AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2025: 5 ಲಕ್ಷ ಎಸ್ ಸಿ / ಎಸ್ ಟಿ, ಮಹಿಳಾ ಉದ್ಯಮಿಗಳಿಗೆ 2 ಕೋಟಿ ರೂವರೆಗೆ ಸಾಲ ಸೌಲಭ್ಯ 

ಎಲ್ಲರೂ ಕಾಯುತ್ತಿದ್ದ ಕಾದು ಕುಳಿತ್ತಿದ್ದ ಸಮಯ ಬಂದಿದ್ದು, ಇದೀಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಹಿಂದಿನ ಕೆಲ ಬಜೆಟ್​ಗಳಲ್ಲಿ ಮಹಿಳೆಯರಿಗೆ ಹೆಚ್ಚು ಒತ್ತು ಕೊಡಲಾಗಿತ್ತು. ಈ ಬಜೆಟ್​ನಲ್ಲೂ ಅದು ಮುಂದುವರೆದಿದ್ದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರನ್ನು ಉತ್ತೇಜಿಸುವ ಸಲುವಾಗಿ ಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

Union Budget 2025: 5 ಲಕ್ಷ ಎಸ್ ಸಿ / ಎಸ್ ಟಿ, ಮಹಿಳಾ ಉದ್ಯಮಿಗಳಿಗೆ 2 ಕೋಟಿ ರೂವರೆಗೆ ಸಾಲ ಸೌಲಭ್ಯ 
ಸಾಂದರ್ಭಿಕ ಚಿತ್ರ
ಸಾಯಿನಂದಾ
| Updated By: ಸುಗ್ಗನಹಳ್ಳಿ ವಿಜಯಸಾರಥಿ|

Updated on:Feb 01, 2025 | 5:26 PM

Share

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1, ಶನಿವಾರ (ಇಂದು) ಬಜೆಟ್ ಮಂಡಿಸುತ್ತಿದ್ದಾರೆ. ಇದು ಅವರ ಸತತ ಎಂಟನೇ ಬಜೆಟ್ ಮಂಡನೆ ಆಗಿದ್ದು, ಈ ಬಜೆಟ್ ನಲ್ಲಿ ಮಹಿಳೆಯರಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಉದ್ಯಮ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರನ್ನು ಉತ್ತೇಜಿಸುವ ಸಲುವಾಗಿ ಹೊಸ ಯೋಜನೆ ಜಾರಿಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ.

ಮುಂದಿನ ಐದು ವರ್ಷಗಳಲ್ಲಿ 5 ಲಕ್ಷ ಮಹಿಳಾ ಉದ್ಯಮಿಗಳಿಗೆ 2 ಕೋಟಿ ರೂ ವರೆಗಿನ ಅವಧಿ ಸಾಲವನ್ನು ನೀಡಲು ಸರ್ಕಾರವು ಯೋಜಿಸಿದ್ದು, ಇದು ಮಹಿಳಾ ಉದ್ದಿಮೆದಾರರಿಗೆ ಅನುಕೂಲವಾಗಲಿದೆ. ಈ ಯೋಜನೆಯು ಎಸ್‌ಸಿ/ಎಸ್‌ಟಿ ಹಾಗೂ ಮಹಿಳಾ ಉದ್ಯಮಿಗಳು ಹೊಸ ವ್ಯವಹಾರಗಳನ್ನು ಪ್ರಾರಂಭಿಸಲು ಸಾಲ ಸೌಲಭ್ಯ, ಸಬ್ಸಿಡಿಗಳು ಮತ್ತು ಮಾರ್ಕೆಟಿಂಗ್ ನೆರವು ಸೇರಿದಂತೆ ವಿವಿಧ ಪ್ರಯೋಜನಗಳನ್ನು ಇದು ಒದಗಿಸುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಬಜೆಟ್ ಸಂಬಂಧಿತ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:29 pm, Sat, 1 February 25