Union Budget 2024: ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್, ಕೃಷಿ ಕ್ಷೇತ್ರಕ್ಕೆ ಮೋದಿ ನೀಡಿದ ಅನುದಾನ ಎಷ್ಟು?
ಕೇಂದ್ರ ಸರ್ಕಾರ ಇಂದು 2024-25 ಸಾಲಿನ ಬಜೆಟ್ ಮಂಡನೆ ಮಾಡಲಾಗಿದೆ. ಹಲವು ಕ್ಷೇತ್ರಗಳಿಗೆ ಮಹತ್ವದ ಅನುದಾನ ನೀಡಿದ್ದಾರೆ. ಇದರಲ್ಲಿ ಕೃಷಿ ಕ್ಷೇತ್ರಕ್ಕೆ ಮೋದಿ ಸರ್ಕಾರ ನೀಡಿದ ಅನುದಾನ ಹಾಗೂ ಯೋಜನೆಗಳೇನು. ಈ ಬಾರಿ ರೈತರಿಗೆ ವಿಶೇಷವಾಗಿ ನೀಡಿದ್ದೇನು ಇಲ್ಲಿದೆ ನೋಡಿ.
ಕೇಂದ್ರ ವಿತ್ತ ಸಚಿವೆ ನಿರ್ಮಾಲ ಸೀತಾರಾಮನ್ ಅವರು ಇಂದು 2024-25 ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಅನೇಕ ಕ್ಷೇತ್ರಗಳಿಗೆ ಈಗಾಗಲೇ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಕ್ಷೇತ್ರ ವಲಯಕ್ಕೆ ಅನುಗುಣವಾಗಿ ಬಜೆಟ್ ಮಂಡನೆ ಮಾಡಿದ್ದಾರೆ. ಶಿಕ್ಷಣ, ಉದ್ಯೋಗ, ಕೈಗಾರಿಕೆ, ಮಹಿಳೆ, ಕೃಷಿ, ಹೀಗೆ ಅನೇಕ ಕ್ಷೇತ್ರಗಳಿಗೆ ಅನುದಾನ ನೀಡಿದ್ದಾರೆ. ಇದರಲ್ಲೂ ವಿಶೇಷವಾಗಿ ಕೃಷಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ. ರೈತರ ಮುಖದಲ್ಲಿ ಮಂದಾಸ ಮೂಡಿಸಿದ್ದಾರೆ. ಕೃಷಿ ಕ್ಷೇತ್ರಕ್ಕೆ ಒಟ್ಟು 1.52 ಲಕ್ಷ ಕೋಟಿ ರೂಪಾಯಿ ಮೀಸಲು ಇಡಲಾಗಿದೆ.
5 ರಾಜ್ಯಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲು ನಿರ್ಧಾರವನ್ನು ಈ ಬಜೆಟ್ನಲ್ಲಿ ಮಾಡಿದ್ದಾರೆ. ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ನಿರ್ಮಲಾ ತಿಳಿಸಿದ್ದಾರೆ. ಇನ್ನು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಬೇಕಾದ ಎಲ್ಲ ರೀತಿ ಸಹಾಯವನ್ನು ಕೇಂದ್ರ ಮಾಡಲಿದೆ.
ಮುಂದಿನ ಒಂದು ವರ್ಷದಲ್ಲಿ 1 ಕೋಟಿ ರೈತರನ್ನು ನೈಸರ್ಗಿಕ ಕೃಷಿ ವ್ಯಾಪ್ತಿಗೆ ತರಲಾಗುವುದು ಎಂದು ಹೇಳಿದ್ದಾರೆ. ಹಾಗೂ ಸಾವಯುವ ಕೃಷಿಗೆ ಆದ್ಯತೆ ನೀಡಲಾಗುವುದು ಎಂದು ಬಜೆಟ್ನಲ್ಲಿ ಉಲ್ಲೇಖಿಸಿದ್ದಾರೆ. ಎಣ್ಣೆ ಕಾಳುಗಳ ಉತ್ಪಾದನೆ, ಶೇಖರಣೆ, ಮಾರುಕಟ್ಟೆಗಳಿಗೂ ಒತ್ತು ನೀಡಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ, ಭರಪೂರ ಅನುದಾನ ನೀಡಿದ ಕೇಂದ್ರ
ತರಕಾರಿ ಪೂರೈಕೆಗಾಗಿ ಸಪ್ಲೈ ಚೈನ್ ಬಲಗೊಳಿಸಲಾಗುತ್ತಿದೆ. ಹಾಗೂ ರೈತರ ಅನುಕೂಲಕ್ಕಾಗಿ ಡಿಜಿಟಲ್ ಬೆಳೆ ಸಮೀಕ್ಷೆ ಮಾಡಲಾಗುವುದು ಎಂದು ಹೇಳಿದ್ದಾರೆ. ಕೃಷಿ ಉತ್ಪಾದನೆಯಲ್ಲಿ ಹೆಚ್ಚನ ನಮ್ಮ ಗುರಿಯಾಗಿರುವ ಕಾರಣ ನಮ್ಮ ಸರ್ಕಾರ ಈ ಬಾರಿ ರೈತರಿಗೆ ಹೆಚ್ಚು ಆದ್ಯತೆ ನೀಡಿದೆ ಎಂದು ಹೇಳಿದ್ದಾರೆ.
ವಾಣಿಜ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ