DA Hike: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೀಘ್ರದಲ್ಲೇ ಹೆಚ್ಚಳ; ವರದಿ

| Updated By: Ganapathi Sharma

Updated on: Oct 27, 2022 | 1:07 PM

ಏಳನೇ ವೇತನ ಆಯೋಗ ಶಿಫಾರಸು ಮಾಡಿರುವ ಪ್ರಮಾಣದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ತುಟ್ಟಿಭತ್ಯೆ ಹೆಚ್ಚಳವಾಗುವ ನಿರೀಕ್ಷೆ ಇದೆ ಎಂದು ವರದಿಯಾಗಿದೆ.

DA Hike: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೀಘ್ರದಲ್ಲೇ ಹೆಚ್ಚಳ; ವರದಿ
ಸಾಂದರ್ಭಿಕ ಚಿತ್ರ
Image Credit source: PTI
Follow us on

ನವದೆಹಲಿ: ಏಳನೇ ವೇತನ ಆಯೋಗ (7th Pay Commission) ಶಿಫಾರಸು ಮಾಡಿರುವ ಪ್ರಮಾಣದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ತುಟ್ಟಿಭತ್ಯೆ (DA) ಹೆಚ್ಚಳವಾಗುವ ನಿರೀಕ್ಷೆ ಇದೆ ಎಂದು ವರದಿಯಾಗಿದೆ. ಕರ್ನಾಟಕ, ಅಸ್ಸಾಂ, ಹರಿಯಾಣ, ಉತ್ತರ ಪ್ರದೇಶ, ಒಡಿಶಾ, ರಾಜಸ್ಥಾನಗಳು ಇತ್ತೀಚೆಗೆ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಿಸಿದ್ದವು. ಕೇಂದ್ರ ಸರ್ಕಾರ ಕೂಡ ಸದ್ಯದಲ್ಲೇ ತುಟ್ಟಿಭತ್ಯೆ ಹೆಚ್ಚಿಸಬಹುದು ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ದೀಪಾವಳಿ ಹಬ್ಬದ ಅವಧಿ ಮುಕ್ತಾಯಗೊಂಡ ಬೆನ್ನಲ್ಲೇ ಕೇಂದ್ರ ಸರ್ಕಾರಿ ನೌಕರರು ತುಟ್ಟಿಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ ಎಂದು ಮಾಧ್ಯಮ ವರದಿಗಳು ಉಲ್ಲೇಖಿಸಿವೆ. ಸಾಮಾನ್ಯವಾಗಿ ಕೇಂದ್ರ ಸರ್ಕಾರವು ವರ್ಷದಲ್ಲಿ ಎರಡು ಬಾರಿ ತುಟ್ಟಿಭತ್ಯೆಯನ್ನು ಪರಿಷ್ಕರಿಸುತ್ತದೆ. ಹೆಚ್ಚಾಗಿ ಇದು ಜನವರಿ ಮತ್ತು ಜುಲೈಯಲ್ಲಿ ಇರುತ್ತದೆ. ಆದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರವು ಈಗಾಗಲೇ ಎರಡು ಬಾರಿ ತುಟ್ಟಿಭತ್ಯೆ ಹೆಚ್ಚಿಸಿದೆ. ಮಾರ್ಚ್​ನಲ್ಲಿ ಮೊದಲ ಬಾರಿ ತುಟ್ಟಿಭತ್ಯೆ ಹೆಚ್ಚಿಸಿದ್ದ ಸರ್ಕಾರ ಸೆಪ್ಟೆಂಬರ್​ನಲ್ಲಿ ಪುನಃ ಹೆಚ್ಚಳ ಮಾಡಿತ್ತು.

ಸದ್ಯದ ಟ್ರೆಂಡ್ ಮುಂದುವರಿದಲ್ಲಿ ಹಣದುಬ್ಬರ, ಅಗತ್ಯವಸ್ತುಗಳ ಬೆಲೆ ಏರಿಕೆ ಇತ್ಯಾದಿಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ತನ್ನ ನೌಕರರ ತುಟ್ಟಿಭತ್ಯೆಯನ್ನು 2023ರ ಮಾರ್ಚ್​ನಲ್ಲಿ ಮತ್ತೆ ಹೆಚ್ಚಳ ಮಾಡುವ ಸಾಧ್ಯತೆ ಇದೆ. ತುಟ್ಟಿಭತ್ಯೆ ಶೇಕಡಾ 3ರಿಂದ 5ರಷ್ಟು ಹೆಚ್ಚಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.

ಇದನ್ನೂ ಓದಿ
Petrol Price on October 27: ಕಚ್ಚಾ ತೈಲದ ಬೆಲೆಯಲ್ಲಿ ಭಾರೀ ಏರಿಕೆ; ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ
Gold Price Today: ಚಿನ್ನ, ಬೆಳ್ಳಿ ದರ ತುಸು ಹೆಚ್ಚಳ; ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ? ಇಲ್ಲಿದೆ ವಿವರ
Fake Currency: ಎಟಿಎಂನಲ್ಲಿ ಬಂದ 200 ರೂ. ನಕಲಿ ನೋಟುಗಳು, ಗ್ರಾಹಕರು ತಬ್ಬಿಬ್ಬು
Bank Holidays in November: ನವೆಂಬರ್​ನಲ್ಲಿ ಬರೋಬ್ಬರಿ 10 ದಿನ ಬ್ಯಾಂಕ್ ರಜೆ, ಇಲ್ಲಿದೆ ವಿವರ

ಇದನ್ನೂ ಓದಿ: Salary Hike Survey: ವೇತನ ಹೆಚ್ಚಳಕ್ಕೆ ಕಾಯುತ್ತಿದ್ದೀರಾ? ಸಿಹಿ ಸುದ್ದಿ ನೀಡಿದೆ ಹೊಸ ಸಮೀಕ್ಷೆ

ಶೇಕಡಾ 31ರಷ್ಟಿದ್ದ ತುಟ್ಟಿಭತ್ಯೆಯನ್ನು ಕೇಂದ್ರ ಸರ್ಕಾರ ಮಾರ್ಚ್​ನಲ್ಲಿ ಶೇಕಡಾ 34ಕ್ಕೆ ಹೆಚ್ಚಿಸಿತ್ತು. ಇದರಿಂದ ಸುಮಾರು 47.68 ಲಕ್ಷ ಉದ್ಯೋಗಿಗಳು ಮತ್ತು 68.62 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವಾಗಿತ್ತು. ಸೆಪ್ಟೆಂಬರ್​ನಲ್ಲಿ ಶೇಕಡಾ 34ರಷ್ಟಿದ್ದ ತುಟ್ಟಿಭತ್ಯೆಯನ್ನು ಕೇಂದ್ರ ಸರ್ಕಾರ ಶೇಕಡಾ 38ಕ್ಕೆ ಹೆಚ್ಚಿಸಿತ್ತು.

ಕರ್ನಾಟಕ ಸರ್ಕಾರವು ಅಕ್ಟೋಬರ್ 7ರಂದು ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು 2022ರ ಜುಲೈ 1 ರಿಂದ ಅನ್ವಯವಾಗುವಂತೆ ಶೇಕಡಾ 3.75 ರಷ್ಟು ಹೆಚ್ಚಳ ಮಾಡಿತ್ತು. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ 1,282.72 ಕೋಟಿ ರೂ. ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ಇದಕ್ಕೂ ಮುನ್ನ ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಕರ್ನಾಟಕ ಸರ್ಕಾರ ತುಟ್ಟಿಭತ್ಯೆಯಲ್ಲಿ ಶೇಕಡಾ 2.75ರ ಹೆಚ್ಚಳ ಮಾಡಿತ್ತು. ಇದರಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 1447 ಕೋಟಿ ರೂ. ವೆಚ್ಚವಾಗಲಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ