ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024ರ ವಾರ್ಷಿಕ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸಿದ್ದಾರೆ. ಈ ಬಾರಿಯ ವಾರ್ಷಿಕ ಬಜೆಟ್‌ನಲ್ಲಿ ಕೇಂದ್ರವು ಆಧ್ಯಾತ್ಮಿಕ ಪ್ರವಾಸೋದ್ಯಮದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ. ಗಯಾವನ್ನು ಕಾಶಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಅಲ್ಲದೆ ಬಿಹಾರದ ರಾಜಗಿರಿ ಜೈನ ಮಂದಿರದ ಅಭಿವೃದ್ಧಿಗೆ ಸಮಗ್ರ ಯೋಜನೆ ಸಿದ್ಧಪಡಿಸಲಾಗುವುದು ಎಂದಿದ್ದಾರೆ.
ಧಾರ್ಮಿಕ ಪ್ರವಾಸೋದ್ಯಮವನ್ನು ಹೆಚ್ಚಿಸಲು ಸರ್ಕಾರ ಕ್ರಮಗಳನ್ನು ಪ್ರಕಟಿಸಿದೆ. ಬಿಹಾರ, ಒಡಿಶಾದ ಪ್ರವಾಸೋದ್ಯಮದ ಮೇಲೆ ಕೇಂದ್ರೀಕರಿಸಲಾಗಿದೆ. ಆರ್ಥಿಕತೆಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಲವಾರು ಕ್ರಮಗಳನ್ನು ಘೋಷಿಸಿದ್ದಾರೆ. ಪ್ರವಾಸೋದ್ಯಮವು ಯಾವಾಗಲೂ ನಮ್ಮ ನಾಗರಿಕತೆಯ ಭಾಗವಾಗಿದೆ. ಭಾರತವನ್ನು ಜಾಗತಿಕ ಪ್ರವಾಸಿ ತಾಣವಾಗಿಸುವ ಪ್ರಯತ್ನಗಳು ಆರ್ಥಿಕ ಅವಕಾಶಗಳನ್ನು ಸೃಷ್ಟಿಸುತ್ತವೆ ಎಂದು ಹಣಕಾಸು ಸಚಿವರು ಹೇಳಿದ್ದಾರೆ.
ನಳಂದ ವಿಶ್ವವಿದ್ಯಾಲಯಕ್ಕೆ ವಿಶೇಷ ಅನುದಾನ:
ನಳಂದವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ನಳಂದ ವಿಶ್ವವಿದ್ಯಾನಿಲಯವನ್ನು ಪುನರುಜ್ಜೀವನಗೊಳಿಸುವುದರ ಜೊತೆಗೆ ನಳಂದವನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದಿದ್ದಾರೆ.
ಇದನ್ನೂ ಓದಿ: LIVE Budget 2024 Speech: ಕೇಂದ್ರ ಬಜೆಟ್; ಆದಾಯ ತೆರಿಗೆ ಸ್ಲ್ಯಾಬ್ನಲ್ಲಿ ತುಸು ಬದಲಾವಣೆ
ಬಿಹಾರದ ವಿಷ್ಣುಪಾದ ದೇವಸ್ಥಾನ ಕಾರಿಡಾರ್ ಯೋಜನೆ:
ಬಿಹಾರದ ವಿಷ್ಣುಪಾದ ದೇವಸ್ಥಾನ ಕಾರಿಡಾರ್ ಮತ್ತು ಮಹಾಬೋಧಿ ದೇವಸ್ಥಾನ ಕಾರಿಡಾರ್ ಅನ್ನು ಸರ್ಕಾರ ಅಭಿವೃದ್ಧಿಪಡಿಸಲಿದೆ. ಈ ತಾಣ ಅಪಾರ ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿದೆ. ಕಾಶಿ ವಿಶ್ವನಾಥ ಕಾರಿಡಾರ್‌ನ ಮಾದರಿಯಲ್ಲಿ ಅವುಗಳನ್ನು ವಿಶ್ವದರ್ಜೆಯ ಪ್ರವಾಸಿ ತಾಣಗಳಾಗಿ ಪರಿವರ್ತಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
#Budget2024 | Union Finance Minister Nirmala Sitharaman says “Tourism has always been a part of our civilisation. Our efforts to position India as a global destination will also create jobs and unlock opportunities in other sectors. I propose Vishnupath temple at Gaya, and… pic.twitter.com/OlZ76WqGgZ
— ANI (@ANI) July 23, 2024
ಒಡಿಶಾ ಪ್ರವಾಸಿ ತಾಣ:
ಒಡಿಶಾದ ರಮಣೀಯ ಸೌಂದರ್ಯ, ದೇವಾಲಯಗಳು, ಕರಕುಶಲತೆ, ವನ್ಯಜೀವಿ ಮತ್ತು ಇತರ ವೈಶಿಷ್ಟ್ಯಗಳ ಮೂಲಕ ಅದನ್ನು ಪ್ರವಾಸಿ ತಾಣವನ್ನಾಗಿ ಮಾಡುತ್ತದೆ. ಇಲ್ಲಿ ಕೇಂದ್ರ ಸರ್ಕಾರವು ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
ಇದನ್ನೂ ಓದಿ: Budget 2024: ಬಜೆಟ್‌ನಲ್ಲಿ ಮೋದಿ ಸರ್ಕಾರದ 9 ಆದ್ಯತೆಗಳು, 4 ಸ್ತಂಭಗಳನ್ನು ಪಟ್ಟಿ ಮಾಡಿದ ಸಚಿವೆ ನಿರ್ಮಲಾ ಸೀತಾರಾಮನ್
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಿರ್ಣಾಯಕ ಎರಡನೇ ಅವಧಿಗೆ ಆಯ್ಕೆಯಾದಾಗ 2019ರಲ್ಲಿ ಭಾರತದ ಮೊದಲ ಪೂರ್ಣ ಸಮಯದ ಮಹಿಳಾ ಹಣಕಾಸು ಮಂತ್ರಿಯಾದ ನಿರ್ಮಲಾ ಸೀತಾರಾಮನ್ ಅವರು ಅಂದಿನಿಂದ ಪ್ರತಿ ವರ್ಷವೂ ಕೇಂದ್ರ ಬಜೆಟ್ ಅನ್ನು ನಿರಂತರವಾಗಿ ಮಂಡಿಸಿದ್ದಾರೆ.
ಇನ್ನಷ್ಟು ಬಜೆಟ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:08 pm, Tue, 23 July 24