AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Huawei Nova 10 SE: 108MP ಕ್ಯಾಮೆರಾ ಫೋನ್ ಸಾಲಿಗೆ ಮತ್ತೊಂದು ಸೇರ್ಪಡೆ: ಯಾವ ಸ್ಮಾರ್ಟ್​ಫೋನ್?, ಬೆಲೆ ಎಷ್ಟು?

108MP Camera Phone: ಜಾಗತಿಕ ಮಟ್ಟದಲ್ಲಿ ಭರ್ಜರಿ ಸದ್ದು ಮಾಡುತ್ತಿರುವ ಚೀನಾದ ಪ್ರಮುಖ ಸ್ಮಾರ್ಟ್‌ಫೋನ್‌ ಉತ್ಪಾದನಾ ಕಂಪನಿ ಹುವೈ ಇದೀಗ 108 ಮೆಗಾಫಿಕ್ಸೆಲ್​ ಕ್ಯಾಮೆರಾದ ಹುವೈ ನೋವಾ 10 ಎಸ್​ಇ ಫೋನ್‌ ಅನ್ನು ಅನಾವರಣ ಮಾಡಿದೆ.ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲೀಗ ಕ್ಯಾಮೆರಾ ​ಫೋನ್​ಗಳದ್ದೇ ಹಾವಳಿ. ಅದರಲ್ಲೂ 108 ಮೆಗಾಫಿಕ್ಸೆಲ್​ನ ಫೋನ್​ಗಳು (108MP Camera Phone) ಮಾರುಕಟ್ಟೆಗೆ ಪ್ರವೇಶಿಸಿದ್ದೇ ತಡ ಭರ್ಜರಿ ಸೇಲ್ ಆಗುತ್ತಿದೆ.

Huawei Nova 10 SE: 108MP ಕ್ಯಾಮೆರಾ ಫೋನ್ ಸಾಲಿಗೆ ಮತ್ತೊಂದು ಸೇರ್ಪಡೆ: ಯಾವ ಸ್ಮಾರ್ಟ್​ಫೋನ್?, ಬೆಲೆ ಎಷ್ಟು?
Huawei Nova 10 SE
Vinay Bhat
| Edited By: |

Updated on:Oct 09, 2026 | 1:19 PM

Share

ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲೀಗ ಕ್ಯಾಮೆರಾ ​ಫೋನ್​ಗಳದ್ದೇ ಹಾವಳಿ. ಅದರಲ್ಲೂ 108 ಮೆಗಾಫಿಕ್ಸೆಲ್​ನ ಫೋನ್​ಗಳು (108MP Camera Phone) ಮಾರುಕಟ್ಟೆಗೆ ಪ್ರವೇಶಿಸಿದ್ದೇ ತಡ ಭರ್ಜರಿ ಸೇಲ್ ಆಗುತ್ತಿದೆ. ಇದನ್ನೆ ಗಮನದಲ್ಲಿಟ್ಟುಕೊಂಡಿರುವ ಬಹತೇಕ ಎಲ್ಲ ಕಂಪನಿಗಳು ಒಂದರ ಹಿಂದೆ ಒಂದರಂತೆ ಆಕರ್ಷಕ ಕ್ಯಾಮೆರಾ ಮೊಬೈಲ್​ಗಳನ್ನು (Mobile) ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿವೆ. ಇತ್ತೀಚೆಗಷ್ಟೆ 200 ಮೆಗಾಫಿಕ್ಸೆಲ್ ಕ್ಯಾಮೆರಾದ ಫೋನ್ ಕೂಡ ಬಿಡುಗಡೆ ಆಗಿದೆ. ಇದರ ನಡುವೆ ಜಾಗತಿಕ ಮಟ್ಟದಲ್ಲಿ ಭರ್ಜರಿ ಸದ್ದು ಮಾಡುತ್ತಿರುವ ಚೀನಾದ ಪ್ರಮುಖ ಸ್ಮಾರ್ಟ್‌ಫೋನ್‌ ಉತ್ಪಾದನಾ ಕಂಪನಿ ಹುವೈ ಇದೀಗ 108 ಮೆಗಾಫಿಕ್ಸೆಲ್​ ಕ್ಯಾಮೆರಾದ ಹುವೈ ನೋವಾ 10 ಎಸ್​ಇ (Huawei Nova 10 SE) ಫೋನ್‌ ಅನ್ನು ಅನಾವರಣ ಮಾಡಿದೆ. ಕೇವಲ ಕ್ಯಾಮೆರಾದಿಂದ ಮಾತ್ರವಲ್ಲದೆ ಪ್ರೊಸೆಸರ್, ಬ್ಯಾಟರಿ ವಿಚಾರದಿಂದಲೂ ಈ ಫೋನ್ ಸಾಕಷ್ಟು ವಿಶೇಷತೆಗಳಿಂದ ಕೂಡಿದೆ.

ಸದ್ಯಕ್ಕೆ ಈ ಫೋನ್ ವಿದೇಶದಲ್ಲಿ ಬಿಡುಗಡೆ ಆಗಿದ್ದು ಕೆಲವು ತಿಂಗಳಲ್ಲಿ ಭಾರತಕ್ಕೂ ಕಾಲಿಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಫೋನಿನ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ CNY 1,949 ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜಿ 48,900 ರೂ. ಎನ್ನಬಹುದು. ಅಂತೆಯೆ 8GB RAM ಮತ್ತು 256GB ಸ್ಟೋರೇಜ್ ರೂಪಾಂತರಕ್ಕೆ CNY 2,249 (53,600 ರೂ.).

ಈ ಫೋನಿನ ವಿಶೇಷತೆ ಬಗ್ಗೆ ಗಮನಿಸುವುದಾದರೆ, ಹುವೈ ನೋವಾ 10 SE ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್ ಹೆಚ್​ಡಿ+ OLED ಡಿಸ್‌ಪ್ಲೇಯನ್ನು ಹೊಂದಿದೆ. 90Hz ರಿಫ್ರೆಶ್​ರೇಟ್​ನಿಂದ ಕೂಡಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ EMUI 12 ಔಟ್ ಆಫ್ ದಿ ಬಾಕ್ಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ.

ಇದನ್ನೂ ಓದಿ
Image
ಮೋಟೋ ಕಂಪನಿಯ ಹೊಸ ಸ್ಮಾರ್ಟ್​ಫೋನ್: ಇದರ ಫೀಚರ್ಸ್ ನೋಡಿ
Image
Tech Tips: ನಿಮ್ಮ ಸ್ಮಾರ್ಟ್​ಫೋನ್ ಸೂಪರ್ ಫಾಸ್ಟ್ ಆಗ್ಬೇಕಾ?: ಮೊದಲು ಈ ಕೆಲಸ ಮಾಡಿ
Image
Battery Phones: ಈ ಸ್ಮಾರ್ಟ್​ಫೋನ್​ನಲ್ಲಿ ಒಮ್ಮೆ ಬ್ಯಾಟರಿ ಫುಲ್ ಮಾಡಿದ್ರೆ 100 ದಿನ ಚಾರ್ಜ್ ಬರುತ್ತದೆ
Image
Realme GT 3: ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಿಶ್ವದ ಅತಿ ವೇಗದ ಚಾರ್ಜಿಂಗ್ ಫೋನ್ ರಿಯಲ್‌ ಮಿ GT 3: ಬೆಲೆ ಎಷ್ಟು ಗೊತ್ತೇ?

ಇನ್ನು ಈ ಸ್ಮಾರ್ಟ್‌ಫೋನ್‌ ತ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಿಂದ ಕೂಡಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮೈರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಹುವೈ ನೋವಾ 10 SE ಸ್ಮಾರ್ಟ್​ಫೋನ್​ನಲ್ಲಿ ದೀರ್ಘ ಸಮಯ ಬಾಳಿಕೆ ಬರುವಂತಹ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಇದು 66W ಹುವೈ ಸೂಪರ್‌ ಚಾರ್ಜ್‌ ಬೆಂಬಲವನ್ನು ಪಡೆದುಕೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಇರುವ ಸಾಧ್ಯತೆ ಇದೆ. 4G LTE, ಡ್ಯುಯಲ್ ಬ್ಯಾಂಡ್ Wi-Fi, ಬ್ಲೂಟೂತ್ v5, USB ಟೈಪ್ C ಯನ್ನು ಬೆಂಬಲಿಸಲಿದೆ. ಇದಲ್ಲದೆ ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, GPS, AGPS, ಗ್ಲೋನಾಸ್ ಗ್ರಾವಿಟಿ ಸೆನ್ಸಾರ್, ಕಂಪಾಸ್‌ ಒಳಗೊಂಡಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:28 pm, Fri, 3 March 23

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ