AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adani case: 18 ಮಿಲಿಯನ್ ಡಾಲರ್ ದಂಡ ಪಾವತಿಸುವ ಎಸ್​​ಇಸಿ ಪ್ರಸ್ತಾವಕ್ಕೆ ಅದಾನಿ ಒಪ್ಪಿಗೆ

Adani SEC Settlement: ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ಅವರಿಗೆ $18 ಮಿಲಿಯನ್ (170 ಕೋಟಿ ರೂ) ದಂಡ ವಿಧಿಸಲು ಅಮೆರಿಕದ SEC ಪ್ರಸ್ತಾಪಿಸಿದೆ. 2021ರ ಅದಾನಿ ಗ್ರೀನ್ ಎನರ್ಜಿ ಬಾಂಡ್ ಆಫರಿಂಗ್ ವೇಳೆ ತಪ್ಪು ಮಾಹಿತಿ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಈ ಒಪ್ಪಂದ. ಇದು ಕೇವಲ ಸಿವಿಲ್ ಪ್ರಕರಣವಾಗಿದ್ದು, ಅದಾನಿ ಗ್ರೂಪ್‌ಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಂಡವಾಳ ಹೂಡಿಕೆಗೆ ದಾರಿ ಸುಗಮಗೊಳಿಸುತ್ತದೆ.

Adani case: 18 ಮಿಲಿಯನ್ ಡಾಲರ್ ದಂಡ ಪಾವತಿಸುವ ಎಸ್​​ಇಸಿ ಪ್ರಸ್ತಾವಕ್ಕೆ ಅದಾನಿ ಒಪ್ಪಿಗೆ
ಗೌತಮ್ ಅದಾನಿImage Credit source: Alamy
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 15, 2026 | 2:24 PM

Share

ವಾಷಿಂಗ್ಟನ್, ಮೇ 15: ಐದು ವರ್ಷದ ಹಿಂದಿನ ಪ್ರಕರಣ ಸಂಬಂಧ ಭಾರತದ ಉದ್ಯಮಿಗಳಾದ ಗೌತಮ್ ಅದಾನಿ (Gautam Adani) ಮತ್ತು ಅವರ ಸೋದರನ ಮಗ ಸಾಗರ್ ಅದಾನಿ (Sagar Adani) ಅವರಿಬ್ಬರಿಗೆ ಸೇರಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂ) ದಂಡ ವಿಧಿಸಲು ಅಮೆರಿಕದ ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಎಸ್​ಇಸಿ ಪ್ರಸ್ತಾಪಿಸಿದೆ. ವರದಿ ಪ್ರಕಾರ ಈ ದಂಡ ಪಾವತಿಸಲು ಅದಾನಿಗಳು ಸಮ್ಮತಿಸಿದ್ದಾರೆ ಎನ್ನಲಾಗಿದೆ. 2021ರಲ್ಲಿ ಅದಾನಿ ಗ್ರೀನ್ ಎನರ್ಜಿ ಸಂಸ್ಥೆಯ ಬಾಂಡ್ ಆಫರಿಂಗ್ ವೇಳೆ ತಪ್ಪು ಮಾಹಿತಿ ನೀಡಿರುವ ಆರೋಪವು ಗೌತಮ್ ಅದಾನಿ ಹಾಗೂ ಸಾಗರ್ ಅದಾನಿ ಮೇಲೆ ಮಾಡಲಾಗಿದೆ. ಈ ಪ್ರಕರಣ ಇದು.

ಎಸ್​ಇಸಿ ಪ್ರಸ್ತಾಪಿಸಿರುವ ಈ ಒಪ್ಪಂದದ ಅಡಿಯಲ್ಲಿ ಗೌತಮ್ ಅದಾನಿ 6 ಮಿಲಿಯನ್ ಡಾಲರ್ ಮತ್ತು ಸಾಗರ್ ಅದಾನಿ 12 ಮಿಲಿಯನ್ ಡಾಲರ್ ದಂಡ ಪಾವತಿಸಲು ಒಪ್ಪಿದ್ದಾರೆ. ಈ ದಂಡದ ಪ್ರಸ್ತಾವನೆಯನ್ನು ಅಮೆರಿಕದ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು, ನ್ಯಾಯಾಧೀಶರ ಅಂತಿಮ ಅನುಮೋದನೆ ಬಾಕಿ ಇದೆ.

ಇದನ್ನೂ ಓದಿ: ಒರಾಕಲ್ ಲೇಆಫ್; 32,000 ಜನರನ್ನು ಕೆಲಸದಿಂದ ತೆಗೆದಿದ್ದಾಯ್ತು; ಕ್ಯಾಂಪಸ್ ಪ್ಲೇಸ್ಮೆಂಟ್ ನೇಮಕಾತಿಗಳಿಗೆ ಆಫರ್ ವಾಪಸ್

ಪ್ರಕರಣದ ಹಿನ್ನೆಲೆ

2024ರ ನವೆಂಬರ್‌ನಲ್ಲಿ ಎಸ್‌ಇಸಿ ಸಲ್ಲಿಸಿದ್ದ ದೂರಿನ ಪ್ರಕಾರ, ಅದಾನಿ ಗ್ರೀನ್ ಎನರ್ಜಿ ಸಂಸ್ಥೆಗೆ ಸೌರಶಕ್ತಿ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ನೂರಾರು ಮಿಲಿಯನ್ ಡಾಲರ್ ಲಂಚ ನೀಡುವ ಯೋಜನೆಯನ್ನು ಅದಾನಿ ಕುಟುಂಬ ರೂಪಿಸಿದೆ ಎಂದು ಆರೋಪಿಸಲಾಗಿತ್ತು. ಅಲ್ಲದೆ, ಅಮೆರಿಕದ ಹೂಡಿಕೆದಾರರಿಂದ ಹಣ ಸಂಗ್ರಹಿಸುವಾಗ ಕಂಪನಿಯು ಭ್ರಷ್ಟಾಚಾರ ಮುಕ್ತವಾಗಿದೆ ಎಂದು ಸುಳ್ಳು ಮಾಹಿತಿ ನೀಡಿದ ಆರೋಪವೂ ಇತ್ತು.

ಈ ದಂಡ ಪಾವತಿಯು ಕೇವಲ ‘ಸಿವಿಲ್’ (ನಾಗರಿಕ) ಪ್ರಕರಣಕ್ಕೆ ಸಂಬಂಧಿಸಿದೆ. ಈ ಒಪ್ಪಂದದ ಭಾಗವಾಗಿ ಅದಾನಿ ಅವರು ತಮ್ಮ ಮೇಲಿನ ಆರೋಪಗಳನ್ನು ಒಪ್ಪಿಕೊಂಡಿಲ್ಲ ಅಥವಾ ನಿರಾಕರಿಸಿಲ್ಲ (Neither admit nor deny). ಈ ಬೆಳವಣಿಗೆಯಿಂದಾಗಿ ಅದಾನಿ ಸಮೂಹವು ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮತ್ತೆ ಬಂಡವಾಳ ಹೂಡಿಕೆ ಪಡೆಯಲು ದಾರಿ ಸುಗಮವಾಗಲಿದೆ ಎಂದು ವಿಶ್ಲೇಷಿಸಲಾಗಿದೆ.

ಅಮೆರಿಕದ ನ್ಯಾಯಾಂಗ ಇಲಾಖೆ (DoJ) ಈ ಹಿಂದೆ ಗೌತಮ್ ಅದಾನಿ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ವಂಚನೆ ಮತ್ತು ಲಂಚದ ಆರೋಪಗಳನ್ನು ಕೈಬಿಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಇತ್ತೀಚೆಗೆ ಅದಾನಿ ಅವರ ಕಾನೂನು ತಂಡವು ಅಮೆರಿಕದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಒಪ್ಪಂದಕ್ಕೆ ಬಂದಿರುವ ಸೂಚನೆಗಳಿವೆ.

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಸಿಎನ್​ಜಿ ಕೆಜಿಗೆ 2 ರೂಪಾಯಿ ಹೆಚ್ಚಳ

ಅದಾನಿ ಗ್ರೂಪ್ ಕಂಪನಿಗಳ ಷೇರುಗಳಿಗೆ ಉತ್ತಮ ಸ್ಪಂದನೆ

ಅಮೆರಿಕದಲ್ಲಿ ಪ್ರಕರಣ ಇತ್ಯರ್ಥವಾಗುತ್ತಿರುವ ಸುದ್ದಿ ಹೊರಬೀಳುತ್ತಿದ್ದಂತೆ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಅದಾನಿ ಸಮೂಹದ ಕಂಪನಿಗಳ ಷೇರುಗಳ ಬೆಲೆ ಏರಿಕೆ ಕಂಡಿದೆ. ಒಟ್ಟಾರೆಯಾಗಿ, ಕಳೆದ ಕೆಲವು ತಿಂಗಳುಗಳಿಂದ ಅದಾನಿ ಸಮೂಹವನ್ನು ಬೆನ್ನಟ್ಟಿದ್ದ ಅಮೆರಿಕದ ಲಂಚದ ಪ್ರಕರಣವು ಈಗ ದಂಡ ಪಾವತಿಯೊಂದಿಗೆ ಅಂತ್ಯಗೊಳ್ಳುವ ಹಂತಕ್ಕೆ ತಲುಪಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ