LPG Cylinder Price: ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯಲ್ಲಿ ಮತ್ತೆ 100 ರೂ.ಏರಿಕೆ; ಗ್ರಾಹಕರಿಗೆ ತಲೆನೋವಾದ ಬೆಲೆ ಹೆಚ್ಚಳ

Commercial Cylinder Price: 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್​ ಬೆಲೆ ಕಳೆದ ಕೆಲವು ತಿಂಗಳುಗಳಿಂದಲೂ ಏರಿಕೆಯಾಗುತ್ತಿದೆ. ನವೆಂಬರ್​ನಲ್ಲಿ 266 ರೂಪಾಯಿ ಹೆಚ್ಚಾಗಿತ್ತು.

LPG Cylinder Price: ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯಲ್ಲಿ ಮತ್ತೆ 100 ರೂ.ಏರಿಕೆ; ಗ್ರಾಹಕರಿಗೆ ತಲೆನೋವಾದ ಬೆಲೆ ಹೆಚ್ಚಳ
ಸಾಂಕೇತಿಕ ಚಿತ್ರ
Follow us
TV9 Web
| Updated By: Digi Tech Desk

Updated on:Dec 01, 2021 | 10:32 AM

LPG Gas Cylinder Price | ಡಿಸೆಂಬರ್ ತಿಂಗಳ ಮೊದಲ ದಿನವಾದ ಇಂದು ಪೆಟ್ರೋಲಿಯಂ ಕಂಪನಿಗಳು ಸಾಮಾನ್ಯ ಜನರಿಗೆ ಮತ್ತೊಂದು  ಶಾಕ್​ ನೀಡಿವೆ. 19 ಕೆಜಿ ತೂಕದ ಕಮರ್ಷಿಯಲ್​​ ಸಿಲಿಂಡರ್​ ಬೆಲೆಯನ್ನು 100 ರೂಪಾಯಿಗಳಷ್ಟು ಹೆಚ್ಚಿಸಿವೆ.. ಇನ್ನು ಮುಂದೆ ಹೋಟೆಲ್​​, ರೆಸ್ಟೋರೆಂಟ್​ಗಳಲ್ಲಿ ಕೂಡ ಆಹಾರ, ಪಾನೀಯಗಳು ದುಬಾರಿಯಾಗಲಿವೆ. ಈಗಿನ ಬೆಲೆ ಏರಿಕೆಯೊಂದಿಗೆ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ದೆಹಲಿಯಲ್ಲಿ 2101 ರೂಪಾಯಿಗೆ ತಲುಪಿದೆ. ನವೆಂಬರ್​ನಲ್ಲಿ ಇಲ್ಲಿ ಕಮರ್ಷಿಯಲ್ ಸಿಲಿಂಡರ್​ ಬೆಲೆ 2000.50 ರೂ.ಇತ್ತು. ಸದ್ಯದ ಸಮಾಧಾನವೆಂದರೆ ಗೃಹಬಳಕೆಯ ಅಂದರೆ 14.2 ಕೆಜಿ ಸಿಲಿಂಡರ್​​ ಬೆಲೆಯಲ್ಲಿ ಯಾವುದೇ ಏರಿಕೆ ಆಗಿಲ್ಲ. ಆದರೆ 19 ಕೆಜಿ ಸಿಲಿಂಡರ್​ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವುದು ರೆಸ್ಟೋರೆಂಟ್​, ಹೋಟೆಲ್​ ಮಾಲೀಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. 

19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್​ ಬೆಲೆ ಕಳೆದ ಕೆಲವು ತಿಂಗಳುಗಳಿಂದಲೂ ಏರಿಕೆಯಾಗುತ್ತಿದೆ. ನವೆಂಬರ್​ನಲ್ಲಿ 266 ರೂಪಾಯಿ ಹೆಚ್ಚಾಗಿತ್ತು. ಈ ಬಾರಿ 100 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್​ ಬೆಲೆ 2101 ರೂ.ಆಗಿದ್ದು, ಕೋಲ್ಕತ್ತದಲ್ಲಿ 2177 ರೂ., ಮುಂಬೈನಲ್ಲಿ 2051 ರೂ., ಚೆನ್ನೈನಲ್ಲಿ 2234 ರೂ.ರಷ್ಟಾಗಿದೆ. ಸದ್ಯಕ್ಕೆ ಗೃಹ ಬಳಕೆಯ ಸಿಲಿಂಡರ್​ ಬೆಲೆ ಏರದೆ ಇದ್ದರೂ, ಮುಂದಿನ ದಿನಗಳಲ್ಲಿ ಅದೂ ಕೂಡ ಹೆಚ್ಚಾಗಲಿದೆ.

ಸದ್ಯ ಪೆಟ್ರೋಲ್​-ಡೀಸೆಲ್​, ಸಿಲಿಂಡರ್​ ಗ್ಯಾಸ್​ ಅಷ್ಟೇ ಅಲ್ಲದೆ ದಿನನಿತ್ಯದ ಬಳಕೆಯ ವಸ್ತುಗಳ ಬೆಲೆಯಲ್ಲೂ ಏರಿಕೆಯಾಗಿದೆ. ಇನ್ನು ಪೆಟ್ರೋಲ್​-ಡೀಸೆಲ್​ ಮೇಲಿನ ಸುಂಕ ಕಡಿಮೆ ಮಾಡಿದ್ದರಿಂದ ಸ್ವಲ್ಪಮಟ್ಟಿಗೆ ಹೊರೆ ಕಡಿಮೆಯಾಗಿದೆ. ಹಾಗೇ, ಸಿಲಿಂಡರ್ ಬೆಲೆಯನ್ನೂ ಇಳಿಸಲು ಮೋದಿ ಸರ್ಕಾರ ಮುಂದಾಗಬೇಕು ಎಂಬುದು ಗ್ರಾಹಕರ ಆಗ್ರಹವಾಗಿದೆ.

ಇದನ್ನೂ ಓದಿ: Viral Video: ಅಪರಿಚಿತ ವ್ಯಕ್ತಿ ನೀಡಿದ ಚಾಕಲೇಟ್​ಗೆ ಮಕ್ಕಳ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ? ವಿಡಿಯೋ ನೋಡಿ

Published On - 9:55 am, Wed, 1 December 21

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ