AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tourism Budget: ಧಾರ್ಮಿಕ ಪ್ರವಾಸೋದ್ಯಮಕ್ಕೆ ಒತ್ತು; ಪ್ರವಾಸಿ ಕೇಂದ್ರವಾಗಿ ನಳಂದ ವಿಶ್ವವಿದ್ಯಾಲಯ ಅಭಿವೃದ್ಧಿ

Union Budget Highlights: ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. 2024ರ ವಾರ್ಷಿಕ ಬಜೆಟ್​ನಲ್ಲಿ ಧಾರ್ಮಿಕ ಮತ್ತು ಆಧ್ಯಾತ್ಮಿಕ ಪ್ರವಾಸೋದ್ಯಮಕ್ಕೆ ಹಲವು ಯೋಜನೆಗಳನ್ನು ಘೋಷಿಸಲಾಗಿದೆ. ಆ ಬಗ್ಗೆ ಪೂರ್ತಿ ಮಾಹಿತಿ ಇಲ್ಲಿದೆ.

Tourism Budget: ಧಾರ್ಮಿಕ ಪ್ರವಾಸೋದ್ಯಮಕ್ಕೆ ಒತ್ತು; ಪ್ರವಾಸಿ ಕೇಂದ್ರವಾಗಿ ನಳಂದ ವಿಶ್ವವಿದ್ಯಾಲಯ ಅಭಿವೃದ್ಧಿ
ನಳಂದ ವಿಶ್ವವಿದ್ಯಾಲಯ
ಸುಷ್ಮಾ ಚಕ್ರೆ
|

Updated on:Jul 23, 2024 | 1:10 PM

Share

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024ರ ವಾರ್ಷಿಕ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸಿದ್ದಾರೆ. ಈ ಬಾರಿಯ ವಾರ್ಷಿಕ ಬಜೆಟ್​ನಲ್ಲಿ ಕೇಂದ್ರವು ಆಧ್ಯಾತ್ಮಿಕ ಪ್ರವಾಸೋದ್ಯಮದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ. ಗಯಾವನ್ನು ಕಾಶಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಅಲ್ಲದೆ ಬಿಹಾರದ ರಾಜಗಿರಿ ಜೈನ ಮಂದಿರದ ಅಭಿವೃದ್ಧಿಗೆ ಸಮಗ್ರ ಯೋಜನೆ ಸಿದ್ಧಪಡಿಸಲಾಗುವುದು ಎಂದಿದ್ದಾರೆ.

ಧಾರ್ಮಿಕ ಪ್ರವಾಸೋದ್ಯಮವನ್ನು ಹೆಚ್ಚಿಸಲು ಸರ್ಕಾರ ಕ್ರಮಗಳನ್ನು ಪ್ರಕಟಿಸಿದೆ. ಬಿಹಾರ, ಒಡಿಶಾದ ಪ್ರವಾಸೋದ್ಯಮದ ಮೇಲೆ ಕೇಂದ್ರೀಕರಿಸಲಾಗಿದೆ. ಆರ್ಥಿಕತೆಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಲವಾರು ಕ್ರಮಗಳನ್ನು ಘೋಷಿಸಿದ್ದಾರೆ. ಪ್ರವಾಸೋದ್ಯಮವು ಯಾವಾಗಲೂ ನಮ್ಮ ನಾಗರಿಕತೆಯ ಭಾಗವಾಗಿದೆ. ಭಾರತವನ್ನು ಜಾಗತಿಕ ಪ್ರವಾಸಿ ತಾಣವಾಗಿಸುವ ಪ್ರಯತ್ನಗಳು ಆರ್ಥಿಕ ಅವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಹಣಕಾಸು ಸಚಿವರು ಹೇಳಿದ್ದಾರೆ.

ನಳಂದ ವಿಶ್ವವಿದ್ಯಾಲಯಕ್ಕೆ ವಿಶೇಷ ಅನುದಾನ:

ನಳಂದವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ನಳಂದ ವಿಶ್ವವಿದ್ಯಾನಿಲಯವನ್ನು ಪುನರುಜ್ಜೀವನಗೊಳಿಸುವುದರ ಜೊತೆಗೆ ನಳಂದವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: LIVE Budget 2024 Speech: ಕೇಂದ್ರ ಬಜೆಟ್; ಆದಾಯ ತೆರಿಗೆ ಸ್ಲ್ಯಾಬ್​​ನಲ್ಲಿ ತುಸು ಬದಲಾವಣೆ

ಬಿಹಾರದ ವಿಷ್ಣುಪಾದ ದೇವಸ್ಥಾನ ಕಾರಿಡಾರ್ ಯೋಜನೆ:

ಬಿಹಾರದ ವಿಷ್ಣುಪಾದ ದೇವಸ್ಥಾನ ಕಾರಿಡಾರ್ ಮತ್ತು ಮಹಾಬೋಧಿ ದೇವಸ್ಥಾನ ಕಾರಿಡಾರ್ ಅನ್ನು ಸರ್ಕಾರ ಅಭಿವೃದ್ಧಿಪಡಿಸಲಿದೆ. ಈ ತಾಣ ಅಪಾರ ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿದೆ. ಕಾಶಿ ವಿಶ್ವನಾಥ ಕಾರಿಡಾರ್‌ನ ಮಾದರಿಯಲ್ಲಿ ಅವುಗಳನ್ನು ವಿಶ್ವದರ್ಜೆಯ ಪ್ರವಾಸಿ ತಾಣಗಳಾಗಿ ಪರಿವರ್ತಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಒಡಿಶಾ ಪ್ರವಾಸಿ ತಾಣ:

ಒಡಿಶಾದ ರಮಣೀಯ ಸೌಂದರ್ಯ, ದೇವಾಲಯಗಳು, ಕರಕುಶಲತೆ, ವನ್ಯಜೀವಿ ಮತ್ತು ಇತರ ವೈಶಿಷ್ಟ್ಯಗಳ ಮೂಲಕ ಅದನ್ನು ಪ್ರವಾಸಿ ತಾಣವನ್ನಾಗಿ ಮಾಡುತ್ತದೆ. ಇಲ್ಲಿ ಕೇಂದ್ರ ಸರ್ಕಾರವು ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಇದನ್ನೂ ಓದಿ: Budget 2024: ಬಜೆಟ್‌ನಲ್ಲಿ ಮೋದಿ ಸರ್ಕಾರದ 9 ಆದ್ಯತೆಗಳು, 4 ಸ್ತಂಭಗಳನ್ನು ಪಟ್ಟಿ ಮಾಡಿದ ಸಚಿವೆ ನಿರ್ಮಲಾ ಸೀತಾರಾಮನ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಿರ್ಣಾಯಕ ಎರಡನೇ ಅವಧಿಗೆ ಆಯ್ಕೆಯಾದಾಗ 2019ರಲ್ಲಿ ಭಾರತದ ಮೊದಲ ಪೂರ್ಣ ಸಮಯದ ಮಹಿಳಾ ಹಣಕಾಸು ಮಂತ್ರಿಯಾದ ನಿರ್ಮಲಾ ಸೀತಾರಾಮನ್ ಅವರು ಅಂದಿನಿಂದ ಪ್ರತಿ ವರ್ಷವೂ ಕೇಂದ್ರ ಬಜೆಟ್ ಅನ್ನು ನಿರಂತರವಾಗಿ ಮಂಡಿಸಿದ್ದಾರೆ.

ಇನ್ನಷ್ಟು ಬಜೆಟ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:08 pm, Tue, 23 July 24

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು