Amazon: ಆಹಾರ ವಿತರಣೆ ಉದ್ಯಮವನ್ನೂ ಸ್ಥಗಿತಗೊಳಿಸಲಿದೆ ಅಮೆಜಾನ್

2020ರ ಮೇ ತಿಂಗಳಲ್ಲಿ, ಕೋವಿಡ್ ಲಾಕ್​​ಡೌನ್ ಸಂದರ್ಭದಲ್ಲಿ ಅಮೆಜಾನ್ ಇಂಡಿಯಾ ಆಹಾರ ವಿತರಣೆ ಉದ್ಯಮವನ್ನು ಆರಂಭಿಸಿತ್ತು.

Amazon: ಆಹಾರ ವಿತರಣೆ ಉದ್ಯಮವನ್ನೂ ಸ್ಥಗಿತಗೊಳಿಸಲಿದೆ ಅಮೆಜಾನ್
ಅಮೆಜಾನ್Image Credit source: PTI
Follow us
TV9 Web
| Updated By: Ganapathi Sharma

Updated on:Nov 26, 2022 | 11:24 AM

ನವದೆಹಲಿ: ಎಜುಟೆಕ್ ತಾಣ ಅಮೆಜಾನ್​ ಅಕಾಡೆಮಿಯನ್ನು (Amazon Academy) ಹಂತ ಹಂತವಾಗಿ ಮುಚ್ಚುವುದಾಗಿ ತಿಳಿಸಿದ ಮರುದಿನವೇ,ಆಹಾರ ವಿತರಣೆ (Food Delivery) ಉದ್ಯಮವನ್ನೂ ಸ್ಥಗಿತಗೊಳಿಸುವುದಾಗಿ ಅಮೆಜಾನ್ ಇಂಡಿಯಾ (Amazon India) ತಿಳಿಸಿದೆ ಎಂದು ವರದಿಯಾಗಿದೆ. ಆಹಾರ ವಿತರಣೆ ಸೇವೆಯನ್ನು ಡಿಸೆಂಬರ್ 29ರಿಂದ ನಿಲ್ಲಿಸುವುದಾಗಿ ಪಾಲುದಾರರಿಗೆ ಅಮೆಜಾನ್ ತಿಳಿಸಿದೆ ಎಂದು ‘ಮನಿ ಕಂಟ್ರೋಲ್’ ವರದಿ ಮಾಡಿದೆ. 2020ರ ಮೇ ತಿಂಗಳಲ್ಲಿ, ಕೋವಿಡ್ ಲಾಕ್​​ಡೌನ್ ಸಂದರ್ಭದಲ್ಲಿ ಅಮೆಜಾನ್ ಇಂಡಿಯಾ ಆಹಾರ ವಿತರಣೆ ಉದ್ಯಮವನ್ನು ಆರಂಭಿಸಿತ್ತು.

ಹೀಗಾಗಿ ಡಿಸೆಂಬರ್ 29ರ ನಂತರ ‘ಅಮೆಜಾನ್ ಫುಡ್​’ ಮೂಲಕ ಗ್ರಾಹಕರು ಆಹಾರವನ್ನು ತರಿಸಿಕೊಳ್ಳಲು ಸಾಧ್ಯವಾಗದು. ಅಲ್ಲಿಯವರೆಗೂ ನೀವು ಆರ್ಡರ್​ಗಳನ್ನು ಸ್ವೀಕರಿಸಬಹುದು. ಕೊನೆಯ ದಿನಾಂಕದ ವರೆಗೂ ಗ್ರಾಹಕರಿಗೆ ಸೇವೆ ನೀಡುತ್ತೇವೆ ಎಂದು ರೆಸ್ಟೋರೆಂಟ್ ಮಾಲೀಕರಿಗೆ ಅಮೆಜಾನ್ ಫುಡ್ ಕಳುಹಿಸಿದ ಇ-ಮೇಲ್ ಸಂದೇಶದಿಂದ ತಿಳಿದುಬಂದಿದೆ ಎಂದು ವರದಿ ಉಲ್ಲೇಖಿಸಿದೆ.

ಬಾಕಿ ಇರುವ ಎಲ್ಲಾ ಪಾವತಿಗಳು ಮತ್ತು ಇತರ ಒಪ್ಪಂದದ ಬಾಧ್ಯತೆಗಳನ್ನು ಪೂರೈಸುವುದಾಗಿ ರೆಸ್ಟೋರೆಂಟ್ ಪಾಲುದಾರರಿಗೆ ಅಮೆಜಾನ್ ಭರವಸೆ ನೀಡಿದೆ ಎಂದೂ ವರದಿ ತಿಳಿಸಿದೆ.

ಆರ್ಥಿಕ ಸಂಕಷ್ಟದ ಕಾರಣ ಎಜುಟೆಕ್ ತಾಣ ಅಮೆಜಾನ್​ ಅಕಾಡೆಮಿಯನ್ನು ಹಂತ ಹಂತವಾಗಿ ಮುಚ್ಚಲಾಗುವುದು ಎಂದು ಅಮೆಜಾನ್ ಹೇಳಿರುವುದಾಗಿ ಶುಕ್ರವಾರ ವರದಿಯಾಗಿತ್ತು. ಇದರೊಂದಿಗೆ ಭಾರತದಲ್ಲಿ ಕಾರ್ಯಾರಂಭ ಮಾಡಿದ ಎರಡು ವರ್ಷಗಳ ಒಳಗಾಗಿ ತಾಣ ಸ್ಥಗಿತಗೊಂಡಂತಾಗಲಿದೆ. ಅಮೆಜಾನ್ ಅಕಾಡೆಮಿಯನ್ನು ಕೂಡ ಕೋವಿಡ್ ಎರಡನೇ ಲಾಕ್​ಡೌನ್ ಸಂದರ್ಭದಲ್ಲಿ ಆರಂಭಿಸಲಾಗಿತ್ತು. ಜಾಗತಿಕ ಮಟ್ಟದಲ್ಲಿ ಸುಮಾರು 10 ಸಾವಿರ ನೌಕರರನ್ನು ಕೆಲಸದಿಂದ ವಜಾಗೊಳಿಸಲು ಚಿಂತನೆ ನಡೆಸಿರುವುದಾಗಿ ಅಮೆಜಾನ್ ಕಂಪನಿ ಇತ್ತೀಚೆಗೆ ಹೇಳಿತ್ತು. ಇದರ ಬೆನ್ನಲ್ಲೇ ಭಾರತದಲ್ಲಿ ಹಲವು ಉದ್ಯೋಗಿಗಳಿಗೆ ಸ್ವಯಂಪ್ರೇರಿತ ಬೇರ್ಪಡಿಕೆ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ವರದಿಯಾಗಿತ್ತು. ಕಾರ್ಮಿಕ ಕಾನೂನನ್ನು ಕಂಪನಿ ಉಲ್ಲಂಘಿಸುತ್ತಿದೆ ಎಂಬ ದೂರುಗಳೂ ಕೇಳಿಬಂದಿದ್ದು, ಇದಕ್ಕಾಗಿ ಕಾರ್ಮಿಕ ಸಚಿವಾಲಯದಿಂದ ಕಂಪನಿಗೆ ಸಮನ್ಸ್ ನೀಡಲಾಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:24 am, Sat, 26 November 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ