AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2024: ಮಧ್ಯಮ ವರ್ಗದ ಮನೆಯ ಕನಸು ನನಸಾಗಿಸಲು ಮಹತ್ವದ ಘೋಷಣೆ ಮಾಡಿದ ನಿರ್ಮಲಾ ಸೀತಾರಾಮನ್

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ನಗರ ವಸತಿ ಯೋಜನೆಗೆ 10 ಲಕ್ಷ ಕೋಟಿ ರೂಪಾಯಿಗಳನ್ನು ಘೋಷಿಸಿದ್ದಾರೆ. ಇದರೊಂದಿಗೆ ಬಾಡಿಗೆ ಮನೆಗಳನ್ನು ಉತ್ತೇಜಿಸಲು ನಿಯಮಗಳನ್ನು ರೂಪಿಸುವುದಾಗಿಯೂ ಘೋಷಣೆ ಮಾಡಿದ್ದಾರೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಬಜೆಟ್​​ನಲ್ಲಿ ಮಾಡಲಾಗ ಘೋಷಣೆಗಳು ಇಲ್ಲಿವೆ.

Union Budget 2024: ಮಧ್ಯಮ ವರ್ಗದ ಮನೆಯ ಕನಸು ನನಸಾಗಿಸಲು ಮಹತ್ವದ ಘೋಷಣೆ ಮಾಡಿದ ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
Ganapathi Sharma
|

Updated on: Jul 23, 2024 | 3:03 PM

Share

ನವದೆಹಲಿ, ಜುಲೈ 23: ಕೇಂದ್ರದ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಗರ ವಸತಿ ಯೋಜನೆಗೆ 10 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ. ಬಾಡಿಗೆ ಮನೆಗಳನ್ನು ಉತ್ತೇಜಿಸಲು ನಿಯಮಗಳನ್ನು ರೂಪಿಸಲಾಗುವುದು ಎಂದು ಹೇಳಿದ್ದಾರೆ. ಇದಲ್ಲದೇ, ಸ್ಟ್ಯಾಂಪ್ ಡ್ಯೂಟಿಯನ್ನು ಕಡಿಮೆ ಮಾಡುವ ರಾಜ್ಯಗಳಿಗೆ ‘ಪ್ರಧಾನ ಮಂತ್ರಿ ಆವಾಸ್ ಯೋಜನೆ-ಅರ್ಬನ್ 2.0’ ಅಡಿಯಲ್ಲಿ 10 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯೊಂದಿಗೆ ಒಂದು ಕೋಟಿ ಕುಟುಂಬಗಳಿಗೆ ಮನೆಗಳನ್ನು ಒದಗಿಸಲಾಗುವುದು ಎಂದು ಹಣಕಾಸು ಸಚಿವರು ತಿಳಿಸಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಒಟ್ಟಾರೆಯಾಗಿ 3 ಕೋಟಿ ಮನೆಗಳನ್ನು ನಿರ್ಮಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ. ನಗರಗಳಲ್ಲಿ ವಸತಿ ಯೋಜನೆಗಳಿಗೆ ಬಜೆಟ್‌ನಲ್ಲಿ 10 ಲಕ್ಷ ಕೋಟಿ ರೂ. ಅನುದಾನ ಘೋಷಿಸಲಾಗಿದೆ. ಇದರ ಅಡಿಯಲ್ಲಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಗೆ 10 ಲಕ್ಷ ಕೋಟಿ ರೂಪಾಯಿಗಳನ್ನು ನೀಡಲಾಗುತ್ತದೆ. ಇದರಲ್ಲಿ ಕೇಂದ್ರ ಸರ್ಕಾರ ಮುಂದಿನ 5 ವರ್ಷಕ್ಕೆ ಹಂತ ಹಂತವಾಗಿ 2.2 ಲಕ್ಷ ಕೋಟಿ ರೂ. ಪಾಲು ಬಿಡುಗಡೆ ಮಾಡಲಿದೆ.

ಇದನ್ನೂ ಓದಿ: 5 ಕೆಜಿ ಉಚಿತ ಪಡಿತರ ಗಡುವು 5 ವರ್ಷ ವಿಸ್ತರಣೆ, ವಿಧಾನಸಭಾ ಚುನಾವಣೆಗಳ ಮೇಲೆ ಕಣ್ಣು

ಹಣಕಾಸು ಸಚಿವರ ಪ್ರಕಾರ, ಸಾಲ ಪ್ರಕ್ರಿಯೆ ಸುಗಮಗೊಳಿಸಲು ಬಡ್ಡಿ ಸಹಾಯಧನವನ್ನು ಒದಗಿಸಲಾಗಿದೆ. ಘೋಷಣೆ ಬೆನ್ನಲ್ಲೇ ವಸತಿ ಕ್ಷೇತ್ರಕ್ಕೆ ಸಂಬಂಧಿಸಿದ ಕಂಪನಿಗಳ ಷೇರುಗಳು ಉತ್ತಮ ವಹಿವಾಟು ದಾಖಲಿಸಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!