AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadhaar Card: ಆಧಾರ್ ಕಾರ್ಡ್​ನಲ್ಲಿ ಹೆಸರು, ವಿಳಾಸ ತಿದ್ದುಪಡಿ ಮಾಡುವ ಮುನ್ನ ಈ ವಿಷ್ಯ ತಿಳಿದಿರಲಿ

ಆಧಾರ್ ಕಾರ್ಡ್ ಭಾರತದಲ್ಲಿ ಪ್ರಮುಖ ಗುರುತಿನ ದಾಖಲೆಗಳಲ್ಲಿ ಒಂದು. ಸಬ್ಸಿಡಿಗಳು, ಪಿಂಚಣಿಗಳು, ಮತ್ತು ವಿದ್ಯಾರ್ಥಿವೇತನಗಳು ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಜಮೆಯಾಗಲು ಈ ದಾಖಲೆ ಅತ್ಯಗತ್ಯ. ಇನ್ನು ಬ್ಯಾಂಕ್ ಖಾತೆ ತೆರೆಯಲು, ಸಿಮ್ ಕಾರ್ಡ್ ಪಡೆಯಲು, ಪಾಸ್‌ಪೋರ್ಟ್ ಮಾಡಲು ಮತ್ತು ಆದಾಯ ತೆರಿಗೆ ಸಲ್ಲಿಕೆಗೆ ಆಧಾರ್ ಬೇಕೇ ಬೇಕು. ಈ ಅಗತ್ಯ ದಾಖಲೆಯಲ್ಲಿರುವ ಹೆಸರು, ವಿಳಾಸವು ತಪ್ಪಿದ್ದರೆ ತಿದ್ದುಪಡಿ ಮಾಡಬಹುದಾಗಿದೆ. ಈ ಕುರಿತಾದ ಕಂಪ್ಲೀಟ್ ಮಾಹಿತಿ ಇಲ್ಲಿದೆ.

Aadhaar Card: ಆಧಾರ್ ಕಾರ್ಡ್​ನಲ್ಲಿ ಹೆಸರು, ವಿಳಾಸ ತಿದ್ದುಪಡಿ ಮಾಡುವ ಮುನ್ನ ಈ ವಿಷ್ಯ ತಿಳಿದಿರಲಿ
ಆಧಾರ್‌ ಕಾರ್ಡ್‌ Image Credit source: Getty Images
ಸಾಯಿನಂದಾ
|

Updated on:Jul 10, 2026 | 5:11 PM

Share

ಮುಖ್ಯಾಂಶಗಳು

  • ಆಧಾರ್ ಕಾರ್ಡ್ ಭಾರತದಲ್ಲಿ ಪ್ರಮುಖ ಗುರುತಿನ ದಾಖಲೆಗಳಲ್ಲಿ ಒಂದಾಗಿದೆ.
  • ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಆಧಾರ್‌ ಕಾರ್ಡ್‌ನಲ್ಲಿನ ತಿದ್ದುಪಡಿಗೆ ಅವಕಾಶ ನೀಡಿದೆ
  • ಆಧಾರ್‌ ಕಾರ್ಡ್‌ನ ಮಾಹಿತಿ ಅಪ್‌ಡೇಟ್‌ಗೆ ಆಧಾರ್ ನೋಂದಣಿ ಕೇಂದ್ರಕ್ಕೆ ಭೇಟಿ ನೀಡಬೇಕು.

ಆಧಾರ್‌ ಕಾರ್ಡ್‌ (Aadhaar Card) ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಇದು ಭಾರತದ ಪ್ರತಿಯೊಬ್ಬ ನಿವಾಸಿಗೆ ನೀಡುವ 12 ಅಂಕಿಯ ವಿಶಿಷ್ಟ ಗುರುತಿನ ಸಂಖ್ಯೆ. ಸರ್ಕಾರದ ಯಾವುದೇ ಸೌಲಭ್ಯಗಳನ್ನು ಪಡೆಯಬೇಕಾದ್ರು ಆಧಾರ್‌ ಕಾರ್ಡ್‌ ಅಗತ್ಯವಾಗಿ ಬೇಕು. ಆದರೆ ಈ ಆಧಾರ್‌ ಕಾರ್ಡ್‌ನಲ್ಲಿ ತಮ್ಮ ಹೆಸರು, ವಿಳಾಸ ಹಾಗೂ ಮೊಬೈಲ್‌ ನಂಬರ್‌ ಅನ್ನು ತಿದ್ದುಪಡಿ ಮಾಡುವುದಕ್ಕೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಅವಕಾಶ ನೀಡಿದೆ. ಆದರೆ, ಈ ಆಧಾರ್ ಕಾರ್ಡ್‌ನ ಪ್ರಮುಖ ಮಾಹಿತಿಗಳಾದ ಹೆಸರು, ವಿಳಾಸ, ಮೊಬೈಲ್ ನಂಬರನ್ನು ಎಷ್ಟು ಬಾರಿ ತಿದ್ದುಪಡಿ ಮಾಡಿಕೊಳ್ಳಬಹುದು ಎಂಬ ಬಗ್ಗೆ ಮಾಹಿತಿ ಕೆಲವರಿಗೆ ತಿಳಿದಿಲ್ಲ. ಈ ತಿದ್ದುಪಡಿಯ ಬಗ್ಗೆ ನೀವು ತಿಳಿದುಕೊಳ್ಳುವುದು ಒಳ್ಳೆಯದು.

ಆಧಾರ್‌ ಕಾರ್ಡ್‌ನಲ್ಲಿ ಎಷ್ಟು ಬಾರಿ ಈ ಎಲ್ಲಾ ಮಾಹಿತಿಗಳನ್ನು ತಿದ್ದುಪಡಿ ಮಾಡಬಹುದು?

  • ಹೆಸರು: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಜೀವಿತಾವಧಿಯಲ್ಲಿ ಕೇವಲ ಎರಡು ಬಾರಿ ಮಾತ್ರ ಬದಲಾಯಿಸಲು ಅವಕಾಶವಿದೆ.
  • ಹುಟ್ಟಿದ ದಿನಾಂಕ ಹಾಗೂ ಲಿಂಗ: ಈ ಮಾಹಿತಿಯನ್ನು ತಮ್ಮ ಜೀವಿತಾವಧಿಯಲ್ಲಿ ಒಮ್ಮೆ ಮಾತ್ರ ಬದಲಾವಣೆ ಮಾಡಬಹುದು.
  • ವಿಳಾಸ ಹಾಗೂ ಮೊಬೈಲ್ ಸಂಖ್ಯೆ: ನಿಮ್ಮ ವಿಳಾಸ ಹಾಗೂ ಮೊಬೈಲ್ ಸಂಖ್ಯೆಯಲ್ಲಿ ಏನಾದ್ರೂ ಬದಲಾವಣೆ ಮಾಡಲು ನಿರ್ದಿಷ್ಟ ಮಿತಿಯನ್ನು ಹಾಕಿಲ್ಲ. ನಿಮ್ಮ ಅನುಕೂಲಕ್ಕೆ ತಕ್ಕಂತೆ ಎಷ್ಟು ಬಾರಿ ಬೇಕಾದರೂ ಬದಲಾಯಿಸಿಕೊಳ್ಳಬಹುದು.

ಆಧಾರ್‌ ಕಾರ್ಡ್‌ನ ಈ ಎಲ್ಲಾ ಮಾಹಿತಿಗಳನ್ನು ಅಪ್‌ಡೇಟ್‌ ಮಾಡಲು ಹೀಗೆ ಮಾಡಿ

ಹಂತ 1: ಮೊದಲಿಗೆ UIDAI ನ ಅಧಿಕೃತ ವೆಬ್‌ಸೈಟ್‌ನಿಂದ ಆಧಾರ್ ನೋಂದಣಿ ಹಾಗೂ ಅಪ್‌ಡೇಟ್ ಫಾರ್ಮ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಿ.

ಹಂತ 2: ನಿಮ್ಮ ಹತ್ತಿರದ ಆಧಾರ್ ನೋಂದಣಿ ಕೇಂದ್ರ ಅಥವಾ ಆಧಾರ್ ಸೇವಾ ಕೇಂದ್ರಕ್ಕೆ ಭೇಟಿ ನೀಡಿ.

ಹಂತ 3: ಡೌನ್‌ಲೋಡ್ ಮಾಡಿದ ಫಾರ್ಮ್ ನಲ್ಲಿ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ. ಆಧಾರ್ ನೋಂದಣಿ ಕೇಂದ್ರದ ಕಾರ್ಯನಿರ್ವಾಹಕರಿಗೆ ನೀಡಿ.

ಹಂತ 4: ನಿಮಗೆ (ಹೆಸರು, ಲಿಂಗ, ವಿಳಾಸ, ಮೊಬೈಲ್ ಸಂಖ್ಯೆ) ಬದಲಾವಣೆಯಾಗಬೇಕಾಗಿರುವುದರ ಗುರುತಿನ ದಾಖಲೆ, ವಿಳಾಸದ ಪುರಾವೆ, ಜನ್ಮ ದಿನಾಂಕದ ಪುರಾವೆಯನ್ನು ನೀಡಿ.

ಹಂತ 5: ಕೊನೆಗೆ ಆಧಾರ್‌ನಲ್ಲಿ ನಿಮಗೆ ಬೇಕಿರುವ ಮಾಹಿತಿ (ಹೆಸರು, ವಿಳಾಸ, ಮೊಬೈಲ್ ಸಂಖ್ಯೆ) ಅಪ್‌ಡೇಟ್‌ ಮಾಡಲು, 50ರೂ. ಶುಲ್ಕವನ್ನು ನೀಡಬೇಕು.

ಇದನ್ನೂ ಓದಿ: DigiLocker: ನಿಮ್ಮ ಡಿಜಿಲಾಕರ್ ಅಕೌಂಟ್‌ ಹ್ಯಾಕ್ ಆಗಿದೆ ಎಂದು ಹೀಗೆ ತಿಳಿಯಿರಿ

ಸಾಮಾನ್ಯವಾಗಿ ಕೇಳುವ ಪ್ರಶ್ನೆ ಮತ್ತು ಉತ್ತರ (FAQs)

ಪ್ರಶ್ನೆ: ಆಧಾರ್‌ ಕಾರ್ಡ್‌ನಲ್ಲಿ ಎಷ್ಟು ಬಾರಿ ಅಗತ್ಯ ಮಾಹಿತಿಗಳನ್ನು ತಿದ್ದುಪಡಿ ಮಾಡಬಹುದು?

ಉತ್ತರ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು ಜೀವಿತಾವಧಿಯಲ್ಲಿ ಹೆಸರನ್ನು ಕೇವಲ ಎರಡು ಬಾರಿ, ಹುಟ್ಟಿದ ದಿನಾಂಕ ಮತ್ತು ಲಿಂಗ ಒಂದು ಬಾರಿ ಹಾಗೂ ವಿಳಾಸ, ಮೊಬೈಲ್ ಸಂಖ್ಯೆಯನ್ನು ಎಷ್ಟು ಬಾರಿಯಾದರೂ ತಿದ್ದುಪಡಿ ಮಾಡಲು ಅವಕಾಶ ನೀಡಿದೆ.

ಪ್ರಶ್ನೆ: ಆಧಾರ್‌ ಕಾರ್ಡ್‌ನ ಮಾಹಿತಿ ಅಪ್‌ಡೇಟ್‌ ಮಾಡಲು ಎಲ್ಲಿಗೆ ಹೋಗಬೇಕು?

ಉತ್ತರ: ನಿಮ್ಮ ಹತ್ತಿರದ ಆಧಾರ್ ನೋಂದಣಿ ಕೇಂದ್ರ ಅಥವಾ ಆಧಾರ್ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಲಿಂಗ ಈ ಎಲ್ಲಾ ಮಾಹಿತಿಯನ್ನು ಅಪ್ಡೇಟ್ ಮಾಡಿಕೊಳ್ಳಬಹುದು.

ಪ್ರಶ್ನೆ: ಆಧಾರ್ ಕಾರ್ಡ್ ತಿದ್ದುಪಡಿ ಮಾಡಲು ಶುಲ್ಕ ನೀಡಬೇಕೇ?

ಉತ್ತರ: ಆಧಾರ್‌ ಕಾರ್ಡ್‌ನಲ್ಲಿ ನಿಮಗೆ ಬೇಕಿರುವ ಮಾಹಿತಿ (ಹೆಸರು, ವಿಳಾಸ, ಮೊಬೈಲ್ ಸಂಖ್ಯೆ) ತಿದ್ದುಪಡಿ ಮಾಡಲು, 50ರೂ. ಶುಲ್ಕವನ್ನು ವಿಧಿಸುತ್ತಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:39 pm, Fri, 10 July 26

Follow Us