ನವದೆಹಲಿ, ಜುಲೈ 23: ಕೇಂದ್ರದ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಗರ ವಸತಿ ಯೋಜನೆಗೆ 10 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ. ಬಾಡಿಗೆ ಮನೆಗಳನ್ನು ಉತ್ತೇಜಿಸಲು ನಿಯಮಗಳನ್ನು ರೂಪಿಸಲಾಗುವುದು ಎಂದು ಹೇಳಿದ್ದಾರೆ. ಇದಲ್ಲದೇ, ಸ್ಟ್ಯಾಂಪ್ ಡ್ಯೂಟಿಯನ್ನು ಕಡಿಮೆ ಮಾಡುವ ರಾಜ್ಯಗಳಿಗೆ ‘ಪ್ರಧಾನ ಮಂತ್ರಿ ಆವಾಸ್ ಯೋಜನೆ-ಅರ್ಬನ್ 2.0’ ಅಡಿಯಲ್ಲಿ 10 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯೊಂದಿಗೆ ಒಂದು ಕೋಟಿ ಕುಟುಂಬಗಳಿಗೆ ಮನೆಗಳನ್ನು ಒದಗಿಸಲಾಗುವುದು ಎಂದು ಹಣಕಾಸು ಸಚಿವರು ತಿಳಿಸಿದರು.
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಒಟ್ಟಾರೆಯಾಗಿ 3 ಕೋಟಿ ಮನೆಗಳನ್ನು ನಿರ್ಮಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ. ನಗರಗಳಲ್ಲಿ ವಸತಿ ಯೋಜನೆಗಳಿಗೆ ಬಜೆಟ್‌ನಲ್ಲಿ 10 ಲಕ್ಷ ಕೋಟಿ ರೂ. ಅನುದಾನ ಘೋಷಿಸಲಾಗಿದೆ. ಇದರ ಅಡಿಯಲ್ಲಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಗೆ 10 ಲಕ್ಷ ಕೋಟಿ ರೂಪಾಯಿಗಳನ್ನು ನೀಡಲಾಗುತ್ತದೆ. ಇದರಲ್ಲಿ ಕೇಂದ್ರ ಸರ್ಕಾರ ಮುಂದಿನ 5 ವರ್ಷಕ್ಕೆ ಹಂತ ಹಂತವಾಗಿ 2.2 ಲಕ್ಷ ಕೋಟಿ ರೂ. ಪಾಲು ಬಿಡುಗಡೆ ಮಾಡಲಿದೆ.
ಇದನ್ನೂ ಓದಿ: 5 ಕೆಜಿ ಉಚಿತ ಪಡಿತರ ಗಡುವು 5 ವರ್ಷ ವಿಸ್ತರಣೆ, ವಿಧಾನಸಭಾ ಚುನಾವಣೆಗಳ ಮೇಲೆ ಕಣ್ಣು
ಹಣಕಾಸು ಸಚಿವರ ಪ್ರಕಾರ, ಸಾಲ ಪ್ರಕ್ರಿಯೆ ಸುಗಮಗೊಳಿಸಲು ಬಡ್ಡಿ ಸಹಾಯಧನವನ್ನು ಒದಗಿಸಲಾಗಿದೆ. ಘೋಷಣೆ ಬೆನ್ನಲ್ಲೇ ವಸತಿ ಕ್ಷೇತ್ರಕ್ಕೆ ಸಂಬಂಧಿಸಿದ ಕಂಪನಿಗಳ ಷೇರುಗಳು ಉತ್ತಮ ವಹಿವಾಟು ದಾಖಲಿಸಲಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ