PM Kisan: ಪಿಎಂ ಕಿಸಾನ್ ಹಣ ಶೇ. 30ರಷ್ಟು ಹೆಚ್ಚಿಸುವ ಸಾಧ್ಯತೆ; ಬಜೆಟ್​ನಲ್ಲಿ 80,000 ಕೋಟಿ ರೂ ನಿಯೋಜನೆ?

|

Updated on: Jul 16, 2024 | 11:56 AM

Budget 2024: ಮುಂಬರುವ ಕೇಂದ್ರ ಬಜೆಟ್​ನಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಹೆಚ್ಚಿನ ಹಣ ಹಂಚಿಕೆ ಆಗಬಹುದು ಎನ್ನಲಾಗುತ್ತಿದೆ. ವರದಿಗಳ ಪ್ರಕಾರ ಶೇ. 30ರಷ್ಟು ಹೆಚ್ಚು ಅಲೋಕೇಶನ್ ಆಗಬಹುದು. ಮಧ್ಯಂತರ ಬಜೆಟ್​ನಲ್ಲಿ ಈ ಯೋಜನೆಗೆ 60,000 ರೂ ಹಣ ಘೋಷಿಸಲಾಗಿತ್ತು. ಅದನ್ನು 80,000 ಕೋಟಿ ರೂಗೆ ಹೆಚ್ಚಿಸಬಹುದು ಎನ್ನಲಾಗುತ್ತಿದೆ.

PM Kisan: ಪಿಎಂ ಕಿಸಾನ್ ಹಣ ಶೇ. 30ರಷ್ಟು ಹೆಚ್ಚಿಸುವ ಸಾಧ್ಯತೆ; ಬಜೆಟ್​ನಲ್ಲಿ 80,000 ಕೋಟಿ ರೂ ನಿಯೋಜನೆ?
ರೈತ
Follow us on

ನವದೆಹಲಿ, ಜುಲೈ 16: ಮುಂದಿನ ವಾರ ಮಂಡನೆಯಾಗಲಿರುವ ಕೇಂದ್ರ ಬಜೆಟ್​ನಲ್ಲಿ ಇರುವ ನಿರೀಕ್ಷೆಗಳಲ್ಲಿ ಪಿಎಂ ಕಿಸಾನ್ ಯೋಜನೆ ಹಣ ಹೆಚ್ಚಳವೂ ಇದೆ. ವರದಿಗಳ ಪ್ರಕಾರ ಪಿಎಂ ಕಿಸಾನ್ ಯೋಜನೆಗೆ ಬಜೆಟ್​ನಲ್ಲಿ ನೀಡಲಾಗುವ ಹಣದಲ್ಲಿ ಶೇ. 30ರಷ್ಟು ಹೆಚ್ಚಳ ಆಗಬಹುದು ಎನ್ನಲಾಗುತ್ತಿದೆ. ಮಧ್ಯಂತ ಬಜೆಟ್​ನಲ್ಲಿ ಈ ಯೋಜನೆಗೆ ಒಂದು ವರ್ಷಕ್ಕೆ 60,000 ಕೋಟಿ ರೂ ಎತ್ತಿ ಇಡಲಾಗಿತ್ತು. ಜುಲೈ 17ರ ಬಜೆಟ್​ನಲ್ಲಿ ಈ ಹಂಚಿಕೆಯನ್ನು 80,000 ಕೋಟಿ ರೂಗೆ ಹೆಚ್ಚಿಸಬಹುದು ಎನ್ನಲಾಗುತ್ತಿದೆ.

ಮೂಲಗಳ ಪ್ರಕಾರ ಈ ಬಾರಿಯ ಬಜೆಟ್​ನಲ್ಲಿ ಯುವಜನರು, ಮಹಿಳೆಯರು, ರೈತರು ಮತ್ತು ಗ್ರಾಮೀಣಭಾಗ ಈ ನಾಲ್ಕು ಅಂಶಗಳಿಗೆ ಹೆಚ್ಚಿನ ಒತ್ತು ಕೊಡಬಹುದು. ಹೀಗಾಗಿ, ಪಿಎಂ ಕಿಸಾನ್ ಯೋಜನೆಗೆ ಹಣ ಹಂಚಿಕೆ ಹೆಚ್ಚಿಸುವ ಸಾಧ್ಯತೆ ಗಟ್ಟಿಯಾಗಿದೆ. ರೈತ ಸಂಘಟನೆಗಳ ಪ್ರತಿನಿಧಿಗಳು ಈಗಾಗಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಪಿಎಂ ಕಿಸಾನ್ ಯೋಜನೆ ಹಾಗು ಇತರ ಯೋಜನೆಗಳಿಗೆ ಹೆಚ್ಚಿನ ಹಣ ಹಂಚಿಕೆ ಮಾಡಿ ರೈತರಿಗೆ ನೆರವಾಗುವಂತೆ ಮನವಿ ಮಾಡಿದ್ದಾರೆ.

ಪಿಎಂ ಕಿಸಾನ್ ಯೋಜನೆ, ಕಂತು ಏರಿಸಬಹುದು…

ಸದ್ಯ, ಪಿಎಂ ಕಿಸಾನ್ ಯೋಜನೆಯಲ್ಲಿ ಒಂದು ವರ್ಷದಲ್ಲಿ 6,000 ರೂ ಹಣವನ್ನು ರೈತರಿಗೆ ನೀಡಲಾಗುತ್ತಿದೆ. ಅಂದರೆ, ತಲಾ 2,000 ರೂಗಳಂತೆ ಮೂರು ಕಂತುಗಳಲ್ಲಿ ಈ ಹಣವನ್ನು ನೀಡಲಾಗುತ್ತಿದೆ. ಈಗ ಒಂದು ಕಂತು ಹೆಚ್ಚು ಮಾಡಬಹುದು. 2,000 ರೂಗಳ ನಾಲ್ಕು ಕಂತುಗಳನ್ನು ರೈತರ ಖಾತೆಗಳಿಗೆ ಹಾಕಬಹುದು. ಒಟ್ಟು ಒಂದು ವರ್ಷದಲ್ಲಿ 8,000 ರೂ ಹಣವು ರೈತರಿಗೆ ಸಿಗಲಿದೆ.

ಇದನ್ನೂ ಓದಿ: ವಿದೇಶಗಳಲ್ಲಿ 7 ಲಕ್ಷಕ್ಕೂ ಹೆಚ್ಚು ಕ್ರೆಡಿಟ್ ಕಾರ್ಡ್ ವೆಚ್ಚಕ್ಕೆ ಶೇ. 20 ಟಿಸಿಎಸ್; ಬಜೆಟ್​ನಲ್ಲಿ ಘೋಷಣೆ ಸಾಧ್ಯತೆ

2018-19ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆಯಲ್ಲಿ ಈವರೆಗೆ 17 ಕಂತುಗಳ ಹಣವನ್ನು ರೈತರಿಗೆ ಕೊಡಲಾಗಿದೆ. 17ನೇ ಕಂತಿನಲ್ಲಿ 9 ಕೋಟಿಗೂ ಹೆಚ್ಚು ಫಲಾನುಭವಿಗಳು ಹಣ ಪಡೆದಿದ್ದಾರೆ. ಸರ್ಕಾರ ಸುಮಾರು 20,000 ಕೋಟಿ ರೂ ಹಣವನ್ನು 17ನೇ ಕಂತಿಗೆ ಬಿಡುಗಡೆ ಮಾಡಿತ್ತು.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ