AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Himachal Pradesh: ಹಿಮಾಚಲ ಪ್ರದೇಶ; ಅದಾನಿ ಕಂಪನಿ ಕಚೇರಿಗಳಲ್ಲಿ ಅಬಕಾರಿ, ತೆರಿಗೆ ಇಲಾಖೆ ಪರಿಶೀಲನೆ

ಅದಾನಿ ವಿಲ್ಮರ್ ಎಂಬುದು ಅದಾನಿ ಸಮೂಹ ಮತ್ತು ಸಿಂಗಾಪುರ ಮೂಲದ ವಿಲ್ಮರ್ ಗ್ರೂಪ್​​​ ಜಂಟಿಯಾಗಿ 50:50ರ ಪಾಲುದಾರಿಕೆಯಲ್ಲಿ ನಡೆಸುತ್ತಿರುವ ಕಂಪನಿಯಾಗಿದೆ. ಅದಾನಿ ಸಮೂಹದ ಒಟ್ಟು 7 ಕಂಪನಿಗಳು ಹಿಮಾಚಲ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿವೆ.

Himachal Pradesh: ಹಿಮಾಚಲ ಪ್ರದೇಶ; ಅದಾನಿ ಕಂಪನಿ ಕಚೇರಿಗಳಲ್ಲಿ ಅಬಕಾರಿ, ತೆರಿಗೆ ಇಲಾಖೆ ಪರಿಶೀಲನೆ
ಅದಾನಿ ಗ್ರೂಪ್ ಮತ್ತು ಗೌತಮ್ ಅದಾನಿ (ಸಂಗ್ರಹ ಚಿತ್ರ)
ಗಣಪತಿ ಶರ್ಮಾ
|

Updated on:Feb 09, 2023 | 2:35 PM

Share

ಶಿಮ್ಲಾ: ಹಿಮಾಚಲ ಪ್ರದೇಶದ (Himachal Pradesh) ಅಬಕಾರಿ, ತೆರಿಗೆ ಇಲಾಖೆ (State Excise and Taxation Department) ಅಧಿಕಾರಿಗಳು ಅದಾನಿ ವಿಲ್ಮರ್ (Adani Wilmar) ಮತ್ತು ಅದಾನಿ ಸಮೂಹದ (Adani Group) ಇತರ ಕಂಪನಿಗಳ ಕಚೇರಿ ಹಾಗೂ ಮಳಿಗೆಗಳಿಗೆ ತೆರಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಬಕಾರಿ ಇಲಾಖೆಯ ದಕ್ಷಿಣ ವಲಯದ ತಂಡವು ಬುಧವಾರ ರಾತ್ರಿ ಕಚೇರಿಗಳು ಮತ್ತು ಗೋದಾಮುಗಳಿಗೆ ತೆರಳಿ ಕಡತಗಳನ್ನು ಪರಿಶೀಲಿಸಿದೆ. ತೆರಿಗೆ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಈ ಪರಿಶೀಲನೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಅದಾನಿ ವಿಲ್ಮರ್ ಗ್ರೂಪ್ ಆರೋಪವನ್ನು ಅಲ್ಲಗಳೆದಿದ್ದು, ನಿಯಮಿತ ತಪಾಸಣೆ ಪ್ರಕ್ರಿಯೆಯ ಭಾಗವಾಗಿ ಅಧಿಕಾರಿಗಳು ಕಚೇರಿಗಳಿಗೆ ಬಂದು ಪರಿಶೀಲನೆ ನಡೆಸಿದ್ದಾರಷ್ಟೇ ಎಂದು ತಿಳಿಸಿದೆ. ಅದಾನಿ ವಿಲ್ಮರ್ ಎಂಬುದು ಅದಾನಿ ಸಮೂಹ ಮತ್ತು ಸಿಂಗಾಪುರ ಮೂಲದ ವಿಲ್ಮರ್ ಗ್ರೂಪ್​​​ ಜಂಟಿಯಾಗಿ 50:50ರ ಪಾಲುದಾರಿಕೆಯಲ್ಲಿ ನಡೆಸುತ್ತಿರುವ ಕಂಪನಿಯಾಗಿದೆ. ಅದಾನಿ ಸಮೂಹದ ಒಟ್ಟು 7 ಕಂಪನಿಗಳು ಹಿಮಾಚಲ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿವೆ. ಕಂಪನಿಗಳು ಬೃಹತ್ ಪ್ರಮಾಣದಲ್ಲಿ ದಿನಸಿ ವಸ್ತುಗಳ ಪೂರೈಕೆಯನ್ನೂ ಮಾಡುತ್ತಿವೆ. ಅದಾನಿ ಸಮೂಹವು ಡಿಸೆಂಬರ್​ನಲ್ಲಿ ಕೊನೆಗೊಂಡ ತ್ರೈಮಾಸಿಕ ಅವಧಿಯಲ್ಲಿ ಶೇ 16ರರಷ್ಟು, ಅಂದರೆ 246.16 ಕೋಟಿ ರೂ. ಕ್ರೂಡೀಕೃತ ಲಾಭ ಗಳಿಸಿತ್ತು.

ಅಮೆರಿಕದ ಹಿಂಡನ್​​ಬರ್ಗ್ ರಿಸರ್ಚ್ ಮಾಡಿದ್ದ ಅಕ್ರಮದ ಆರೋಪದ ಪರಿಣಾಮವಾಗಿ ಅದಾನಿ ಸಮೂಹದ ಸಂಪತ್ತು ಗಣನೀಯವಾಗಿ ಕಡಿಮೆಯಾಗಿರುವ ಬೆನ್ನಲ್ಲೇ ಈ ದಾಳಿ ನಡೆದಿದೆ. ಕಳೆದ ಎರಡು ವಾರಗಳಲ್ಲಿ ಷೇರುಪೇಟೆಯಲ್ಲಿ ಅದಾನಿ ಸಮೂಹ ಕಂಪನಿಗಳ ಷೇರುಗಳ ಮೌಲ್ಯದಲ್ಲಿ ಭಾರೀ ಕುಸಿತವಾಗಿತ್ತು. ಇದೀಗ ಕೆಲವು ಕಂಪನಿಗಳ ಷೇರು ಮೌಲ್ಯ ಮತ್ತೆ ಚೇತರಿಕೆ ದಾಖಲಿಸಿವೆ.

ಇದನ್ನೂ ಓದಿ: Adani Enterprises: ಅಪ್ಪರ್​ ಸರ್ಕ್ಯೂಟ್​​ನಲ್ಲಿ ಅದಾನಿ ಎಂಟರ್​ಪ್ರೈಸಸ್ ಷೇರು; ಮೌಲ್ಯದಲ್ಲಿ ಭಾರೀ ಜಿಗಿತ

ಅದಾನಿ ಸಮೂಹದ ಪ್ರಮುಖ ಕಂಪನಿ ಅದಾನಿ ಎಂಟರ್​ಪ್ರೈಸಸ್ ಕಳೆದ ಕೆಲವು ದಿನಗಳ ವಹಿವಾಟಿನಲ್ಲಿ ಮತ್ತೆ ಅಪ್ಪರ್​​​​ ಸರ್ಕ್ಯೂಟ್​​ನಲ್ಲಿ ವಹಿವಾಟು ನಡೆಸಿವೆ. ಕಳೆದ ನಾಲ್ಕು ದಿನಗಳ ಟ್ರೇಡಿಂಗ್​​​ನಲ್ಲಿ ಕಂಪನಿಯ ಷೇರು ಮಲ್ಟಿ ಬ್ಯಾಗರ್ ಆಗಿ ಪರಿಣಮಿಸಿದ್ದು, ಶೇ 102ರಷ್ಟು ಮೌಲ್ಯ ವೃದ್ಧಿ ದಾಖಲಿಸಿದ್ದವು. ಅದಾನಿ ಸಮೂಹದ ಕಂಪನಿಗಳ ಪೈಕಿ 9ರ ಷೇರು ಮೌಲ್ಯದಲ್ಲಿ ಬುಧವಾರ ಚೇತರಿಕೆ ಕಂಡಿತ್ತು.

ಸಾಮಾನ್ಯ ತಪಾಸಣೆ; ಅದಾನಿ ವಿಲ್ಮರ್ ಸ್ಪಷ್ಟನೆ

ಅದಾನಿ ವಿಲ್ಮರ್ ಗ್ರೂಪ್ ಹಾಗೂ ಅದಾನಿ ಸಮೂಹದ ಇತರ ಕಂಪನಿಗಳ ಮೇಲೆ ಹಿಮಾಚಲ ಪ್ರದೇಶದ ಅಬಕಾರಿ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ವರದಿಗಳನ್ನು ಕಂಪನಿ ಅಲ್ಲಗಳೆದಿದೆ. ಮಾಮೂಲಿ ತಪಾಸಣೆ ಪ್ರಕ್ರಿಯೆಯ ಭಾಗವಾಗಿ ಮಾತ್ರವೇ ಅಧಿಕಾರಿಗಳು ಕಚೇರಿಗಳಲ್ಲಿ ತಪಾಸಣೆ ನಡೆಸಿದ್ದಾರೆ ಎಂದು ಕಂಪನಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:03 pm, Thu, 9 February 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ