AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadhar Card: ಆಧಾರ್ ಕಾರ್ಡ್‌ನಲ್ಲಿ ಮೊಬೈಲ್ ನಂಬರ್‌ನ್ನು ಹೀಗೆ ತಿದ್ದುಪಡಿ ಮಾಡಿ

ಆಧಾರ್ ಕಾರ್ಡ್ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಆದರೆ ನಿಮ್ಮ ಆಧಾರ್ ಕಾರ್ಡ್‌ನಲ್ಲಿ ಬೇರೆಯವರ ಮೊಬೈಲ್ ನಂಬರ್ ಇದ್ದರೆ ಬದಲಾವಣೆ ಮಾಡುವುದು ಬಹಳ ಮುಖ್ಯ. ನಿಮ್ಮದೇ ನಂಬರ್ ಲಿಂಕ್ ಆಗದೇ ಹೋದರೆ ಇದು ಸಮಸ್ಯೆಗಳಿಗೆ ದಾರಿ ಮಾಡಿಕೊಡಬಹುದು. ಈ ಮೊಬೈಲ್ ನಂಬರ್ ಬದಲಾವಣೆ ಪ್ರಕ್ರಿಯೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

Aadhar Card: ಆಧಾರ್ ಕಾರ್ಡ್‌ನಲ್ಲಿ ಮೊಬೈಲ್ ನಂಬರ್‌ನ್ನು ಹೀಗೆ ತಿದ್ದುಪಡಿ ಮಾಡಿ
ಆಧಾರ್‌ ಕಾರ್ಡ್‌Image Credit source: Getty Images
ಸಾಯಿನಂದಾ
|

Updated on: Jul 13, 2026 | 4:40 PM

Share

ಮುಖ್ಯಾಂಶಗಳು

  • ಆಧಾರ್‌ ಕಾರ್ಡ್‌ ಭಾರತದ ಪ್ರತಿಯೊಬ್ಬ ನಿವಾಸಿಗೆ ನೀಡುವ 12 ಅಂಕಿಯ ವಿಶಿಷ್ಟ ಗುರುತಿನ ಸಂಖ್ಯೆ
  • ಸರ್ಕಾರದ ಯಾವುದೇ ಸೌಲಭ್ಯಗಳಿಗೆ ಈ ದಾಖಲೆ ಕಡ್ಡಾಯ
  • ಆಧಾರ್ ಕಾರ್ಡ್‌ನಲ್ಲಿ ಮೊಬೈಲ್ ಸಂಖ್ಯೆ ತಿದ್ದುಪಡಿ ಯಾವುದೇ ಆನ್‌ಲೈನ್ ವಿಧಾನ ಲಭ್ಯವಿಲ್ಲ.

ಆಧಾರ್‌ ಕಾರ್ಡ್‌ (Aadhaar Card) ಭಾರತದ ಪ್ರತಿಯೊಬ್ಬ ನಿವಾಸಿಗೆ ನೀಡುವ 12 ಅಂಕಿಯ ವಿಶಿಷ್ಟ ಗುರುತಿನ ಸಂಖ್ಯೆ ಇದಾಗಿದೆ. ಆಧಾರ್ ಕಾರ್ಡ್ ಕೇವಲ ಗುರುತಿನ ಚೀಟಿಯಾಗಿರದೇ, ಸರ್ಕಾರದ ಯಾವುದೇ ಸೌಲಭ್ಯಗಳಿಗೆ ಈ ದಾಖಲೆ ಕಡ್ಡಾಯವಾಗಿ ಬೇಕು. ಆಧಾರ್ ಕಾರ್ಡ್‌ನಲ್ಲಿ ನಿಮ್ಮ ಮೊಬೈಲ್ ಸಂಖ್ಯೆ ಇರಲೇ ಬೇಕು. ಬೇರೆಯವರ ಮೊಬೈಲ್ ಸಂಖ್ಯೆಯಿದ್ದರೆ ನೀವು ಆದಷ್ಟು ಬೇಗ ಬದಲಾವಣೆ ಮಾಡಿಕೊಳ್ಳುವುದು ಅಗತ್ಯ. ಆಧಾರ್ ಕಾರ್ಡ್‌ನಲ್ಲಿ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಲು ಅಥವಾ ತಿದ್ದುಪಡಿ ಯಾವುದೇ ಆನ್‌ಲೈನ್ ವಿಧಾನದಲ್ಲಿ ಸಾಧ್ಯವಿಲ್ಲ.

ಆಧಾರ್ ಕಾರ್ಡ್‌ನಲ್ಲಿ ಮೊಬೈಲ್ ಸಂಖ್ಯೆ ಬದಲಿಸುವುದು ಹೇಗೆ?

ಹಂತ 1: ನೀವು ನೇರವಾಗಿ ನಿಮ್ಮ ಹತ್ತಿರದ ಆಧಾರ್ ಸೇವಾ ಕೇಂದ್ರಕ್ಕೆ ಅಥವಾ ಆಧಾರ್ ನೋಂದಣಿ ಕೇಂದ್ರಕ್ಕೆ ಭೇಟಿ ನೀಡಿ.

ಹಂತ 2: UIDAI ನ ಅಫೀಷಿಯಲ್ ಆಧಾರ್ ವೆಬ್‌ ಸೈಟ್‌ ಮೂಲಕ ಮೊಬೈಲ್ ಸಂಖ್ಯೆ ಬದಲಾವಣೆ ಮಾಡಿಕೊಳ್ಳಬಹುದು.

ಹಂತ 3: ಆಧಾರ್ ಸೇವಾ ಕೇಂದ್ರದಲ್ಲಿ ಲಭ್ಯವಿರುವ ಆಧಾರ್ ತಿದ್ದುಪಡಿ ಫಾರ್ಮ್‌ನಲ್ಲಿ ನೀವು ಪ್ರಸ್ತುತ ಬಳಸುತ್ತಿರುವ ಮೊಬೈಲ್‌ ಸಂಖ್ಯೆಯನ್ನು ನಮೂದಿಸಿ.

ಹಂತ 4: ನಿಮ್ಮ ಬೆರಳಚ್ಚು ಅಥವಾ ಕಣ್ಣಿನ ಗುಡ್ಡೆಯನ್ನು (ಬಯೋಮೆಟ್ರಿಕ್) ಸ್ಕ್ಯಾನ್ ಮಾಡಿ ಪರಿಶೀಲಿಸಲಾಗುತ್ತದೆ.

ಹಂತ 5: ಈ ಸೇವೆಗಾಗಿ ನೀವು 50 ರೂ ಶುಲ್ಕವನ್ನು ಪಾವತಿಸಬೇಕು.

ಹಂತ 6: ಪ್ರಕ್ರಿಯೆ ಬಳಿಕ ಯೂನಿಕ್ ರಿಫೆರೆನ್ಸ್ ನಂಬರ್ ಇರುವ ರಸೀದಿಯನ್ನು ನೀಡಲಾಗುತ್ತದೆ.

ಇದನ್ನೂ ಓದಿ: Aadhaar Card: ಆಧಾರ್ ಕಾರ್ಡ್​ನಲ್ಲಿ ಹೆಸರು, ವಿಳಾಸ ತಿದ್ದುಪಡಿ ಮಾಡುವ ಮುನ್ನ ಈ ವಿಷ್ಯ ತಿಳಿದಿರಲಿ

ಸಾಮಾನ್ಯವಾಗಿ ಕೇಳುವ ಪ್ರಶ್ನೆ ಮತ್ತು ಉತ್ತರ (FAQs)

ಪ್ರಶ್ನೆ: ಆಧಾರ್ ಕಾರ್ಡ್‌ನಲ್ಲಿ ಮೊಬೈಲ್ ಸಂಖ್ಯೆ ತಿದ್ದುಪಡಿ ಮಾಡೋದು ಹೇಗೆ?

ಉತ್ತರ: ನಿಮ್ಮ ಹತ್ತಿರದ ಆಧಾರ್ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ತಿದ್ದುಪಡಿ ಮಾಡಿಕೊಳ್ಳಬಹುದು.

ಪ್ರಶ್ನೆ: ಆಧಾರ್ ಕಾರ್ಡ್‌ನಲ್ಲಿ ಮೊಬೈಲ್ ಸಂಖ್ಯೆ ತಿದ್ದುಪಡಿಗೆ ಎಷ್ಟು ಶುಲ್ಕ ವಿಧಿಸಲಾಗುತ್ತದೆ?

ಉತ್ತರ: ಆಧಾರ್ ಕಾರ್ಡ್ ನಲ್ಲಿ ಮೊಬೈಲ್ ಸಂಖ್ಯೆ ತಿದ್ದುಪಡಿಗೆ ಮಾಡಲು 50 ರೂ ಶುಲ್ಕವನ್ನು ಪಾವತಿಸಬೇಕು.

ಪ್ರಶ್ನೆ: ಆಧಾರ್ ಕಾರ್ಡ್‌ನಲ್ಲಿ ಮೊಬೈಲ್ ಸಂಖ್ಯೆಯನ್ನು ತಿದ್ದುಪಡಿ ಮಾಡಲು ಆನ್ಲೈನ್ ವಿಧಾನದಿಂದ ಸಾಧ್ಯವೇ?

ಉತ್ತರ: ಆಧಾರ್ ಕಾರ್ಡ್‌ನಲ್ಲಿ ಮೊಬೈಲ್ ಸಂಖ್ಯೆಯನ್ನು ತಿದ್ದುಪಡಿ ಮಾಡಲು ಆನ್ಲೈನ್ ವಿಧಾನ ಲಭ್ಯವಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ