
ಬೆಂಗಳೂರು, ಫೆಬ್ರವರಿ 1: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಇಂದು ಮಂಡನೆಯಾಗುತ್ತಿದೆ. ಶುಕ್ರವಾರದಿಂದ ಬಜೆಟ್ ಅಧಿವೇಶನ ಶುರುವಾಗಿದ್ದು ಸಚಿವೆ ನಿರ್ಮಲಾಸೀತಾರಾಮನ್ ಎಂಟನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಮಂಡಿಸುತ್ತಿರುವ ಬಜೆಟ್ ಮೇಲೆ ರಾಜ್ಯದಲ್ಲೂ ಹಲವು ನಿರೀಕ್ಷೆಗಳು ಗರಿಗೆದರಿವೆ. ವಿವಿಧ ಕ್ಷೇತ್ರಗಳಿಂದ ಬೆಟ್ಟದಷ್ಟು ನಿರೀಕ್ಷೆಗಳು ವ್ಯಕ್ತವಾಗ್ತಿವೆ. ಇತ್ತ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಈಗಾಗಲೇ ಕೇಂದ್ರದ ಮುಂದೆ ಒಂದಷ್ಟು ಪ್ರಸ್ತಾವನೆ ಇಟ್ಟಿದ್ದು ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಅನುದಾನ ನೀಡುವ ನಿರೀಕ್ಷೆಯಲ್ಲಿ ರಾಜ್ಯದ ಜನತೆ ಕಾತುರರಾಗಿದ್ದಾರೆ.
ಈ ಬಾರಿಯ ಬಜೆಟ್ನಲ್ಲಿ ತೆರಿಗೆಗಳು ಹಾಗೂ ಹೊಸ ಯೋಜನೆಗಳ ಘೋಷಣೆಯ ನಿರೀಕ್ಷೆ ಹೆಚ್ಚಾಗಿದ್ದು, ಇತ್ತ ಕಾರ್ಮಿಕರು, ಉದ್ಯೋಗಿಗಳು ಹಾಗೂ ಕೈಗಾರಿಕಾ ವಲಯ ಬಜೆಟ್ ಮೇಲೆ ಬಾರೀ ನಿರೀಕ್ಷೆ ಇಟ್ಟುಕೊಂಡಿದೆ. ಸದ್ಯ ತೆರಿಗೆಗಳ ಜೊತೆಗೆ ಉದ್ಯೋಗ ಸೃಷ್ಟಿ ಸೇರಿ ವಿವಿಧ ಕೊಡುಗೆಗಳನ್ನ ಎದುರು ನೋಡುತ್ತಿರುವ ರಾಜ್ಯದ ಜನರು ಕೇಂದ್ರ ಬಜೆಟ್ಗಾಗಿ ಆಸೆಗಣ್ಣಿನಿಂದ ಕಾದುಕುಳಿತಿದ್ದಾರೆ.
ಬಜೆಟ್ ಲೈವ್ ಅಪ್ಡೇಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
ಕಳೆದ ವರ್ಷ ಕೇಂದ್ರ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದ ರಾಜ್ಯ ಸರ್ಕಾರಕ್ಕೆ ಆಶಾಭಂಗವಾಗಿತ್ತು. ಹೀಗಾಗಿ ಈ ಬಾರೀಯ ಬಜೆಟ್ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಕಳೆದ ಬಾರಿ ಕೇಂದ್ರ ನೀಡಿದ್ದ ಆಶ್ವಾಸನೆಗಳೇ ಇನ್ನೂ ಈಡೇರಿಲ್ಲ, ಇನ್ನು ಈ ಬಾರಿ ಬಜೆಟ್ ಮೇಲೆ ಯಾವ ನಿರೀಕ್ಷೆ ಇಟ್ಟುಕೊಳ್ಳೋಣ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಬಜೆಟ್ ಸಂಬಂಧಿತ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:04 am, Sat, 1 February 25