Budget 2023: ಸರ್ಕಾರಿ ಏಜೆನ್ಸಿಗಳಲ್ಲಿ ಡಿಜಿಟಲ್ ಗುರುತಿನ ದಾಖಲೆಗೆ ಇನ್ನು ಪ್ಯಾನ್ ಸಾಕು
ಈ ನಿರ್ಧಾರದಿಂದ ಆದಾಯ ತೆರಿಗೆ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಏಜೆನ್ಸಿಗಳಲ್ಲಿ ಕೆವೈಸಿ ಪ್ರಕ್ರಿಯೆ ಪ್ಯಾನ್ಕಾರ್ಡ್ ಹೊಂದಿರುವವರಿಗೆ ಸುಲಭವಾಗಲಿದೆ.
ನವದೆಹಲಿ: ನಿರ್ದಿಷ್ಟ ಸರ್ಕಾರಿ ಏಜೆನ್ಸಿಗಳ ಡಿಜಿಟಲ್ ವ್ಯವಸ್ಥೆಯಲ್ಲಿ ಗುರುತಿನ ದೃಢೀಕರಣಕ್ಕಾಗಿ ಪ್ಯಾನ್ (PAN) ಕಾರ್ಡ್ ಅನ್ನು ಸಾಮಾನ್ಯ ಗುರುತಿನ ಸಾಧನವಾಗಿ ಪರಿಗಣಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಘೋಷಿಸಿದರು. 2023-24ನೇ ಸಾಲಿನ ಬಜೆಟ್ (Budget 2023) ಮಂಡನೆ ಮಾಡಿದ ಅವರು, ಈ ಘೋಷಣೆ ಮಾಡಿದರು. ಈ ನಿರ್ಧಾರದೊಂದಿಗೆ, ವ್ಯಕ್ತಿಗಳ ಡಿಜಿಟಲ್ ಗುರುತು ದೃಢೀಕರಣದ ಸಮಸ್ಯೆಗೆ ಪರಿಹಾರ ದೊರೆಯಲಿದೆ ಎಂದು ಅವರು ಹೇಳಿದರು. ಈ ನಿರ್ಧಾರದಿಂದ ಆದಾಯ ತೆರಿಗೆ ಇಲಾಖೆ (Income Tax Department) ಸೇರಿದಂತೆ ವಿವಿಧ ಸರ್ಕಾರಿ ಏಜೆನ್ಸಿಗಳಲ್ಲಿ ಕೆವೈಸಿ ಪ್ರಕ್ರಿಯೆ ಪ್ಯಾನ್ಕಾರ್ಡ್ ಹೊಂದಿರುವವರಿಗೆ ಸುಲಭವಾಗಲಿದೆ.
ಇಷ್ಟೇ ಅಲ್ಲದೆ, ದೇಶದಲ್ಲಿ ಉದ್ಯಮಸ್ನೇಹಿ ವಾತಾವರಣ ನಿರ್ಮಿಸಲು ಬಜೆಟ್ ಮೂಲಕ ಕೇಂದ್ರ ಸರ್ಕಾರವು ಮತ್ತಷ್ಟು ಕ್ರಮಗಳನ್ನು ಘೋಷಿಸಿದೆ. ಉದ್ಯಮಗಳು ಪ್ರತ್ಯೇಕ ಪ್ಯಾನ್ (PAN) ನಂಬರ್ ಹೊಂದಬೇಕು. ಈ ನಂಬರ್ ಆಧರಿಸಿ ಉದ್ಯಮಿಗಳ ಕುಂದುಕೊರತೆಯನ್ನು ಶೀಘ್ರ ಪರಿಹರಿಸಲಾಗುವುದು. ಇದಕ್ಕಾಗಿ ಹಲವು ನಿಯಮಗಳನ್ನು ಸಡಿಲಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.
ಬಜೆಟ್ ಲೈವ್ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
Published On - 12:12 pm, Wed, 1 February 23