ಗ್ಯಾರಂಟಿ ಯೋಜನೆಗಳಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ವಾರ್ಷಿಕ ₹ 233 ಕೋಟಿ ಖರ್ಚಾಗುತ್ತದೆ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Mar 07, 2025 | 6:46 PM

ಬಜೆಟ್ ಅನ್ನು ಹಲಾಲ್ ಅಂತ ವಿರೋಧ ಪಕ್ಷ ಹೇಳಿದ್ದಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯ, ನಮ್ಮ ಬಜೆಟ್ ಗಾತ್ರ ₹4.09 ಲಕ್ಷ ಕೋಟಿ, ಅದರಲ್ಲಿ ಎಲ್ಲ ಅಲ್ಪಸಂಖ್ಯಾತರ ವರ್ಗಗಳಿಗೆ ₹ 4,500 ಕೋಟಿ ತೆಗೆದಿರಿಸಿದರೆ ಅದು ಹಲಾಲ್ ಬಜೆಟ್ ಹೇಗಾಗುತ್ತದೆ? ಇದು ಬಿಜೆಪಿಯವರ ಕೊಳಕು ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಹೇಳಿದರು.

ಬೆಂಗಳೂರು, ಮಾರ್ಚ್ 7: ಬಜೆಟ್ ಮಂಡಿಸಿದ ಬಳಿಕ ವಾಡಿಕೆಯಂತೆ ಸುದ್ದಿಗೋಷ್ಠಿ (presser) ನಡೆಸಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ವಾರ್ಷಿಕ ₹233 ಕೋಟಿ ಸರ್ಕಾರಕ್ಕೆ ಖರ್ಚು ಬರುತ್ತದೆ, ಜನರ ಕೈಗೆ ಹಣ ಸಿಗುವಂತೆ ಯೋಜನೆಗಳನ್ನು ರೂಪಿಸಿದ್ದು ಅಭಿವೃದ್ಧಿಯ ದ್ಯೋತಕ ಅನ್ನೋದು ವಿರೋಧ ಪಕ್ಷದ ನಾಯಕರಿಗೆ ಅರ್ಥವಾಗುತ್ತಿಲ್ಲ, ಜನರ ಕೈಗೆ ದುಡ್ಡು ಸಿಕ್ಕರೆ ಅವರ ಖರೀದಿ ಶಕ್ತಿ ಹೆಚ್ಚಿ ಆರ್ಥಿಕ ಚಟುವಟಿಕೆಗಳು ಜಾಸ್ತಿಯಾಗುತ್ತವೆ ಎಂದು ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Karnataka Budget 2025: ಕರ್ನಾಟಕ ಭದ್ರತೆಗೆ ಒತ್ತು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹಲವು ಕ್ರಮ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.