AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ದಾಖಲೆಗಳಿದ್ರೆ ಮೃತ ವ್ಯಕ್ತಿಯ ಆಧಾರ್ ಕಾರ್ಡ್ ನಿಷ್ಕ್ರಿಯಗೊಳಿಸುವುದು ಸುಲಭ

ಭಾರತೀಯ ನಾಗರಿಕರಿಗೆ ಆಧಾರ್ ಕಾರ್ಡ್ ಪ್ರಮುಖ ಗುರುತಿನ ದಾಖಲೆಯಾಗಿದೆ. ಆದರೆ ಹೆಚ್ಚಿನವರಿಗೆ ಮೃತ ವ್ಯಕ್ತಿಯ ಆಧಾರ್ ಕಾರ್ಡ್ ಇದ್ದರೆ ಅದನ್ನು ಏನು ಮಾಡ್ಬೇಕು ಎಂಬುದು ತಿಳಿದೇ ಇಲ್ಲ. ಆದರೆ ವ್ಯಕ್ತಿ ಮೃತ ಪಟ್ಟ ಬಳಿಕ ಆತನ ಆಧಾರ್ ಕಾರ್ಡ್‌ನ್ನು ಮೈ ಆಧಾರ್ ಪೋರ್ಟಲ್ ಮೂಲಕ ಮೃತರ ಮರಣ ಪ್ರಮಾಣಪತ್ರ ಬಳಸಿ ನಿಷ್ಕ್ರಿಯಗೊಳಿಸಬೇಕು. ಈ ಪ್ರಕ್ರಿಯೆಯ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಈ ದಾಖಲೆಗಳಿದ್ರೆ ಮೃತ ವ್ಯಕ್ತಿಯ ಆಧಾರ್ ಕಾರ್ಡ್ ನಿಷ್ಕ್ರಿಯಗೊಳಿಸುವುದು ಸುಲಭ
ಆಧಾರ್‌ ಕಾರ್ಡ್‌Image Credit source: fossbytes.com
ಸಾಯಿನಂದಾ
|

Updated on: Sep 06, 2026 | 5:21 PM

Share

ಮುಖ್ಯಾಂಶಗಳು

  • ಆಧಾರ್‌ ಕಾರ್ಡ್‌ ಪ್ರಮುಖ ಗುರುತಿನ ಹಾಗೂ ವಿಳಾಸ ಪುರಾವೆಯಾಗಿದೆ
  • ಆದರೆ ಮೃತಪಟ್ಟ ವ್ಯಕ್ತಿಯ ಆಧಾರ್ ಕಾರ್ಡ್ ದುರ್ಬಳಕೆ ಮಾಡದಂತೆ ತಡೆಯಲು ಸಾಧ್ಯ
  • ಕೆಲ ಪ್ರಮುಖ ಇದ್ರೆ ಮೃತ ವ್ಯಕ್ತಿಯ ಆಧಾರ್ ಕಾರ್ಡ್ ನಿಷ್ಕ್ರಿಯಗೊಳಿಸಬಹುದು

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೀಡುವ 12 ಅಂಕಿಯ ಈ ಆಧಾರ್ ಕಾರ್ಡ್ (Aadhaar Card) ಪ್ರಮುಖ ಗುರುತಿನ ದಾಖಲೆಯಾಗಿದೆ. ಬ್ಯಾಂಕ್ ಖಾತೆ ತೆರೆಯಲು, ಸರ್ಕಾರದ ಸಬ್ಸಿಡಿಗಳು, ಪಿಂಚಣಿಗಳು ಮತ್ತು ನಗದು ವರ್ಗಾವಣೆಗೆ ಈ ದಾಖಲೆ ಅತ್ಯಗತ್ಯ. ಆದರೆ ಮೃತ ವ್ಯಕ್ತಿಯ ಆಧಾರ್ ಕಾರ್ಡ್ ಏನು ಮಾಡಬೇಕು ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಆದರೆ, ಮೃತಪಟ್ಟ ವ್ಯಕ್ತಿಯ ಆಧಾರ್ ಕಾರ್ಡ್ ದುರ್ಬಳಕೆ ಮಾಡದಂತೆ ತಡೆಯಲು ಈ ದಾಖಲೆಯನ್ನು ನಿಷ್ಕ್ರಿಯಗೊಳಿಸಬಹುದು. ಈ ಪ್ರಕ್ರಿಯೆಗೆ ಮೃತರ ಆಧಾರ್ ಕಾರ್ಡ್ ಜತೆಗೆ ಕೆಲವು ಪ್ರಮುಖ ದಾಖಲೆಗಳು ಅಗತ್ಯವಾಗಿಬೇಕು.

ಅಗತ್ಯವಿರುವ ದಾಖಲೆಗಳಾವುವು?

  • ಮೃತ ವ್ಯಕ್ತಿಯ ಆಧಾರ್ ಸಂಖ್ಯೆ
  • ಮರಣ ಪ್ರಮಾಣಪತ್ರ
  • ಅರ್ಜಿದಾರರ ಆಧಾರ್ ಕಾರ್ಡ್ ಹಾಗೂ ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ

ಮೃತ ವ್ಯಕ್ತಿ ಆಧಾರ್ ಕಾರ್ಡ್ ಆನ್‌ಲೈನ್‌ನಲ್ಲಿ ನಿಷ್ಕ್ರಿಯಗೊಳಿಸುವುದು ಹೇಗೆ?

ಹಂತ 1: ಮೊದಲಿಗೆ ಯುಐಡಿಎಐನ ಅಧಿಕೃತ ಮೈ ಆಧಾರ್ ಪೋರ್ಟಲ್ ವೆಬ್‌ಸೈಟ್‌ಗೆ ಭೇಟಿ ನೀಡಿ.

ಹಂತ 2: ಮೃತ ವ್ಯಕ್ತಿಯ ಕುಟುಂಬದ ಸದಸ್ಯ ಅಥವಾ ಅರ್ಜಿದಾರ ತಮ್ಮ ಆಧಾರ್ ಸಂಖ್ಯೆಯೊಂದಿಗೆ ಒಟಿಪಿ ದೃಢೀಕರಣ ಬಳಸಿ ಲಾಗ್ ಇನ್ ಆಗಿ.

ಹಂತ 3: ಲಾಗ್ ಇನ್ ಬಳಿಕ ಈ ಪೋರ್ಟಲ್‌ನಲ್ಲಿ ಕಾಣಿಸುವ ಕುಟುಂಬ ಸದಸ್ಯರ ಮರಣವನ್ನು ವರದಿ ಮಾಡಿ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

ಹಂತ 4: ಮೃತ ವ್ಯಕ್ತಿಯ ವಿವರಗಳನ್ನು ತಪ್ಪಿಲ್ಲದೇನೇ ಭರ್ತಿ ಮಾಡಿ.

ಹಂತ 5: ಮೃತ ವ್ಯಕ್ತಿ ಮರಣ ಪ್ರಮಾಣಪತ್ರದ ಸ್ಕ್ಯಾನ್ ಮಾಡಿದ ಪ್ರತಿಯನ್ನು ಆಪ್‌ಲೋಡ್ ಮಾಡಿ.

ಹಂತ 6: ಎಲ್ಲಾ ವಿವರಗಳನ್ನು ಪರಿಶೀಲಿಸಿ ಸಬ್ ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: ಆಧಾರ್ ಕಾರ್ಡ್ ಕಳೆದು ಹೋದ್ರೆ ವಾಟ್ಸಾಪ್‌ನಲ್ಲಿ ಹೀಗೆ ಡೌನ್ಲೋಡ್ ಮಾಡಿ

ಸಾಮಾನ್ಯವಾಗಿ ಕೇಳುವ ಪ್ರಶ್ನೆ ಮತ್ತು ಉತ್ತರ (FAQs)

ಪ್ರಶ್ನೆ: ಆಧಾರ್ ಕಾರ್ಡ್ ಮುಖ್ಯ ಯಾಕೆ?

ಉತ್ತರ: ಭಾರತ ಸರ್ಕಾರದಿಂದ ನೀಡಲ್ಪಡುವ 12 ಅಂಕಿಗಳ ವಿಶಿಷ್ಟ ಗುರುತಿನ ಪುರಾವೆ ಇದಾಗಿದ್ದು, ಹೀಗಾಗಿ ಪ್ರತಿಯೊಬ್ಬ ನಾಗರಿಕನಿಗೂ ಅಗತ್ಯವಾಗಿದೆ.

ಪ್ರಶ್ನೆ: ಮೃತ ವ್ಯಕ್ತಿಯ ಆಧಾರ್ ಕಾರ್ಡ್ ರದ್ದುಗೊಳಿಸಲು ಯಾವೆಲ್ಲಾ ದಾಖಲೆಗಳು ಬೇಕು?

ಉತ್ತರ: ಮೃತ ವ್ಯಕ್ತಿಯ ಆಧಾರ್ ಕಾರ್ಡ್ ರದ್ದುಗೊಳಿಸಲು ಮೃತ ವ್ಯಕ್ತಿಯ ಆಧಾರ್ ಸಂಖ್ಯೆ, ಮರಣ ಪ್ರಮಾಣಪತ್ರ, ಅರ್ಜಿದಾರರ ಆಧಾರ್ ಕಾರ್ಡ್ ಹಾಗೂ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಈ ದಾಖಲೆಗಳು ಬೇಕು.

ಪ್ರಶ್ನೆ: ಮೃತ ವ್ಯಕ್ತಿಯ ಆಧಾರ್ ಕಾರ್ಡ್ ರದ್ದುಗೊಳಿಸುವುದು ಮುಖ್ಯ ಯಾಕೆ?

ಉತ್ತರ: ಮೃತ ವ್ಯಕ್ತಿಯ ಆಧಾರ್ ಕಾರ್ಡ್ ರದ್ದುಗೊಳಿಸುವ ಪ್ರಕ್ರಿಯೆಯಿಂದ ದುರುಪಯೋಗವಾಗುವುದು ತಡೆಯಬಹುದು ಹಾಗೂ ಕಾನೂನು ಪ್ರಕ್ರಿಯೆಗಳನ್ನು ಸುಲಭಗೊಳಿಸಲು ಇದು ಸಹಾಯ ಮಾಡುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!