AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2024: ಮೋದಿ 3.0 ಸರ್ಕಾರದ ಚೊಚ್ಚಲ ಬಜೆಟ್ ಯಾವಾಗ? ಇಲ್ಲಿದೆ ಡೀಟೇಲ್ಸ್

Union budget 2024 in July: ಜುಲೈ ತಿಂಗಳಲ್ಲಿ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಆಗಲಿದೆ. ವರದಿಗಳ ಪ್ರಕಾರ ಮೂರನೇ ವಾರದಲ್ಲಿ ಬಜೆಟ್ ಮಂಡನೆ ಆಗಬಹುದು. ಜೂನ್ 24ಕ್ಕೆ ಲೋಕಸಭೆ ಅಧಿವೇಶನ ಆರಂಭವಾಗಲಿದ್ದು ಜುಲೈ 3ರವರೆಗೂ ಇರುತ್ತದೆ. ಜುಲೈ 27ಕ್ಕೆ ರಾಷ್ಟ್ರಪತಿಗಳ ಭಾಷಣ ಇದೆ. ಅಷ್ಟರೊಳಗೆ ಹೊಸ ಸಂಸದರ ಪ್ರಮಾಣವಚನ ಸಮಾರಂಭ ನಡೆಯಲಿದೆ. ಸ್ಪೀಕರ್ ಆಯ್ಕೆಯೂ ಆಗಲಿದೆ.

Union Budget 2024: ಮೋದಿ 3.0 ಸರ್ಕಾರದ ಚೊಚ್ಚಲ ಬಜೆಟ್ ಯಾವಾಗ? ಇಲ್ಲಿದೆ ಡೀಟೇಲ್ಸ್
ನಿರ್ಮಲಾ ಸೀತಾರಾಮನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jun 13, 2024 | 2:46 PM

Share

ನವದೆಹಲಿ, ಜೂನ್ 13: ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸತತ ಮೂರನೇ ಬಾರಿ ಅಧಿಕಾರಕ್ಕೆ ಬಂದಿದೆ. ಚುನಾವಣೆ ಕಾರಣಕ್ಕೆ ಫೆಬ್ರುವರಿ 1ರಂದು ಪೂರ್ಣಪ್ರಮಾಣದ ಬಜೆಟ್ ಬದಲು ಮಧ್ಯಂತರ ಬಜೆಟ್ (Interim budget) ಮಂಡನೆ ಆಗಿತ್ತು. ಈಗ 2024-25ರ ಹಣಕಾಸು ವರ್ಷಕ್ಕೆ ಹೊಸ ಸರ್ಕಾರದಿಂದ ಪೂರ್ಣಪ್ರಮಾಣದ ಬಜೆಟ್ ಮಂಡನೆ ಆಗಲಿದೆ. ನಿರ್ಮಲಾ ಸೀತಾರಾಮನ್ (Nirmala Sitharaman) ಅವರೇ ಹಣಕಾಸು ಸಚಿವರಾಗಿ ಮುಂದುವರಿದಿದ್ದು, ಅವರಿಂದಲೇ ಬಜೆಟ್ ಮಂಡನೆ ಆಗಲಿದೆ. ಆದರೆ, ಜುಲೈನಲ್ಲಿ ಬಜೆಟ್ (Full budget 2024) ಮಂಡಿಸಲಿರುವುದು ಖಚಿತವಾಗಿದ್ದರೂ ಯಾವ ದಿನ ಎಂದು ಇನ್ನೂ ನಿರ್ದಿಷ್ಟವಾಗಿಲ್ಲ. ಎಎನ್​ಐ ಸುದ್ದಿಸಂಸ್ಥೆ ವರದಿ ಪ್ರಕಾರ ಜುಲೈ ಮೂರನೇ ವಾರದಲ್ಲಿ ಸಂಸತ್​ನಲ್ಲಿ ಬಜೆಟ್ ಪ್ರಸ್ತುತಪಡಿಸುವ ನಿರೀಕ್ಷೆ ಇದೆ. ಜುಲೈ 15ರಿಂದ 21ರ ವಾರದಲ್ಲಿ ಮೋದಿ 3.0 ಸರ್ಕಾರದ ಚೊಚ್ಚಲ ಬಜೆಟ್ ಮಂಡನೆ ಆಗಬಹುದು ಎನ್ನಲಾಗುತ್ತಿದೆ. ಸಾಮಾನ್ಯವಾಗಿ ಸಾರ್ವತ್ರಿಕ ಚುನಾವಣೆ ಆದ ಬಳಿಕ ಜುಲೈ ಮೊದಲ ಅಥವಾ ಎರಡನೇ ವಾರದೊಳಗೆ ಬಜೆಟ್ ಇರುತ್ತದೆ.

ಈ ಬಾರಿ ಸಾರ್ವತ್ರಿಕ ಚುನಾವಣೆ ನಡೆದದ್ದು 18ನೇ ಲೋಕಸಭೆಗೆ. ಜೂನ್ 24ಕ್ಕೆ ಹೊಸ ಲೋಕಸಭೆಯ ಮೊದಲ ಸೆಷನ್ ಆರಂಭವಾಗಲಿದೆ. ನೂತನ ಲೋಕಸಭಾ ಸದಸ್ಯರೆಲ್ಲರೂ ಈ ವೇಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಳಿಕ ಸ್ಪೀಕರ್ ಆಯ್ಕೆ ನಡೆಯುತ್ತದೆ. ಮೂರು ದಿನ ಕಾಲ ಈ ಪ್ರಕ್ರಿಯೆ ನಡೆಯುತ್ತದೆ.

ಜೂನ್ 27ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆ ಮತ್ತು ಲೋಕಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಜುಲೈ 3ರವರೆಗೂ ಈ ಅಧಿವೇಶನ ಮುಂದುವರಿಯಲಿದೆ.

ಇದಾದ ಬಳಿಕ ಜುಲೈ ಮೂರನೇ ವಾರದಲ್ಲಿ ಎರಡೂ ಸದನಗಳು ಸೇರಲಿದ್ದು, ಆಗ ಬಜೆಟ್ ಮಂಡನೆ ಆಗಲಿದೆ.

ಇದನ್ನೂ ಓದಿ: ಭಾರತದಲ್ಲಿದೆ ಬೆಟ್ಟದಷ್ಟು ಬಂಗಾರ! ಸೌದಿಗಿಂತ ನಮ್ಮಲ್ಲಿ ಚಿನ್ನದ ಮೀಸಲು ಅಧಿಕ! ಇದು ದೇಶದ ಆರ್ಥಿಕ ಸ್ಥಿರತೆಯ ದ್ಯೋತಕ, ಹೇಗೆ?

ಹೊಸ ದಾಖಲೆ ಬರೆಯಲಿರುವ ನಿರ್ಮಲಾ ಸೀತಾರಾಮನ್

ನಿರ್ಮಲಾ ಸೀತಾರಾಮನ್ 2019ರಿಂದಲೂ ಹಣಕಾಸು ಸಚಿವೆಯಾಗಿದ್ದಾರೆ. ಒಟ್ಟು ಆರು ಬಜೆಟ್ ಮಂಡಿಸಿದ್ದಾರೆ. ಇದರಲ್ಲಿ ಐದು ಪೂರ್ಣ ಪ್ರಮಾಣದ ಬಜೆಟ್, ಮತ್ತು ಒಂದು ಮಧ್ಯಂತರ ಬಜೆಟ್ ಸೇರಿದೆ. ಈ ಬಾರಿ ಮಂಡಿಸಿದರೆ ಸತತ ಏಳನೇ ಬಜೆಟ್ ಆಗುತ್ತದೆ. ಸತತ ಆರನೇ ಪೂರ್ಣಪ್ರಮಾಣ ಬಜೆಟ್ ಮಂಡನೆ ಮಾಡಿದಂತಾಗುತ್ತದೆ. ಸತತವಾಗಿ ಇಷ್ಟು ಸಂಖ್ಯೆಯಲ್ಲಿ ಹಿಂದೆ ಬೇರಾವ ಹಣಕಾಸು ಸಚಿವರು ಬಜೆಟ್ ಮಂಡಿಸಿದ್ದಿಲ್ಲ. ಮೊರಾರ್ಜಿ ದೇಸಾಯಿ ಆರು ಬಾರಿ ಬಜೆಟ್ ಮಂಡನೆ ಮಾಡಿದ್ದು ಈವರೆಗಿನ ದಾಖಲೆಯಾಗಿತ್ತು. ಈಗ ನಿರ್ಮಲಾ ಸೀತಾರಾಮನ್ ಈ ದಾಖಲೆ ಮುರಿಯಲಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:44 pm, Thu, 13 June 24

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್