Union Budget 2023 | ಚುನಾವಣಾ ವರ್ಷದಲ್ಲಿ ನಿರ್ಮಲಾ ಸೀತಾರಾಮನ್ ಮೂಗಿಗೆ ತುಪ್ಪ ಸವರಿದ್ದಾರೆ, ಅಷ್ಟೇ: ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Feb 01, 2023 | 1:35 PM

ಈಗ ಚುನಾವಣೆ ವರ್ಷದಲ್ಲಿ ಮಾಡಿರುವ ಕಾರ್ಯಕ್ರಮಗಳನ್ನು ಸರ್ಕಾರ ಅನುಷ್ಠಾನಕ್ಕೆ ತರೋದು ಯಾವಾಗ ಅಂತ ಕುಮಾರಸ್ವಾಮಿ ಪ್ರಶ್ನಿಸಿದರು.

ದಾವಣಗೆರೆ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಮಂಡಿಸಿರುವ ಬಜೆಟ್ 2023 (Budget 2023) ಮೂಗಿಗೆ ತುಪ್ಪ ಸವರಿದಂತಿದೆ, ಚುನಾವಣಾ ವರ್ಷದಲ್ಲಿ ಜನರನ್ನು ಮರಳು ಮಾಡಲು ಯೋಜನೆಗಳ ಘೋಷಣೆಯಾಗಿದೆ ಅವು ಜಾರಿಯಾಗೋದು ಕೇಂದ್ರದಲ್ಲಿ ಸರ್ಕಾರ ಬದಲಾವಣೆಯಾದ ನಂತರವೇ ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಹೇಳಿದರು. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಕುಮಾರಸ್ವಾಮಿಯರು ಬಜೆಟ್ ನಲ್ಲಿ ಘೋಷಿಸುವ ಯೋಜನೆಗಳನ್ನು ರಾಷ್ಟ್ರೀಯ ಯೋಜನೆಗಳಾಗಿ ಪರಿಗಣಿಸಿ ಅವುಗಳನ್ನು ಜಾರಿಗೊಳಿಸಬೇಕೆಂದು ಬಹಳ ಹಿಂದೆಯೇ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಈಗ ಚುನಾವಣೆ ವರ್ಷದಲ್ಲಿ ಮಾಡಿರುವ ಕಾರ್ಯಕ್ರಮಗಳನ್ನು ಸರ್ಕಾರ ಅನುಷ್ಠಾನಕ್ಕೆ ತರೋದು ಯಾವಾಗ ಅಂತ ಕುಮಾರಸ್ವಾಮಿ ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.