ಅಮೆರಿಕದ ಚಾರ್ಜ್​ಶೀಟ್​ನಲ್ಲಿ ಗೌತಮ್ ಅದಾನಿ ವಿರುದ್ಧ ಲಂಚದ ಆರೋಪವಿಲ್ಲ: ಅದಾನಿ ಗ್ರೀನ್ ಸ್ಪಷ್ಟನೆ

ಗೌತಮ್ ಅದಾನಿ, ಸಾಗರ್ ಅದಾನಿ ಅಥವಾ ವಿನೀತ್ ಜೈನ್ ವಿರುದ್ಧ ಅಮೆರಿಕದಲ್ಲಿ ಯಾವುದೇ ಲಂಚದ ಆರೋಪವಿಲ್ಲ ಎಂದು ಅದಾನಿ ಗ್ರೂಪ್ ಕಂಪನಿ ಅದಾನಿ ಗ್ರೀನ್ ಷೇರು ಮಾರುಕಟ್ಟೆ ಫೈಲಿಂಗ್‌ನಲ್ಲಿ ಸ್ಪಷ್ಟಪಡಿಸಿದೆ. ಯುಎಸ್ ನ್ಯಾಯಾಂಗ ಇಲಾಖೆಯ ಪ್ರಾಸಿಕ್ಯೂಷನ್‌ನಲ್ಲಿ, ಅಜುರೆ ಮತ್ತು ಸಿಡಿಪಿಕ್ಯು ಅಧಿಕಾರಿಗಳು ಮಾತ್ರ ಲಂಚದ ಆರೋಪ ಎದುರಿಸುತ್ತಿದ್ದಾರೆ ಎಂದು ಕಂಪನಿ ಹೇಳಿದೆ. ಇದರ ಬೆನ್ನಲ್ಲೇ ಭಾರತದ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಮತ್ತು ರಾಜ್ಯಸಭಾ ಸಂಸದ ಮತ್ತು ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ಅದಾನಿ ಬೆಂಬಲಕ್ಕೆ ಬಂದಿದ್ದಾರೆ.

ಅಮೆರಿಕದ ಚಾರ್ಜ್​ಶೀಟ್​ನಲ್ಲಿ ಗೌತಮ್ ಅದಾನಿ ವಿರುದ್ಧ ಲಂಚದ ಆರೋಪವಿಲ್ಲ: ಅದಾನಿ ಗ್ರೀನ್ ಸ್ಪಷ್ಟನೆ
ಗೌತಮ್ ಅದಾನಿ
Follow us
Ganapathi Sharma
|

Updated on:Nov 27, 2024 | 12:31 PM

ನವದೆಹಲಿ, ನವೆಂಬರ್ 27: ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧ ಅಮೆರಿಕದಲ್ಲಿ ಕೇಳಿಬಂದಿರುವ ಲಂಚದ ಆರೋಪ ಸಂಬಂಧ ಅದಾನಿ ಗ್ರೂಪ್ ಕಂಪನಿ​ ಇದೇ ಮೊದಲ ಬಾರಿಗೆ ಸ್ಪಷ್ಟನೆ ನೀಡಿದೆ. ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ಧದ ಆರೋಪಗಳು ಸಂಪೂರ್ಣ ಸುಳ್ಳು ಎಂದು ಅದಾನಿ ಗ್ರೀನ್ ಕಂಪನಿ ಹೇಳಿದೆ. ಇದರ ಜತೆಗೇ, ಭಾರತದ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಮತ್ತು ರಾಜ್ಯಸಭಾ ಸಂಸದ ಮತ್ತು ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ಕೂಡ ಅದಾನಿ ಬೆಂಬಲಕ್ಕೆ ನಿಂತಿದ್ದಾರೆ.

ಅದಾನಿ ಗ್ರೀನ್ ಎನರ್ಜಿ ಬುಧವಾರ ಷೇರು ಮಾರುಕಟ್ಟೆ ಫೈಲಿಂಗ್‌ನಲ್ಲಿ ಸ್ಪಷ್ಟನೆ ನೀಡಿದ್ದು, ಲಂಚದ ಆರೋಪಗಳ ಸುದ್ದಿ ಸುಳ್ಳು ಮತ್ತು ಆಧಾರರಹಿತ ಎಂದಿದೆ. ಯುಎಸ್ ಫೆಡರಲ್ ಕರಪ್ಶನ್ ಪ್ರಾಕ್ಟೀಸಸ್ ಆಕ್ಟ್ ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂಬ ಸುದ್ದಿ ಸಂಪೂರ್ಣವಾಗಿ ತಪ್ಪು ಎಂದು ಹೇಳಿದೆ.

ಅದಾನಿ ವಿರುದ್ಧ ಅಮೆರಿಕದ ವಿದೇಶಿ ಭ್ರಷ್ಟಾಚಾರ ಕಾಯ್ದೆಯಡಿ ಲಂಚದ ಆರೋಪ ಹೊರಿಸಲಾಗಿಲ್ಲ. ಅಮೆರಿಕದಲ್ಲಿ ಹೊರಿಸಲಾಗಿರುವ ದೋಷಾರೋಪಗಳು ಸೆಕ್ಯುರಿಟೀಸ್ ಮತ್ತು ವಂಚನೆಗೆ ಸಂಬಂಧಿಸಿದ್ದಾಗಿವೆ ಎಂದು ಕಂಪನಿ ಸ್ಪಷ್ಟಪಡಿಸಿದೆ.

ಅದಾನಿ ಗ್ರೂಪ್ ಹೇಳಿದ್ದೇನು?

ಗೌತಮ್ ಅದಾನಿ, ಸಾಗರ್ ಅದಾನಿ ಅಥವಾ ವಿನೀತ್ ಜೈನ್ ವಿರುದ್ಧ ಯಾವುದೇ ಲಂಚದ ಆರೋಪವಿಲ್ಲ. ಯುಎಸ್ ನ್ಯಾಯಾಂಗ ಇಲಾಖೆಯ ಪ್ರಾಸಿಕ್ಯೂಷನ್‌ನಲ್ಲಿ, ಅಲ್ಲಿನ ಅಧಿಕಾರಿಗಳು ಲಂಚದ ಆರೋಪ ಎದುರಿಸುತ್ತಿರುವ ಬಗ್ಗೆ ಉಲ್ಲೇಖವಿದೆ. ಅದಾನಿ ಗ್ರೂಪ್ ಕಂಪನಿ ಮತ್ತು ಅದರ ಅಧಿಕಾರಿಗಳ ವಿರುದ್ಧ ಲಂಚ ಮತ್ತು ಭ್ರಷ್ಟಾಚಾರ ಆರೋಪಗಳ ವರದಿಗಳು ಸಂಪೂರ್ಣವಾಗಿ ಸುಳ್ಳು ಎಂದು ಅದಾನಿ ಗ್ರೂಪ್ ಹೇಳಿದೆ.

ಅದಾನಿ ವಿರುದ್ಧದ ಆರೋಪ ಏನು?

ನ್ಯೂಯಾರ್ಕ್​ನ ಫೆಡರಲ್ ಕೋರ್ಟ್ ವಿಚಾರಣೆ ವೇಳೆ, ಗೌತಮ್ ಅದಾನಿ ಕಂಪನಿಯು ಅಮೆರಿಕದ ಹೂಡಿಕೆದಾರರನ್ನು ವಂಚಿಸಿದೆ ಎಂದು ಆರೋಪಿಸಿದ ಬಗ್ಗೆ ವರದಿಯಾಗಿತ್ತು. ಅದಾನಿ ಗ್ರೀನ್ ಎನರ್ಜಿ ಮತ್ತು ಅಜುರೆ ಪವರ್ ಸಂಸ್ಥೆಗಳು 2020 ಮತ್ತು 2024 ರ ನಡುವೆ ಸೌರ ಶಕ್ತಿ ಯೋಜನೆಗಳನ್ನು ಪಡೆಯಲು ಭಾರತೀಯ ಅಧಿಕಾರಿಗಳಿಗೆ 265 ಮಿಲಿಯನ್ ಡಾಲರ್ ಮೌಲ್ಯದ ಲಂಚವನ್ನು ನೀಡಲಾಗಿದೆ ಎಂದು ಆರೋಪಿಸಲಾಗಿತ್ತು.

ಅದಾನಿ ಬೆಂಬಲಕ್ಕೆ ನಿಂತ ಮುಕುಲ್ ರೋಹಟಗಿ, ಮಹೇಶ್ ಜೇಠ್ಮಲಾನಿ

ವಿಶೇಷವೆಂದರೆ, ಈ ವಿಚಾರದಲ್ಲಿ ಭಾರತದ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಮತ್ತು ರಾಜ್ಯಸಭಾ ಸಂಸದ ಮತ್ತು ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ಅದಾನಿ ಬೆಂಬಲಕ್ಕೆ ಬಂದಿದ್ದಾರೆ. ಉಭಯರೂ ಪತ್ರಿಕಾಗೋಷ್ಠಿ ನಡೆಸಿ, ಅದಾನಿ ವಿರುದ್ಧದ ಆರೋಪಗಳಲ್ಲಿ ಹುರುಳಿಲ್ಲ ಎಂದಿದ್ದಾರೆ. ಅಮೆರಿಕದಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ಧ ಯಾವುದೇ ಆರೋಪ ಮಾಡಿಲ್ಲ. ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ಧ ಭ್ರಷ್ಟಾಚಾರ ಕಾಯ್ದೆಯ ಅಡಿ ಯಾವುದೇ ಆರೋಪಗಳಿಲ್ಲ ಎಂದು ಅವರು ಹೇಳಿದ್ದಾರೆ. ಸೆಕ್ಷನ್ 5 ರ ಅಡಿಯಲ್ಲಿ ಈ ಇಬ್ಬರ ಹೆಸರುಗಳನ್ನು ಒಳಗೊಂಡಿಲ್ಲ, ಆದರೆ ಕೆಲವು ವಿದೇಶಿಯರ ಹೆಸರುಗಳು ಇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅದಾನಿ ಸೇರಿ 8 ಮಂದಿ ವಿರುದ್ಧ ಅಮೆರಿಕದಲ್ಲಿ ವಂಚನೆ ಆರೋಪ ದಾಖಲು; ಗೌತಮ್, ಸಾಗರ್ ಅದಾನಿ ವಿರುದ್ಧ ಅರೆಸ್ಟ್ ವಾರಂಟ್

ಆರೋಪಗಳಿಗೆ ನಂಬಲರ್ಹವಾದ ಪುರಾವೆಗಳು ಮತ್ತು ನಿರ್ದಿಷ್ಟತೆಯಿಲ್ಲ ಎಂದು ಮುಕುಲ್ ರೋಹಟಗಿ ಹೇಳಿದ್ದಾರೆ. ನಾನು ಅಮೆರಿಕದ ನ್ಯಾಯಾಲಯ ದೋಷಾರೋಪಣೆಯನ್ನು ಸೂಕ್ಷ್ಮವಾಗಿ ಅವಲೋಕಿಸಿದ್ದೇನೆ. ಅದರಲ್ಲಿ ನನಗೆ ಕಂಡುಬಂದ ಪ್ರಕಾರ, ಅದಾನಿ ಅಥವಾ ಅವರ ಸೋದರಳಿಯನ ವಿರುದ್ಧ ಆರೋಪ ಮಾಡಲಾಗಿಲ್ಲ ಎಂದು ಮುಕುಲ್ ರೋಹಟಗಿ ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:51 am, Wed, 27 November 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ