Union Budget 2025: ಕ್ಯಾನ್ಸರ್ ರೋಗಿಗಳಿಗೆ ಅನುಕೂಲವಾಗಲು ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆ
ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಯೋಜಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ತಮ್ಮ 8ನೇ ಬಜೆಟ್ ನಲ್ಲಿ ಹೇಳಿದ್ದಾರೆ. "ನಿರ್ದಿಷ್ಟವಾಗಿ, 2025- 26ರ ಆರ್ಥಿಕ ವರ್ಷದಲ್ಲಿ ಇಂತಹ 200 ಕೇಂದ್ರಗಳನ್ನು ಸ್ಥಾಪಿಸುವ ನಿರೀಕ್ಷೆಯಿದೆ. ಈ ಕ್ರಮವು ದೇಶಾದ್ಯಂತ ಕ್ಯಾನ್ಸರ್ ಚಿಕಿತ್ಸೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ" ಎಂದು ಅವರು ಹೇಳಿದ್ದಾರೆ. ಜನರಿಗೆ ಆರೋಗ್ಯ ಭಾಗ್ಯ ಕರುಣಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಇದೀಗ ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಆರಂಭಿಸುವುದಾಗಿ ಘೋಷಣೆ ಮಾಡಿರುವುದು ಎಲ್ಲಾ ವರ್ಗದ ಜನರಿಗೂ ಅನುಕೂಲ ಮಾಡಿಕೊಡಲಿದೆ.

ಮುಂದಿನ ಮೂರು ವರ್ಷಗಳಲ್ಲಿ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಯೋಜಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ತಮ್ಮ 8ನೇ ಬಜೆಟ್ ನಲ್ಲಿ ಹೇಳಿದ್ದಾರೆ. “ನಿರ್ದಿಷ್ಟವಾಗಿ, 2025- 26ರ ಆರ್ಥಿಕ ವರ್ಷದಲ್ಲಿ ಇಂತಹ 200 ಕೇಂದ್ರಗಳನ್ನು ಸ್ಥಾಪಿಸುವ ನಿರೀಕ್ಷೆಯಿದೆ. ಈ ಕ್ರಮವು ದೇಶಾದ್ಯಂತ ಕ್ಯಾನ್ಸರ್ ಚಿಕಿತ್ಸೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ” ಎಂದು ಅವರು ಹೇಳಿದ್ದಾರೆ. ಜನರಿಗೆ ಆರೋಗ್ಯ ಭಾಗ್ಯ ಕರುಣಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಇದೀಗ ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಆರಂಭಿಸುವುದಾಗಿ ಘೋಷಣೆ ಮಾಡಿರುವುದು ಎಲ್ಲಾ ವರ್ಗದ ಜನರಿಗೂ ಅನುಕೂಲ ಮಾಡಿಕೊಡಲಿದೆ. ಹಾಗಾದರೆ ಇದರಿಂದ ಜನಸಾಮಾನ್ಯರು ಯಾವ ರೀತಿಯ ಸೌಲಭ್ಯಗಳನ್ನು ಪಡೆಯಬಹುದು? ಇದರಿಂದ ಸಿಗುವ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ.
ಡೇಕೇರ್ ಕ್ಯಾನ್ಸರ್ ಕೇಂದ್ರಗಳು ಎಂದರೇನು? ಹೇಗೆ ಕಾರ್ಯ ನಿರ್ವಹಿಸುತ್ತದೆ?
ಇದು ಹೊರರೋಗಿ ಕ್ಯಾನ್ಸರ್ ಕೇಂದ್ರಗಳು ಅಥವಾ ಡೇ ಕೇರ್ ಕೀಮೋಥೆರಪಿ ಘಟಕಗಳು ಎಂದೂ ಕರೆಯಲ್ಪಡುತ್ತವೆ, ಹೊರರೋಗಿ ಆಧಾರದ ಮೇಲೆ ಕ್ಯಾನ್ಸರ್ ಚಿಕಿತ್ಸೆಯನ್ನು ಒದಗಿಸುವ ವಿಶೇಷ ಸೌಲಭ್ಯಗಳಾಗಿವೆ. ಈ ಕೇಂದ್ರಗಳು ಹಲವಾರು ಸೇವೆಗಳನ್ನು ನೀಡುತ್ತವೆ, ಅವುಗಳೆಂದರೆ:
ಕೀಮೋಥೆರಪಿ ಮತ್ತು ಇತರ ಕ್ಯಾನ್ಸರ್ ಚಿಕಿತ್ಸೆಗಳು
ಇನ್ಫ್ಯೂಷನ್ ಥೆರಪಿ
ನೋವು ನಿರ್ವಹಣೆ
ಪೌಷ್ಠಿಕಾಂಶದ ಸಮಾಲೋಚನೆ
ರೋಗಿಗಳು ಮತ್ತು ಅವರ ಕುಟುಂಬಗಳಿಗೆ ಬೆಂಬಲ ಸೇವೆಗಳು
ಈ ಡೇಕೇರ್ ಕ್ಯಾನ್ಸರ್ ಕೇಂದ್ರಗಳು ಬೇರೆ ಆಸ್ಪತ್ರೆಗಳಿಗೆ ಹೋಲಿಸಿದರೆ ಹೆಚ್ಚು ಆರಾಮದಾಯಕ ವಾತಾವರಣವನ್ನು ಹೊಂದಿರುತ್ತವೆ, ಜೊತೆಗೆ ಇಲ್ಲಿನ ವೈದ್ಯಕೀಯ ತಂಡ ರೋಗಿಗಳ ಭಯವನ್ನು ಕಡಿಮೆ ಮಾಡಿ ಒಳ್ಳೆಯ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಡುತ್ತದೆ.
ಇದನ್ನೂ ಓದಿ: 5 ಲಕ್ಷ ಎಸ್ ಸಿ / ಎಸ್ ಟಿ, ಮಹಿಳಾ ಉದ್ಯಮಿಗಳಿಗೆ 2 ಕೋಟಿ ರೂವರೆಗೆ ಸಾಲ ಸೌಲಭ್ಯ
ಇದರಿಂದ ಸಿಗುವ ಪ್ರಯೋಜನಗಳೇನು?
ಕಡಿಮೆ ಆಸ್ಪತ್ರೆ ವಾಸ್ತವ್ಯ: ರೋಗಿಗಳು ಈ ಸೌಲಭ್ಯದಿಂದ ಒಳ್ಳೆಯ ಚಿಕಿತ್ಸೆ ಪಡೆಯಬಹುದು ಜೊತೆಗೆ ಔಷಧಿಗಳನ್ನು ತೆಗೆದುಕೊಂಡು ಮನೆಗೆ ಮರಳಬಹುದು, ಇದರಿಂದ ದೀರ್ಘಕಾಲ ಆಸ್ಪತ್ರೆಯಲ್ಲಿ ಉಳಿಯುವ ಅಗತ್ಯವಿರುವುದಿಲ್ಲ. ಆಸ್ಪತ್ರೆ ಎಂದರೆ ಭಯ ಪಡುವವರಿಗೆ ಈ ರೀತಿಯ ಸೌಲಭ್ಯ ಹೆಚ್ಚು ಅನುಕೂಲ ನೀಡುತ್ತದೆ. ಇದರಿಂದ ಕ್ಯಾನ್ಸರ್ ರೋಗಿಗಳಿಗೆ ಬೇರೆ ಬೇರೆ ಊರಿಗೆ ಅಲೆಯುವ ಅಗತ್ಯವಿರುವುದಿಲ್ಲ. ಜೊತೆಗೆ ಔಷಧಿಗಳ ಬಗೆಗಿನ ಭಯವನ್ನು ಕಡಿಮೆ ಮಾಡುತ್ತದೆ.
ಸುಧಾರಿತ ಜೀವನದ ಗುಣಮಟ್ಟ: ಡೇಕೇರ್ ಕ್ಯಾನ್ಸರ್ ಕೇಂದ್ರಗಳು ಹೆಚ್ಚು ವಿಶ್ರಾಂತಿ ಮತ್ತು ಆರಾಮದಾಯಕವಾಗಿರುತ್ತದೆ. ಇಲ್ಲಿ ವ್ಯವಸ್ಥೆಗಳು ಜನರ ಅನುಕೂಲಕ್ಕೆ ತಕ್ಕಂತೆ ಮಾಡಿರುತ್ತಾರೆ. ಜೊತೆಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಇಲ್ಲಿ ಒದಗಿಸಲಾಗುತ್ತದೆ. ರೋಗಿಗಳಿಗೆ ತಮ್ಮ ದೈನಂದಿನ ದಿನಚರಿ ಮತ್ತು ಜೀವನದ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ. ಜೊತೆಗೆ ಈ ಕೇಂದ್ರಗಳಲ್ಲಿ ಆರೋಗ್ಯ ವೃತ್ತಿಪರರ ತಂಡದವರು ಇರುವುದರಿಂದ ರೋಗಿಗಳಿಗೆ ಸಮಗ್ರ ಆರೈಕೆ ನೀಡಲು ಒಟ್ಟಾಗಿ ಕೆಲಸ ಮಾಡುತ್ತಾರೆ.
ಕಡಿಮೆ ವೆಚ್ಚ: ಡೇಕೇರ್ ಕ್ಯಾನ್ಸರ್ ಸೆಂಟರ್ ಗಳಿಂದ, ಹೆಚ್ಚು ಹೆಚ್ಚು ದಿನ ಆಸ್ಪತ್ರೆಯಲ್ಲಿ ಉಳಿಯುವ ಅಗತ್ಯವಿರುವುದಿಲ್ಲ. ಇದರಿಂದ ದುಬಾರಿ ವೈದ್ಯಕೀಯ ಸಂಪನ್ಮೂಲಗಳ ಬಳಕೆ ಕಡಿಮೆಯಾಗುತ್ತದೆ. ಆ ಮೂಲಕ ಆರೋಗ್ಯ ವೆಚ್ಚವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಇಂದಿನ ಕಾಲಘಟ್ಟದಲ್ಲಿ ವೈದ್ಯಕೀಯ ಚಿಕಿತ್ಸೆ, ಔಷಧಿಗಳು ದುಬಾರಿ ಆಗಿರುವುದರಿಂದ ಈ ರೀತಿಯ ಡೇಕೇರ್ ಕ್ಯಾನ್ಸರ್ ಕೇಂದ್ರಗಳು ರೋಗಿಗಳಿಗೆ ಸಮಯೋಚಿತ ಮತ್ತು ಪರಿಣಾಮಕಾರಿಯಾದ ಚಿಕಿತ್ಸೆ ನೀಡುವುದರಿಂದ ರೋಗಿಯ ಒಟ್ಟಾರೆ ಯೋಗಕ್ಷೇಮವನ್ನು ಸುಧಾರಿಸಬಹುದು. ಜೊತೆಗೆ ಕ್ಯಾನ್ಸರ್ ರೋಗವನ್ನು ಹಿಮ್ಮೆಟ್ಟಿಸಬಹುದು.
ಬಜೆಟ್ ಸಂಬಂಧಿತ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ