Budget 2023 Live: ಬಜೆಟ್ ಮಂಡನೆಗೆ ಮೊದಲೇ ಷೇರು ಮಾರುಕಟ್ಟೆಯಲ್ಲಿ ಆಶಾದಾಯಕ ಬೆಳವಣಿಗೆ, ಬಲಗೊಂಡ ರೂಪಾಯಿ

ಅರುಣ್​ ಕುಮಾರ್​ ಬೆಳ್ಳಿ

Updated on: Feb 01, 2023 | 11:49 AM

ಡಾಲರ್ ಎದುರು ರೂಪಾಯಿ ಮೌಲ್ಯ ಬಲಗೊಂಡಿರುವುದು ಭಾರತೀಯರಲ್ಲಿ ಉತ್ಸಾಹ ಮೂಡಿಸಿದೆ. ಎನ್ ಎಸ್ ಈ ಷೇರು ಸೂಚ್ಯಂಕದಲ್ಲಿ 59,911 ಪಾಯಿಂಟ್ ಗಳ ಜಿಗಿತ ನಿಜಕ್ಕೂ ಹೊಸ ನಿರೀಕ್ಷೆಗಳಿಗೆ ಇಂಬು ನೀಡಿದೆ.

ಬೆಂಗಳೂರು:  ಕೇಂದ್ರ ಯಾವುದೇ ಸರ್ಕಾರ ಅಧಿಕಾರದಲ್ಲಿರಲಿ, ಹಣಕಾಸು ಸಚಿವರು (finance minister) ಆ ಸಾಲಿನ ಬಜೆಟ್ ಮಂಡಿಸುವ ದಿನ ಜನ ಸಾಮಾನ್ಯರು ಅದರಲ್ಲೂ ವಿಶೇಷವಾಗಿ ಮಧ್ಯಮ ಕುಟುಂಬಗಳ ವರ್ಗ (middle class families) ಹತ್ತಾರು ನಿರೀಕ್ಷೆಗಳನ್ನು ಇಟ್ಟುಕೊಂಡಿರುತ್ತದೆ. 2023-24 ನೇ ಸಾಲಿನ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಇನ್ನು ಕೆಲವೇ ಕ್ಷಣಗಳಲ್ಲಿ ಮಂಡಿಸಲಿದ್ದಾರೆ. ಬಜೆಟ್ ಮಂಡನೆಗೆ ಮೊದಲೇ ಷೇರುಪೇಟೆಯಲ್ಲಿ ಆಶಾದಾಯಕ ಬೆಳವಣಿಗೆ ಕಂಡುಬಂದಿರುವುದು, ಡಾಲರ್ ಎದುರು ರೂಪಾಯಿ ಮೌಲ್ಯ ಬಲಗೊಂಡಿರುವುದು ಭಾರತೀಯರಲ್ಲಿ ಉತ್ಸಾಹ ಮೂಡಿಸಿದೆ. ಎನ್ ಎಸ್ ಈ ಷೇರು ಸೂಚ್ಯಂಕದಲ್ಲಿ 59,911 ಪಾಯಿಂಟ್ ಗಳ ಜಿಗಿತ ನಿಜಕ್ಕೂ ಹೊಸ ನಿರೀಕ್ಷೆಗಳಿಗೆ ಇಂಬು ನೀಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 01, 2023 11:03 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.