Union Budget 2025: ಆದಾಯ ತೆರಿಗೆಗೆ ಹೊಸ ಕಾನೂನು, ಮುಂದಿನ ವಾರ ಮಸೂದೆ ಮಂಡನೆ; ನಿರ್ಮಲಾ ಸೀತಾರಾಮನ್ ಘೋಷಣೆ
ಬಜೆಟ್ 2025 ರ ಅತಿದೊಡ್ಡ ಘೋಷಣೆಯನ್ನು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಮಾಡಿದ್ದಾರೆ. ಬಜೆಟ್ ಭಾಷಣದಲ್ಲಿ, ದೇಶದಲ್ಲಿ ಹೊಸ ಆದಾಯ ತೆರಿಗೆ ಕಾನೂನು ಮಾಡಲಾಗುವುದು, ಇದಕ್ಕಾಗಿ ಮುಂದಿನ ವಾರದಲ್ಲಿ ಹೊಸ ಮಸೂದೆಯನ್ನು ತರಲಾಗುವುದು ಎಂದು ಹೇಳಿದರು. ಈ ಮಸೂದೆ ಯಾಕಾಗಿ, ವಿಶೇಷತೆ ಏನು? ಇಲ್ಲಿದೆ ವಿವರ.

ನವದೆಹಲಿ, ಫೆಬ್ರವರಿ 1: ಆದಾಯ ತೆರಿಗೆ ಪಾವತಿ ಸರಳೀಕರಣಗೊಳಿಸುವ ನಿಟ್ಟಿನಲ್ಲಿ ಹೊಸ ಆದಾಯ ತೆರಿಗೆ ಕಾನೂನು ರೂಪಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ. ಇದಕ್ಕಾಗಿ ಸರ್ಕಾರ ಮುಂದಿನ ವಾರ ಹೊಸ ಮಸೂದೆ ಮಂಡನೆ ಮಾಡಲಿದೆ ಎಂದು ಅವರು ತಿಳಿಸಿದರು.
1961ರ ಆದಾಯ ತೆರಿಗೆ ಕಾಯಿದೆ ಪ್ರಸ್ತುತ ದೇಶದಲ್ಲಿ ಜಾರಿಯಲ್ಲಿದೆ. 2020 ರ ಬಜೆಟ್‌ನಲ್ಲಿ, ಸರ್ಕಾರವು ಈ ಕಾನೂನಿನ ಅಡಿಯಲ್ಲಿ ಹೊಸ ತೆರಿಗೆ ಪದ್ಧತಿಯನ್ನು ಜಾರಿಗೆ ತಂದಿತ್ತು. ಆದರೆ 2024 ರ ಜುಲೈಯಲ್ಲಿ ಮಂಡಿಸಿದ ಬಜೆಟ್‌ನಲ್ಲಿ, ದೇಶದಲ್ಲಿ ಆದಾಯ ತೆರಿಗೆ ಕಾನೂನನ್ನು ಬದಲಾಯಿಸುವ ಅಗತ್ಯವಿದೆ ಎಂದು ಸರ್ಕಾರ ಸ್ಪಷ್ಟವಾಗಿ ಹೇಳಿತ್ತು. ಇದಕ್ಕಾಗಿ ಪರಿಶೀಲನಾ ಸಮಿತಿ ರಚಿಸಲಾಗಿತ್ತು.
ಈಗ ಅದರ ಆಧಾರದ ಮೇಲೆ, ಸರ್ಕಾರವು ಹೊಸ ಮಸೂದೆಯನ್ನು ತರಲು ಘೋಷಿಸಿದೆ.
ಹೊಸ ಆದಾಯ ತೆರಿಗೆ ಮಸೂದೆಯಲ್ಲಿ ಏನೇನಿರಲಿದೆ?
ಹೊಸ ಆದಾಯ ತೆರಿಗೆ ಮಸೂದೆಯಲ್ಲಿ ಏನಿರಲಿದೆ ಎಂಬುದರ ಕುರಿತು ಬಜೆಟ್‌ನಲ್ಲಿ ಯಾವುದೇ ನಿರ್ದಿಷ್ಟ, ಸ್ಪಷ್ಟ ಘೋಷಣೆ ಮಾಡಲಾಗಿಲ್ಲ. ಆದರೆ ಸರ್ಕಾರವು ಬಜೆಟ್‌ನಲ್ಲಿ ಗುರುತಿಸಿರುವ ಆರು ಪ್ರಮುಖ ಕ್ಷೇತ್ರಗಳಲ್ಲಿ ಇದೂ ಒಂದು ಪ್ರಮುಖ ಸುಧಾರಣೆ ಎಂದು ಉಲ್ಲೇಖಿಸಲಾಗಿದೆ. ಆರ್ಥಿಕ ಸಮೀಕ್ಷೆಯಲ್ಲೂ ದೇಶದಲ್ಲಿ ತೆರಿಗೆ ವ್ಯವಸ್ಥೆಯನ್ನು ಸರಳೀಕರಿಸುವ ಬಗ್ಗೆ ಪ್ರಸ್ತಾಪಿಸಲಾಗಿತ್ತು. ಖಂಡಿತವಾಗಿಯೂ ಸರ್ಕಾರವು ಹೊಸ ಕಾನೂನಿನಲ್ಲಿ ತೆರಿಗೆಗಳನ್ನು ಸರಳಗೊಳಿಸಬಹುದು ಎಂಬ ನಿರೀಕ್ಷೆ ಇದೆ.
ಬಜೆಟ್ ಲೈವ್ ಅಪ್ಡೇಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
ಹೊಸ ಆದಾಯ ತೆರಿಗೆ ಕಾನೂನು ‘ನ್ಯಾಯ’ ನೀಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದು ಈಗಿರುವ ಬಿಲ್‌ಗಿಂತ ಸರಳವಾಗಿರುತ್ತದೆ. ಇದರಿಂದ ವ್ಯಾಜ್ಯಗಳು ಕಡಿಮೆಯಾಗಲಿವ ಎಂದು ಅವರು ಹೇಳಿದ್ದಾರೆ.
ಬಜೆಟ್ ಸಂಬಂಧಿತ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:24 pm, Sat, 1 February 25