AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPI Inflation: ಚಿಲ್ಲರೆ ಹಣದುಬ್ಬರ ಆಯ್ತು, ಸಗಟು ಹಣದುಬ್ಬರವೂ 21 ತಿಂಗಳ ಕನಿಷ್ಠಕ್ಕೆ ಇಳಿಕೆ

ಇದರೊಂದಿಗೆ ಸಗಟು ದರ ಸೂಚ್ಯಂಕ ಆಧಾರಿತ ಹಣದುಬ್ಬರ ಸತತ ಎರಡನೇ ತಿಂಗಳು ಕೂಡ ಎರಡಂಕಿಗಿಂತ ಕೆಳಗಿನ ಮಟ್ಟದಲ್ಲಿದೆ. 2021ರ ಏಪ್ರಿಲ್​ ನಂತರ ಸತತ 18 ತಿಂಗಳ ಕಾಲ ಶೇಕಡಾ 10ಕ್ಕಿಂತ ಮೇಲ್ಮಟ್ಟದಲ್ಲಿತ್ತು.

WPI Inflation: ಚಿಲ್ಲರೆ ಹಣದುಬ್ಬರ ಆಯ್ತು, ಸಗಟು ಹಣದುಬ್ಬರವೂ 21 ತಿಂಗಳ ಕನಿಷ್ಠಕ್ಕೆ ಇಳಿಕೆ
ಹಣದುಬ್ಬರ (ಸಾಂದರ್ಭಿಕ ಚಿತ್ರ)Image Credit source: PTI
TV9 Web
| Updated By: Ganapathi Sharma|

Updated on:Dec 14, 2022 | 4:01 PM

Share

ನವದೆಹಲಿ: ಚಿಲ್ಲರೆ ಹಣದುಬ್ಬರ (Retail Inflation) ಪ್ರಮಾಣ 11 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿಕೆಯಾದ ಬೆನ್ನಲ್ಲೇ ಇದೀಗ ಸಗಟು (ಹೋಲ್​ಸೇಲ್) ದರ ಸೂಚ್ಯಂಕ (WPI) ಆಧಾರಿತ ಹಣದುಬ್ಬರವೂ 21 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದೆ. ನವೆಂಬರ್​​ ತಿಂಗಳ ಡಬ್ಲ್ಯುಪಿಐ ಹಣದುಬ್ಬರ ಪ್ರಮಾಣ ಶೇಕಡಾ 5.85ಕ್ಕೆ ಇಳಿಕೆಯಾಗಿರುವುದು ಸರ್ಕಾರದ ದತ್ತಾಂಶಗಳಿಂದ ತಿಳಿದುಬಂದಿದೆ. ಅಕ್ಟೋಬರ್​​ನಲ್ಲಿ ಹೋಲ್​ಸೇಲ್ ಹಣದುಬ್ಬರ ಪ್ರಮಾಣ ಶೇಕಡಾ 8.39ರಷ್ಟಿತ್ತು. ಇದರೊಂದಿಗೆ ಸಗಟು ದರ ಸೂಚ್ಯಂಕ ಆಧಾರಿತ ಹಣದುಬ್ಬರ ಸತತ ಎರಡನೇ ತಿಂಗಳು ಕೂಡ ಎರಡಂಕಿಗಿಂತ ಕೆಳಗಿನ ಮಟ್ಟದಲ್ಲಿದೆ. 2021ರ ಏಪ್ರಿಲ್​ ನಂತರ ಸತತ 18 ತಿಂಗಳ ಕಾಲ ಶೇಕಡಾ 10ಕ್ಕಿಂತ ಮೇಲ್ಮಟ್ಟದಲ್ಲಿತ್ತು. 2021ರ ನವೆಂಬರ್​ನಲ್ಲಿ ಶೇಕಡಾ 14.87ರಷ್ಟಿತ್ತು.

‘ಆಹಾರ ವಸ್ತುಗಳು, ಲೋಹಗಳು, ಜವಳಿ, ರಾಸಾಯನಿಕ ಮತ್ತು ರಾಸಾಯನಿಕ ಉತ್ಪನ್ನಗಳ ದರ ಇಳಿಕೆ, ಹಿಂದಿನ ವರ್ಷಕ್ಕೆ ಹೋಲಿಸಿದರೆ ಪೇಪರ್ ದರದಲ್ಲಿ ಇಳಿಕೆಯಾಗಿರುವುದು ಸಗಟು ದರ ಸೂಚ್ಯಂಕ ಆಧಾರಿತ ಹಣದುಬ್ಬರ ಇಳಿಕೆಯಾಗಲು ಕಾರಣ’ ಎಂದು ವಾಣಿಜ್ಯ ಸಚಿವಾಲಯ ತಿಳಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ತರಕಾರಿ ದರದಲ್ಲಿ ಶೇಕಡಾ 20.08ರಷ್ಟು ಇಳಿಕೆಯಾಗಿದೆ. ಈರುಳ್ಳಿ ದರ ಶೇಕಡಾ 19.19ರಷ್ಟು ಕುಸಿತವಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: Retail Inflation: ಕೊನೆಗೂ ಆರ್​ಬಿಐ ಸಹನೆಯ ಮಟ್ಟಕ್ಕೆ ಚಿಲ್ಲರೆ ಹಣದುಬ್ಬರ; ಶೇ 5.88ಕ್ಕೆ ಇಳಿಕೆ

ಸಗಟು ಆಹಾರ ದರ ಸೂಚ್ಯಂಕ ಆಧಾರಿತ ಹಣದುಬ್ಬರ ಅಕ್ಟೋಬರ್​ನಲ್ಲಿ ಶೇಕಡಾ 6.48 ಇದ್ದುದು ನವೆಂಬರ್​ನಲ್ಲಿ ಶೇಕಡಾ 2.17ಕ್ಕೆ ಇಳಿಕೆಯಾಗಿದೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ.

ಗರಿಷ್ಠ ಮಟ್ಟದಲ್ಲೇ ಇದೆ ಇಂಧನ, ವಿದ್ಯುತ್ ಹಣದುಬ್ಬರ

ಇಂಧನ ಮತ್ತು ವಿದ್ಯುತ್ ಕ್ಷೇತ್ರದ ಹಣದುಬ್ಬರ ಹೆಚ್ಚಿನ ಮಟ್ಟದಲ್ಲಿಯೇ ಇದೆ. ಇದು ಈ ವರ್ಷ ಶೇಕಡಾ 17.35ರಷ್ಟಾಗಿದೆ. ತಿಂಗಳಿನಿಂದ ತಿಂಗಳಿಗೆ ಹೋಲಿಸಿದರೂ ಗರಿಷ್ಠ ಮಟ್ಟದಲ್ಲಿಯೇ ಇದೆ. ಉಳಿದಂತೆ ಎಲ್ಲ ಕ್ಷೇತ್ರಗಳ ಹಣದುಬ್ಬರ ಇಳಿಕೆಯಾಗಿದೆ. ಕಚ್ಚಾ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಹಣದುಬ್ಬರ ನವೆಂಬರ್​​ನಲ್ಲಿ ಶೇಕಡಾ 48.23ರಷ್ಟಿತ್ತು ಎಂದು ಸಚಿವಾಲಯ ತಿಳಿಸಿದೆ.

ನವೆಂಬರ್ ತಿಂಗಳ ಚಿಲ್ಲರೆ ಹಣದುಬ್ಬರ ಪ್ರಮಾಣ ನವೆಂಬರ್​ನಲ್ಲಿ ಶೇಕಡಾ 5.88ಕ್ಕೆ ಇಳಿಕೆಯಾಗಿದೆ ಎಂದು ಇತ್ತೀಚೆಗೆ ಸರ್ಕಾರ ಬಿಡುಗಡೆ ಮಾಡಿರುವ ಅಂಕಿಅಂಶದಿಂದ ತಿಳಿದುಬಂದಿತ್ತು. ಹಣದುಬ್ಬರ ಏರಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಆರ್​ಬಿಐ ಹಣಕಾಸು ನೀತಿ ಸಮಿತಿಯು ಡಿಸೆಂಬರ್ 7ರಂದು ರೆಪೊ ದರವನ್ನು 35 ಮೂಲಾಂಶದಷ್ಟು ಹೆಚ್ಚಿಸಿ ಶೇಕಡಾ 6.25ಕ್ಕೆ ನಿಗದಿ ಮಾಡಿತ್ತು. ಇದರ ಬೆನ್ನಲ್ಲೇ ಹಣದುಬ್ಬರಗಳಲ್ಲಿ ಇಳಿಕೆ ಕಂಡುಬಂದಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:04 pm, Wed, 14 December 22

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ