
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1, ಶನಿವಾರ (ಇಂದು) ಬಜೆಟ್ ಮಂಡಿಸುತ್ತಿದ್ದಾರೆ. ಇದು ಅವರ ಸತತ ಎಂಟನೇ ಬಜೆಟ್ ಮಂಡನೆ ಆಗಿದ್ದು, ಈ ಬಜೆಟ್ ನಲ್ಲಿ ಮಹಿಳೆಯರಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಉದ್ಯಮ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರನ್ನು ಉತ್ತೇಜಿಸುವ ಸಲುವಾಗಿ ಹೊಸ ಯೋಜನೆ ಜಾರಿಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ.
ಮುಂದಿನ ಐದು ವರ್ಷಗಳಲ್ಲಿ 5 ಲಕ್ಷ ಮಹಿಳಾ ಉದ್ಯಮಿಗಳಿಗೆ 2 ಕೋಟಿ ರೂ ವರೆಗಿನ ಅವಧಿ ಸಾಲವನ್ನು ನೀಡಲು ಸರ್ಕಾರವು ಯೋಜಿಸಿದ್ದು, ಇದು ಮಹಿಳಾ ಉದ್ದಿಮೆದಾರರಿಗೆ ಅನುಕೂಲವಾಗಲಿದೆ. ಈ ಯೋಜನೆಯು ಎಸ್‌ಸಿ/ಎಸ್‌ಟಿ ಹಾಗೂ ಮಹಿಳಾ ಉದ್ಯಮಿಗಳು ಹೊಸ ವ್ಯವಹಾರಗಳನ್ನು ಪ್ರಾರಂಭಿಸಲು ಸಾಲ ಸೌಲಭ್ಯ, ಸಬ್ಸಿಡಿಗಳು ಮತ್ತು ಮಾರ್ಕೆಟಿಂಗ್ ನೆರವು ಸೇರಿದಂತೆ ವಿವಿಧ ಪ್ರಯೋಜನಗಳನ್ನು ಇದು ಒದಗಿಸುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಬಜೆಟ್ ಸಂಬಂಧಿತ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:29 pm, Sat, 1 February 25