AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Realme 11 Pro Plus: ಮೂರೇ ದಿನ ಬಾಕಿ: ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ 200MP ಕ್ಯಾಮೆರಾ ಸ್ಮಾರ್ಟ್​ಫೋನ್

Realme 11 Series: ರಿಯಲ್ ಮಿ 11 ಸರಣಿಯ ಅಡಿಯಲ್ಲಿ ರಿಯಲ್ ಮಿ 11 5G, ರಿಯಲ್ ಮಿ 11 ಪ್ರೊ 5G ಮತ್ತು ರಿಯಲ್ ಮಿ 11 ಪ್ರೊ+ 5G ಫೋನ್​ಗಳಿವೆ. ಇದು ಮೊದಲಿಗೆ ಚೀನಾದಲ್ಲಿ ಬಿಡುಗಡೆ ಆಗಲಿದ್ದು, ನಂತರದಲ್ಲಿ ಭಾರತಕ್ಕೂ ಕಾಲಿಡಲಿದೆ.ಈ ಫೋನಿನ ನಿಖರ ಬೆಲೆ ಬಹಿರಂಗಗೊಂಡಿಲ್ಲ. ಆದರೆ, ಮೂಲಗಳ ಪ್ರಕಾರ 34,990 ರೂ. ಇರಬಹುದೆಂದು ಅಂದಾಜಿಸಲಾಗಿದೆ.

Realme 11 Pro Plus: ಮೂರೇ ದಿನ ಬಾಕಿ: ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ 200MP ಕ್ಯಾಮೆರಾ ಸ್ಮಾರ್ಟ್​ಫೋನ್
Realme 11 Pro Plus
Vinay Bhat
| Edited By: |

Updated on:Oct 09, 2026 | 2:24 PM

Share

ಮುಖ್ಯಾಂಶಗಳು

  • ರಿಯಲ್ ಮಿ 11 ಸರಣಿ ರಿಲೀಸ್​ಗೆ ದಿನಗಣನೆ
  • 200 ಮೆಗಾ ಪಿಕ್ಸೆಲ್ ಕ್ಯಾಮೆರಾವನ್ನು ಅಳವಡಿಸಲಾಗಿದೆ
  • ಮೇ 9 ಕ್ಕೆ ರಿಯಲ್ ಮಿ 11 ಸರಣಿ ಅನಾವರಣ

ವಿಶ್ವದಲ್ಲಿ ಈಗ ಡಿಎಸ್​ಎಲ್​ಆರ್ (DSLR) ಕ್ಯಾಮೆರಾಗಳ ಬೇಡಿಕೆ ನಿಧಾನವಾಗಿ ಕುಸಿಯುತ್ತಿದೆ. ಯಾಕೆಂದರೆ ಈಗೀಗ ಅದ್ಭುತ ಕ್ಯಾಮೆರಾಗಳಿರುವ ಸ್ಮಾರ್ಟ್​ಫೋನ್​ಗಳು ಮಾರುಕಟ್ಟೆಯಲ್ಲಿ ಬಿಡುಗಡೆ ಆಗುತ್ತಿದೆ. ಈ ಹಿಂದೆ ಶವೋಮಿ ಕಂಪನಿ 108 ಮೆಗಾ ಪಿಕ್ಸೆಲ್ ಕ್ಯಾಮೆರಾ ಮೊಬೈಲ್​ಗಳನ್ನು ಬಿಡುಗಡೆ ಮಾಡಿ ಭರ್ಜರಿ ಯಶಸ್ಸು ಕಂಡಿತ್ತು. ಇದಾದ ಬಳಿಕ ಇತರೆ ಕಂಪನಿಗಳು ಕೂಡ 108 ಮೆಗಾ ಪಿಕ್ಸೆಲ್ ಕ್ಯಾಮೆರಾದ ಫೋನ್​ಗಳನ್ನು ಅನಾವರಣ ಮಾಡುತ್ತಿದೆ. ಇದರ ನಡುವೆ ಇತ್ತೀಚೆಗಷ್ಟೆ ಮೋಟೋರೊಲಾ ಕಂಪನಿ ಒಂದು ಹೆಜ್ಜೆ ಮುಂದೆಯಿಟ್ಟು ಬರೋಬ್ಬರಿ 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ಫೋನನ್ನು (200MP Camera Phone) ಭಾರತದಲ್ಲಿ ಲಾಂಚ್ ಮಾಡಿತ್ತು. ಇದೀಗ ರಿಯಲ್ ಮಿ ಸರದಿ. ಪ್ರಸಿದ್ಧ ರಿಯಲ್ ಮಿ ಕಂಪನಿ ತನ್ನ ಮೊಟ್ಟ ಮೊದಲ 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ಹೊಸ ಫೋನೊಂದನ್ನು ರಿಲೀಸ್ ಮಾಡಲು ಸಜ್ಜಾಗಿದೆ. ಇದೇ ಮೇ 10 ರಂದು ರಿಯಲ್ 11 ಸರಣಿ (Realme 11 Series) ಬಿಡುಗಡೆ ಆಗಲಿದೆ.

ರಿಯಲ್ ಮಿ 11 ಸರಣಿಯ ಅಡಿಯಲ್ಲಿ ರಿಯಲ್ ಮಿ 11 5G, ರಿಯಲ್ ಮಿ 11 ಪ್ರೊ 5G ಮತ್ತು ರಿಯಲ್ ಮಿ 11 ಪ್ರೊ+ 5G ಫೋನ್​ಗಳಿವೆ. ಇದು ಮೊದಲಿಗೆ ಚೀನಾದಲ್ಲಿ ಬಿಡುಗಡೆ ಆಗಲಿದ್ದು, ನಂತರದಲ್ಲಿ ಭಾರತಕ್ಕೂ ಕಾಲಿಡಲಿದೆ. ಈ ಫೋನಿನ ರಿಯಲ್ ಮಿ 11 ಪ್ರೊ+ 5G ಯಲ್ಲಿ ಬರೋಬ್ಬರಿ 200 ಮೆಗಾ ಪಿಕ್ಸೆಲ್ ಕ್ಯಾಮೆರಾ ನೀಡಲಾಗಿದೆ. ಹಾಗಾದರೆ ಈ ಫೋನಿನ ಇತರೆ ಫೀಚರ್ಸ್ ಏನಿದೆ ಎಂಬುದನ್ನು ನೋಡೋಣ.

ಮೂಲಗಳ ಪ್ರಕಾರ ರಿಯಲ್ ಮಿ 11 ಪ್ರೊ+ 5G ಪ್ರೊ ಸ್ಮಾರ್ಟ್‌ಫೋನ್‌ 1,440*3,216 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್​ಡಿ+ ಅಮೋಲೆಡ್‌ ಡಿಸ್‌ಪ್ಲೇ ಹೊಂದಿರುವ ಸಾಧ್ಯತೆ ಇದೆ. ಈ ಡಿಸ್‌ಪ್ಲೇ 120Hz ಅಡಾಪ್ಟಿವ್ ರಿಫ್ರೆಶ್ ರೇಟ್​ನಿಂದ ಕೂಡಿದೆ. ಮೀಡಿಯಾಟೆಸ್ ಡೂಮನ್ಸಿಟಿ 7050 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು ಇದು ಆಂಡ್ರಾಯ್ಡ್‌ 13 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಇದರ ಪ್ರಮುಖ ಹೈಲೇಟ್ ಕ್ಯಾಮೆರಾ. ಆಕರ್ಷಕವಾದ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿರುವ ಮುಖ್ಯ ಕ್ಯಾಮೆರಾ ಬರೋಬ್ಬರಿ 200 ಮೆಗಾ ಪಿಕ್ಸೆಲ್​ನ ಸ್ಯಾಮ್​ಸಂಗ್ ISOCELL HP3 ಸೆನ್ಸಾರ್​ನಿಂದ ಕೂಡಿದೆ. ಇದರಿಂದ ದೂರದ ವರೆಗೆ ಸುಲಭವಾಗಿ ಝೂಮ್ ಮಾಡಬಹುದಂತೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಟೆಕ್ನಾಲಜಿಯನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಆಲ್ಟ್ರಾ ವೈಡ್ ಲೆನ್ಸ್‌ ಅನ್ನು ಹೊಂದಿದೆ. ಜೊತೆಗೆ 2 ಮೆಗಾಪಿಕ್ಸೆಲ್​ನ ಮ್ಯಾಕ್ರೊ ಸೆನ್ಸಾರ್‌ ಇದೆ. ಮುಂಭಾಗ ಸೆಲ್ಫೀ ಮತ್ತು ವಿಡಿಯೋ ಕರೆಗಳಿಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಲಾಗಿದೆ. ಇದು 65W ಸೂಪರ್‌ಡಾರ್ಟ್ ಚಾರ್ಜ್ ವರ್ಧಿತ ವೇಗದ ಚಾರ್ಜಿಂಗ್‌ ಅನ್ನು ಒಳಗೊಂಡಿರುವ ಸಾಧ್ಯತೆ ಇದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2 ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದರಲ್ಲಿ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಸೇರಿದಂತೆ ಇತ್ತೀಚೆಗಿನ ಎಲ್ಲ ಆಯ್ಕೆಗಳನ್ನು ಅಳವಡಿಸಲಾಗಿದೆ. ಈ ಫೋನಿನ ನಿಖರ ಬೆಲೆ ಬಹಿರಂಗಗೊಂಡಿಲ್ಲ. ಆದರೆ, ಮೂಲಗಳ ಪ್ರಕಾರ 34,990 ರೂ. ಇರಬಹುದೆಂದು ಅಂದಾಜಿಸಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:22 pm, Sun, 7 May 23

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More