AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adani One App: ವಿಮಾನ ನಿಲ್ದಾಣ ಸೇವೆಗಳಿಗಾಗಿ ಅದಾನಿ ಸಮೂಹದಿಂದ ಅದಾನಿ ವನ್ ಆ್ಯಪ್ ಬಿಡುಗಡೆ

ವಿಮಾನ ನಿಲ್ದಾಣಗಳನ್ನು ಕೇಂದ್ರೀಕರಿಸಿಕೊಂಡು ಗ್ರಾಹಕರಿಗೆ ಸೇವೆ ನೀಡಲು ಉದ್ಯಮಿ ಗೌತಮ್ ಅದಾನಿ ನೇತೃತ್ವದ ಅದಾನಿ ಸಮೂಹ ‘ಅದಾನಿ ವನ್’ ಆ್ಯಪ್ ಬಿಡುಗಡೆ ಮಾಡಿದೆ.

Adani One App: ವಿಮಾನ ನಿಲ್ದಾಣ ಸೇವೆಗಳಿಗಾಗಿ ಅದಾನಿ ಸಮೂಹದಿಂದ ಅದಾನಿ ವನ್ ಆ್ಯಪ್ ಬಿಡುಗಡೆ
ಅದಾನಿ ಸಮೂಹImage Credit source: Reuters
TV9 Web
| Edited By: |

Updated on:Dec 20, 2022 | 7:23 PM

Share

ನವದೆಹಲಿ: ವಿಮಾನ ನಿಲ್ದಾಣಗಳನ್ನು ಕೇಂದ್ರೀಕರಿಸಿಕೊಂಡು ಗ್ರಾಹಕರಿಗೆ ಸೇವೆ ನೀಡಲು ಉದ್ಯಮಿ ಗೌತಮ್ ಅದಾನಿ (Gautam Adani) ನೇತೃತ್ವದ ಅದಾನಿ ಸಮೂಹ (Adani group) ‘ಅದಾನಿ ವನ್ (Adani One app)’ ಆ್ಯಪ್ ಬಿಡುಗಡೆ ಮಾಡಿದೆ. ಈ ಕುರಿತು ಕಂಪನಿಯ ಮುಖ್ಯ ಡಿಜಿಟಲ್ ಅಧಿಕಾರಿ, ಹಿರಿಯ ಉಪಾಧ್ಯಕ್ಷ ನಿತಿನ್ ಸೇಥಿ ಮಾಹಿತಿ ನೀಡಿದ್ದಾರೆ. ಅದಾನಿ ವನ್ ಬಿಡುಗಡೆಯೊಂದಿಗೆ ನಮ್ಮ ಡಿಜಿಟಲ್ ಯಾನದಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದೇವೆ. ಸಾಂಪ್ರದಾಯಿಕ ಉದ್ಯಮಗಳಿಗೆ ಸಮಾನಾಂತರವಾಗಿ ಇದೂ ಸಹ ಕಾರ್ಯನಿರ್ವಹಿಸಲಿದೆ ಎಂದು ಸೇಥಿ ಹೇಳಿದ್ದಾರೆ.

ಈ ಆ್ಯಪ್ ಬಿಡುಗಡೆಯು ಗ್ರಾಹಕರ ಅಭಿಪ್ರಾಯಗಳು ಮತ್ತು ಪ್ರತಿಕ್ರಿಯೆಯನ್ನು ತಿಳಿಯುವ ಗುರಿ ಹೊಂದಿದೆ. ಈ ಮೂಲಕ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡಲು ಮತ್ತು ಅವರ ಅನುಭವವನ್ನು ಉತ್ತಮಗೊಸಲು ನಮಗೆ ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Holidays in 2023: 15 ಸುದೀರ್ಘ ವಾರಾಂತ್ಯಗಳು; ಇಲ್ಲಿದೆ 2023ರ ರಜೆ ವಿವರ

ಅದಾನಿ ವನ್ ಆ್ಯಪ್ ಪ್ರಯಾಣಿಕರಿಗೆ ಹೇಗೆ ನೆರವಾಗಲಿದೆ?

ವಿಮಾನಗಳ ಟಿಕೆಟ್ ಕಾಯ್ದಿರಿಸಲು, ಸುಂಕ ರಹಿತ ಅಂಗಡಿಗಳಿಂದ ಖರೀದಿ, ಕ್ಯಾಬ್​ ಬುಕ್ ಮಾಡಲು, ವಿಮಾನಗಳ ಸ್ಥಿತಿಗತಿ ಪರಿಶೀಲಿಸಲು ಹಾಗೂ ಅದಾನಿ ರಿವಾರ್ಡ್ಸ್ ಪ್ರಯೋಜನಗಳನ್ನು ಪಡೆದುಕೊಳ್ಳಲು ಅದಾನಿ ವನ್ ಆ್ಯಪ್ ನೆರವಾಗಲಿದೆ. ಚೆಕ್ ಇನ್ ಬ್ಯಾಗೇಜ್ ಅಸಿಸ್ಟೆನ್ಸ್​ನಂಥ ಸೇವೆಗಳನ್ನು ಪಡೆದುಕೊಳ್ಳಲೂ ಆ್ಯಪ್ ನೆರವಾಗಲಿದೆ ಎಂದು ಕಂಪನಿಯ ವೆಬ್​​ಸೈಟ್​ನಲ್ಲಿ ತಿಳಿಸಲಾಗಿದೆ.

ಅದಾನಿ ವನ್ ಆ್ಯಪ್ ಬಿಡುಗಡೆ ಮಾಡಿರುವುದು ಅದಾನಿ ಅವರ ಉದ್ದೇಶಿತ ‘ಸೂಪರ್ ಆ್ಯಪ್’ ಬಿಡುಗಡೆಗೆ ನೀಡಿರುವ ಸುಳಿವು ಆಗಿರಬಹುದು ಎನ್ನಲಾಗಿದೆ. ಮುಂದಿನ 3-6 ತಿಂಗಳುಗಳ ಒಳಗೆ ‘ಸೂಪರ್ ಆ್ಯಪ್’ ಬಿಡುಗಡೆ ಮಾಡುವುದಾಗಿ ಇತ್ತೀಚೆಗೆ ‘ಫೈನಾನ್ಶಿಯಲ್ ಟೈಮ್ಸ್’ಗೆ ನೀಡಿದ್ದ ಸಂದರ್ಶನದಲ್ಲಿ ಗೌತಮ್ ಅದಾನಿ ತಿಳಿಸಿದ್ದರು. ಅದಾನಿ ಸಮೂಹದ ಅದಾನಿ ಡಿಜಿಟಲ್ ಲ್ಯಾಬ್ಸ್ ಆ್ಯಪ್ ಅಭಿವೃದ್ಧಿಪಡಿಸುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:42 pm, Tue, 20 December 22

Follow Us
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ