AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadhaar: ಆಧಾರ್ ಅಪ್​ಡೇಶನ್; ಡೆಡ್​ಲೈನ್​ಗೆ ಕೆಲವೇ ದಿನ; ಜೂನ್ 14ರೊಳಗೆ ಹೇಗೆ ಮಾಡುವುದು? ಅಪ್​ಡೇಟ್ ಮಾಡದಿದ್ದರೆ ಮುಂದೇನು?

June 14 Deadline For Free Aadhaar Update: ಆಧಾರ್ ಕಾರ್ಡ್ ಅನ್ನು ಯಾವುದೇ ಶುಲ್ಕ ಇಲ್ಲದೇ ಅಪ್​ಡೇಟ್ ಮಾಡಬೇಕೆನ್ನುವವರಿಗೆ ಜೂನ್ 14ರವರೆಗೂ ಕಾಲಾವಕಾಶ ಕೊಡಲಾಗಿದೆ. ಮೈ ಆಧಾರ್ ಪೋರ್ಟಲ್​ನಲ್ಲಿ ಮಾತ್ರ ಈ ಸೌಲಭ್ಯ ಇದೆ.

Aadhaar: ಆಧಾರ್ ಅಪ್​ಡೇಶನ್; ಡೆಡ್​ಲೈನ್​ಗೆ ಕೆಲವೇ ದಿನ; ಜೂನ್ 14ರೊಳಗೆ ಹೇಗೆ ಮಾಡುವುದು? ಅಪ್​ಡೇಟ್ ಮಾಡದಿದ್ದರೆ ಮುಂದೇನು?
ಆಧಾರ್ ಕಾರ್ಡ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 09, 2023 | 3:48 PM

Share

ಬೆಂಗಳೂರು: 10 ವರ್ಷಕ್ಕಿಂತ ಹೆಚ್ಚು ಕಾಲದಿಂದ ಅಪ್​ಡೇಟ್ ಆಗದೇ ಇರುವ ಆಧಾರ್ ಕಾರ್ಡನ್ನು ಅಪ್​ಡೇಟ್ (Aadhaar Card Updation) ಮಾಡುವಂತೆ ಸರ್ಕಾರ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಕೋಟ್ಯಂತರ ಜನರು ಆಧಾರ್ ಕಾರ್ಡ್​ನಲ್ಲಿರುವ ತಮ್ಮ ಮಾಹಿತಿಯನ್ನು ನವೀಕರಿಸುವ ಕೆಲಸ ಮಾಡುತ್ತಿದ್ದಾರೆ. ಆಧಾರ್ ಕೇಂದ್ರಕ್ಕೆ ಹೋಗಿ 50 ರೂ ಕೊಟ್ಟು ನಮ್ಮ ಡೆಮಾಗ್ರಾಫಿಕ್ ಮಾಹಿತಿ ಅಪ್​ಡೇಟ್ ಮಾಡಬಹುದು. ಆದರೆ, ಹೆಚ್ಚಿನ ಜನರು ಶೀಘ್ರದಲ್ಲಿ ಈ ಅಪ್​ಡೇಟ್ ಮಾಡಲು ಸಾಧ್ಯವಾಗುವಂತೆ ಆನ್​ಲೈನ್​ನಲ್ಲೂ ಅವಕಾಶ ಮಾಡಿಕೊಡಲಾಗಿದೆ. ಜೂನ್ 14ರವರೆಗೂ ನೀವು ಆನ್​ಲೈನ್​ನಲ್ಲಿ ಉಚಿತವಾಗಿ ಆಧಾರ್ ಅಪ್​ಡೇಟ್ ಮಾಡಬಹುದು. ಯಾವುದೇ ಶುಲ್ಕ ಪಾವತಿಸಬೇಕಿಲ್ಲ. ಇದು ಯುಐಡಿಎಐನ ಅಧಿಕೃತ ವೆಬ್​ಸೈಟ್​ನಲ್ಲಿ (UIDAI Website) ಇರುವ ಆಫರ್. ಇನ್ನೈದು ದಿನದಲ್ಲಿ ಈ ಆಫರ್ ಮುಗಿಯುತ್ತದೆ. ಜೂನ್ 14ರವರೆಗೂ ಉಚಿತವಾಗಿ ನಮ್ಮ ಆಧಾರ್​ನ ಡೆಮೋಗ್ರಾಫಿಕ್ ವಿವರಗಳನ್ನು ಅಪ್​ಡೇಟ್ ಮಾಡಬಹುದು. ಡೆಮಾಗ್ರಾಫಿಕ್ ವಿವರ ಎಂದರೆ ನಮ್ಮ ವಿಳಾಸ, ಹೆಸರು, ಜನ್ಮದಿನಾಂಕ ಇತ್ಯಾದಿ. ಆದರೆ, ಈ ಉಚಿತ ಸೇವೆ ಕೇವಲ ಮೈ ಆಧಾರ್ ಪೋರ್ಟಲ್​ನಲ್ಲಿ ಮಾತ್ರವೇ.

10 ವರ್ಷ ಬಳಿಕ ಅಧಾರ್ ಕಾರ್ಡ್ ಅಪ್​ಡೇಟ್ ಆಗಬೇಕು ಎಂದಿದೆ ಸರ್ಕಾರ

ನಮ್ಮಲ್ಲಿ ಹೆಚ್ಚಿನ ಜನರು ಆಧಾರ್ ಕಾರ್ಡ್ ಮಾಡಿಸಿದಾಗಿನಿಂದ ಒಮ್ಮೆಯೂ ಅಪ್​ಡೇಟ್ ಮಾಡಿಲ್ಲ. 10 ವರ್ಷಗಳಿಂದ ಅಪ್​ಡೇಟ್ ಆಗದ ಆಧಾರ್ ಕಾರ್ಡ್ ಅನ್ನು ಅಪ್​ಡೇಟ್ ಮಾಡಬೇಕೆಂದು ಸರ್ಕಾರ ಜನಸಾಮಾನ್ಯರಿಗೆ ಸೂಚಿಸಿದೆ. ಐಡಿ ಪ್ರೂಫ್, ಅಡ್ರೆಸ್ ಪ್ರೂಫ್ ದಾಖಲೆಗಳನ್ನು ಆಧಾರ್​ಗೆ ಮತ್ತೊಮ್ಮೆ ಸಲ್ಲಿಸಬೇಕಾಗುತ್ತದೆ. ಇದರಿಂದ ಆಧಾರ್ ಡಾಟಾಬೇಸ್​ನಲ್ಲಿ ಸಮರ್ಪಕ ಮಾಹಿತಿ ಸಂಗ್ರಹವಾಗಿರುತ್ತದೆ.

ಜೂನ್ 14ರೊಳಗೆ ಆಧಾರ್ ಅಪ್​ಡೇಟ್ ಮಾಡದಿದ್ದರೆ…?

ಜೂನ್ 14ರೊಳಗೆ ಆಧಾರ್ ಕಾರ್ಡ್ ಅಪ್​ಡೇಟ್ ಮಾಡದೇ ಹೋದರೆ ಉಚಿತ ಎಂಬುದು ರದ್ದಾಗುವುದು ಬಿಟ್ಟರೆ ಬೇರೇನೂ ವ್ಯತ್ಯಾಸವಾಗದು. ಮಾಮೂಲಿಯ ರೀತಿಯಲ್ಲಿ ನೀವು ಆಧಾರ್ ಸೆಂಟರ್​ಗೆ ಹೋಗಿ ಆಧಾರ್ ವಿವರ ಅಪ್​ಡೇಟ್ ಮಾಡಿಸಬೇಕೆಂದರೆ 50 ರೂ ಶುಲ್ಕ ಪಾವತಿಸಲೇಬೇಕು. ಜೂನ್ 14ರ ನಂತರ ಮೈ ಆಧಾರ್ ಪೋರ್ಟಲ್​ನಲ್ಲೂ ನೀವು 50 ರೂ ಶುಲ್ಕ ಪಾವತಿಸಿಯೇ ಆಧಾರ್ ಅಪ್​ಡೇಶನ್ ಮಾಡಬೇಕಾಗುತ್ತದೆ.

ಇದನ್ನೂ ಓದಿHotstar Free: ಕ್ರಿಕೆಟ್ ಪ್ರಿಯರಿಗೆ ಖುಷಿ ಸುದ್ದಿ; ಜಿಯೋ ಹಾದಿ ಹಿಡಿದ ಹಾಟ್​ಸ್ಟಾರ್; ಏಷ್ಯಾಕಪ್, ವಿಶ್ವಕಪ್ ಫ್ರೀ ಸ್ಟ್ರೀಮಿಂಗ್

ಆನ್​ಲೈನ್​ನಲ್ಲಿ ಉಚಿತವಾಗಿ ಆಧಾರ್ ಅಪ್​ಡೇಟ್ ಮಾಡುವುದು ಹೇಗೆ?

  • ಮೈ ಆಧಾರ್​ನ ಅಧಿಕೃತ ಪೋರ್ಟಲ್​ myaadhaar.uidai.gov.inಗೆ ಹೋಗಿ ಆಧಾರ್ ನಂಬರ್ ಬಳಸಿ ಲಾಗಿನ್ ಅಗಬೇಕು.
  • ಪ್ರೊಸೀಡ್ ಟು ಅಪ್​ಡೇಟ್ ಅಡ್ರೆಸ್ ಎಂಬ ಅಯ್ಕೆ ಆರಿಸಿಕೊಳ್ಳಿ
  • ಈಗ ನಿಮ್ಮ ಅಧಾರ್ ನೊಂದಾಯಿತ ಮೊಬೈಲ್​ಗೆ ಓಟಿಪಿ ಬರುತ್ತದೆ.
  • ಒಟಿಪಿ ಹಾಕಿದ ಬಳಿಕ ಡಾಕ್ಯುಮೆಂಟ್ ಅಪ್​ಡೆಟ್ ಮೇಲೆ ಕ್ಲಿಕ್ ಮಾಡಿ.
  • ಈಗ ವ್ಯಕ್ತಿಯ ವಿವರ ಕಾಣಿಸುತ್ತದೆ. ಅದು ಸರಿಯಾಗಿದ್ದರೆ ಮುಂದಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಬಳಿಕ ಐಡಿ ಮತ್ತು ಅಡ್ರೆಸ್ ಪ್ರೂಫ್ ದಾಖಲೆಗಳನ್ನು ಆಯ್ದುಕೊಳ್ಳಿ.
  • ನೀವು ಸ್ಕ್ಯಾನ್ ಮಾಡಿದ ಈ ದಾಖಲೆಗಳ ಪ್ರತಿತಿಯನ್ನು ಅಪ್​ಲೋಡ್ ಮಾಡಿ
  • ಈಗ ನಿಮ್ಮ ಮನವಿ ಸ್ವೀಕೃತವಾಗುತ್ತದೆ. 14 ಅಂಕಿಗಳ ಯುಆರ್​ಎನ್ ನಂಬರ್ ಜನರೇಟ್ ಆಗುತ್ತದೆ.

ಕೆಲ ದಿನಗಳ ಬಳಿಕ ಆಧಾರ್ ಕಾರ್ಡ್​ನಲ್ಲಿ ನಿಮ್ಮ ಹೊಸ ಮಾಹಿತಿ ಅಪ್​ಡೇಟ್ ಆಗಿರುತ್ತದೆ. ಅದನ್ನು ನೀವು ಯುಆರ್​ಎನ್ ನಂಬರ್ ಬಳಸಿ ಟ್ರ್ಯಾಕ್ ಮಾಡಬಹುದು. ಅಪ್​ಡೇಟ್ ಆದ ಆಧಾರ್ ಕಾರ್ಡ್​ನ ಪ್ರಿಂಟೌಟ್ ಪಡೆದು ನಿಮ್ಮ ಬಳಿ ಇಟ್ಟುಕೊಳ್ಳಿ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?