AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2025: 36 ಜೀವರಕ್ಷಕ ಔಷಧಿಗಳ ಕಸ್ಟಮ್ ಸುಂಕದಿಂದ ವಿನಾಯಿತಿ

ಕೇಂದ್ರ ಬಜೆಟ್ ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರೋಗ್ಯ ಕ್ಷೇತ್ರಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದು, ಅದರಲ್ಲಿ 36 ಜೀವರಕ್ಷಕ ಔಷಧಿಗಳ ಕಸ್ಟಮ್ ಸುಂಕದಿಂದ ವಿನಾಯಿತಿ ನೀಡಿರುವುದು ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಲಿದೆ. ಇದು ಕ್ಯಾನ್ಸರ್ ಸೇರಿದಂತೆ ಇತರ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಸಹಾಯ ಮಾಡಲಿದೆ.

Union Budget 2025: 36 ಜೀವರಕ್ಷಕ ಔಷಧಿಗಳ ಕಸ್ಟಮ್ ಸುಂಕದಿಂದ ವಿನಾಯಿತಿ
ಬಜೆಟ್
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Feb 01, 2025 | 1:37 PM

Share

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1, ಶನಿವಾರ (ಇಂದು) ಬಜೆಟ್ ಮಂಡಿಸಿದ್ದು, ಇದು ಅವರ ಸತತ ಎಂಟನೇ ಬಜೆಟ್ ಮಂಡನೆ ಆಗಿದೆ. ಈ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹಲವಾರು ಕೊಡುಗೆಗಳನ್ನು ನೀಡಲಾಗಿದ್ದು ಅದರಲ್ಲಿ 36 ಜೀವರಕ್ಷಕ ಔಷಧಿಗಳ ಕಸ್ಟಮ್ ಸುಂಕದಿಂದ ವಿನಾಯಿತಿ ನೀಡಿರುವುದು ಜನಸಾಮನ್ಯರಿಗೆ ಅನುಕೂಲ ಮಾಡಿಕೊಡಲಿದ್ದು ಇದು ಕ್ಯಾನ್ಸರ್ ಸೇರಿದಂತೆ ಇತರ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಸಹಾಯ ಮಾಡಲಿದೆ.

“ರೋಗಿಗಳಿಗೆ, ವಿಶೇಷವಾಗಿ ಕ್ಯಾನ್ಸರ್, ಅಪರೂಪದ ಕಾಯಿಲೆಗಳು ಮತ್ತು ಇತರ ತೀವ್ರವಾದ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಪರಿಹಾರ ಒದಗಿಸಲು, ಮೂಲ ಕಸ್ಟಮ್ಸ್ ಸುಂಕದಿಂದ (ಬಿಸಿಡಿ) ಸಂಪೂರ್ಣವಾಗಿ ವಿನಾಯಿತಿ ಪಡೆದ ಔಷಧಿಗಳ ಪಟ್ಟಿಗೆ 36 ಜೀವ ರಕ್ಷಕ ಔಷಧಿಗಳನ್ನು ಸೇರಿಸಲು ಸರ್ಕಾರ ಪ್ರಸ್ತಾಪಿಸಿದೆ. ಆರು ಜೀವ ಉಳಿಸುವ ಔಷಧಿಗಳನ್ನು ಈ ಪಟ್ಟಿಗೆ ಸೇರಿಸಲಾಗಿದ್ದು ಇದಕ್ಕೆ ಕಸ್ಟಮ್ಸ್ ಸುಂಕದಲ್ಲಿ 5% ರಿಯಾಯಿತಿ ನೀಡಲಾಗುತ್ತದೆ. ಜೊತೆಗೆ ಈ ಔಷಧಿಗಳನ್ನು ತಯಾರಿಸಲು ಬಳಸುವ ಬೃಹತ್ ಔಷಧಿಗಳಿಗೂ ಸಂಪೂರ್ಣ ವಿನಾಯಿತಿ ಮತ್ತು ರಿಯಾಯಿತಿ ಸುಂಕ ಅನ್ವಯಿಸುತ್ತದೆ” ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇದನ್ನೂ ಓದಿ: ಕ್ಯಾನ್ಸರ್ ರೋಗಿಗಳಿಗೆ ಅನುಕೂಲವಾಗಲು ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆ

“ಔಷಧೀಯ ಕಂಪನಿಗಳು ನಡೆಸುವ ರೋಗಿಗಳ ಸಹಾಯ ಕಾರ್ಯಕ್ರಮಗಳ ಅಡಿಯಲ್ಲಿ ನಿರ್ದಿಷ್ಟ ಪಡಿಸಿದ ಔಷಧಿಗಳನ್ನು ಬಿಸಿಡಿಯಿಂದ ವಿನಾಯಿತಿ ನೀಡಲಾಗುತ್ತದೆ. ಇನ್ನೂ 37 ಔಷಧಿಗಳು ಮತ್ತು 13 ಹೊಸ ರೋಗಿ ನಿರ್ವಹಣಾ ಕಾರ್ಯಕ್ರಮಗಳನ್ನು ಸೇರಿಸಲು ನಾನು ಪ್ರಸ್ತಾಪಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಬಜೆಟ್ ಸಂಬಂಧಿತ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ