LPG Cylinder Price: ಕಮರ್ಷಿಯಲ್​ ಎಲ್​​ಪಿಜಿ ಸಿಲಿಂಡರ್​ ಬೆಲೆ ಬರೋಬ್ಬರಿ 265 ರೂ.ಏರಿಕೆ; ದೆಹಲಿಯಲ್ಲಿ 2 ಸಾವಿರದ ಗಡಿ ದಾಟಿದ ದರ

| Updated By: Digi Tech Desk

Updated on: Nov 01, 2021 | 12:31 PM

Commercial Cylinder Price: ಇರುವುದರಲ್ಲಿ ಒಂದು ಸಮಾಧಾನ ಎಂದರೆ 14.2 ಕೆಜಿ ತೂಕದ ಮನೆ ಬಳಕೆ ಎಲ್​ಪಿಜಿ ಸಿಲಿಂಡರ್​​ ಬೆಲೆಯಲ್ಲಿ ಯಾವುದೇ ಹೆಚ್ಚಳ ಮಾಡಲಾಗಿಲ್ಲ. ದೆಹಲಿಯಲ್ಲಿ 14.2 ಕೆಜಿ ತೂಕದ ಎಲ್​ಪಿಜಿ ಸಿಲಿಂಡರ್​ ಬೆಲೆ (ಸಬ್ಸಿಡಿ ರಹಿತ) 899.50 ರೂ. ಇದೆ.

LPG Cylinder Price: ಕಮರ್ಷಿಯಲ್​ ಎಲ್​​ಪಿಜಿ ಸಿಲಿಂಡರ್​ ಬೆಲೆ ಬರೋಬ್ಬರಿ 265 ರೂ.ಏರಿಕೆ; ದೆಹಲಿಯಲ್ಲಿ 2 ಸಾವಿರದ ಗಡಿ ದಾಟಿದ ದರ
ಸಾಂಕೇತಿಕ ಚಿತ್ರ
Follow us on

LPG Gas Cylinder Price | ದೀಪಾವಳಿ ಸಂಭ್ರಮದ ಮೂಡ್​​ನಲ್ಲಿರುವ ದೇಶದ ಜನರಿಗೆ ಮತ್ತೊಮ್ಮೆ ಬೆಲೆ ಏರಿಕೆ ಶಾಕ್​. ಸತತವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್​-ಡೀಸೆಲ್​ ಜತೆ ಇದೀಗ ಎಲ್​ಪಿಜಿ ಸಿಲಿಂಡರ್​​ ಬೆಲೆಯಲ್ಲಿ ಭರ್ಜರಿ ಹೆಚ್ಚಾಗಿದೆ. ಇರುವುದರಲ್ಲಿ ಒಂದು ಸಮಾಧಾನ ಎಂದರೆ 14.5 ಕೆಜಿಯ ಮನೆ ಬಳಕೆ ಸಿಲಿಂಡರ್​ ದರದಲ್ಲಿ ಸದ್ಯ ಯಾವುದೇ ಬದಲಾವಣೆ ಇಲ್ಲ. ಬದಲಾಗಿ 19 ಕೆಜಿಯ ಕಮರ್ಷಿಯಲ್​ ಎಲ್​​ಪಿಜಿ ಸಿಲಿಂಡರ್​ಗಳ ಬೆಲೆ ಬರೋಬ್ಬರಿ 265 ರೂಪಾಯಿ ಹೆಚ್ಚಾಗಿದೆ.  ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​ ಬೆಲೆ 265 ರೂ.ಹೆಚ್ಚಾದ ಬಳಿಕ ದೆಹಲಿಯಲ್ಲಿ ಒಂದು ಸಿಲಿಂಡರ್​ ಬೆಲೆ 2000 ರೂ.ಗೆ ಏರಿಕೆಯಾಗಿದೆ. ಈ ಹಿಂದೆ 1733 ರೂಪಾಯಿ ಇತ್ತು. ಹಾಗೇ ಮುಂಬೈನಲ್ಲಿ 1,683 ರೂಪಾಯಿ ಇದ್ದ 19 ಕೆಜಿ ಕಮರ್ಷಿಯಲ್​ ಎಲ್​​ಪಿಜಿ ಸಿಲಿಂಡರ್​ ಬೆಲೆ ಈಗ 1950ರೂಪಾಯಿಗೆ ಏರಿದೆ.  ಕೋಲ್ಕತ್ತದಲ್ಲಿ 2073ರೂ.ಗೆ ಏರಿಕೆಯಾಗಿದ್ದು, ಚೆನ್ನೈನಲ್ಲಿ 2133 ರೂಪಾಯಿ ಆಗಿದೆ.

ಮನೆಬಳಕೆ ಸಿಲಿಂಡರ್​​ ದರದಲ್ಲಿ ಇಲ್ಲ ಬದಲಾವಣೆ
ಇರುವುದರಲ್ಲಿ ಒಂದು ಸಮಾಧಾನ ಎಂದರೆ 14.2 ಕೆಜಿ ತೂಕದ ಮನೆ ಬಳಕೆ ಎಲ್​ಪಿಜಿ ಸಿಲಿಂಡರ್​​ ಬೆಲೆಯಲ್ಲಿ ಯಾವುದೇ ಹೆಚ್ಚಳ ಮಾಡಲಾಗಿಲ್ಲ. ದೆಹಲಿಯಲ್ಲಿ 14.2 ಕೆಜಿ ತೂಕದ ಎಲ್​ಪಿಜಿ ಸಿಲಿಂಡರ್​ ಬೆಲೆ (ಸಬ್ಸಿಡಿ ರಹಿತ) 899.50 ರೂ. ಇದೆ. ಕೋಲ್ಕತ್ತದಲ್ಲಿ 926 ರೂ.ಇದ್ದರೆ, ಚೆನ್ನೈನಲ್ಲಿ 915.50 ರೂಪಾಯಿ ಇದೆ. ಹಾಗೇ, ಕೊನೇ ಬಾರಿಕೆ ಮನೆ ಬಳಕೆ ಸಿಲಿಂಡರ್ ಬೆಲೆಯನ್ನು ಅಕ್ಟೋಬರ್ 6ರಂದು ಏರಿಸಲಾಗಿತ್ತು. ಹಾಗೇ ಕಮರ್ಷಿಯಲ್​ ಸಿಲಿಂಡರ್​ ಬೆಲೆಯನ್ನು ಅಕ್ಟೋಬರ್​ 1ರಂದು ಹೆಚ್ಚಿಸಲಾಗಿತ್ತು. ಇದೀಗ ಆದ ಹೆಚ್ಚಳದಿಂದ ಹಲವು ನಗರಗಳಲ್ಲಿ ಬೆಲೆ 2000 ರೂಪಾಯಿ ಗಡಿ ದಾಟಿದ್ದು ಹೊರೆಯೇ ಆಗಿದೆ.

ಇದನ್ನೂ ಓದಿ: Viral Video: ವ್ಯಕ್ತಿಯ ಬಾಯಿಯಿಂದ ಹೊರಬಿದ್ದ ದೈತ್ಯ ಟಾರಂಟುಲಾ ಜೇಡ; ವಿಡಿಯೊ ನೋಡಿದ್ರೆ ಶಾಕ್ ಆಗ್ತೀರಾ!

ಕನ್ನಡ ರಾಜ್ಯೋತ್ಸವ 2021: ಪ್ರತಿ ಬಾರಿ ಕೇಳುವಾಗಲೂ ಕನ್ನಡಿಗರಿಗೆ ರೋಮಾಂಚನ ನೀಡುವ ಅದ್ಭುತ ಚಿತ್ರಗೀತೆಗಳಿವು

Published On - 9:15 am, Mon, 1 November 21