Karnataka Budget 2022: ರಾಜ್ಯ ಬಜೆಟ್ನಲ್ಲಿ ರೈತ ಶಕ್ತಿ ಯೋಜನೆ ಘೋಷಣೆ; ಡೀಸೆಲ್ಗೆ ಸಹಾಯಧನಕ್ಕಾಗಿ 500 ಕೋಟಿ ರೂ. ಘೋಷಣೆ
ಕರ್ನಾಟಕ ಬಜೆಟ್ 2022ರಲ್ಲಿ ರೈತಶಕ್ತಿ ಯೋಜನೆ ಘೋಷಿಸಲಾಗಿದೆ. ಇದರ ಅಡಿಯಲ್ಲಿ ಡೀಸೆಲ್ಗಾಗಿ ಎಕರೆಗೆ 250 ರೂಪಾಯಿಯಂತೆ ಗರಿಷ್ಠ 5 ಎಕರೆಗೆ ನೀಡಲಾಗುವುದು.
ಮಾರ್ಚ್ 4ನೇ ತಾರೀಕಿನ ಶುಕ್ರವಾರದಂದು ತಮ್ಮ ಮೊದಲ ಬಜೆಟ್ (Karnataka Budget 2022) ಮಂಡಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರೈತ ಶಕ್ತಿ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಕೃಷಿ ಉತ್ಪಾದಕತೆ ಹೆಚ್ಚಿಸಲು ಯಂತ್ರೋಪಕರಣ ಬಳಕೆ ಪ್ರೋತ್ಸಾಹಿಸಲು ಪ್ರತಿ ಎಕರೆಗೆ 250 ರುಪಾಯಿಯಂತೆ ಗರಿಷ್ಠ 5 ಎಕರೆಗೆ ಡೀಸೆಲ್ ಸಹಾಯ ಧನವನ್ನು ನೇರ ನಗದು ವರ್ಗಾವಣೆ ಮೂಲಕ ರೈತರಿಗೆ ನೀಡಲಾಗುವುದು ಎಂದು ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ. ಈ ಯೋಜನೆಗಾಗಿ ಸರ್ಕಾರದಿಂದ ಬಜೆಟ್ನಲ್ಲಿ 500 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ.
ಇನ್ನು ಪ್ರತಿ ಟನ್ ದ್ವಿತಳಿ ರೇಷ್ಮೆಗೂಡಿಗೆ 10 ಸಾವಿರ ಪ್ರೋತ್ಸಾಹಧನ ಘೋಷಣೆ ಮಾಡಲಾಗಿದ್ದು, ದ್ವಿತಳಿ ರೇಷ್ಮೆ ಮೊಟ್ಟೆ ಉತ್ಪಾದಿಸಿ ಸಂಗ್ರಹಿಸಿಡಲು ಶೈತ್ಯಾಗಾರ ಸ್ಥಾಪನೆ ಮಾಡಲಾಗುವುದು. 15 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದ 3 ಸ್ಥಳಗಳಲ್ಲಿ ಶೈತ್ಯಾಗಾರ ಸ್ಥಾಪನೆ ಮಾಡಲಾಗುವುದು. ಮದ್ದೂರು, ರಾಣೆಬೆನ್ನೂರು, ದೇವನಹಳ್ಳಿಯಲ್ಲಿ ಶೈತ್ಯಾಗಾರ ಸ್ಥಾಪಿಸಲಾಗುವುದು ಎಂದು ಬಜೆಟ್ನಲ್ಲಿ ಘೋಷಿಸಲಾಗಿದೆ.
30 ಕೋಟಿ ರೂಪಾಯಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು. ಕಲಬುರಗಿ, ಹಾವೇರಿಯಲ್ಲಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಲಾಗಿದೆ.
ದ್ವಿತಳಿ ಬಿತ್ತನೆ ಗೂಡಿಗೆ ಕೆಜಿಗೆ ₹50 ಪ್ರೋತ್ಸಾಹಧನ ಹೆಚ್ಚಳ ಮಾಡಲಾಗಿದೆ. ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೂ ಪ್ರೋತ್ಸಾಹಧನ ನೀಡಲಾಗುವುದು. ಮಂಡ್ಯ ಜಿಲ್ಲೆ ಕೆ.ಆರ್. ಮಾರ್ಕೆಟ್‌ನಲ್ಲಿ ರೇಷ್ಮೆ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು ಎಂದು ತಿಳಿಸಲಾಗಿದೆ.
Published On - 1:04 pm, Fri, 4 March 22