Budget 2025 Highlights: 12 ಲಕ್ಷ ರೂ ಆದಾಯಕ್ಕೆ ತೆರಿಗೆ ಇರಲ್ಲ: ನಿರ್ಮಲಾ ಸೀತಾರಾಮನ್

ನಯನಾ ರಾಜೀವ್
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on:Feb 01, 2025 | 5:50 PM

Budget Session 2025 Parliament Highlights: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ 8ನೇ ಬಜೆಟ್​ ಮಂಡನೆ ಆರಂಭಿಸಿದ್ದಾರೆ. ಸಂಸತ್‌ ಇತಿಹಾಸದಲ್ಲಿ ಹೆಚ್ಚು ಬಜೆಟ್‌ ಮಂಡಿಸಿದ ಮಹಿಳಾ ಹಣಕಾಸು ಮಂತ್ರಿ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಸಂಸತ್ತಿನಲ್ಲಿ 2025ರ ಕೇಂದ್ರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಮಂಡನೆ ಶುರು ಮಾಡಿದ್ಸಂದಾರೆ. ಸಂಸತ್ತಿನ ಅಧಿಕೃತ ಚಾನೆಲ್‌ಗಳಲ್ಲಿ ಭಾಷಣವನ್ನು ಪ್ರಸಾರ ಮಾಡಲಾಗುತ್ತದೆ.

Budget 2025 Highlights: 12 ಲಕ್ಷ ರೂ ಆದಾಯಕ್ಕೆ ತೆರಿಗೆ ಇರಲ್ಲ: ನಿರ್ಮಲಾ ಸೀತಾರಾಮನ್
Budget 2025 Presentation

LIVE NEWS & UPDATES

  • 01 Feb 2025 12:26 PM (IST)

    Union Budget 2025 Live: ಬಾಡಿಗೆಯ ಮೇಲಿನ TDS ಮಿತಿ ಹೆಚ್ಚಳ

    ಬಾಡಿಗೆಯ ಮೇಲಿನ ಟಿಡಿಎಸ್‌ನ ವಾರ್ಷಿಕ ಮಿತಿಯನ್ನು 2.40 ಲಕ್ಷ ರೂ.ನಿಂದ 6 ಲಕ್ಷ ರೂ.ಗೆ ಹೆಚ್ಚಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

  • 01 Feb 2025 12:22 PM (IST)

    Union Budget 2025 Live: ಹಿರಿಯ ನಾಗರಿಕರಿಗೆ TDS ಮಿತಿಯಲ್ಲಿ ಹೆಚ್ಚಳ

    ಹೊಸ ಆದಾಯ ತೆರಿಗೆ ಮಸೂದೆಯು ಮಧ್ಯಮ ವರ್ಗದ ಮೇಲೆ ಕೇಂದ್ರೀಕೃತವಾಗಿರುತ್ತದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಹಿರಿಯ ನಾಗರಿಕರಿಗೆ ತೆರಿಗೆ ವಿನಾಯಿತಿಯನ್ನು 50,000 ರೂ.ನಿಂದ 1 ಲಕ್ಷ ರೂ.ಗೆ ಹೆಚ್ಚಿಸಲಾಗುತ್ತಿದೆ ಎಂದು ಅವರು ಘೋಷಿಸಿದರು.

  • 01 Feb 2025 12:08 PM (IST)

    Union Budget 2025 Live: ಆದಾಯ ತೆರಿಗೆ ವಿನಾಯಿತಿ ಮಿತಿ 12 ಲಕ್ಷಕ್ಕೆ ಏರಿಕೆ

    ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಏರಿಕೆ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

    12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ 4 ಲಕ್ಷದಿಂದ 8 ಲಕ್ಷದವರೆಗೆ ಶೇ.5ರಷ್ಟು ತೆರಿಗೆ 8 ಲಕ್ಷದಿಂದ 11 ಲಕ್ಷದವರೆಗೆ ಶೇ.10ರಷ್ಟು ತೆರಿಗೆ 12 ಲಕ್ಷದಿಂದ 15 ಲಕ್ಷದವರೆಗೆ ಶೇ.15ರಷ್ಟು ತೆರಿಗೆ 15 ಲಕ್ಷದಿಂದ 20 ಲಕ್ಷದವರೆಗೆ ಶೇ.20ರಷ್ಟು ತೆರಿಗೆ 20 ಲಕ್ಷದಿಂದ 24 ಲಕ್ಷದರೆಗೆ ಶೇ.25ರಷ್ಟು ತೆರಿಗೆ 24 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇ.30ರಷ್ಟು ತೆರಿಗೆ

  • 01 Feb 2025 12:07 PM (IST)

    Union Budget 2025 Live:ಟಿವಿ-ಮೊಬೈಲ್, ಔಷಧಿ ಮತ್ತು ಎಲೆಕ್ಟ್ರಿಕ್ ಕಾರುಗಳು ಅಗ್ಗವಾಗಲಿವೆ

    ಟಿವಿ, ಮೊಬೈಲ್, ಎಲೆಕ್ಟ್ರಿಕ್ ಕಾರುಗಳು ಮತ್ತು ಭಾರತದಲ್ಲಿ ತಯಾರಿಸಿದ ಬಟ್ಟೆಗಳು, ಚರ್ಮದ ವಸ್ತುಗಳೂ ಅಗ್ಗವಾಗಲಿವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

  • 01 Feb 2025 12:02 PM (IST)

    Union Budget 2025 Live:ರಾಜ್ಯಗಳಿಗೆ 50 ವರ್ಷ ಬಡ್ಡಿ ರಹಿತ ಸಾಲ

    ರಾಜ್ಯಗಳಿಗೆ 50 ವರ್ಷಗಳ ಬಡ್ಡಿ ರಹಿತ ಸಾಲಕ್ಕಾಗಿ 1.5 ಲಕ್ಷ ಕೋಟಿ ರೂ. ಮೀಸಲಿಟ್ಟಿರುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

  • 01 Feb 2025 11:59 AM (IST)

    Union Budget 2025 Live: 36 ಜೀವರಕ್ಷಕ ಔಷಧಿಗಳ ಕಸ್ಟಮ್ ಸುಂಕದಿಂದ ವಿನಾಯಿತಿ

    36 ಜೀವ ರಕ್ಷಕ ಔಷಧಗಳಿಗೆ ಕಸ್ಟಮ್ಸ್ ಸುಂಕದಿಂದ ಸಂಪೂರ್ಣವಾಗಿ ವಿನಾಯಿತಿ ನೀಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

  • 01 Feb 2025 11:56 AM (IST)

    Union Budget 2025 Live: ಒಂದು ಕೋಟಿ ಗಿಗ್ ಕಾರ್ಮಿಕರಿಗೆ ಸಹಾಯ

    ಒಂದು ಕೋಟಿ ಗಿಗ್ ಕಾರ್ಮಿಕರಿಗೆ ಸಹಾಯ ಮಾಡಲು ಸರ್ಕಾರವು ಗುರುತಿನ ಚೀಟಿಗಳು ಮತ್ತು ಇ-ಶ್ರಮ್ ವೇದಿಕೆಯಲ್ಲಿ ನೋಂದಣಿಗೆ ವ್ಯವಸ್ಥೆ ಮಾಡುತ್ತದೆ. ಒಟ್ಟು 20,000 ಕೋಟಿ ರೂ.ನಲ್ಲಿ ಪರಮಾಣು ಶಕ್ತಿ ಮಿಷನ್ ರಚಿಸಲಾಗುವುದು. 2047 ರ ವೇಳೆಗೆ 100 GW ಪರಮಾಣು ಶಕ್ತಿ ಸಾಮರ್ಥ್ಯವನ್ನು ಹೊಂದುವ ಗುರಿಯನ್ನು ಹೊಂದಿದೆ. ವಿದ್ಯುತ್ ವಿತರಣಾ ಕಂಪನಿಗಳಲ್ಲಿ ಸುಧಾರಣೆಗಳನ್ನು ಉತ್ತೇಜಿಸಲಾಗುವುದು, ಸುಧಾರಣೆಗಳನ್ನು ಮುಂದುವರಿಸಲು ರಾಜ್ಯಗಳಿಗೆ GSDP ಯ 0.5 ಪ್ರತಿಶತದಷ್ಟು ಸಾಲವನ್ನು ಅನುಮತಿಸಲಾಗುವುದು. ಐದು ಲಕ್ಷ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಪ್ರಥಮ ಬಾರಿಗೆ 2 ಕೋಟಿ ರೂಪಾಯಿ ಸಾಲವನ್ನು ಸರ್ಕಾರ ನೀಡಲಿದೆ. ಸರ್ಕಾರವು 120 ಗಮ್ಯಸ್ಥಾನಗಳನ್ನು ಸಂಪರ್ಕಿಸಲು ಪರಿಷ್ಕೃತ UDAN ಯೋಜನೆಯನ್ನು ಪ್ರಾರಂಭಿಸುತ್ತದೆ, ಇದು ಮುಂದಿನ 4 ಕೋಟಿ ಹೆಚ್ಚುವರಿ ಪ್ರಯಾಣಿಕರಿಗೆ ಸಹಾಯ ಮಾಡುತ್ತದೆ.

  • 01 Feb 2025 11:54 AM (IST)

    Union Budget 2025 Live: ಬಿಹಾರದಲ್ಲಿ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣ

    ಬಿಹಾರದಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂದು ಸೀತಾರಾಮನ್ ಹೇಳಿದ್ದಾರೆ. ಪಶ್ಚಿಮ ಕೋಸಿ ಕಾಲುವೆಗೆ ಆರ್ಥಿಕ ನೆರವು ನೀಡಲಾಗುವುದು ಎಂದರು.

  • 01 Feb 2025 11:53 AM (IST)

    Union Budget 2025 Live: ದೇಶದ ಬೆಳವಣಿಗೆಗಾಗಿ ರಫ್ತಿಗೆ ಹೆಚ್ಚು ಒತ್ತು

    ದೇಶದ ಬೆಳವಣಿಗೆಗಾಗಿ ರಫ್ತನ್ನು ಉತ್ತೇಜಿಸಲು ರಫ್ತು ಉತ್ತೇಜನ ಮಿಷನ್ ಸ್ಥಾಪಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

  • 01 Feb 2025 11:46 AM (IST)

    Union Budget 2025 Live: ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ

    ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

  • 01 Feb 2025 11:42 AM (IST)

    Union Budget 2025 Live: ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆ

    ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಇದರಿಂದ ಕ್ಯಾನ್ಸರ್ ರೋಗಿಗಳಿಗೆ ಬೇರೆ ಬೇರೆ ಊರಿಗೆ ಅಲೆಯುವ ಅಗತ್ಯವಿರುವುದಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

  • 01 Feb 2025 11:40 AM (IST)

    Union Budget 2025 Live: ಬಿಹಾರಕ್ಕೆ ಮಖಾನಾ ಮಂಡಳಿ

    ಬಿಹಾರದಲ್ಲಿ ಮಖಾನಾ ಮಂಡಳಿಯನ್ನು ರಚಿಸಲಾಗುವುದು, ಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು 5 ಲಕ್ಷ ರೂ.ಗೆ ಹೆಚ್ಚಿಸಲಾಗುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

  • 01 Feb 2025 11:38 AM (IST)

    Union Budget 2025 Live: ವೈದ್ಯಕೀಯ ಕಾಲೇಜಿನಲ್ಲಿ ಸೀಟುಗಳು ಹೆಚ್ಚಾಗಲಿವೆ

    ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಮುಂದಿನ ವರ್ಷದಿಂದ ವೈದ್ಯಕೀಯ ಕಾಲೇಜಿನಲ್ಲಿ 10 ಸಾವಿರ ಸೀಟುಗಳನ್ನು ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ.

  • 01 Feb 2025 11:36 AM (IST)

    Union Budget 2025 Live: ಎಸ್​ಸಿಎಸ್​ಟಿ ಮಹಿಳೆಯರಿಗೆ ಸಾಲದ ಯೋಜನೆ

    ಎಸ್‌ಸಿ/ಎಸ್‌ಟಿ ಸಮುದಾಯಗಳ 5 ಲಕ್ಷ ಮಹಿಳೆಯರಿಗೆ ಲಾಭದಾಯಕವಾಗುವಂತೆ ಐದು ವರ್ಷಗಳ ಅವಧಿಯೊಂದಿಗೆ ಟರ್ಮ್ ಲೋನ್‌ಗಳನ್ನು ನೀಡಲು ಹೊಸ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

  • 01 Feb 2025 11:35 AM (IST)

    Union Budget 2025 Live: ಆಟಿಕೆಗಳ ತಯಾರಿಕೆಗೆ ಒತ್ತು

    ಮೇಕ್ ಇನ್ ಇಂಡಿಯಾ ಬ್ರ್ಯಾಂಡ್​ನೊಂದಿಗೆ ಆಟಿಕೆಗಳ ವಲಯಕ್ಕಾಗಿ, ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ಸರ್ಕಾರವು ಯೋಜನೆಯನ್ನು ಜಾರಿಗೊಳಿಸುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

  • 01 Feb 2025 11:33 AM (IST)

    Union Budget 2025 Live: ಅಸ್ಸಾಂನಲ್ಲಿ ಯೂರಿಯಾ ಸ್ಥಾವರ ಸ್ಥಾಪನೆ

    ಯೂರಿಯಾ ಪೂರೈಕೆಯನ್ನು ಇನ್ನಷ್ಟು ಹೆಚ್ಚಿಸಲು ಅಸ್ಸಾಂನಲ್ಲಿ ಯೂರಿಯಾ ಪ್ಲಾಂಟ್ ಸ್ಥಾಪಿಸಲಾಗುವುದು, ವಾರ್ಷಿಕ 12.7 ಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯದ ಸ್ಥಾವರವನ್ನು ಅಸ್ಸಾಂನ ನಾಮ್ರೂಪ್‌ನಲ್ಲಿ ಸ್ಥಾಪಿಸಲಾಗುವುದು, ಪೂರ್ವ ಪ್ರದೇಶದಲ್ಲಿ ನಿಷ್ಕ್ರಿಯವಾಗಿದ್ದ 3 ಯೂರಿಯಾ ಸ್ಥಾವರಗಳನ್ನು ಪುನಃ ತೆರೆಯಲಾಗಿದೆ ಎಂದು ಸೀತಾರಾಮನ್ ಹೇಳಿದ್ದಾರೆ.

  • 01 Feb 2025 11:32 AM (IST)

    Union Budget 2025 Live: ಹೂಡಿಕೆ ಮತ್ತು ವಹಿವಾಟು ಮಿತಿಗಳ ಹೆಚ್ಚಳ

    ಎಲ್ಲಾ ಎಂಎಸ್‌ಎಂಇಗಳ ವರ್ಗೀಕರಣಕ್ಕಾಗಿ ಹೂಡಿಕೆ ಮತ್ತು ವಹಿವಾಟು ಮಿತಿಗಳನ್ನು ಕ್ರಮವಾಗಿ 2.5 ಮತ್ತು 2 ಪಟ್ಟು ಹೆಚ್ಚಿಸಲಾಗುವುದು. ಇದು ನಮ್ಮ ಯುವಕರಿಗೆ ಬೆಳೆಯುವ ಮತ್ತು ಉದ್ಯೋಗವನ್ನು ಸೃಷ್ಟಿಸುವ ವಿಶ್ವಾಸವನ್ನು ನೀಡುತ್ತದೆ ಎಂದು ಸೀತಾರಾಮನ್ ಹೇಳಿದ್ದಾರೆ.

  • 01 Feb 2025 11:31 AM (IST)

    Union Budget 2025 Live: ಎಲ್ಲಾ ಸರ್ಕಾರಿ ಶಾಲೆಗಳಿಗೆ ಬ್ರಾಡ್​ಬ್ಯಾಂಡ್ ಸಂಪರ್ಕ

    ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕವನ್ನು ವಿಸ್ತರಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

  • 01 Feb 2025 11:28 AM (IST)

    Union Budget 2025 Live: ಪಾದರಕ್ಷೆ ಹಾಗೂ ಚರ್ಮದ ಉದ್ಯಮಕ್ಕೆ ಯೋಜನೆ

    ಹಣಕಾಸು ಸಚಿವರು ಭಾರತದ ಪಾದರಕ್ಷೆ ಮತ್ತು ಚರ್ಮದ ವಲಯಕ್ಕೆ ಮೀಸಲಾದ ಯೋಜನೆಯನ್ನು ಘೋಷಿಸಿದರು. ಇದು 22 ಲಕ್ಷ ವ್ಯಕ್ತಿಗಳಿಗೆ ಉದ್ಯೋಗವನ್ನು ಸೃಷ್ಟಿಸುವ ನಿರೀಕ್ಷೆಯಿದೆ, 4 ಲಕ್ಷ ಕೋಟಿ ರೂ. ಆದಾಯವನ್ನು ಸಾಧಿಸುತ್ತದೆ ಮತ್ತು ರಫ್ತುಗಳನ್ನು 1.1 ಲಕ್ಷ ಕೋಟಿಗೆ ರೂ.ಗೆ ಹೆಚ್ಚಿಸುತ್ತದೆ .

  • 01 Feb 2025 11:27 AM (IST)

    Union Budget 2025 Live: ಐಐಟಿಗಳಿಗೆ ಹೆಚ್ಚುವರಿ ಮೂಲಸೌಕರ್ಯ

    2014 ರ ನಂತರ ಸ್ಥಾಪಿಸಲಾದ ಐಐಟಿಗಳಲ್ಲಿ ಹೆಚ್ಚುವರಿ ಮೂಲಸೌಕರ್ಯಗಳನ್ನು ಹೆಚ್ಚಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಐಐಟಿ ಪಾಟ್ನಾವನ್ನು ವಿಸ್ತರಿಸಲಾಗುವುದು ಎಂದು ಅವರು ಹೇಳಿದರು.

  • 01 Feb 2025 11:26 AM (IST)

    Union Budget 2025 Live: ಇಂಡಿಯಾ ಪೋಸ್ಟ್​-ಲಾಜಿಸ್ಟಿಕ್ ಸಂಸ್ಥೆ

    ಇಂಡಿಯಾ ಪೋಸ್ಟ್ ಅನ್ನು ಪ್ರಮುಖ ಸಾರ್ವಜನಿಕ ಲಾಜಿಸ್ಟಿಕ್ಸ್ ಸಂಸ್ಥೆಯಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

  • 01 Feb 2025 11:22 AM (IST)

    Union Budget 2025 Live: ಕಿಸಾನ್ ಕ್ರೆಡಿಟ್ ಕಾರ್ಡ್

    ರೈತರಿಗೆ ಮತ್ತಷ್ಟು ಸಾಲವನ್ನು ನೀಡುವ ದೃಷ್ಟಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್​ನ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಸಿಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

  • 01 Feb 2025 11:19 AM (IST)

    Union Budget 2025 Live: ಖಾಸಗಿ ವಲಯದಲ್ಲಿ ಹೂಡಿಕೆ ಹೆಚ್ಚಾಗುತ್ತಿದೆ

    ನಮ್ಮ ಆರ್ಥಿಕತೆಯು ಎಲ್ಲಾ ಪ್ರಮುಖ ಆರ್ಥಿಕತೆಗಳಲ್ಲಿ ವೇಗವಾಗಿ ಬೆಳೆಯುತ್ತಿದೆ. ಕಳೆದ 10 ವರ್ಷಗಳಲ್ಲಿ ನಮ್ಮ ಬೆಳವಣಿಗೆಯ ದಾಖಲೆ ಮತ್ತು ರಚನಾತ್ಮಕ ಸುಧಾರಣೆಗಳು ಜಾಗತಿಕ ಗಮನವನ್ನು ಸೆಳೆದಿವೆ.

  • 01 Feb 2025 11:18 AM (IST)

    Union Budget 2025 Live: ಪ್ರಧಾನ ಮಂತ್ರಿ ಧನಧಾನ್ಯ ಯೋಜನೆ

    ಕೃಷಿ ಬಜೆಟ್ 2025: ಪ್ರಧಾನ ಮಂತ್ರಿ ಧನಧಾನ್ಯ ಕೃಷಿ ಯೋಜನೆಯಿಂದ 1.7 ಕೋಟಿ ರೈತರಿಗೆ ಅನುಕೂಲವಾಗುತ್ತಿದೆ. ಇದು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

  • 01 Feb 2025 11:14 AM (IST)

    Union Budget 2025 Live: ಸದನದಿಂದ ಹೊರ ನಡೆದ ಎಸ್​ಪಿ ಸಂಸದರು

    ಸಂಸತ್ತಿನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್​ ಮಂಡನೆ ಆರಂಭಿಸಿದ್ದಾರೆ. ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಇದೇ ವೇಳೆ ಎಸ್​ಪಿ ಸಂಸದರು ಸದನದಿಂದ ಹೊರನಡೆದರು.

  • 01 Feb 2025 11:12 AM (IST)

    Union Budget 2025 Live: ಪ್ರಮುಖ 10 ಕ್ಷೇತ್ರಗಳ ಅಭಿವೃದ್ಧಿಗಾಗಿ ಈ ಬಜೆಟ್

    ಈ ಬಜೆಟ್​ನಲ್ಲಿ ಬಡವರು, ಯುವಕರು, ರೈತರು, ಮಹಿಳೆಯರ ಅಭಿವೃದ್ಧಿ ಸೇರಿದಂತೆ ಒಟ್ಟು ಪ್ರಮುಖ 10 ಕ್ಷೇತ್ರಗಳ ಅಭಿವೃದ್ಧಿ ಬಗ್ಗೆ ಹೆಚ್ಚಿನ ಗಮನಹರಿಸಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

  • 01 Feb 2025 11:09 AM (IST)

    Union Budget 2025 Live: ಈ ಬಜೆಟ್ ಅಭಿವೃದ್ಧಿಯ ವೇಗವನ್ನು ಹೆಚ್ಚಿಸುತ್ತದೆ

    ಈ ಬಜೆಟ್ ದೇಶದ ಬೆಳವಣಿಗೆಯ ವೇಗವನ್ನು ಹೆಚ್ಚಿಸಲು, ಒಟ್ಟಾರೆ ಅಭಿವೃದ್ಧಿಯನ್ನು ಸಾಧಿಸಲು, ಖಾಸಗಿ ವಲಯದಲ್ಲಿ ಹೂಡಿಕೆಯನ್ನು ಹೆಚ್ಚಿಸಲು, ದೇಶೀಯ ಸೂಕ್ಷ್ಮತೆಗಳನ್ನು ಬಲಪಡಿಸಲು ಮತ್ತು ಮಧ್ಯಮ ವರ್ಗದ ವೆಚ್ಚದ ಶಕ್ತಿಯನ್ನು ಹೆಚ್ಚಿಸುವ ಪ್ರಯತ್ನಗಳ ಭಾಗವಾಗಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

  • 01 Feb 2025 11:05 AM (IST)

    Union Budget 2025 Live: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ರಿಂದ ಬಜೆಟ್ ಮಂಡನೆ

    ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್ ಮಂಡನೆ ಶುರು ಮಾಡಿದ್ದಾರೆ. ಸದನದಲ್ಲಿ ವಿರೋಧ ಪಕ್ಷ ನಾಯಕರು ಗದ್ದಲ ಎಬ್ಬಿಸಿದ್ದಾರೆ.

  • 01 Feb 2025 10:55 AM (IST)

    Union Budget 2025 Live: ಬಜೆಟ್​ ಮಂಡನೆಗೆ ಕೇಂದ್ರ ಸಂಪುಟ ಒಪ್ಪಿಗೆ

    ಬಜೆಟ್ ಮಂಡನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

  • 01 Feb 2025 10:52 AM (IST)

    Union Budget 2025 Live: ಕೆಲವೇ ಕ್ಷಣಗಳಲ್ಲಿ ಬಜೆಟ್​ ಮಂಡನೆ

    ಇನ್ನು ಕೆಲವೇ ಕ್ಷಣಗಳಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಆರಂಭಿಸಲಿದ್ದಾರೆ. ಇದು ಅವರು ಮಂಡಿಸುತ್ತಿರುವ 8ನೇ ಬಜೆಟ್ ಆಗಿದೆ.

  • 01 Feb 2025 10:50 AM (IST)

    Union Budget 2025 Live: ಬಜೆಟ್​ಗಿಂತಲೂ ಮುಖ್ಯವಾದದ್ದಿದೆ: ಅಖಿಲೇಶ್​ ಯಾದವ್

    ಬಜೆಟ್​ಗಿಂತಲೂ ಮುಖ್ಯವಾದ್ದಿದೆ, ಮಹಾಕುಂಭದಲ್ಲಿ ಹಲವು ಮಂದಿ ಸಾವನ್ನಪ್ಪಿದ್ದಾರೆ, ನೂರಾರು ಮಂದಿ ತಮ್ಮ ಸಂಬಂಧಿಕರಿಗಾಗಿ ಹುಡುಕುತ್ತಿದ್ದಾರೆ, ಅತ್ಯಂತ ಕೆಟ್ಟ ಪರಿಸ್ಥಿತಿ ಅಲ್ಲಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

  • 01 Feb 2025 10:38 AM (IST)

    Union Budget 2025 Live: ಸಂಸತ್ತಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ

    ಇಂದು 2025-26ನೇ ಸಾಲಿನ ಕೇಂದ್ರ ಬಜೆಟ್​ ಮಂಡನೆಯಾಗುತ್ತಿದ್ದು, ಗೃಹ ಸಚಿವ ಅಮಿತ್ ಶಾ ಸಂಸತ್ತಿಗೆ ಆಗಮಿಸಿದ್ದಾರೆ.

  • 01 Feb 2025 10:34 AM (IST)

    Union Budget 2025 Live: ಮೋದಿ ಸಂಪುಟ ಸಭೆ

    ಪ್ರಧಾನಿ ಮೋದಿ ಸಂಪುಟ ಸಭೆ ಆರಂಭವಾಗಿದ್ದು, ಕೇಂದ್ರ ಬಜೆಟ್​ಗೆ ಅನುಮೋದನೆ ನೀಡಲಾಗುತ್ತದೆ.

  • 01 Feb 2025 10:27 AM (IST)

    Union Budget 2025 Live: ನಿರ್ಮಲಾ ಸೀತಾರಾಮನ್​ಗೆ ಮೊಸರು-ಸಕ್ಕರೆ ತಿನ್ನಿಸಿದ ರಾಷ್ಟ್ರಪತಿ

    ರಾಷ್ಟ್ರಪತಿ ದ್ರೌಪದಿ ಮುರ್ಮು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ಗೆ ಮೊಸರು-ಸಕ್ಕರೆ ತಿನ್ನಿಸಿದ ಸಂದರ್ಭ.

  • 01 Feb 2025 10:23 AM (IST)

    Union Budget 2025 Live: ವಿಕಸಿತ ಭಾರತಕ್ಕೆ ಬಜೆಟ್​ ಬಲವಾದ ಹೆಜ್ಜೆ

    ಬಜೆಟ್ ದೇಶದ ಬಡವರ ಕಲ್ಯಾಣಕ್ಕಾಗಿ ಹಾಗೂ ವಿಕಸಿತ ಭಾರತ ನಿರ್ಮಾಣಕ್ಕಾಗಿ ಇಡುತ್ತಿರುವ ಸಂಕಲ್ಪ ಹಾಗೂ ಬಲವಾದ ಹೆಜ್ಜೆಯಾಗಿದೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ.

  • 01 Feb 2025 10:17 AM (IST)

    Union Budget 2025 Live: ದೇಶ 270 ಲಕ್ಷ ಕೋಟಿ ರೂ. ಸಾಲದಲ್ಲಿದೆ

    ದೇಶವು 270 ಲಕ್ಷ ಕೋಟಿ ರೂ. ಸಾಲದಲ್ಲಿದೆ ಎಂದು ಮಧ್ಯಪ್ರದೇಶ ಕಾಂಗ್ರೆಸ್​ ಅಧ್ಯಕ್ಷ ಜಿತೇಂದ್ರ ಜಿತು ಪಟ್ಟಾರಿ ಹೇಳಿದ್ದಾರೆ. ದಿನದಿಂದ ದಿನಕ್ಕೆ ದೇಶದ ಪರಿಸ್ಥಿತಿ ಹದಗೆಡುತ್ತಿದೆ. ಹಣದುಬ್ಬರ ಹೆಚ್ಚಾಗುತ್ತಿದೆ ಎಂದರು.

  • 01 Feb 2025 10:02 AM (IST)

    Union Budget 2025 Live: ಸಂಸತ್ತಿಗೆ ಆಗಮಿಸಿದ ನಿರ್ಮಲಾ ಸೀತಾರಾಮನ್

    ಕೇಂದ್ರ ಬಜೆಟ್​ ಮಂಡನೆಗೆ ರಾಷ್ಟ್ರಪತಿ ಅನುಮತಿ ಪಡೆದ ನಿರ್ಮಲಾ ಸೀತಾರಾಮನ್ ಸಂಸತ್ತಿಗೆ ಆಗಮಿಸಿದ್ದಾರೆ. ಕೆಲವೇ ಹೊತ್ತಿನಲ್ಲಿ ಬಜೆಟ್​ ಮಂಡನೆಯಾಗಲಿದೆ.

  • 01 Feb 2025 09:54 AM (IST)

    Union Budget 2025 Live: ಬಜೆಟ್​ ಮಂಡಿಸಲು ರಾಷ್ಟ್ರಪತಿಯಿಂದ ಅನುಮತಿ ಪಡೆದ ನಿರ್ಮಲಾ ಸೀತಾರಾಮನ್

    ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ಭವನದಲ್ಲಿದ್ದಾರೆ. ಬಜೆಟ್ ಮಂಡಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಅನುಮತಿ ಪಡೆದಿದ್ದಾರೆ. ಇದೀಗ ಸಂಪುಟ ಸಭೆ ನಡೆಯಲಿದ್ದು, ಬಜೆಟ್​ಗೆ ಅನುಮೋದನೆ ದೊರೆಯಲಿದೆ.

  • 01 Feb 2025 09:44 AM (IST)

    Union Budget 2025 Live: ರಾಷ್ಟ್ರಪತಿಯನ್ನು ಭೇಟಿಯಾದ ನಿರ್ಮಲಾ ಸೀತಾರಾಮನ್

    ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿದ್ದಾರೆ.

  • 01 Feb 2025 09:39 AM (IST)

    Union Budget 2025 Live: ರಾಷ್ಟ್ರಪತಿ ಭವನಕ್ಕೆ ತೆರಳಿದ ನಿರ್ಮಲಾ ಸೀತಾರಾಮನ್

    ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ಭವನ ತಲುಪಿದ್ದಾರೆ. ಕೆಲವೇ ಕ್ಷಣಗಳಲ್ಲಿ ರಾಷ್ಟ್ರಪತಿ ಬಳಿ ಬಜೆಟ್​ಗೆ ಅನುಮೋದನೆ ಪಡೆಯಲಿದ್ದಾರೆ.

  • 01 Feb 2025 09:35 AM (IST)

    Union Budget 2025 Live: ಕಲಾವಿದ ಝುಹೇಬ್ ಖಾನ್ ಕೈಯಲ್ಲಿ ಅರಳಿದ ನಿರ್ಮಲಾ ಸೀತಾರಾಮನ್ ಚಿತ್ರ

    ಆಮ್ರೋಹಾದ ಕಲಾವಿದ ಝುಹೇಬ್ ಖಾನ್ ಕೇಂದ್ರ ಬಜೆಟ್ ಹಿನ್ನೆಲೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಚಿತ್ರ ರಚಿಸಿದ್ದಾರೆ.

  • 01 Feb 2025 09:31 AM (IST)

    Union Budget 2025 Live: ಶೀಘ್ರ ಸಚಿವ ಸಂಪುಟ ಸಭೆ

    ಸಂಸತ್ ಭವನದಲ್ಲಿ ಬೆಳಗ್ಗೆ 10.25ಕ್ಕೆ ಸಂಪುಟ ಸಭೆ ನಡೆಯಲಿದ್ದು, ಬಜೆಟ್​ಗೆ ಅನುಮೋದನೆ ದೊರೆಯಲಿದೆ.

  • 01 Feb 2025 09:28 AM (IST)

    Union Budget 2025 Live: ರಾಷ್ಟ್ರಪತಿ ಭವನಕ್ಕೆ ಹೊರಟ ನಿರ್ಮಲಾ ಸೀತಾರಾಮನ್

    ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಬಜೆಟ್ ಮಂಡನೆಗೆ ಒಪ್ಪಿಗೆ ಪಡೆಯಲು ರಾಷ್ಟ್ರಪತಿ ಭವನಕ್ಕೆ ತೆರಳಿದ್ದಾರೆ.

  • 01 Feb 2025 09:22 AM (IST)

    Union Budget 2025 Live: ಬಜೆಟ್​ ಮೇಲೆ ಯಾವ ನಿರೀಕ್ಷೆಗಳಿಲ್ಲ: ಕಾಂಗ್ರೆಸ್​ ನಾಯಕ

    ನಮಗೆ ಬಜೆಟ್​ ಮೇಲೆ ಯಾವ ನಿರೀಕ್ಷೆಗಳಿಲ್ಲ, ಕಳೆದ 10-11 ವರ್ಷಗಳಿಂದ ಬಜೆಟ್ ಮಂಡಿಸುತ್ತಿದ್ದಾರೆ, ಆದರೆ ಕೆಲಸಗಳನ್ನು ಮಾಡಿಲ್ಲ ಎಂದು ಕಾಂಗ್ರೆಸ್​ ನಾಯಕ ಸಂದೀಪ್ ದೀಕ್ಷಿತ್ ಹೇಳಿದ್ದಾರೆ.

  • 01 Feb 2025 09:20 AM (IST)

    Union Budget 2025 Live: ಸಂಸತ್ತಿನ ಅಂಗಳಕ್ಕೆ ಬಂದಿಳಿದ ಬಜೆಟ್ ಪ್ರತಿಗಳು

    ಸಂಸತ್ತಿನಲ್ಲಿ ಇಂದು 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದ್ದು, ಅದರ ಪ್ರತಿ ಟ್ರಕ್​ನಲ್ಲಿ ಬಂದಿಳಿದಿದೆ. ನಿರ್ಮಲಾ ಸೀತಾರಾಮನ್ 8ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ.

  • 01 Feb 2025 09:16 AM (IST)

    Union Budget 2025: ಹಣಕಾಸು ಸಚಿವಾಲಯಕ್ಕೆ ಡಾ. ವಿ ಅನಂತ ನಾಗೇಶ್ವರನ್ ಆಗಮನ

    ಹಣಕಾಸು ಸಚಿವಾಲಯಕ್ಕೆ ಆರ್ಥಿಕ ಮುಖ್ಯ ಸಲಹೆಗಾರ ಡಾ. ವಿ. ಅನಂತ ನಾಗೇಶ್ವರನ್ ಆಗಮಿಸಿದ್ದಾರೆ.

  • 01 Feb 2025 09:13 AM (IST)

    Union Budget 2025: ಕೇಂದ್ರ ಬಜೆಟ್: ಒಡಿಶಾದ ನಟ, ಬಿಜೆಪಿ ಶಾಸಕ ಆಕಾಶ್ ದಸ್ನಾಯಕ್ ಮಾತು

    ಎಲ್ಲಾ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡನೆ ಮಾಡಲಾಗುತ್ತಿದೆ. ಅದರಲ್ಲೂ ಮಹಿಳೆ, ಯುವಕರು, ಆರೋಗ್ಯ, ಶಿಕ್ಷಣ ಇವು ಪ್ರಮುಖ ವಿಷಯಗಳಾಗಿವೆ ಎಂದಿದ್ದಾರೆ.

  • 01 Feb 2025 09:10 AM (IST)

    Union Budget 2025: ಮರಳಿನಲ್ಲಿ ಕಲಾಕೃತಿ ರಚಿಸಿದ ಸುದರ್ಶನ್ ಪಟ್ನಾಯಕ್

    ಕೇಂದ್ರ ಬಜೆಟ್ ಹಿನ್ನೆಲೆಯಲ್ಲಿ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್, ಮರಳು ಕಲಾಕೃತಿ ರಚಿಸಿದ್ದಾರೆ.

  • 01 Feb 2025 08:44 AM (IST)

    Union Budget 2025: ಹಣಕಾಸು ಸಚಿವಾಲಯಕ್ಕೆ ಆಗಮಿಸಿದ ಸಚಿವೆ ನಿರ್ಮಲಾ ಸೀತಾರಾಮನ್

    ಹಣಕಾಸು ಸಚಿವಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸಿದ್ದು, ಕೆಲವೇ ನಿಮಿಷಗಳಲ್ಲಿ 2025-2026ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.

  • 01 Feb 2025 08:29 AM (IST)

    Union Budget 2025: ರಾಷ್ಟ್ರಪತಿ ಭೇಟಿಗೆ ತೆರಳಿದ ನಿರ್ಮಲಾ ಸೀತಾರಾಮನ್

    ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಗೆ ತೆರಳಿದ್ದಾರೆ. ಬಜೆಟ್​ಗೆ ಒಪ್ಪಿಗೆ ದೊರೆತ ಬಳಿಕ ಮತ್ತೆ ಸಚಿವಾಲಯಕ್ಕೆ ಮರಳಲಿದ್ದಾರೆ.

  • 01 Feb 2025 08:27 AM (IST)

    Union Budget 2025: ಬಜೆಟ್ ನೇರ ಪ್ರಸಾರ ಎಲ್ಲಿ ವೀಕ್ಷಿಸಬಹುದು?

    2025 ರ ಬಜೆಟ್ ಮಂಡನೆಯನ್ನು Sansad TV ಯಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ದೂರದರ್ಶನದಲ್ಲಿ ಕೂಡ ಬಜೆಟ್ 2025 ರ ನೇರ ಭಾಷಣವನ್ನು ವೀಕ್ಷಿಸಲು ನಿಮಗೆ ಸಾಧ್ಯವಾಗುತ್ತದೆ.

  • 01 Feb 2025 08:23 AM (IST)

    Union Budget 2025: ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ವಿಶೇಷ ಒತ್ತು: ಮುರ್ಮು

    ಸರ್ಕಾರ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಿ ಯುವಜನತೆಗೆ ಹೊಸ ಉದ್ಯೋಗಾವಕಾಶಗಳನ್ನು ಕಲ್ಪಿಸಿದೆ. ಎಂಟನೇ ವೇತನ ಆಯೋಗವನ್ನು ರಚಿಸುವ ಪ್ರಸ್ತಾವನೆಯನ್ನು ಉಲ್ಲೇಖಿಸಿದ ರಾಷ್ಟ್ರಪತಿಗಳು, ಕೇಂದ್ರ ಸರ್ಕಾರಿ ನೌಕರರ ವೇತನದಲ್ಲಿ ಪ್ರಮುಖ ಹೆಚ್ಚಳಕ್ಕೆ ಇದು ಆಧಾರವಾಗಿದೆ ಎಂದು ಹೇಳಿದರು.

  • 01 Feb 2025 08:10 AM (IST)

    Budget 2025: ಬಜೆಟ್‌ನಲ್ಲಿ ಉದ್ಯೋಗ ಮತ್ತು ಕೌಶಲ್ಯಕ್ಕೆ ಒತ್ತು

    2025 ರ ಬಜೆಟ್​ನಲ್ಲಿ ಉದ್ಯೋಗ ಮತ್ತು ಕೌಶಲ್ಯಗಳಿಗೆ ಒತ್ತು ನೀಡುವ ಸಾಧ್ಯತೆಯಿದೆ ಆದಾಯವನ್ನು ಹೆಚ್ಚಿಸುವುದು, ಕಾರ್ಮಿಕ ವಲಯಗಳನ್ನು ಬೆಂಬಲಿಸುವುದು ಸೇರಿದಂತೆ ಹಲವು ಘೋಷಣೆಗಳ ನಿರೀಕ್ಷೆ ಇದೆ.

  • 01 Feb 2025 08:02 AM (IST)

    Union Budget 2025: ರಕ್ಷಣಾ ವಲಯಕ್ಕೆ ದೊಡ್ಡ ಕೊಡುಗೆ ನಿರೀಕ್ಷೆ

    ಬಜೆಟ್‌ನಲ್ಲಿ ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೆಲವು ದೊಡ್ಡ ಘೋಷಣೆಗಳು ಇರಬಹುದು ಎಂದು ಊಹಿಸಲಾಗುತ್ತಿದೆ .ಜಾಗತಿಕವಾಗಿ ಮಿಲಿಟರಿ ವಲಯದಲ್ಲಿ ಅತಿ ಹೆಚ್ಚು ಖರ್ಚು ಮಾಡುವ ದೇಶಗಳಲ್ಲಿ ಭಾರತವೂ ಒಂದಾಗಿದೆ. ರಕ್ಷಣಾ ಕ್ಷೇತ್ರದ ಮೇಲಿನ ಭಾರತದ ವೆಚ್ಚವು ಜಿಡಿಪಿಯ 2.5 ಪ್ರತಿಶತಕ್ಕಿಂತ ಕಡಿಮೆಯಾಗಿದೆ.

  • 01 Feb 2025 07:57 AM (IST)

    Union Budget 2025: ಬಹುನಿರೀಕ್ಷಿತ ಬಜೆಟ್

    140 ಕೋಟಿ ಭಾರತೀಯರ ಕನಸುಗಳನ್ನು ಈಡೇರಿಸುವ ಹಂಬಲ ಹೊತ್ತಿರುವ ಕೇಂದ್ರ ಸರ್ಕಾರದ ಬಹುನಿರೀಕ್ಷೆಯ ಬಜೆಟ್ ಇಂದು ಪ್ರಕಟವಾಗಲಿದೆ.

  • Budget Session 2025 Parliament Highlights: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ತಮ್ಮ 8ನೇ ಬಜೆಟ್​ ಮಂಡನೆ ಮಾಡಿದ್ದಾರೆ. ಸಂಸತ್‌ ಇತಿಹಾಸದಲ್ಲಿ ಹೆಚ್ಚು ಬಜೆಟ್‌ ಮಂಡಿಸಿದ ಮಹಿಳಾ ಹಣಕಾಸು ಮಂತ್ರಿ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಸಂಸತ್ತಿನಲ್ಲಿ 2025ರ ಕೇಂದ್ರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಮಂಡನೆ ಶುರು ಮಾಡಿದ್ದಾರೆ.

    ಸಂಸತ್ತಿನ ಅಧಿಕೃತ ಚಾನೆಲ್‌ಗಳಲ್ಲಿ ಭಾಷಣವನ್ನು ಪ್ರಸಾರ ಮಾಡಲಾಗುತ್ತದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ಎಂಟನೇ ಬಜೆಟ್ ಇದಾಗಿದೆ. ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ಹೊಂದಿದ್ದಾರೆ.

    ಅವರು ಒಟ್ಟು 10 ಬಾರಿ ಬಜೆಟ್ ಮಂಡಿಸಿದ್ದರು. ಮೊರಾರ್ಜಿ ದೇಸಾಯಿ ಹಣಕಾಸು ಸಚಿವರಾಗಿದ್ದಾಗ, 1959ರಿಂದ 1964ರವರೆಗೆ ಸತತ ಆರು ಬಾರಿ ಮತ್ತು 1967ರಿಂದ 1969ರ ಅವಧಿಯಲ್ಲಿ ನಾಲ್ಕು ಬಾರಿ ಬಜೆಟ್ ಮಂಡಿಸಿದ್ದರು. ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಒಂಬತ್ತು ಬಾರಿ ಬಜೆಟ್ ಮಂಡಿಸಿದ್ದರು.

    ಹಾಗೆಯೇ ಪ್ರಣಬ್ ಮುಖರ್ಜಿ ಭಾರತದ ಹಣಕಾಸು ಸಚಿವರಾಗಿದ್ದಾಗ ಎಂಟು ಬಾರಿ ಬಜೆಟ್ ಮಂಡಿಸಿದ್ದರು. ಹಣದುಬ್ಬರ ಹೊಡೆತಕ್ಕೆ ಸಿಕ್ಕಿರುವ ಮಧ್ಯಮ ವರ್ಗವನ್ನು ರಕ್ಷಿಸುವ ಸಲುವಾಗಿ ತೆರಿಗೆ ದರ ಕಡಿತ ಅಥವಾ ತೆರಿಗೆ ಸ್ತರದಲ್ಲಿ ಬದಲಾವಣೆ ಸಾಧ್ಯತೆ ದಟ್ಟವಾಗಿದೆ. ಬಜೆಟ್​ ಮಂಡನೆಯ ಕ್ಷಣ ಕ್ಷಣದ ಮಾಹಿತಿ ಇಲ್ಲಿ ನಿಮಗೆ ಲಭ್ಯವಾಗಲಿದೆ. ಬಜೆಟ್ ನಿರೀಕ್ಷೆಗಳು

    • ಆದಾಯ ತೆರಿಗೆ ಕಾಯ್ದೆ ಸರಳೀಕರಣಕ್ಕೆ ನೇರ ತೆರಿಗೆ ಕೋಡ್ ಪರಿಚಯ ಮಾಡುವ ಸಾಧ್ಯತೆ • ಆದಾಯ ತೆರಿಗೆ ವಿನಾಯಿತಿ ಮಿತಿ 2.5 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ. ಶೇ.30ರಷ್ಟು ತೆರಿಗೆ ಸ್ಲಾಬ್‌ನ ಆದಾಯ ಮಿತಿ 15ರಿಂದ 20 ಲಕ್ಷಕ್ಕೆ ಏರಿಕೆ • ಗೃಹ ಸಾಲಗಳಿಗೆ ವಿಧಿಸಲಾಗುವ ತೆರಿಗೆಯ ವಿನಾಯಿತಿ ಮಿತಿಯಲ್ಲಿ ಹೆಚ್ಚಳ ಸಾಧ್ಯತೆ • ಮಹಿಳೆಯರಿಗಾಗಿ ಹೊಸ ಯೋಜನೆಗಳು

    ಬಜೆಟ್​ಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

    Published On - Feb 01,2025 7:56 AM

    Follow us
    ದೆಹಲಿ ನಾಯಕರ ಭೇಟಿ ಬಳಿಕ ಶಾಸಕ ಯತ್ನಾಳ್​ ಹೇಳಿದ್ದಿಷ್ಟು
    ದೆಹಲಿ ನಾಯಕರ ಭೇಟಿ ಬಳಿಕ ಶಾಸಕ ಯತ್ನಾಳ್​ ಹೇಳಿದ್ದಿಷ್ಟು
    ರಕ್ಷಿತಾರನ್ನು ಮದುವೆಯಾದಾಗ ಅಂಬರೀಶ್ ಹೇಳಿದ್ದನ್ನು ಮೆಲಕು ಹಾಕಿದ ಪ್ರೇಮ್
    ರಕ್ಷಿತಾರನ್ನು ಮದುವೆಯಾದಾಗ ಅಂಬರೀಶ್ ಹೇಳಿದ್ದನ್ನು ಮೆಲಕು ಹಾಕಿದ ಪ್ರೇಮ್
    ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಜನ ಸಾವು
    ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಜನ ಸಾವು
    ಅಪ್ಪನನ್ನು ಇಷ್ಟಪಡುವ ಕಾರಣಕ್ಕೆ ಮಗನನ್ನೂ ಇಷ್ಟಪಡುವ ಅಗತ್ಯವಿಲ್ಲ: ನಿರಾಣಿ
    ಅಪ್ಪನನ್ನು ಇಷ್ಟಪಡುವ ಕಾರಣಕ್ಕೆ ಮಗನನ್ನೂ ಇಷ್ಟಪಡುವ ಅಗತ್ಯವಿಲ್ಲ: ನಿರಾಣಿ
    ಆಯತಪ್ಪಿ ಬಿದ್ದಿದ್ದ ಬೈಕ್​ ಸವಾರ: ಗಾಯಾಳುಗೆ ನೆರವಾದ ಸಂತೋಷ್ ಲಾಡ್
    ಆಯತಪ್ಪಿ ಬಿದ್ದಿದ್ದ ಬೈಕ್​ ಸವಾರ: ಗಾಯಾಳುಗೆ ನೆರವಾದ ಸಂತೋಷ್ ಲಾಡ್
    ವಿರೋಧಪಕ್ಷಗಳ ಟೀಕೆಗೆ ಗುರಿಯಾಗದ ಬಜೆಟ್ ಮಂಡನೆ ಮುಖ್ಯಮಂತ್ರಿಗೆ ಸಾಧ್ಯವೇ?
    ವಿರೋಧಪಕ್ಷಗಳ ಟೀಕೆಗೆ ಗುರಿಯಾಗದ ಬಜೆಟ್ ಮಂಡನೆ ಮುಖ್ಯಮಂತ್ರಿಗೆ ಸಾಧ್ಯವೇ?
    ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
    ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
    ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
    ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
    ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
    ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
    ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
    ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ