AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಬನಿ ಸೀರೆಯುಟ್ಟು ಬಜೆಟ್ ಮಂಡನೆಗೆ ಬಂದ ನಿರ್ಮಲಾ ಸೀತಾರಾಮನ್: ಇದೇ ಸೀರೆ ಉಡಲು ಇದೆ ಕಾರಣ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿ ಬಾರಿ ಬಜೆಟ್ ಮಂಡಿಸಲು ಬರುವಾಗ ಉಡುವ ಸೀರೆ ಟ್ರೆಂಡ್ ಆಗುತ್ತದೆ. ಅದಕ್ಕೆ ಕಾರಣ ವೈವಿಧ್ಯತೆ. ಪ್ರತಿ ಬಾರಿ ಬೇರೆ ಬೇರೆ ನಮೂನೆಯ ಸೀರೆ ಉಟ್ಟು ಬರುವ ಅವರು 2025ರ ಕೇಂದ್ರ ಬಜೆಟ್ ಮಂಡನೆಗೆ ಮಧುಬನಿ ಸೀರೆ ಉಟ್ಟು ಬಂದಿದ್ದಾರೆ. ಇದರ ಹಿನ್ನೆಲೆ, ಮಹತ್ವದ ವಿವರ ಇಲ್ಲಿದೆ.

ಮಧುಬನಿ ಸೀರೆಯುಟ್ಟು ಬಜೆಟ್ ಮಂಡನೆಗೆ ಬಂದ ನಿರ್ಮಲಾ ಸೀತಾರಾಮನ್: ಇದೇ ಸೀರೆ ಉಡಲು ಇದೆ ಕಾರಣ
ಮಧುಬನಿ ಸೀರೆಯುಟ್ಟು ಬಜೆಟ್ ಮಂಡನೆಗೆ ಬಂದ ನಿರ್ಮಲಾ ಸೀತಾರಾಮನ್Image Credit source: PTI
Ganapathi Sharma
|

Updated on: Feb 01, 2025 | 10:23 AM

Share

ನವದೆಹಲಿ, ಫೆಬ್ರವರಿ 1: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲು ತೆರಳುವುದಕ್ಕೂ ಮುನ್ನ ಹಣಕಾಸು ಸಚಿವಾಲಯವನ್ನು ತಲುಪಿದಾಗ ಅವರ ಶೈಲಿಯೇ ವಿಭಿನ್ನವಾಗಿತ್ತು. ಕೆನೆ ಬಣ್ಣದ ಮಧುಬನಿ ಸೀರೆ ಉಟ್ಟಿರುವ ಅವರು ಕೆಂಪು ಬಣ್ಣದ ರವಿಕೆ, ಶಾಲು ಹಾಕಿಕೊಂಡು ಗಮನ ಸೆಳೆದರು. ಪದ್ಮ ಪ್ರಶಸ್ತಿ ವಿಜೇತೆ ಬಿಹಾರದ ದುಲಾರಿ ದೇವಿ ಗೌರವಾರ್ಥ ನಿರ್ಮಲಾ ಸೀತಾರಾಮನ್ ಈ ಸೀರೆ ಧರಿಸಿದ್ದಾರೆ. ಇದನ್ನು ಅವರಿಗೆ ದುಲಾರಿ ದೇವಿ ನೀಡಿದ್ದರು ಎನ್ನಲಾಗಿದೆ.

ಪ್ರತಿ ವರ್ಷ ಬಜೆಟ್ ದಿನದಂದು ನಿರ್ಮಲಾ ಸೀತಾರಾಮನ್ ವಿಭಿನ್ನ ಸೀರೆಗಳನ್ನು ಉಟ್ಟುಕೊಂಡು ಬರುವ ಮೂಲಕ ಗಮನ ಸೆಳೆದಿದ್ದಾರೆ. ಬಜೆಟ್ ದಿನದಂದು ಅವರು ಉಟ್ಟ ಸೀರೆಗಳ ಬಗ್ಗೆ ಸಾಕಷ್ಟು ಚರ್ಚೆಗಳಾಗಿದ್ದವು. ಇದೀಗ ನಿರೀಕ್ಷೆಯಂತೆಯೇ ಈ ಬಾರಿಯೂ ಅವರು ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ.

ದುಲಾರಿ ದೇವಿ ಉಡುಗೊರೆ ಕೊಟ್ಟ ಸೀರೆ

ದುಲಾರಿ ದೇವಿ ಅವರು 2021 ರಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಮಿಥಿಲಾ ಕಲಾ ಸಂಸ್ಥಾನದಲ್ಲಿ ಕ್ರೆಡಿಟ್ ಔಟ್ರೀಚ್ ಕಾರ್ಯಕ್ರಮವೊಂದಕ್ಕಾಗಿ ಹಣಕಾಸು ಸಚಿವರು ಮಧುಬನಿಗೆ ಭೇಟಿ ನೀಡಿದ್ದಾಗ, ಅವರು ದುಲಾರಿ ದೇವಿ ಅವರನ್ನು ಭೇಟಿಯಾಗಿದ್ದರು. ಬಿಹಾರದಲ್ಲಿ ಮಧುಬನಿ ಕಲೆಯ ಕುರಿತು ಅವರೊಂದಿಗೆ ವಿಚಾರ ವಿನಿಮಯ ಮಾಡಿಕೊಂಡಿದ್ದರು. ಆ ಸಂದರ್ಭದಲ್ಲಿ ದುಲಾರಿ ದೇವಿ ಅವರು ಹಣಕಾಸು ಸಚಿವರಿಗೆ ಸೀರೆಯನ್ನು ಉಡುಗೊರೆಯಾಗಿ ನೀಡಿದ್ದರು ಮತ್ತು ಬಜೆಟ್ ದಿನದಂದು ಅದನ್ನು ಧರಿಸುವಂತೆ ಮನವಿ ಮಾಡಿದ್ದರು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024 ರ ಫೆಬ್ರವರಿಯಲ್ಲಿ ಲೋಕಸಭೆ ಚುನಾವಣೆಗೆ ಮುನ್ನ ಮಧ್ಯಂತರ ಬಜೆಟ್ ಮಂಡಿಸಿದ್ದರು. ಆಗ ನೀಲಿ ಸೀರೆ ಉಟ್ಟು ಸಂಸತ್ತನ್ನು ಪ್ರವೇಶಿಸಿದ್ದರು. ಆ ಸೀರೆಯ ಮೇಲೆ ದಂತದ ಬಣ್ಣದ ಪ್ರಿಂಟ್ ಇತ್ತು. ಕೊರಳಿಗೆ ಚೈನ್ ಕೂಡ ಹಾಕಿಕೊಂಡಿದ್ದರು. ಭಾರತೀಯ ಧಾರ್ಮಿಕ ಗ್ರಂಥಗಳಲ್ಲಿ, ನೀಲಿ ಬಣ್ಣವನ್ನು ಶಕ್ತಿ ಮತ್ತು ಶೌರ್ಯದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇದು ಸಕಾರಾತ್ಮಕತೆ ಮತ್ತು ಆತ್ಮವಿಶ್ವಾಸದ ಜೊತೆಗೆ ಅಧಿಕಾರದ ಸಂಕೇತವೆಂದು ಪರಿಗಣಿಸಲಾಗಿದೆ. ಹೀಗಾಗಿ ನಿರ್ಮಲಾ ಅದನ್ನು ಧರಿಸಿದ್ದಾರೆ ಎನ್ನಲಾಗಿತ್ತು.

ಬಜೆಟ್ ಲೈವ್ ಅಪ್​ಡೇಟ್​ಗಾಗಿ ಇಲ್ಲಿ ಕ್ಲಿಕ್ ಮಾಡಿ

ಒಟ್ಟಾರೆಯಾಗಿ ನಿರ್ಮಲಾ ಸಿತಾರಾಮನ್ ಇಂದು ಎಂಟನೇ ಬಜೆಟ್ ಮಂಡನೆ ಮಾಡುತ್ತಿದ್ದು, ಪ್ರತಿ ಬಜೆಟ್​​ನಲ್ಲಿಯೂ ಭಿನ್ನವಾದ ಸೀರೆಗಳನ್ನು ಉಟ್ಟುಕೊಂಡು ಗಮನ ಸೆಳೆದ ಅವರು ಈ ಬಾರಿಯೂ ಆ ಸಂಪ್ರದಾಯ ಮುಂದುವರಿಸಿದ್ದಾರೆ.

ಬಜೆಟ್ ಸಂಬಂಧಿತ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ