AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2023: ಬಜೆಟ್​ಗೆ ಮುನ್ನ ಹಣಕಾಸು ಸಚಿವೆಯಿಂದ ರಾಷ್ಟ್ರಪತಿ ಭೇಟಿ

Finance Minister Meets The President: ಬುಧವಾರ ಬೆಳಗ್ಗೆ ಹಣಕಾಸು ಸಚಿವಾಲಯಕ್ಕೆ ಬಂದ ನಿರ್ಮಲಾ ಸೀತಾರಾಮನ್, ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ. ನಿರ್ಮಲಾ ಸೀತಾರಾಮನ್ ಜೊತೆ ರಾಜ್ಯಖಾತೆ ಸಚಿವರಾದ ಪಂಕಜ್ ಚೌಧರಿ ಮತ್ತು ಭಗವತ್ ಕರಾಡ್ ಹಾಗು ಹಣಕಾಸು ಇಲಾಖೆ ಕಾರ್ಯದರ್ಶಿಗಳು ರಾಷ್ಟ್ರಪತಿಗಳ ಭೇಟಿ ವೇಳೆ ಇದ್ದರು.

Union Budget 2023: ಬಜೆಟ್​ಗೆ ಮುನ್ನ ಹಣಕಾಸು ಸಚಿವೆಯಿಂದ ರಾಷ್ಟ್ರಪತಿ ಭೇಟಿ
ಬಜೆಟ್​ಗೆ ಮುನ್ನ ಹಣಕಾಸು ಸಚಿವೆಯಿಂದ ರಾಷ್ಟ್ರಪತಿ ಭೇಟಿImage Credit source: Rashtrapati bhavan twitter
TV9 Web
| Edited By: |

Updated on:Feb 01, 2023 | 9:43 AM

Share

ನವದೆಹಲಿ: ಇಂದು ಕೇಂದ್ರ ಸರ್ಕಾರದ ಕೊನೆಯ ಪೂರ್ಣಪ್ರಮಾಣದ ಬಜೆಟ್ (Union Budget 2023) ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾಮನ್ (Finance Minister Nirmala Sitharaman) ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡಿಸುತ್ತಿದ್ದಾರೆ. ಇದು ಅವರ 5ನೇ ಬಜೆಟ್ ಆಗಿದೆ. ಬುಧವಾರ ಬೆಳಗ್ಗೆ ಹಣಕಾಸು ಸಚಿವಾಲಯಕ್ಕೆ ಬಂದ ಅವರು, ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ. ನಿರ್ಮಲಾ ಸೀತಾರಾಮನ್ ಜೊತೆ ರಾಜ್ಯಖಾತೆ ಸಚಿವರಾದ ಪಂಕಜ್ ಚೌಧರಿ ಮತ್ತು ಭಗವತ್ ಕರಾಡ್ ಹಾಗು ಹಣಕಾಸು ಇಲಾಖೆ ಕಾರ್ಯದರ್ಶಿಗಳು ರಾಷ್ಟ್ರಪತಿಗಳ ಭೇಟಿ ವೇಳೆ ಇದ್ದರು.

ಬೆಳಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಪುಟ ಸಭೆ ನಡೆಸಲಿದ್ದಾರೆ. ಅದಾದ ಬಳಿಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್​ನ ಜಂಟಿ ಅಧಿವೇಶನದಲ್ಲಿ ಬೆಳಗ್ಗೆ 11ಗಂಟೆಗೆ ಬಜೆಟ್ ಮಂಡನೆ ಮಾಡಲಿದ್ದಾರೆ.

ಇದನ್ನೂ ಓದಿ: Budget 2023 Live Stream: ಇಂದು ಕೇಂದ್ರ ಬಜೆಟ್​; ಮಂಡನೆ ಸಮಯ, ಲೈವ್​ ವಿಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ

ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಡಾ. ಭಾಗವತ್ ಕೆ ಕರಾಡ್ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಸಮಾಜದ ಪ್ರತಿಯೊಂದು ವರ್ಗದ ಜನರ ನಿರೀಕ್ಷೆಗಳನ್ನು ಈ ಬಜೆಟ್​ನಲ್ಲಿ ಪೂರೈಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

ಮುಂದಿನ ವರ್ಷ ಲೋಕಸಭಾ ಚುನಾವಣೆ ಇರುವುದರಿಂದ ಇದು ಕೇಂದ್ರ ಸರ್ಕಾರಕ್ಕೆ ಕೊನೆಯ ಪೂರ್ಣಪ್ರಮಾಣದ ಬಜೆಟ್ ಆಗಿದೆ. ಬಹಳಷ್ಟು ನಿರೀಕ್ಷೆಗಳನ್ನು ಇಟ್ಟುಕೊಳ್ಳಲಾಗಿದೆ. ಆದಾಯ ತೆರಿಗೆಯ ಸ್ಲಾಬ್​ಗಳಲ್ಲಿ ಸರ್ಕಾರ ಬದಲಾವಣೆ ತರುವ ಸಾಧ್ಯತೆ ಇದೆ.

Published On - 9:35 am, Wed, 1 February 23

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು