Kannada News Business Aadhaar PAN Linking not yet done go through that Your Card May Also Get Deleted From Next Year latest business news in Kannada
ಇನ್ನೂ ಆಧಾರ್, ಪ್ಯಾನ್ ಲಿಂಕ್ ಮಾಡಿಲ್ಲವೇ? ಬೇಗ ಮಾಡಿ; ಇಲ್ಲವಾದರೆ ನಿಷ್ಕ್ರಿಯವಾಗಲಿದೆ ಪ್ಯಾನ್ ಕಾರ್ಡ್
ಪ್ಯಾನ್ ಹೊಂದಿರುವವರಿಗೆ ಆಧಾರ್‌ನೊಂದಿಗೆ ಅದನ್ನು ಲಿಂಕ್ ಮಾಡಲು ಕೊನೆಯ ದಿನಾಂಕ 2023ರ ಮಾರ್ಚ್ 31 ಕೊನೆಯ ದಿನವಾಗಿದೆ. ಅಷ್ಟರೊಳಗೆ ಲಿಂಕ್ ಮಾಡದಿದ್ದರೆ, ಪ್ಯಾನ್ ನಿಷ್ಕ್ರಿಯವಾಗಲಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ ಹೇಳಿದೆ.
ನವದೆಹಲಿ: ಆಧಾರ್ ಕಾರ್ಡ್ (Aadhaar Card) ಮತ್ತು ಪ್ಯಾನ್ ಕಾರ್ಡ್ (PAN card) ಅನ್ನು 2023ರ ಮಾರ್ಚ್ 31ರ ಒಳಗೆ ಲಿಂಕ್ ಮಾಡದಿದ್ದರೆ ಅಂಥವರ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (CBDT) ತಿಳಿಸಿದೆ. 2022ರ ಮಾರ್ಚ್ 31ರ ಒಳಗಾಗಿ ಲಿಂಕ್ ಮಾಡದವರಿಗೆ ಈಗಾಗಲೇ 1,000 ರೂ. ದಂಡ ವಿಧಿಸಲಾಗುತ್ತಿದೆ. ಆದಾಗ್ಯೂ, 2023ರಲ್ಲಿ ಅದು ನಿಷ್ಕ್ರಿಯವಾಗುವವರೆಗೆ ಪ್ಯಾನ್ ಕಾರ್ಡ್ ಅನ್ನು ಬಳಸಲು ಅನುಮತಿಸಲಾಗುತ್ತದೆ ಎಂದು ಮಂಡಳಿ ಹೇಳಿದೆ. ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಲು ವಿಧಿಸಿದ್ದ ಗಡುವನ್ನು ಮಂಡಳಿಯು ಹಲವು ಬಾರಿ ವಿಸ್ತರಣೆ ಮಾಡಿದೆ. ಎರಡೂ ಕಾರ್ಡ್ಗಳ ಲಿಂಕ್ ಮಾಡುವುದಕ್ಕೆ 2022ರ ಮಾರ್ಚ್ 31ರ ಗಡುವು ನೀಡಲಾಗಿತ್ತು. ಈ ಗಡುವಿನ ಒಳಗೆ ಲಿಂಕ್ ಮಾಡದವರು ಈಗ ದಂಡ ಪಾವತಿಸುವ ಮೂಲಕ ಲಿಂಕ್ ಮಾಡುವ ಅವಕಾಶ ಹೊಂದಿದ್ದಾರೆ. ಆದರೆ, 2023ರ ಮಾರ್ಚ್ 31ರ ಬಳಿಕ ಈ ಅವಕಾಶವೂ ಇಲ್ಲವಾಗಲಿದೆ.
ಈ ವಿಚಾರವಾಗಿ ಎಚ್ಚರಿಕೆ ನೀಡಿ ಆದಾಯ ತೆರಿಗೆ ಇಲಾಖೆ ಟ್ವೀಟ್ ಮಾಡಿದೆ. ‘ಆದಾಯ ತೆರಿಗೆ ಕಾಯ್ದೆ, 1961 ರ ಪ್ರಕಾರ, ವಿನಾಯಿತಿ ಪಡೆದ ವರ್ಗದಲ್ಲಿ ಬರದ ಎಲ್ಲಾ ಪ್ಯಾನ್ ಹೊಂದಿರುವವರಿಗೆ ಆಧಾರ್‌ನೊಂದಿಗೆ ಅದನ್ನು ಲಿಂಕ್ ಮಾಡಲು ಕೊನೆಯ ದಿನಾಂಕ 2023ರ ಮಾರ್ಚ್ 31 ಕೊನೆಯ ದಿನವಾಗಿದೆ. ಅಷ್ಟರೊಳಗೆ ಲಿಂಕ್ ಮಾಡದಿದ್ದರೆ, ಪ್ಯಾನ್ ನಿಷ್ಕ್ರಿಯವಾಗಲಿದೆ. ತಡ ಮಾಡಬೇಡಿ, ಇಂದೇ ಲಿಂಕ್ ಮಾಡಿ’ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಲಾಗಿದೆ.
आयकर अधिनियम, 1961 के अनुसार, पैन को आधार से लिंक करने की अंतिम तिथि, उन सभी पैन धारकों के लिए जो छूट की श्रेणी में नहीं आते हैं, 31.3.2023 है। पैन को आधार से लिंक न करने पर पैन निष्क्रिय हो जाएगा।
देर न करें, आज ही लिंक करें! pic.twitter.com/mrtqP7nqNL
ಇದನ್ನೂ ಓದಿ
ಯುಪಿಐ ಮೂಲಕ ಎಟಿಎಂನಿಂದ ಹಣ ವಿತ್ಡ್ರಾ ಮಾಡುವುದು ಹೇಗೆ? ಇಲ್ಲಿದೆ ಪೂರ್ಣ ಮಾಹಿತಿ
ಇ-ಕಾಮರ್ಸ್ ವೆಬ್ಸೈಟ್ಗಳಲ್ಲಿ ನಕಲಿ ರಿವ್ಯೂಗೆ ಬೀಳಲಿದೆ ಕಡಿವಾಣ; ಶೀಘ್ರದಲ್ಲೇ ಬರಲಿದೆ ನಿಯಮ
It Jobs; ಐಟಿ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ? ಶೀಘ್ರದಲ್ಲೇ ನಿಮಗಿದೆ ಸಿಹಿ ಸುದ್ದಿ
ಡಿಜಿಟಲ್ ಪಾವತಿಗೆ ಶುಲ್ಕ: ರಿಸರ್ವ್ ಬ್ಯಾಂಕ್ ಜೊತೆಗೆ ಮಾತುಕತೆ ಆರಂಭಿಸಿದ ಪೇಮೆಂಟ್ಸ್ ಕಾರ್ಪೊರೇಷನ್