AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಎಲ್​ಪಿಜಿ ಗ್ಯಾಸ್​ಗೆ ಆಧಾರ್ ಅಪ್​ಡೇಟ್ ಮಾಡಬೇಕು; ಹೊಸದಾಗಿ ಇಕೆವೈಸಿ ಮಾಡುವ ಕ್ರಮ ಇಲ್ಲಿದೆ

LPG users Aadhaar based ekyc update: ಎಲ್​ಪಿಜಿ ಗ್ಯಾಸ್ ಕನೆಕ್ಷನ್ ಹೊಂದಿರುವವರು ಇಕೆವೈಸಿ ಅಪ್​ಡೇಟ್ ಮಾಡಬೇಕಾಗುತ್ತದೆ. ಗ್ರಾಹಕರಿಂದ ಇಕೆವೈಸಿ ಪಡೆಯುವಂತೆ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಸಂಸ್ಥೆಗಳಿಗೆ ಸರ್ಕಾರ ಸೂಚನೆ ನೀಡಿದೆ. ಅಡುಗೆ ಅನಿಲವನ್ನು ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡಲಾಗುತ್ತಿರುವುದನ್ನು ತಡೆಯಲು ಈ ಕ್ರಮ ಕೈಗೊಂಡಿದೆ.

ನಿಮ್ಮ ಎಲ್​ಪಿಜಿ ಗ್ಯಾಸ್​ಗೆ ಆಧಾರ್ ಅಪ್​ಡೇಟ್ ಮಾಡಬೇಕು; ಹೊಸದಾಗಿ ಇಕೆವೈಸಿ ಮಾಡುವ ಕ್ರಮ ಇಲ್ಲಿದೆ
ಎಲ್​ಪಿಜಿ ಆಧಾರ್ ಇಕೆವೈಸಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 11, 2024 | 6:47 PM

Share

ಬೆಂಗಳೂರು, ಜುಲೈ 11: ನಿಮ್ಮ ಎಲ್​ಪಿಜಿ ಗ್ಯಾಸ್ ಸಂಪರ್ಕಕ್ಕೆ ಇಕೆವೈಸಿ ಅಪ್​ಡೇಟ್ ಮಾಡಬೇಕಾಗುತ್ತದೆ. ಐಒಸಿ ಸೇರಿದಂತೆ ಎಲ್ಲಾ ಸರ್ಕಾರಿ ಸ್ವಾಮ್ಯದ ಆಯಿಲ್ ಮಾರ್ಕೆಟಿಂಗ್ ಕಂಪನಿಗಳು ಗ್ರಾಹಕರಿಂದ ಆಧಾರ್ ಆಧಾರಿತ ಇಕೆವೈಸಿ ಪಡೆಯುತ್ತಿವೆ. ಅಡುಗೆ ಅನಿಲ ಸಂಪರ್ಕವನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಈ ಕಾರ್ಯ ಮಾಡಲಾಗುತ್ತಿದೆ. ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ಮೊನ್ನೆ ಈ ವಿಚಾರದ ಬಗ್ಗೆ ಮಾತನಾಡಿ, ಆಧಾರ್ ಮೂಲಕ ಇಕೆವೈಸಿ ಅಪ್​ಡೇಟ್ ಮಾಡಲು ಕಾರಣಗಳನ್ನು ನೀಡಿದ್ದಾರೆ.

ಯಾಕೆ ಪಡೆಯಲಾಗುತ್ತಿದೆ ಇಕೆವೈಸಿ?

ಅಡುಗೆ ಅನಿಲವನ್ನು ಸರ್ಕಾರ ಸಬ್ಸಿಡಿ ದರದಲ್ಲಿ ನೀಡುತ್ತದೆ. 14.2 ಕಿಲೋ ತೂಕದ ಅಡುಗೆ ಅನಿಲ ಸಿಲಿಂಡರ್​ನ ಬೆಲೆ ಸದ್ಯ 803 ರೂ ಇದೆ. ಆದರೆ, 19 ಕಿಲೋ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ 1,646 ರೂ ಇದೆ. ಸುಮಾರು 600 ರೂನಷ್ಟು ಅಂತರ ಇದೆ. ಸಾಕಷ್ಟು ಜನರು ವಾಣಿಜ್ಯ ಉಪಯೋಗಕ್ಕೆ ಅಡುಗೆ ಅನಿಲವನ್ನೇ ಬಳಸುತ್ತಿದ್ದಾರೆ. ಹೋಟೆಲ್ ಇತ್ಯಾದಿಯವರು ಅಡುಗೆ ಅನಿಲ ಬಳಕೆದಾರರ ಹೆಸರಲ್ಲಿ ಸಿಲಿಂಡರ್ ಪಡೆದು ಬಳಸುವುದು ಇತ್ಯಾದಿ ನಡೆಯುತ್ತಿದೆ. ಇದನ್ನು ತಡೆಯಲು ಸರ್ಕಾರ ಗ್ರಾಹಕರಿಂದ ಆಧಾರ್ ಇಕೆವೈಸಿ ಮಾಡಿಸುವಂತೆ ಇಂಡೇನ್, ಎಚ್​ಪಿ, ಬಿಪಿ ಗ್ಯಾಸ್ ವಿತರಕರಿಗೆ ತಿಳಿಸಿದೆ.

ಇದನ್ನೂ ಓದಿ: BSNL Offer: ಬಿಎಸ್​ಎನ್​ಎಲ್​ನಿಂದ ಹೊಸ ಭರ್ಜರಿ ಪ್ಲಾನ್ ಬಿಡುಗಡೆ; ಜಿಯೋ, ಏರ್ಟೆಲ್​ನಿಂದ ಗ್ರಾಹಕರ ವಲಸೆ?

ಇಕೆವೈಸಿ ಅಪ್​ಡೇಟ್ ಮಾಡುವುದು ಹೇಗೆ?

  1. ನಿಮಗೆ ಗ್ಯಾಸ್ ಡೆಲಿವರಿಗೆ ಬರುವ ವ್ಯಕ್ತಿಗೆ ನಿಮ್ಮ ಆಧಾರ್ ವಿವರ ಸಲ್ಲಿಸಬೇಕು. ಅವರ ಬಳಿ ಇರುವ ಆ್ಯಪ್​ವೊಂದರಲ್ಲಿ ನಿಮ್ಮ ಆಧಾರ್ ವಿವರ ಫೀಡ್ ಮಾಡಲಾಗುತ್ತದೆ. ಆಧಾರ್​ಗೆ ನೊಂದಾಯಿತವಾದ ನಿಮ್ಮ ಮೊಬೈಲ್ ನಂಬರ್​ಗೆ ಒಟಿಪಿ ಬರುತ್ತದೆ. ಅದನ್ನು ಸಲ್ಲಿಸಿದರೆ ಇಕೆವೈಸಿ ಅಪ್​ಡೇಟ್ ಆದಂತೆ.
  2. ನಿಮ್ಮ ಗ್ಯಾಸ್ ವಿತರಕ ಏಜೆನ್ಸಿಯ ಕಚೇರಿಗೆ ಹೋಗಿ ಇಕೆವೈಸಿ ಮಾಡಬಹುದು. ನಿಮ್ಮ ಆಧಾರ್ ಪ್ರತಿಯನ್ನು ಅಲ್ಲಿಗೆ ತೆಗೆದುಕೊಂಡು ಹೋಗಬೇಕಾಗುತ್ತದೆ.
  3. ಇಂಡಿಯನ್ ಆಯಿಲ್, ಭಾರತ್ ಗ್ಯಾಸ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಸಂಸ್ಥೆಗಳ ಮೊಬೈಲ್ ಆ್ಯಪ್​ಗಳಲ್ಲಿ ಇಕೆವೈಸಿ ಅಪ್​ಡೇಟ್ ಮಾಡುವ ಅವಕಾಶ ಇರುತ್ತದೆ.

ಗಮನಿಸಬೇಕಾದ ಸಂಗತಿ ಎಂದರೆ, ಗ್ಯಾಸ್ ಸಂಪರ್ಕಕ್ಕೆ ಇಕೆವೈಸಿ ಅಪ್​ಡೇಟ್ ಮಾಡಲು ಸದ್ಯ ಸರ್ಕಾರ ಯಾವ ಡೆಡ್​ಲೈನ್ ನೀಡಿಲ್ಲ. ಹೀಗಾಗಿ, ಆತುರ ಮಾಡದೇ ತಾಳ್ಮೆಯಿಂದ ಇಕೆವೈಸಿ ಮಾಡಲು ಸಾಕಷ್ಟು ಸಮಯಾವಕಾಶ ಇರುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ