Aadhaar- PAN Linking: ಆಧಾರ್​- ಪ್ಯಾನ್ ಜೋಡಣೆ ಗಡುವು 2022ರ ಮಾರ್ಚ್ 31ಕ್ಕೆ ವಿಸ್ತರಣೆ

ಆಧಾರ್- ಪ್ಯಾನ್​ ಕಾರ್ಡ್ ಜೋಡಣೆ ಗಡುವನ್ನು ಕೇಂದ್ರ ಸರ್ಕಾರದಿಂದ ಮಾರ್ಚ್ 31, 2022ರ ತನಕ ವಿಸ್ತರಣೆ ಮಾಡಲಾಗಿದೆ.

Aadhaar- PAN Linking: ಆಧಾರ್​- ಪ್ಯಾನ್ ಜೋಡಣೆ ಗಡುವು 2022ರ ಮಾರ್ಚ್ 31ಕ್ಕೆ ವಿಸ್ತರಣೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Srinivas Mata

Updated on: Sep 17, 2021 | 11:43 PM

ಪ್ಯಾನ್-ಆಧಾರ್ ಜೋಡಣೆ ಮಾಡುವ ಗಡುವನ್ನು ಕೇಂದ್ರ ಸರ್ಕಾರ ಮತ್ತೊಮ್ಮೆ ವಿಸ್ತರಣೆ ಮಾಡಿದೆ. ಆಧಾರ್ ಜೊತೆ ಪ್ಯಾನ್ ಜೋಡಣೆ ಮಾಡುವ ಗಡುವು ಸದ್ಯಕ್ಕೆ ಇರುವ ಸೆಪ್ಟೆಂಬರ್ 30, 2021ರಿಂದ ಆರು ತಿಂಗಳು, ಅಂದರೆ 2022ರ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ. ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (CBDT) ಹೇಳಿಕೆಯಲ್ಲಿ ತಿಳಿಸಿರುವಂತೆ, ಕೊವಿಡ್ -19 ಬಿಕ್ಕಟ್ಟಿನಿಂದ ಎದುರಿಸುತ್ತಿರುವ ಸಂಕಷ್ಟವನ್ನು ಪರಿಹರಿಸಲು ಹೇಳಿದೆ, ನಿಯಮಾವಳಿಗಳನ್ನು ಸರಾಗಗೊಳಿಸುವ ನಿಟ್ಟಿನಲ್ಲಿ ಕಾಲಾವಧಿಯನ್ನು ವಿಸ್ತರಿಸಲಾಗಿದೆ. “ಪ್ಯಾನ್ ಅನ್ನು ಆಧಾರ್‌ನೊಂದಿಗೆ ಜೋಡಣೆ ಮಾಡಲು ಆದಾಯ ತೆರಿಗೆ ಇಲಾಖೆಗೆ ಆಧಾರ್ ಸಂಖ್ಯೆಯನ್ನು ತಿಳಿಸುವ ಸಮಯದ ಮಿತಿಯನ್ನು 30ನೇ ಸೆಪ್ಟೆಂಬರ್, 2021ರಿಂದ 31ನೇ ಮಾರ್ಚ್, 2022ಕ್ಕೆ ವಿಸ್ತರಿಸಲಾಗಿದೆ,” ಎಂದು ಅದು ಹೇಳಿದೆ. ಅಲ್ಲದೆ, ಆದಾಯ-ತೆರಿಗೆ ಕಾಯ್ದೆಯಡಿ ದಂಡ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಅಂತಿಮ ದಿನಾಂಕವನ್ನು ಸೆಪ್ಟೆಂಬರ್ 30, 2021 ರಿಂದ ಮಾರ್ಚ್ 31, 2022ರವರೆಗೆ ವಿಸ್ತರಿಸಲಾಗಿದೆ.

ಇನ್ನೂ ಮುಂದುವರಿದು, ಬೇನಾಮಿ ಆಸ್ತಿ ವಹಿವಾಟು ನಿಷೇಧ ಕಾಯ್ದೆ 1988ರ ಅಡಿಯಲ್ಲಿ ತೀರ್ಪು ನೀಡುವ ಪ್ರಾಧಿಕಾರದಿಂದ ಸೂಚನೆ ನೀಡುವ ಮತ್ತು ಆದೇಶವನ್ನು ಜಾರಿಗೊಳಿಸುವ ಕಾಲಮಿತಿಯನ್ನು ಮಾರ್ಚ್ 2022ಕ್ಕೆ ವಿಸ್ತರಿಸಲಾಗಿದೆ.

ಪ್ಯಾನ್ ಅನ್ನು ಆಧಾರ್ ಜೊತೆ ಜೋಡಣೆ ಮಾಡುವುದು ಹೇಗೆ? ಎಸ್ಸೆಮ್ಮೆಸ್ ಮೂಲಕ ತೆರಿಗೆದಾರರು 567678 ಅಥವಾ 56161ಗೆ ಎಸ್‌ಎಂಎಸ್ ಕಳುಹಿಸುವ ಮೂಲಕ ಎರಡನ್ನೂ ಸುಲಭವಾಗಿ ಜೋಡಣೆ ಮಾಡಬಹುದು. ಪ್ಯಾನ್ ಅನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಲು ತೆರಿಗೆದಾರರು UIDPAN <SPACE> <12 ಸಂಖ್ಯೆಯ ಆಧಾರ್> <ಸ್ಪೇಸ್> <10 ಅಂಕಿಯ PAN> ಟೈಪ್ ಮಾಡುವ ಮೂಲಕ ಎಸ್‌ಎಂಎಸ್ ಕಳುಹಿಸಬೇಕು. ಪ್ರಾತಿನಿಧ್ಯಕ್ಕಾಗಿ, ಈ ಎಸ್ಸೆಮ್ಮೆಸ್ ಅನ್ನು ಉಲ್ಲೇಖಿಸಬಹುದು: UIDPAN 0000011112222 AAAPA7777Q.

ಮೇಲೆ ತಿಳಿಸಿದ ಸಂಖ್ಯೆಗಳಿಗೆ ಎಸ್‌ಎಂಎಸ್ ಕಳುಹಿಸಿದ ನಂತರ, ತೆರಿಗೆದಾರರ ಹೆಸರು ಮತ್ತು ಹುಟ್ಟಿದ ದಿನಾಂಕ ಎರಡೂ ದಾಖಲೆಗಳಲ್ಲಿ ಉಲ್ಲೇಖಿಸಿದಂತೆ ಆಧಾರ್ ಸಂಖ್ಯೆಯನ್ನು ಪ್ಯಾನ್ ಸಂಖ್ಯೆಗೆ ಜೋಡಣೆ ಮಾಡಲಾಗುತ್ತದೆ.

ವೆಬ್‌ಸೈಟ್ ಮೂಲಕ ತೆರಿಗೆದಾರರು ಆದಾಯ ತೆರಿಗೆ ಇಲಾಖೆಯ ಹೊಸ ಇ-ಫೈಲಿಂಗ್ ಪೋರ್ಟಲ್- incometaxindiaefiling.gov.inಗೆ ಭೇಟಿ ನೀಡಬಹುದು. ಪೋರ್ಟಲ್ ಸೇವೆಗಳ ಪಟ್ಟಿಯಲ್ಲಿ ‘ಲಿಂಕ್ ಆಧಾರ್’ ವಿಭಾಗವನ್ನು ತೋರಿಸುತ್ತದೆ. ಆ ಲಿಂಕ್ ಅನ್ನು ಕ್ಲಿಕ್ ಮಾಡಿದ ನಂತರ, ತೆರಿಗೆದಾರರು ಹೆಸರು, ಪ್ಯಾನ್ ಕಾರ್ಡ್ ಸಂಖ್ಯೆ, ಆಧಾರ್ ಸಂಖ್ಯೆಯಂತಹ ಬಳಕೆದಾರರ ವಿವರಗಳ ಅಗತ್ಯವಿರುವ ಪುಟಕ್ಕೆ ರೀ ಡೈರೆಕ್ಟ್​ ಮಾಡಲಾಗುತ್ತದೆ. ನಿಖರವಾದ ಅಗತ್ಯವಿರುವ ಮಾಹಿತಿಯನ್ನು ನಮೂದಿಸಿದ ನಂತರ, ವಿವರಗಳನ್ನು ವ್ಯಾಲಿಡೇಟ್​ ಮಾಡಲಾಗುತ್ತದೆ ಮತ್ತು ದಾಖಲೆಗಳನ್ನು ಜೋಡಣೆ ಮಾಡಲಾಗುತ್ತದೆ.

ಇದನ್ನೂ ಓದಿ: Aadhaar Card: ಆಧಾರ್​ನಲ್ಲಿ ಫೋಟೋ ಅಪ್​ಡೇಟ್ ಮಾಡುವುದು ಹೇಗೆ? ಇಲ್ಲಿದೆ ಹಂತಹಂತವಾದ ಮಾಹಿತಿ

(Aadhaar PAN Linking Deadline Extended By Central Government Till March 31 2022)

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು