ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು ಮಧ್ಯಂತರ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್ ಮಂಡಿಸಲಿರುವ 6ನೇ ಬಜೆಟ್ ಇದಾಗಿದೆ. ಹಾಗೆಯೇ ಪ್ರಧಾನಿ ಮೋದಿ (Narendra Modi) ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್ ಕೂಡ ಇದಾಗಿರಲಿದೆ. ಬಜೆಟ್ ಮಂಡನೆ ಬೆಳಗ್ಗೆ 11 ಗಂಟೆಗೆ ಶುರುವಾಗಲಿದೆ. ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಭಾಷಣದ ನೇರ ಪ್ರಸಾರವನ್ನು ಡಿಡಿ ನ್ಯೂಸ್ನಲ್ಲಿ ವೀಕ್ಷಿಸಬಹುದಾಗಿದೆ.
ಲೋಕಸಭೆ ಚುನಾವಣೆಯ ನಂತರ ಸರ್ಕಾರ ರಚನೆಯಾಗುವವರೆಗೆ ಮಧ್ಯಂತರ ಬಜೆಟ್ (Union Budget 2024) ಮಧ್ಯಂತರ ಅವಧಿಯ ಹಣಕಾಸಿನ ಅಗತ್ಯಗಳನ್ನು ನೋಡಿಕೊಳ್ಳುತ್ತದೆ. ಹೊಸ ಸರ್ಕಾರದಿಂದ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುವುದು.
ಪಿಎಂ-ಕಿಸಾನ್ ಯೋಜನೆಯಡಿ ರೈತರಿಗೆ ವಿತರಿಸಲಾಗುತ್ತಿರುವ ಮೊತ್ತ 6 ಸಾವಿರ ರೂ.ಗಳಿಂದ 9 ಸಾವಿರ ರೂ.ಗಳಿಗೆ ಏರಿಕೆ, ನರೇಗಾ ಯೋಜನೆಗೆ ಹೆಚ್ಚಿನ ಹಂಚಿಕೆ ಮತ್ತು ಆಯುಷ್ಮಾನ್ ಭಾರತ ಯೋಜನೆಯಡಿ ಹೆಚ್ಚಿನ ವಿಮೆ ರಕ್ಷಣೆ ಕೂಡ ಸೇರಿವೆ.
ರಾಷ್ಟ್ರಪತಿ ಭಾಷಣದಲ್ಲಿ, 2023 ದೇಶಕ್ಕೆ ಐತಿಹಾಸಿಕ ವರ್ಷವಾಗಿದೆ. ದೇಶವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯ ವೇಗವನ್ನು ಮುಂದುವರೆಸಿದೆ ಎಂದು ಹೇಳಿದ್ದರು.
ಮತ್ತಷ್ಟು ಓದಿ: Budget 2024 Date: ಇಂದು ಕೇಂದ್ರ ಬಜೆಟ್, ಸಮಯ, ಸೆಷನ್, ದಾಖಲೆ ಮತ್ತಿತರ ವಿವರ
ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡುವ ಮೂಲಕ ಸಂಸತ್ತಿನ ಬಜೆಟ್ ಅಧಿವೇಶನ ಬುಧವಾರದಿಂದ ಪ್ರಾರಂಭವಾಗಿದೆ. ಈ ಏಪ್ರಿಲ್‌ನಲ್ಲಿ ಪ್ರಾರಂಭವಾಗುವ 2024-25 ರ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆಯು ಶೇ.7 ರ ಸಮೀಪಕ್ಕೆ ಬರುವ ನಿರೀಕ್ಷೆಯಿದೆ ಎಂದು ಹಣಕಾಸು ಸಚಿವಾಲಯವು ಪರಿಶೀಲನಾ ವರದಿಯಲ್ಲಿ ತಿಳಿಸಿದೆ.
ಮತ್ತಷ್ಟು ಓದಿ: Budget 2024 Live Stream: ಇಂದು ಮಧ್ಯಂತರ ಬಜೆಟ್, ಲೈವ್ ಸ್ಟ್ರೀಮಿಂಗ್ ಎಲ್ಲೆಲ್ಲಿ? ನೋಡಿ ಡೀಟೇಲ್ಸ್
ಪ್ರಸಕ್ತ ಹಣಕಾಸು ವರ್ಷದಲ್ಲಿ 2023-24 ರಲ್ಲಿ ಭಾರತದ ಆರ್ಥಿಕತೆಯು ಶೇ.7.3 ಬೆಳವಣಿಗೆ ನಿರೀಕ್ಷಿಸಲಾಗಿದೆ. ಇದು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ. ಭಾರತದ ಆರ್ಥಿಕತೆಯು 2022-23ರಲ್ಲಿ ಶೇ.7.2 ಮತ್ತು 2021-22ರಲ್ಲಿ ಶೇ.8.7ರಷ್ಟು ಬೆಳವಣಿಗೆ ಕಂಡಿದೆ. ಬಜೆಟ್ ಮಂಡನೆಯ ಕ್ಷಣ ಕ್ಷಣದ ಮಾಹಿತಿಯನ್ನು ಈ ಲೈವ್ಬ್ಲಾಗ್ನಲ್ಲಿ ನೀಡಲಾಗುತ್ತದೆ.
ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಿತ್ತ ಸಚಿವರ ಬಜೆಟ್ ಮಂಡನೆ ಚುನಾವಣಾ ಭಾಷಣದಂತಿತ್ತು ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಹೇಳಿದ್ದಾರೆ.
#WATCH | On interim Budget, Congress leader Sachin Pilot in Jaipur says, “The Finance Minister’s speech sounded like an election speech. The President’s address was also used as political speech.” pic.twitter.com/z2WRs5AMWw
— ANI (@ANI) February 1, 2024
ಇದು ಐತಿಹಾಸಿಕ ಬಜೆಟ್, ಭಾರತ ಈಗ ಮುಂದುವರೆಯುತ್ತಿದೆ ಇದು ಸರಿಯಾದ ಸಮಯ ಎಂದು ಹೇಳಿದರು.
#WATCH | On Interim Union Budget 2024-25, Union Minister Jyotiraditya Scindia says, “This is a historic budget…India has now moved forward. ‘Yahi samay hai, sahi samay hai’…” pic.twitter.com/gYLufgwvIy
— ANI (@ANI) February 1, 2024
ಗರೀಬ್ ಕಲ್ಯಾಣ್ ದೇಶ್ ಕಾ ಕಲ್ಯಾಣ್: ಬಡವರ ಶ್ರೇಯೋಭಿವೃದ್ಧಿಯಲ್ಲಿ ನಾವು ನಂಬಿಕೆ ಇಟ್ಟಿದ್ದೇವೆ. ಸಬ್ ಕಾ ಸಾಥ್ ಧ್ಯೇಯದೊಂದಿಗೆ ಸರ್ಕಾರವು 25 ಕೋಟಿ ಜನರಿಗೆ ಬಡತನದಿಂದ ಹೊರಬರುವಂತೆ ಮಾಡಲು ನೆರವಾಗಿದೆ. ನೇರ ನಗದು ವರ್ಗಾವಣೆ ಮೂಲಕ 34 ಲಕ್ಷ ಕೋಟಿ ರೂಪಾಯಿಯನ್ನು ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ.
ಸೋಲಾರ್ ಸಂಪರ್ಕ (Rooftop solarisation) ಯೋಜನೆಯು 1 ಕೋಟಿ ಮನೆಗಳಿಗೆ ಉಚಿತ ವಿದ್ಯುತ್ ಸೌಲಭ್ಯವನ್ನು ಖಾತರಿಪಡಿಸುತ್ತದೆ. ಇದು ವಾರ್ಷಿಕ 15,000 – 18,000 ರೂಪಾಯಿ ಉಳಿತಾಯ ಮಾಡಲು ಕುಟುಂಬಗಳಿಗೆ ನೆರವಾಗಲಿದೆ.
ಕಳೆದ 10 ವರ್ಷಗಳಲ್ಲಿ ನೇರ ತೆರಿಗೆ ಪ್ರಮಾಣದಲ್ಲಿ ಶೇ 3 ರಷ್ಟು ಹೆಚ್ಚಳವಾಗಿದೆ. 2024-25ರ ಆರ್ಥಿಕ ವರ್ಷಕ್ಕೆ ತೆರಿಗೆ ಸಂಗ್ರಹ 26.02 ಟ್ರಿಲಿಯನ್ ರೂಪಾಯಿ ಇರಲಿದೆ ಎಂದು ಅಂದಾಜಿಸಲಾಗಿದೆ.
24ನೇ ಹಣಕಾಸು ವರ್ಷದ ಅಂದಾಜು ವೆಚ್ಚವನ್ನು 44.90 ಲಕ್ಷ ಕೋಟಿ ರೂ.ಗೆ ಪರಿಷ್ಕರಿಸಲಾಗಿದೆ. ಪೂರೈಕೆ ಸರಪಳಿಗಳು, ಪ್ರಾಥಮಿಕ ಮತ್ತು ಮಾಧ್ಯಮಿಕ ಸಂಸ್ಕರಣೆ, ಮಾರ್ಕೆಟಿಂಗ್ ಮತ್ತು ಬ್ರ್ಯಾಂಡಿಂಗ್ ಸೇರಿದಂತೆ ಸುಗ್ಗಿಯ ನಂತರದ ಚಟುವಟಿಕೆಗಳಲ್ಲಿ ಖಾಸಗಿ ಮತ್ತು ಸಾರ್ವಜನಿಕ ಹೂಡಿಕೆಯನ್ನು ಸರ್ಕಾರವು ಮತ್ತಷ್ಟು ಉತ್ತೇಜಿಸುತ್ತದೆ.
ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಮಹಿಳೆ ರಾಷ್ಟ್ರವನ್ನು ಸಶಕ್ತಗೊಳಿಸುತ್ತಾಳೆ-ಬಿಜೆಪಿ ಸಂಸದೆ ಪೂನಂ ಮಹಾಜನ್
ಅತ್ಯಂತ ಕಡಿಮೆ ಸಮಯದಲ್ಲಿ ಬಜೆಟ್ ಮಂಡನೆ ಮಾಡಿದ್ದಾರೆ, ಆತ್ಮವಿಶ್ವಾಸ, ಭರವಸೆ ಎಲ್ಲವೂ ಅಸ್ಪಷ್ಟವಾಗಿತ್ತು-ಶಶಿತರೂರ್
ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ನೀಡಲಾಗುವುದು-ನಿರ್ಮಲಾ ಸೀತಾರಾಮನ್
ಮಾರುಕಟ್ಟೆಯಿಂದ ಹೆಚ್ಚಿನ ಹಣವನ್ನು ಸಂಗ್ರಹಿಸಲು ಖಾಸಗಿ ವಲಯಕ್ಕೆ ಸರ್ಕಾರ ಅವಕಾಶ ನೀಡುತ್ತದೆ: ನಿರ್ಮಲಾ ಸೀತಾರಾಮನ್
ಆದಾಯ ತೆರಿಗೆ ಸ್ಲ್ಯಾಬ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ: ನಿರ್ಮಲಾ ಸೀತಾರಾಮನ್
ಕಳೆದ 10 ವರ್ಷಗಳಲ್ಲಿ ನೇರ ತೆರಿಗೆ ಪ್ರಮಾಣದಲ್ಲಿ ಶೇ.3 ರಷ್ಟು ಹೆಚ್ಚಳವಾಗಿದೆ. 2024-25ರ ಆರ್ಥಿಕ ವರ್ಷಕ್ಕೆ ತೆರಿಗೆ ಸಂಗ್ರಹ 26.02 ಟ್ರಿಲಿಯನ್ ರೂಪಾಯಿ ಇರಲಿದೆ ಎಂದು ಅಂದಾಜಿಸಲಾಗಿದೆ.-ನಿರ್ಮಲಾ
ಎಲ್ಲಾ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಪ್ರಯೋಜನಗಳ ವಿಸ್ತರಿಸಣೆ ಮಾಡಲಾಗುತ್ತದೆ. ಬಾಡಿಗೆ ಮನೆಗಳು, ಕೊಳೆಗೇರಿಗಳಲ್ಲಿ ವಾಸಿಸುವ ಜನರಿಗೆ ಹೊಸ ಮನೆಯನ್ನು ಖರೀದಿಸಲು ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ನೆರವು ನೀಡಲಾಗುತ್ತದೆ.
ವಿತ್ತೀಯ ಕೊರತೆಯ ಮೇಲೆ ಹಿಡಿತ ಸಾಧಿಸಲಾಗಿದೆ. 23-24ನೇ ಹಣಕಾಸು ವರ್ಷಕ್ಕೆ ಪರಿಷ್ಕೃತ ವಿತ್ತೀಯ ಕೊರತೆ ಶೇ 5.8 ನಿಗದಿಪಡಿಸಲಾಗಿದೆ.
ಕಿಸಾನ್ ಸಂಪದ ಯೋಜನೆಯಿಂದ 38 ಲಕ್ಷ ರೈತರಿಗೆ ಲಾಭವಾಗಿದೆ. ದೇಶದಲ್ಲಿ ಹಾಲು ಉತ್ಪಾದನಾ ಡೇರಿಗಳ ಸಂಖ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ಪ್ರತ್ಯೇಕ ಮತ್ಸ ಸಂಪದ ಯೋಜನೆ ಜಾರಿಗೊಳಿಸಿದೆ. ಪ್ರಧಾನಮಂತ್ರಿ ಮತ್ಸ ಸಂಪದ ಯೋಜನೆ ವಿಸ್ತರಿಸಲಾಗುವುದು. ಜೈಜವಾನ್, ಜೈಕಿಸಾನ್, ಜೈವಿಜ್ಞಾನ, ಜೈ ಅನುಸಂಧಾನ ಎಂಬ ಪ್ರಧಾನಿ ಮೋದಿ ಅವರ ಘೋಷಣೆಯಡಿ ಕಾರ್ಯನಿರ್ವಹಿಸುತ್ತೇವೆ.
ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ ನೀಡಲಾಗುವುದು-ನಿರ್ಮಲಾ ಸೀತಾರಾಮನ್
ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯಕ್ಕೆ ಸರ್ಕಾರ ಹಣ ವ್ಯವಸ್ಥೆ ಮಾಡಲಿದೆ-ನಿರ್ಮಲಾ ಸೀತಾರಾಮನ್
ಮೆಟ್ರೋ ರೈಲು ಇತರ ನಗರಗಳಿಗೂ ವಿಸ್ತರಿಸಲಾಗುವುದು-ನಿರ್ಮಲಾ
2024ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಲಾಗುತ್ತಿದೆ. ಈ ಸಂದರ್ಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲಖ್ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸಿದರು.ಈ ಯೋಜನೆಯ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು.
ಮೀನುಗಾರಿಕೆ ಯೋಜನೆಯನ್ನು ಉತ್ತೇಜಿಸಲು ಸರ್ಕಾರ ಕೆಲಸ ಮಾಡುತ್ತದೆ- ನಿರ್ಮಲಾ ಸೀತಾರಾಮನ್
ಸರ್ಕಾರ 5 ಇಂಟಿಗ್ರೇಟೆಡ್ ಆಕ್ವಾ ಪಾರ್ಕ್‌ಗಳನ್ನು ತೆರೆಯಲಿದೆ-ನಿರ್ಮಲಾ ಸೀತಾರಾಮನ್
ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು-ನಿರ್ಮಲಾ ಸೀತಾರಾಮನ್
ದೇಶದಲ್ಲಿ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು ನೀಡಲಾಗುವುದು, ಅಂಗನವಾಡಿ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು-ನಿರ್ಮಲಾ ಸೀತಾರಾಮನ್
ಮುಂದಿನ ಐದು ವರ್ಷಗಳಲ್ಲಿ 2 ಕೋಟಿ ಬಡವರಿಗೆ ಮನೆ ನಿರ್ಮಿಸಿಕೊಡುತ್ತೇವೆ: ನಿರ್ಮಲಾ
ಕ್ರೀಡೆಯಲ್ಲಿ ಹೊಸ ಎತ್ತರಕ್ಕೆ ಏರುತ್ತಿರುವ ನಮ್ಮ ಯುವಕರ ಬಗ್ಗೆ ದೇಶಕ್ಕೆ ಹೆಮ್ಮೆ ಇದೆ. 2023 ರಲ್ಲಿ ಏಷ್ಯನ್ ಗೇಮ್ಸ್ ಮತ್ತು ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಅತ್ಯಧಿಕ ಪದಕಗಳ ಸಂಖ್ಯೆಯು ಹೆಚ್ಚಿನ ಆತ್ಮವಿಶ್ವಾಸವನ್ನು ತೋರಿಸುತ್ತದೆ.
ಸರ್ಕಾರದ ಗಮನವು ಜಿಡಿಪಿ ಮೇಲೆ ಇದೆ ಎಂದು ಹಣಕಾಸು ಸಚಿವೆ ಸೀತಾರಾಮನ್ ಹೇಳಿದರು. ಸರ್ಕಾರವು ಆಡಳಿತ, ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ಮೇಲೆ ಸಮಾನವಾಗಿ ಗಮನಹರಿಸುತ್ತಿದೆ-ನಿರ್ಮಲಾ ಸೀತಾರಾಮನ್
FM Sitharaman says, “The government is equally focused on GDP – Governance, Development and Performance.” pic.twitter.com/iynkhPCxT5
— ANI (@ANI) February 1, 2024
ತ್ರಿವಳಿ ತಲಾಖ್ ಅನ್ನು ಕಾನೂನುಬಾಹಿರವಾಗಿಸುವುದು, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 1/3 ಸ್ಥಾನಗಳನ್ನು ಮೀಸಲಿಡುವುದು, ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 70% ಕ್ಕಿಂತ ಹೆಚ್ಚು ಮನೆಗಳನ್ನು ನೀಡುವುದು ಅವರ ಘನತೆಯನ್ನು ಹೆಚ್ಚಿಸಿದೆ-ನಿರ್ಮಲಾ
ಎಲ್ಲಾ ಮೂಲಭೂತ ಯೋಜನೆಗಳು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳುತ್ತಿವೆ, ತೆರಿಗೆ ಸುಧಾರಣೆಗಳಿಂದ ತೆರಿಗೆ ವ್ಯಾಪ್ತಿ ಹೆಚ್ಚಿದೆ-ನಿರ್ಮಲಾ ಸೀತಾರಾಮನ್
ಪ್ರಧಾನ ಮಂತ್ರಿ ಆವಾಸ್ ಅಡಿಯಲ್ಲಿ, ಗ್ರಾಮೀಣ ಪ್ರದೇಶದಲ್ಲಿ 70 ಪ್ರತಿಶತ ಮನೆಗಳನ್ನು ಮಹಿಳೆಯರಿಗೆ ನೀಡಲಾಗಿದೆ: ನಿರ್ಮಲಾ
2014ರಲ್ಲಿ ಪ್ರಧಾನಿ ಮೋದಿ ಅಧಿಕಾರ ಸ್ವೀಕರಿಸಿದಾಗ ಹಲವು ಸವಾಲುಗಳಿದ್ದವು. ಸಾರ್ವಜನಿಕರ ಹಿತದೃಷ್ಟಿಯಿಂದ ಆರ್ಥಿಕತೆಯನ್ನು ಬಲಪಡಿಸಲು ಮತ್ತು ಜನರಿಗೆ ಉದ್ಯೋಗವನ್ನು ಪಡೆಯಲು ಅನೇಕ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಮಾಡಲಾಗಿದೆ. ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿಯತ್ತ ಸರ್ಕಾರದ ಗಮನ ಕೇಂದ್ರೀಕರಿಸಿದೆ ಮತ್ತು ಎಲ್ಲಾ ವರ್ಗ ಮತ್ತು ಜನರ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಯುತ್ತಿದೆ. 2047 ರ ವೇಳೆಗೆ ನಾವು ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ-ನಿರ್ಮಲಾ ಸೀತಾರಾಮನ್
2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ-ನಿರ್ಮಲಾ
ಸ್ಕಿಲ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ ನೀಡಿದೆ, 54 ಲಕ್ಷ ಯುವಕರಿಗೆ ತರಬೇತಿ ನೀಡಿದೆ ಮತ್ತು 3000 ಹೊಸ ಐಟಿಐಗಳನ್ನು ಸ್ಥಾಪಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಉನ್ನತ ಶಿಕ್ಷಣದಲ್ಲಿ ಮಹಿಳೆಯರ ಭಾಗವಹಿಸುವಿಕೆ 10 ವರ್ಷಗಳಲ್ಲಿ 28 ಪ್ರತಿಶತದಷ್ಟು ಹೆಚ್ಚಾಗಿದೆ: ನಿರ್ಮಲಾ
On ‘Nari Shakti, FM Sitharaman says, “Female enrolment in higher education up by 28% in 10 years, in STEM courses, girls & women make 43% of enrolment, one of the highest in the world. All these steps are reflected in the increasing participation of women in the workforce. Making… pic.twitter.com/um9C6cxbgJ
— ANI (@ANI) February 1, 2024
ಫಸಲ್ ಬಿಮಾ ಯೋಜನೆಯಿಂದ ನಾಲ್ಕು ಕೋಟಿ ರೈತರಿಗೆ ಲಾಭ: ನಿರ್ಮಲಾ
ಬಡವರು, ಮಹಿಳೆಯರು ಮತ್ತು ಯುವಕರ ಕಡೆ ಗಮನ ಹರಿಸುವ ಅಗತ್ಯವಿದೆ ಎಂದು ಮಧ್ಯಂತರ ಬಜೆಟ್ ಮಂಡನೆಯಲ್ಲಿ ನಿರ್ಮಲಾ ಸೀತಾರಾಮನ್ ಹೇಳಿದರು.
ನಮ್ಮ ಯುವ ದೇಶವು ಹೆಚ್ಚಿನ ಆಕಾಂಕ್ಷೆಗಳನ್ನು ಹೊಂದಿದೆ, ಅದರ ವರ್ತಮಾನದ ಬಗ್ಗೆ ಹೆಮ್ಮೆಯಿದೆ ಮತ್ತು ಉಜ್ವಲ ಭವಿಷ್ಯಕ್ಕಾಗಿ ಭರವಸೆ ಮತ್ತು ನಂಬಿಕೆಯನ್ನು ಹೊಂದಿದೆ. ನಮ್ಮ ಸರ್ಕಾರದ ಅತ್ಯುತ್ತಮ ಕೆಲಸದ ಆಧಾರದ ಮೇಲೆ ಜನರು ಮತ್ತೊಮ್ಮೆ ಬಲವಾದ ಜನಾದೇಶವನ್ನು ನೀಡುತ್ತಾರೆ ಎಂದು ನಾವು ಭಾವಿಸುತ್ತೇವೆ-ನಿರ್ಮಲಾ ಸೀತಾರಾಮನ್
ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿವೆ. ದೇಶದ ಪ್ರತಿಯೊಂದು ವರ್ಗದ ಜನರಿಗೆ ಪ್ರತಿಯೊಂದು ಸೌಲಭ್ಯ ತಲುಪುತ್ತಿದೆ. ಗ್ರಾಮೀಣ ಜನರ ಆದಾಯ ಹೆಚ್ಚಿದೆ-ನಿರ್ಮಲಾ ಸೀತಾರಾಮನ್
ದೇಶಕ್ಕೆ ಹೊಸ ದಿಕ್ಕು ಮತ್ತು ಭರವಸೆ ಸಿಕ್ಕಿದೆ, ಎಲ್ಲರಿಗೂ ಮನೆ, ಎಲ್ಲರಿಗೂ ನೀರು, ಪ್ರತಿ ಮನೆಗೆ ವಿದ್ಯುತ್‌ಗೆ ಒತ್ತು ಕೊಡಲಾಗುತ್ತಿದೆ. ಕಳೆದ 10 ವರ್ಷಗಳಲ್ಲಿ ಭಾರತದ ಆರ್ಥಿಕತೆ ಉತ್ತಮ ಸಾಧನೆ ಮಾಡಿದೆ-ನಿರ್ಮಲಾ ಸೀತಾರಾಮನ್
ಮಧ್ಯಂತರ ಬಜೆಟ್ ಉತ್ತಮವಾಗಿರುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರಿಂದ ಬಜೆಟ್ ಮಂಡನೆ ಆರಂಭ
ಸಂಸತ್ತಿಗೆ ಆಗಮಿಸಿದ ಸೋನಿಯಾ ಗಾಂಧಿ
#WATCH | Congress Parliamentary Party Chairperson Sonia Gandhi arrives at the Parliament.
Union Finance Minister Nirmala Sitharaman will present the Budget in the House, shortly. pic.twitter.com/wfhk1MdQp7
— ANI (@ANI) February 1, 2024
ಈ ಬಜೆಟ್ ವಿಕಸಿತ ಭಾರತ ಹಾಗೂ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿಗಳನ್ನು ಈಡೇರಿಸುತ್ತದೆ-ಸಚಿವೆ ಅನುಪ್ರಿಯಾ ಪಟೇಲ್
ಇದೊಂದು ಚುನಾವಣಾ ಆಧರಿತ ಬಜೆಟ್ ಆಗಲಿದೆ ಎಂಬ ನಿರೀಕ್ಷೆಯಲ್ಲಿ ನಾವಿದ್ದೇವೆ. ಒಂದು ಕಡೆ ಜನಸಾಮಾನ್ಯರ ಬಗ್ಗೆ ಮಾತನಾಡುತ್ತಾ ಇನ್ನೊಂದು ಕಡೆ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿ ಜನವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದ್ದಾರೆ.
#WATCH | Ahead of the presentation of the Union Interim Budget, Congress MP K Suresh says, “We are expecting this to be an election-oriented budget. BJP wants to win again and come back to power. That is why, there will be some gimmick in the budget. There will be eyewash schemes… pic.twitter.com/BPXSJ6ZoKZ
— ANI (@ANI) February 1, 2024
ಬಜೆಟ್‌ಗೆ ಮೋದಿ ಸಂಪುಟದ ಒಪ್ಪಿಗೆ ಸಿಕ್ಕಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 11 ಗಂಟೆಗೆ ಸಂಸತ್ತಿನಲ್ಲಿ ಬಜೆಟ್ ಮಂಡಿಸಲಿದ್ದಾರೆ.
ನಾನು ಸರ್ಕಾರದಿಂದ ಧನಾತ್ಮಕವಾಗಿ ಏನನ್ನೂ ನಿರೀಕ್ಷಿಸುತ್ತಿಲ್ಲ, ಸರ್ಕಾರ ಯಾವ ರೀತಿಯ ಜನಪರ ನೀತಿ ತರುತ್ತದೆ ಎಂಬುದನ್ನು ನೋಡಬೇಕಿದೆ.- ಸಿಪಿಐ ಸಂಸದ ಪಿ ಸಂತೋಷ್ ಕುಮಾರ್
#WATCH | On interim Budget 2024, CPI MP P Santosh Kumar says, ” We will have to see if the govt will bring any pro-people policy. This govt is not doing anything for the general public. I am not expecting anything positive from the government. Since this is the election year, the… pic.twitter.com/AoJRIwhKvp
— ANI (@ANI) February 1, 2024
ನಿರ್ಮಲಾ ಸೀತಾರಾಮನ್ಗೆ ಸಿಹಿ ತಿನ್ನಿಸಿದ ರಾಷ್ಟ್ರಪತಿ ಮುರ್ಮು
Union Minister of Finance and Corporate Affairs Nirmala Sitharaman along with Ministers of State Dr Bhagwat Kishanrao Karad and Pankaj Chaudhary and senior officials of the Ministry of Finance called on President Droupadi Murmu at Rashtrapati Bhavan before presenting the Union… pic.twitter.com/o2UrUCRuaH
— ANI (@ANI) February 1, 2024
ಕಳೆದ ಬಾರಿಯಂತೆ ಈ ಬಾರಿಯೂ ಕಾಗದ ರಹಿತ ಬಜೆಟ್
ಕೇಂದ್ರ ಸಚಿವ ರಾವ್ ಇಂದರ್ಜಿತ್ ಅವರು ಸಂಸತ್ತಿಗೆ ಆಗಮಿಸಿದ್ದು, ಈ ಬಜೆಟ್ ಪ್ರಗತಿಪರವಾಗಿದ್ದು, ದೇಶದ ಅಭಿವೃದ್ಧಿಗಾಗಿಯೇ ಎಂದು ಹೇಳಿದ್ದಾರೆ.
ಬಜೆಟ್ ಟ್ಯಾಬ್ಲೆಟ್ ಹಿಡಿದು ಸಂಸತ್ತಿಗೆ ನಿರ್ಮಲಾ ಸೀತಾರಾಮನ್ ಆಗಮನ
#WATCH | Finance Minister Nirmala Sitharaman carrying the Budget tablet arrives at Parliament, to present the country’s interim Budget pic.twitter.com/yMLD10p3aK
— ANI (@ANI) February 1, 2024
ಬಜೆಟ್ ಮಂಡನೆಗೂ ಮುನ್ನ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಸಭೆಯಲ್ಲಿ ಬಜೆಟ್‌ಗೆ ಸಂಪುಟದ ಒಪ್ಪಿಗೆ ಸಿಗಲಿದೆ. ಸಭೆಯಲ್ಲಿ ಪ್ರಧಾನಿ ಮೋದಿ ಇದ್ದಾರೆ.
ಇದು ಮಧ್ಯಂತರ ಬಜೆಟ್, ಆದ್ದರಿಂದ ಕೆಲವು ಮಿತಿಗಳಿವೆ, ಮೂಲಸೌಕರ್ಯ, ರಕ್ಷಣೆ, ಬಾಹ್ಯಾಕಾಶ, ಕೃಷಿ ಕ್ಷೇತ್ರಗಳಿಗೆ ಒತ್ತು ನೀಡಬೇಕು ಎಂದು ಸಮೀರ್ ಹೇಳಿದ್ದಾರೆ.
#WATCH | Mumbai | Ahead of the presentation of the Union Interim Budget, Samir Somaiya – President of IMC Chamber Of Commerce And Industry says, “This is an Interim Budget, so there will be some limitations. But I think they will underscore their priorities. I also think that… pic.twitter.com/bLmVTkuNwx
— ANI (@ANI) February 1, 2024
ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಹಣದುಬ್ಬರ, ನಿರುದ್ಯೋಗ ಮತ್ತು ಮಣಿಪುರ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಪ್ರಸ್ತಾಪಿಸಲು ಪ್ರಯತ್ನಿಸಲು ಕಾಂಗ್ರೆಸ್ ನಿರ್ಧರಿಸಿದೆ. ಪಕ್ಷದ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರದ ಗುಂಪಿನ ಸಭೆಯಲ್ಲಿ ಬಜೆಟ್ ಅಧಿವೇಶನದಲ್ಲಿ ತೆಗೆದುಕೊಳ್ಳಬೇಕಾದ ವಿಷಯಗಳು ಮತ್ತು ಕಾರ್ಯತಂತ್ರಗಳ ಕುರಿತು ಚರ್ಚಿಸಲಾಯಿತು.
ಪಾರ್ಲಿಮೆಂಟ್ ತಲುಪಿದ ಮಧ್ಯಂತರ ಬಜೆಟ್ ಪ್ರತಿಗಳು
#WATCH | Interim Budget copies arrive in Parliament, Finance Minister Nirmala Sitharama to present her sixth straight budget today pic.twitter.com/I19rEcQmQx
— ANI (@ANI) February 1, 2024
ಒಡಿಶಾದ ನಿರೀಕ್ಷೆಗಳು ತುಂಬಾ ಹೆಚ್ಚಿವೆ. ಆದರೆ ಇದು ಮಧ್ಯಂತರ ಬಜೆಟ್ ಆಗಿರುವುದರಿಂದ, ಅವರು ರಾಜ್ಯದ ಬೇಡಿಕೆಗಳನ್ನು ಎಷ್ಟು ಪೂರೈಸುತ್ತಾರೆ ಎಂಬುದನ್ನು ನೋಡಬೇಕು. ಕಳೆದೆರಡು ವರ್ಷಗಳಲ್ಲಿ, ನಾವು ದೇಶದ ಉದ್ಯಮದ ವಿಷಯದಲ್ಲಿ ಅಗ್ರ ಹೂಡಿಕೆಯ ತಾಣವಾಗಿದ್ದೇವೆ. ಬಂದರು ವಲಯ, ಕೈಗಾರಿಕಾ ಕಾರಿಡಾರ್ ವಲಯ ಮತ್ತು ವಿದ್ಯುತ್ ವಲಯದಲ್ಲಿ ನಾವು ಸಾಕಷ್ಟು ಹಣವನ್ನು ನಿರೀಕ್ಷಿಸುತ್ತೇವೆ ಎಂದಿದ್ದಾರೆ.
#WATCH | Bhubaneshwar: On the interim Budget 2024, Odisha Minister Pratap Deb says, “… The expectations from Odisha are very high. But since it is an interim budget, how much they will cater to the demands of the state is to be seen. In the last couple of years, we have been… pic.twitter.com/igDqnQwzAO
— ANI (@ANI) February 1, 2024
ನೂತನ ಸಂಸತ್ತಿನಲ್ಲಿ ಮೊದಲ ಬಜೆಟ್ ಮಂಡನೆಯಾಗುತ್ತಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ಭವನ ತಲುಪಿದ್ದಾರೆ.
ಹಣಕಾಸು ಸಚಿವಾಲಯಕ್ಕೆ ಬಂದ ಸಚಿವೆ ನಿರ್ಮಲಾ
#WATCH | Finance Minister Nirmala Sitharaman leaves for the Ministry of Finance in North Block pic.twitter.com/CTzff8X3Pk
— ANI (@ANI) February 1, 2024
ಬಜೆಟ್ ಮಂಡನೆಗೆ ಸಿದ್ಧರಾದ ಸೀತಾರಾಮನ್
#WATCH | Union Finance Minister Nirmala Sitharaman will present the interim budget today pic.twitter.com/irGtbAcPbP
— ANI (@ANI) February 1, 2024
ಬಜೆಟ್‌ನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಮಹತ್ವದ ಘೋಷಣೆಯಾಗಬಹುದು. ಯೋಜನೆಗೆ 12500 ಕೋಟಿ ರೂ. ಎಲ್ಲಾ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನಗಳನ್ನು ಸಹ ಇದರಲ್ಲಿ ಸೇರಿಸಲಾಗುವುದು. ಎಲೆಕ್ಟ್ರಿಕ್ ವಾಹನಗಳು ಮತ್ತು ಹೈಬ್ರಿಡ್ ವಾಹನಗಳಿಗೆ ಸಬ್ಸಿಡಿಯನ್ನು ಮುಂದುವರಿಸಲು ಸಿದ್ಧತೆಗಳು ನಡೆದಿವೆ.
Published On - 9:07 am, Thu, 1 February 24