AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ರಿಸರ್ಚ್ ಫೆಲೋಶಿಪ್ ಸಂಖ್ಯೆ ಹೆಚ್ಚಳ: ಅರ್ಜಿ ಸಲ್ಲಿಸೋದು ಹೇಗೆ? ಎಷ್ಟು ಹಣ ಸಿಗುತ್ತೆ? ಇಲ್ಲಿದೆ ಮಾಹಿತಿ

PM Research Fellowship Scheme: ಪ್ರಧಾನಮಂತ್ರಿ ಸಂಶೋಧನಾ ಫೆಲೋಶಿಪ್‌ಗಳ ಸಂಖ್ಯೆಯನ್ನು ಹೆಚ್ಚಿಸುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್​ನಲ್ಲಿ ಘೋಷಿಸಿದರು. ಮುಂದಿನ 5 ವರ್ಷಗಳಲ್ಲಿ 10,000 ಫೆಲೋಶಿಪ್ ನೀಡಲಾಗುವುದು ಎಂದು ಹಣಕಾಸು ಸಚಿವರು ಹೇಳಿದರು. ಈ ಫೆಲೋಶಿಪ್​ಗೆ ಯಾರು ಅರ್ಹರು, ಅರ್ಜಿ ಸಲ್ಲಿಸುವುದು ಹೇಗೆ ಇತ್ಯಾದಿ ವಿವರ ಇಲ್ಲಿದೆ.

ಪಿಎಂ ರಿಸರ್ಚ್ ಫೆಲೋಶಿಪ್ ಸಂಖ್ಯೆ ಹೆಚ್ಚಳ: ಅರ್ಜಿ ಸಲ್ಲಿಸೋದು ಹೇಗೆ? ಎಷ್ಟು ಹಣ ಸಿಗುತ್ತೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Feb 01, 2025 | 3:48 PM

Share

ನವದೆಹಲಿ, ಫೆಬ್ರವರಿ 1: ಕೇಂದ್ರ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. ಮುಂದಿನ ವರ್ಷ ದೇಶದಲ್ಲಿ 10,000 ದಷ್ಟು ವೈದ್ಯಕೀಯ ಸೀಟುಗಳನ್ನು ಹೆಚ್ಚಿಸಲಾಗುವುದು ಮತ್ತು ಮುಂದಿನ 5 ವರ್ಷಗಳಲ್ಲಿ 75 ಸಾವಿರ ವೈದ್ಯಕೀಯ ಸೀಟುಗಳು ಸೇರ್ಪಡೆಯಾಗಲಿವೆ ಎಂದು ಘೋಷಣೆ ಮಾಡಲಾಗಿದೆ. ತಾಂತ್ರಿಕ ಸಂಶೋಧನೆಯನ್ನು ಉತ್ತೇಜಿಸಲು ಮುಂದಿನ 5 ವರ್ಷಗಳಲ್ಲಿ ಪ್ರಧಾನ ಮಂತ್ರಿ ಸಂಶೋಧನಾ ಫೆಲೋಶಿಪ್ ಯೋಜನೆಯಡಿ (PMRF) 10,000 ಹೊಸ ಫೆಲೋಶಿಪ್‌ಗಳನ್ನು ನೀಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್‌ನಲ್ಲಿ ಘೋಷಿಸಿದರು. ಪಿಎಂ ರಿಸರ್ಚ್ ಫೆಲೋಶಿಪ್ ಯೋಜನೆಯಡಿ ಯಾರು, ಎಷ್ಟು ಹಣ ಪಡೆಯಬಹುದು? ಫೆಲೋಶಿಪ್ ಪಡೆಯಲು ಬೇಕಾದ ಅರ್ಹತೆ ಏನು ಎಂಬ ಮಾಹಿತಿ ಇಲ್ಲಿದೆ.

ತಾಂತ್ರಿಕ ಸಂಶೋಧನೆಯನ್ನು ಉತ್ತೇಜಿಸಲು, ಪಿಎಂ ರಿಸರ್ಚ್ ಫೆಲೋಶಿಪ್ ಯೋಜನೆಯನ್ನು 2018-19 ರ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಐಐಟಿ ಮತ್ತು ಐಐಎಸ್‌ಸಿಯಲ್ಲಿ ತಾಂತ್ರಿಕ ಸಂಶೋಧನೆಗಾಗಿ ಈ ಫೆಲೋಶಿಪ್ ನೀಡಲಾಗುತ್ತದೆ. ಡಾಕ್ಟರೇಟ್ ಸಂಶೋಧನೆಗಾಗಿ ಫೆಲೋಶಿಪ್ ನೀಡಲಾಗುತ್ತದೆ. 2014 ರ ನಂತರ ಪ್ರಾರಂಭವಾದ 5 ಐಐಟಿಗಳಿಗೆ ಈ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಹಣಕಾಸು ಬಜೆಟ್​​ನಲ್ಲಿ ಘೋಷಿಸಲಾಗಿದೆ.

ಪಿಎಂ ರಿಸರ್ಚ್ ಫೆಲೋಶಿಪ್ ಪಡೆಯಲು ಯಾರು ಅರ್ಹರು?

ಫೆಲೋಶಿಪ್‌ ಪಡೆಯಬೇಕಿದ್ದರೆ ಅಭ್ಯರ್ಥಿಯು ಐಐಟಿ, ಎನ್​ಐಟಿ ಮತ್ತು ಐಐಎಸ್​ಸಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಗಳಲ್ಲಿ B.Tech ಮತ್ತು M.Det ಪದವಿಯನ್ನು ಹೊಂದಿರಬೇಕು. ಈ ಸಂಸ್ಥೆಗಳಿಂದ ಉಭಯ ಪದವಿಗಳನ್ನು ಪಡೆಯುವ ವಿದ್ಯಾರ್ಥಿಗಳು ಸಹ ಫೆಲೋಶಿಪ್‌ಗೆ ಅರ್ಜಿ ಸಲ್ಲಿಸಬಹುದು. ಗೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ ಮತ್ತು ಪರೀಕ್ಷೆಯಲ್ಲಿ 650 ಅಂಕಗಳನ್ನು ಪಡೆದಿರಬೇಕು.

ಪಿಎಂ ರಿಸರ್ಚ್ ಫೆಲೋಶಿಪ್‌ಗೆ ಎಲ್ಲಿ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು?

  • ಪಿಎಂ ರಿಸರ್ಚ್ ಫೆಲೋಶಿಪ್​ನ ಅಧಿಕೃತ ವೆಬ್‌ಸೈಟ್‌ primeministerfellowshipscheme.in ಗೆ ಭೇಟಿ ನೀಡಿ.
  • ಹೋಂ ಪೇಜ್​ನಲ್ಲಿ ನೀಡಲಾದ ನ್ಯೂ ಅಪ್ಲಯರ್ಸ್ ಟ್ಯಾಬ್ ಅನ್ನು ಕ್ಲಿಕ್ ಮಾಡಿ ಮತ್ತು ನೋಂದಾಯಿಸಿ.
  • ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅಪ್‌ಲೋಡ್ ಮಾಡಿ.

ಪಿಎಂ ಫೆಲೋಶಿಪ್​ ಅಡಿ ಎಷ್ಟು ಹಣವನ್ನು ಪಡೆಯಬಹುದು?

ಪಿಎಂ ರಿಸರ್ಚ್ ಫೆಲೋಶಿಪ್ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳು 5 ವರ್ಷಗಳವರೆಗೆ ಸಂಶೋಧನೆಗಾಗಿ ತಿಂಗಳಿಗೆ ನಿಗದಿತ ಮೊತ್ತವನ್ನು ಪಡೆಯುತ್ತಾರೆ. ಮೊದಲ ಮತ್ತು ಎರಡನೇ ವರ್ಷದಲ್ಲಿ ಅಭ್ಯರ್ಥಿಗಳಿಗೆ ತಿಂಗಳಿಗೆ 70,000 ರೂ. ದೊರೆಯಲಿದೆ. ಮೂರನೇ ವರ್ಷದಲ್ಲಿ ತಿಂಗಳಿಗೆ 75,000 ರೂ. ಮತ್ತು ನಾಲ್ಕು ಮತ್ತು ಐದನೇ ವರ್ಷದಲ್ಲಿ 80,000 ರೂ. ದೊರೆಯಲಿದೆ. ಯೋಜನೆಯಡಿ, ಅರ್ಹ ಅಭ್ಯರ್ಥಿಗಳಿಗೆ ಸಂಶೋಧನೆಗಾಗಿ ವರ್ಷಕ್ಕೆ 2 ಲಕ್ಷ ರೂ. ನೀಡಲಾಗುತ್ತದೆ.

ಪ್ರಸ್ತುತ ಪಿಎಂ ರಿಸರ್ಚ್ ಫೆಲೋಶಿಪ್‌ಗಳ ಸಂಖ್ಯೆ ಎಷ್ಟು?

ಪಿಎಂ ರಿಸರ್ಚ್ ಫೆಲೋಶಿಪ್ ನೀಡುವ ಸಂಸ್ಥೆಗಳು ಆಯಾ ವರ್ಷದ ಮೇ 1 ರಂದು ಅಸ್ತಿತ್ವದಲ್ಲಿರುವ ಪಿಎಚ್‌ಡಿ ವಿದ್ಯಾರ್ಥಿಗಳ ಒಟ್ಟು ಸಂಖ್ಯೆಯ ಶೇ 1.5 ಅನ್ನು ಪಿಎಂ ರಿಸರ್ಚ್ ಫೆಲೋಶಿಪ್​ ಸೀಟುಗಳಾಗಿ ಪಡೆಯುತ್ತವೆ. ಒಂದು ನಿರ್ದಿಷ್ಟ ವರ್ಷಕ್ಕೆ ಒಟ್ಟು ಪಿಎಂ ರಿಸರ್ಚ್ ಫೆಲೋಶಿಪ್ ಸೀಟ್ ಅಗತ್ಯವು 1000 ಕ್ಕಿಂತ ಹೆಚ್ಚಿದ್ದರೆ, ಅದನ್ನು ಶೇಕಡಾವಾರು ಪ್ರಮಾಣದಲ್ಲಿ ಅನುಪಾತ ಮಾಡಲಾಗುತ್ತದೆ. ಆದ್ದರಿಂದ ಒಟ್ಟು ಸೀಟುಗಳ ಸಂಖ್ಯೆ 1000 ಮೀರುವುದಿಲ್ಲ.

ಬಜೆಟ್ ಸಂಬಂಧಿತ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ