಡೆತಕ್ಕೊಳಗಾದ ಈ ವಿಭಾಗದವರಿಗೆ ಏನೂ ನೀಡಿಲ್ಲ.  ನೇರ ತೆರಿಗೆ ಕ್ರಮಗಳಲ್ಲಿ ಕೂಡ ಅವರಿಗೆ ಪ್ರಧಾನಿ ಮತ್ತು ಹಣಕಾಸು ಸಚಿವರು ನಿರಾಸೆ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಣದೀಪ್​ ಸುರ್ಜೇವಾಲಾ ಹೇಳಿದ್ದಾರೆ.

ಇದನ್ನೂ ಓದಿ: ಸಾಂಕ್ರಾಮಿಕ ಸಮಯದಲ್ಲಿ ತೆರಿಗೆಯನ್ನು ಹೆಚ್ಚಿಸಲು ಬಯಸಲಿಲ್ಲ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

Published On - 4:37 pm, Tue, 1 February 22

ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ