Union Budget 2023: ಕೃಷಿ ಸಾಲದ ಗುರಿಯನ್ನು ₹20 ಲಕ್ಷ ಕೋಟಿಗೆ ಹೆಚ್ಚಿಸುವುದಾಗಿ ಘೋಷಣೆ
ಕೃಷಿ ಸ್ಟಾರ್ಟಪ್‌ಗಳಿಗೆ ವೇಗವರ್ಧಕ ನಿಧಿಯನ್ನು ಸ್ಥಾಪಿಸಲಾಗುವುದು. ಹತ್ತಿಯ ಬೆಳವಣಿಗೆ ಮತ್ತು ರಫ್ತು ಹೆಚ್ಚಿಸಲು ರೈತರು, ರಾಜ್ಯ ಮತ್ತು ಕೈಗಾರಿಕೆಗಳ ನಡುವೆ ಸಾರ್ವಜನಿಕ-ಖಾಸಗಿ ಸಹಭಾಗಿತ್ವವನ್ನು ಸ್ಥಾಪಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
2023ರ ಕೇಂದ್ರ ಬಜೆಟ್ (Union Budget 2023) ಪಶುಸಂಗೋಪನೆ ಮತ್ತು ಮೀನುಗಾರಿಕೆಗೆ ಒತ್ತು ನೀಡುವ ಮೂಲಕ ಕೃಷಿ ಸಾಲದ(agriculture credit) ಗುರಿಯನ್ನು 20 ಲಕ್ಷ ಕೋಟಿಗೆ ಹೆಚ್ಚಿಸುವ ಗುರಿಯನ್ನು ಹೊಂದಿದೆ. ಇದಕ್ಕೆ ಸಂಬಂಧಿಸಿದಂತೆ, ರೋಗ ಮುಕ್ತ ನಾಟಿ ವಸ್ತುಗಳನ್ನು ಅಭಿವೃದ್ಧಿಪಡಿಸಲು ಮತ್ತು ಒದಗಿಸಲು 2,200 ಕೋಟಿ ರೂಪಾಯಿಗಳನ್ನು ವಿನಿಯೋಗಿಸಲಾಗುವುದು. ಅದೇ ವೇಳೆ ಬಜೆಟ್ ಹಂಚಿಕೆ ರೈತ ಕೇಂದ್ರಿತವಾಗಿರುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Sitharaman) ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ. ಕೃಷಿ ಸ್ಟಾರ್ಟಪ್‌ಗಳಿಗೆ ವೇಗವರ್ಧಕ ನಿಧಿಯನ್ನು ಸ್ಥಾಪಿಸಲಾಗುವುದು. ಹತ್ತಿಯ ಬೆಳವಣಿಗೆ ಮತ್ತು ರಫ್ತು ಹೆಚ್ಚಿಸಲು ರೈತರು, ರಾಜ್ಯ ಮತ್ತು ಕೈಗಾರಿಕೆಗಳ ನಡುವೆ ಸಾರ್ವಜನಿಕ-ಖಾಸಗಿ ಸಹಭಾಗಿತ್ವವನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದ್ದಾರೆ.
ರಾಗಿ ಸಂಶೋಧನೆಗೆ ಭಾರತವನ್ನು ಜಾಗತಿಕ ಕೇಂದ್ರವನ್ನಾಗಿ ಮಾಡುವುದು ಗುರಿಯಾಗಿದೆ. ರಾಗಿಯನ್ನು “ಶ್ರೀ ಅನ್ನ” ಎಂದು ಕರೆಯಲಾಗಿದೆ. ಹೈದರಾಬಾದ್‌ನಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮಿಲೆಟ್ಸ್ ಅನ್ನು ಶ್ರೇಷ್ಠತೆಯ ಕೇಂದ್ರವನ್ನಾಗಿ ಮಾಡಲಾಗುವುದು. ದೇಶದಾದ್ಯಂತ 63,000 ಕೃಷಿ ಸೊಸೈಟಿಗಳನ್ನು ಗಣಕೀಕರಣಗೊಳಿಸಲು ಬಜೆಟ್‌ನಲ್ಲಿ 2,516 ಕೋಟಿ ರೂ. ಕೃಷಿ ಬೆಳೆಗಳಿಗೆ ಬೃಹತ್ ವಿಕೇಂದ್ರೀಕೃತ ಸಂಗ್ರಹಣೆಯನ್ನು ಸೃಷ್ಟಿಸುವ ಗುರಿಯನ್ನು ಬಜೆಟ್ ಹೊಂದಿದೆ ಎಂದು ವಿತ್ತ ಸಚಿವೆ ಹೇಳಿದ್ದಾರೆ.
ಇದನ್ನೂ ಓದಿ: Budget 2023: ಮಕ್ಕಳು ಮತ್ತು ಹದಿಹರೆಯದವರಿಗೆ ಪುಸ್ತಕಗಳು ಸುಲಭವಾಗಿ ಸಿಗಲು ರಾಷ್ಟ್ರೀಯ ಡಿಜಿಟಲ್ ಲೈಬ್ರರಿ ಸ್ಥಾಪನೆ
ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಉಪ ಯೋಜನೆಯಾಗಿ ಮೀನುಗಾರಿಕೆಯನ್ನು ಅಭಿವೃದ್ಧಿಪಡಿಸಲು ರೂ 6,000 ಕೋಟಿಗಳ ಗುರಿ ಹೂಡಿಕೆಯನ್ನು ನಿಗದಿಪಡಿಸಲಾಗಿದೆ. ಮುಂದಿನ ಐದು ವರ್ಷಗಳಲ್ಲಿ, ಈ ಸಂಘಗಳನ್ನು ಹೊಂದಿರದ ಗ್ರಾಮಗಳು ಮತ್ತು ಪಂಚಾಯಿತಿಗಳಲ್ಲಿ ಕೃಷಿ, ಮೀನುಗಾರಿಕೆ ಮತ್ತು ಡೈರಿ ಸಹಕಾರ ಸಂಘಗಳನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ರೈತರಿಗೆ ₹ 2 ಲಕ್ಷದಷ್ಟು ಸಾಲವನ್ನು ನಗದು ರೂಪದಲ್ಲಿ ನೀಡಲು, ₹ 2 ಲಕ್ಷದಷ್ಟು ಹಣವನ್ನು ನಗದು ರೂಪದಲ್ಲಿ ಕಟ್ಟಿಸಿಕೊಳ್ಳಲು ಅವಕಾಶ ನೀಡಲಾಗಿದೆ.
ಹಿಂದಿನ ಬಜೆಟ್‌ನಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯಕ್ಕೆ 1.32 ಲಕ್ಷ ಕೋಟಿ ರೂ. ಮೀನುಗಾರಿಕೆಗೆ 2,118 ಕೋಟಿ ರೂ., ಪಶುಸಂಗೋಪನೆ ಮತ್ತು ಹೈನುಗಾರಿಕೆಗೆ 3,919 ಕೋಟಿ ರೂ ಅನುದಾನ ಘೋಷಿಸಲಾಗಿತ್ತು.
ವಾಣಿಜ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:47 pm, Wed, 1 February 23