LPG Cylinder Price: 19 ಕೆಜಿ ವಾಣಿಜ್ಯ ಬಳಕೆ ಎಲ್​​ಪಿಜಿ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 105 ರೂ. ಏರಿಕೆ

Commercial LPG Cylinder Price: ಜನವರಿಯಲ್ಲೂ ಕೂಡ 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 102.50 ರೂಪಾಯಿ ಕಡಿತಗೊಂಡಿತ್ತು. ಅಲ್ಲಿಯವರೆಗೂ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ ಸತತವಾಗಿ ಏರಿಕೆಯಾಗುತ್ತಿತ್ತು.

LPG Cylinder Price: 19 ಕೆಜಿ ವಾಣಿಜ್ಯ ಬಳಕೆ ಎಲ್​​ಪಿಜಿ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 105 ರೂ. ಏರಿಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Mar 01, 2022 | 8:16 AM

19 ಕೆಜಿ ತೂಕದ ವಾಣಿಜ್ಯ ಬಳಕೆ ಎಲ್​ಪಿಜಿ ಸಿಲಿಂಡರ್​ ಬೆಲೆ (LPG Cylinder Price)ಇಂದು ದೆಹಲಿಯಲ್ಲಿ 105 ರೂಪಾಯಿ ಏರಿಕೆಯಾಗಿದೆ. ಹೀಗಾಗಿ ರಾಷ್ಟ್ರರಾಜಧಾನಿಯಲ್ಲಿ ಇನ್ನು ಮುಂದೆ ಕಮರ್ಷಿಯಲ್​ ಎಲ್​​ಪಿಜಿ ಸಿಲಿಂಡರ್​ ಬೆಲೆ 2012 ರೂಪಾಯಿ. ಇದರೊಂದಿಗೆ 5 ಕೆಜಿ ತೂಕದ ಗ್ಯಾಸ್​ ಸಿಲಿಂಡರ್​ ಬೆಲೆ 27ರೂಪಾಯಿ ಹೆಚ್ಚಾಗಿದ್ದು, ದೆಹಲಿಯಲ್ಲಿ 5ಕೆಜಿ ಸಿಲಿಂಡರ್​ ಬೆಲೆ 569ರೂ.ಗೆ ಏರಿಕೆಯಾಗಿದೆ. 19 ಕೆಜಿ ತೂಕದ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯನ್ನು ಫೆಬ್ರವರಿಯಲ್ಲಿ ರಾಷ್ಟ್ರೀಯ ತೈಲು ಮಾರುಕಟ್ಟೆ ಕಂಪನಿಗಳು 91.50ರಷ್ಟು ಕಡಿತಗೊಳಿಸಿದ್ದವು.

ಜನವರಿಯಲ್ಲೂ ಕೂಡ 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 102.50 ರೂಪಾಯಿ ಕಡಿತಗೊಂಡಿತ್ತು. ಅಲ್ಲಿಯವರೆಗೂ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ ಸತತವಾಗಿ ಏರಿಕೆಯಾಗುತ್ತಿತ್ತು. ಹೀಗಾಗಿ ರೆಸ್ಟೋರೆಂಟ್​ಗಳು, ಹೋಟೆಲ್​​ಗಳು, ಉಪಾಹಾರ ಗೃಹಗಳ ಮಾಲೀಕರಿಗೆ ಕೊಂಚ ಹೊರೆ ತಗ್ಗಿತ್ತು. ಆದರೆ ಇಂದು ಮತ್ತೆ ದೆಹಲಿಯಲ್ಲಿ 105 ರೂ. ಏರಿಕೆಯಾಗಿದ್ದು, ವಿವಿಧ ಮಹಾನಗರಗಳಲ್ಲೂ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ.

ಡಿಸೆಂಬರ್​​ನಲ್ಲಿ ದೆಹಲಿಯಲ್ಲಿ 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 100 ರೂಪಾಯಿ ಏರಿಕೆಯಾಗುವ ಮೂಲಕ 2101 ರೂಪಾಯಿ ಆಗಿತ್ತು. 2012-13ರಲ್ಲಿ ಒಮ್ಮೆ ಈ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ 2200ರೂಪಾಯಿ ತಲುಪಿದ ಮೇಲೆ ಇದೇ ಅತ್ಯಂತ ಹೆಚ್ಚು ಎಂದು ಪರಿಗಣಿಸಲಾಗಿತ್ತು. 2021ರ ಜನವರಿ ಮತ್ತು ಫೆಬ್ರವರಿಯಲ್ಲಿ ಇಳಿಕೆಯಾಗಿತ್ತು.  ಆದರೀಗ ಮತ್ತೆ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್​ ಬೆಲೆ 2000 ರೂಪಾಯಿ ಗಡಿ ದಾಟಿದೆ.

ಇದನ್ನೂ ಓದಿ: Petrol Diesel Rate Today:​ ಬೆಂಗಳೂರು ಸಹಿತ ಇತರ ನಗರಗಳ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿ ಪರಿಶೀಲಿಸಿ

Published On - 8:06 am, Tue, 1 March 22

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್