Union Budget 2023: ಏಕಲವ್ಯ ಮಾದರಿ ವಸತಿ ಶಾಲೆಗಳ ಮೂಲಕ ಬುಡಕಟ್ಟು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ: ನಿರ್ಮಲಾ ಸೀತಾರಾಮನ್

ಏಕಲವ್ಯ ಮಾದರಿ ವಸತಿ ಶಾಲೆಗಳ ಮೂಲಕ ಎಸ್‌ಟಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಸರ್ಕಾರ ಮುಂದಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

Union Budget 2023: ಏಕಲವ್ಯ ಮಾದರಿ ವಸತಿ ಶಾಲೆಗಳ ಮೂಲಕ ಬುಡಕಟ್ಟು  ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ: ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
Follow us
ನಯನಾ ರಾಜೀವ್
|

Updated on:Feb 01, 2023 | 11:58 AM

ಏಕಲವ್ಯ ಮಾದರಿ ವಸತಿ ಶಾಲೆಗಳ ಮೂಲಕ ಎಸ್‌ಟಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಸರ್ಕಾರ ಮುಂದಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ನವೋದಯ ಶಾಲೆಗಳ ಮಾದರಿಯಲ್ಲೇ ಬುಡಕಟ್ಟು ಪ್ರದೇಶಗಳ ಮಕ್ಕಳಿಗಾಗಿ ಏಕಲವ್ಯ ವಸತಿ ಶಾಲೆ ತೆರೆಯಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಿದ್ದಾರೆ.

ಮುಂದಿನ ಮೂರು ವರ್ಷಗಳಲ್ಲಿ ದೇಶಾದ್ಯಂತ ಗಿರಿಜನರು ವಾಸಿಸುತ್ತಿರುವ ಪ್ರದೇಶಗಳಲ್ಲಿ ಏಕಲವ್ಯ ಮಾದರಿ ಶಾಲೆಗಳನ್ನು ಸ್ಥಾಪಿಸಲಾಗುವುದು. ಈ ಶಾಲೆಗಳಿಗಾಗಿ 38,800 ಶಿಕ್ಷಕರು ಹಾಗೂ 740 ಬೋಧಕೇತರ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು. ಇದರಿಂದ 3.5 ಲಕ್ಷ ಗಿರಿಜನ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಸಚಿವರು ಹೇಳಿದರು.

ಏಕಲವ್ಯನ ಬಿಲ್ಲು ಮತ್ತು ಬಾಣದ ಆಕಾರದಲ್ಲಿ ಆರ್ಕಿಟೈಪ್ ಪೆನ್ನನ್ನು ಹೊಂದಿರುವ ತೆರೆದ ಪುಸ್ತಕವು ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ (EMRSs) ವಿದ್ಯಾರ್ಥಿಗಳ ಅಚಲ ಗಮನವನ್ನು ಪ್ರತಿಬಿಂಬಿಸುತ್ತದೆ. ಹಿಂದೆ ಬುಡಕಟ್ಟು ಜನರನ್ನು ಬಿಲ್ಲು ಮತ್ತು ಬಾಣವು ರಕ್ಷಿಸುತ್ತದೆ ಮತ್ತು ಅಧಿಕಾರ ನೀಡಿತು ಮತ್ತು ಈಗ ಶಿಕ್ಷಣವು ಅವರನ್ನು ಸಬಲೀಕರಣಗೊಳಿಸುವ ಸಾಧನವಾಗಿದೆ.

ವಸತಿ ಕ್ಷೇತ್ರಕ್ಕೆ ಆದ್ಯತೆ ನೀಡಲಾಗಿದೆ, ಅನುದಾನ ಶೇ 66ರಷ್ಟು ಹೆಚ್ಚಳ ಮಾಡಲಾಗಿದೆ, ವಸತಿ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡಿರುವ ಕೇಂದ್ರ ಹಣಕಾಸು ಸಚಿವಾಲಯವು ಈ ವರ್ಷದ ಬಜೆಟ್​ನಲ್ಲಿ ₹ 79,000 ಕೋಟಿ ಅನುದಾನ ಘೋಷಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ವಸತಿ ಕ್ಷೇತ್ರಕ್ಕಾಗಿ ಮೀಸಲಿಟ್ಟಿರುವ ಹಣವು ಶೇ 66ರಷ್ಟು ಹೆಚ್ಚಾಗಿದೆ.

ಮತ್ತಷ್ಟು ಓದಿ: Budget 2023: ಅಮೃತಕಾಲದ ಮೊದಲ ಬಜೆಟ್; ನಿರ್ಮಲಾ ಸೀತಾರಾಮನ್ ಹೇಳಿದ 7 ಬಜೆಟ್​ ಆದ್ಯತೆಗಳಿವು

ಮಕ್ಕಳು ಮತ್ತು ಹದಿಹರೆಯದವರಿಗೆ ಉತ್ತಮ ಪುಸ್ತಕಗಳು ಸುಲಭವಾಗಿ ಸಿಗುವಂತೆ ಮಾಡುವ ಉದ್ದೇಶದಿಂದ ರಾಷ್ಟ್ರೀಯ ಡಿಜಿಟಲ್ ಲೈಬ್ರೆರಿ (National digital library for children and adolescents) ಯೋಜನೆಯನ್ನು ಸಚಿವರು ಪ್ರಕಟಿಸಿದರು.

ಆರೋಗ್ಯ ಕ್ಷೇತ್ರದ ಸುಧಾರಣೆಗಾಗಿ ಸಚಿವರು ಹಲವು ಹೊಸ ಕ್ರಮಗಳನ್ನು ಘೋಷಿಸಿದರು. 2015ರಿಂದ ಆರಂಭವಾಗಿರುವ ಹೊಸ ಮೆಡಿಕಲ್ ಕಾಲೇಜುಗಳಿಗೆ ಹತ್ತಿರದಲ್ಲಿಯೇ ಹೊಸದಾಗಿ 157 ನರ್ಸಿಂಗ್ ಕಾಲೇಜುಗಳನ್ನು ಆರಂಭಿಸಲಾಗುವುದು. ಸಿಕಲ್ ಸೆಲ್ ಅನಿಮಿಯಾ ಕಾಯಿಲೆಯನ್ನು 2047ರ ಒಳಗೆ ನಿರ್ಮೂಲನೆ ಮಾಡಲಾಗುವುದು.

ಐಸಿಎಂಆರ್ ಲ್ಯಾಬ್​ಗಳನ್ನು ಸಾರ್ವಜನಿಕ ಮತ್ತು ಖಾಸಗಿ ವೈದ್ಯಕೀಯ ಸಂಶೋಧನೆಗೆ ಒದಗಿಸಲಾಗುವುದು. ಔಷಧ ವಿಜ್ಞಾನದಲ್ಲಿ ಸಂಶೋಧನೆಗೆ ಉತ್ತೇಜನ ನೀಡಲು ಹೊಸ ಕಾರ್ಯಕ್ರಮ ರೂಪಿಸಲಾಗುವುದು ಎಂದು ಸಚಿವರು ಘೋಷಿಸಿದರು.

ವಾಣಿಜ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:46 am, Wed, 1 February 23

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ