ಕೇಂದ್ರದ ಈ ಬಜೆಟ್ ಮುಂದಿನ ಐದು ವರ್ಷಗಳ ಮಾರ್ಗಸೂಚಿ: ಪ್ರಧಾನಿ ಮೋದಿ

|

Updated on: Jul 22, 2024 | 10:53 AM

ಇಂದಿನಿಂದ ಕೇಂದ್ರ ಬಜೆಟ್​​​ ಅಧಿವೇಶನ ಪ್ರಾರಂಭವಾಗಿದೆ. ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್​​​ ಮಂಡನೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ಈ ಬಾರೀ ಬಜೆಟ್​​ ಹೇಗಿರಲಿದೆ ಎಂಬ ಬಬಗ್ಗೆ ಮಾತನಾಡಿದ್ದಾರೆ. ಈ ಬಗ್ಗೆ ಇಲ್ಲಿದೆ ಮಾಹಿತಿ 

ಕೇಂದ್ರದ ಈ ಬಜೆಟ್ ಮುಂದಿನ ಐದು ವರ್ಷಗಳ ಮಾರ್ಗಸೂಚಿ: ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋಡಿ
Follow us on

ದೆಹಲಿ, ಜು.22: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಬಜೆಟ್ ಅಧಿವೇಶನದ ಆರಂಭಕ್ಕೂ ಮುನ್ನ ಮಾಧ್ಯಮದ ಮುಂದೆ ಮಾತನಾಡಿದ್ದಾರೆ. ನಾಳೆ ಮಂಡನೆಯಾಗಲಿರುವ ಕೇಂದ್ರ ಬಜೆಟ್ ಮುಂದಿನ ಐದು ವರ್ಷಗಳ ಮಾರ್ಗಸೂಚಿಯನ್ನು ರೂಪಿಸಲಿದೆ ಎಂದು ಹೇಳಿದ್ದಾರೆ. ನಾನು ದೇಶದ ಜನರಿಗೆ ಭರವಸೆಗಳನ್ನು ನೀಡುತ್ತಿದ್ದೇನೆ ಮತ್ತು ಇದನ್ನು ನಾನು ಜಾರಿಗೆ ತರುತ್ತೇನೆ. ಇದು ನಮ್ಮ ಸರ್ಕಾರದ ಧ್ಯೇಯವಾಗಿದೆ. ಈ ಬಜೆಟ್ ಅಮೃತ ಕಾಲಕ್ಕೆ ಮಹತ್ವದ ಬಜೆಟ್ ಆಗಿದೆ. ಇಂದಿನ ಬಜೆಟ್ ನಮ್ಮ ಅಧಿಕಾರದ ಮುಂದಿನ 5 ವರ್ಷಗಳ ದಿಕ್ಕನ್ನು ನಿರ್ಧರಿಸುತ್ತದೆ. ಈ ಬಜೆಟ್ ನಮ್ಮ ವಿಕಸಿತ ಭಾರತದ ಕನಸಿಗೆ ಬುನಾದಿಯಾಗಿದೆ ಎಂದು ಹೇಳಿದರು.

ಬಜೆಟ್ ಅಧಿವೇಶನವು ಆಗಸ್ಟ್ 12 ರವರೆಗೆ ನಡೆಯಲಿದೆ. ಕೇಂದ್ರವು 90 ವರ್ಷಗಳಷ್ಟು ಹಳೆಯದಾದ ಏರ್‌ಕ್ರಾಫ್ಟ್ ಕಾಯ್ದೆಯನ್ನು ಬದಲಿಸುವುದು ಸೇರಿದಂತೆ ಆರು ಮಸೂದೆಗಳನ್ನು ಮಂಡಿಸುವ ನಿರೀಕ್ಷೆಯಿದೆ. ಜಮ್ಮು ಮತ್ತು ಕಾಶ್ಮೀರದ ಬಜೆಟ್‌ಗೆ ಸಂಸತ್ತಿನ ಅನುಮೋದನೆ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ: ನಾಳೆ ಮೋದಿ ಸರ್ಕಾರ 3.O ರ ಮೊದಲ ಬಜೆಟ್

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದು, ಮಂಗಳವಾರ (ಜುಲೈ. 23) ಬಜೆಟ್ ಮಂಡಿಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ