
ನವದೆಹಲಿ: ಇಂದು ಕೇಂದ್ರ ಸರ್ಕಾರದ ಕೊನೆಯ ಪೂರ್ಣಪ್ರಮಾಣದ ಬಜೆಟ್ (Union Budget 2023) ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾಮನ್ (Finance Minister Nirmala Sitharaman) ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡಿಸುತ್ತಿದ್ದಾರೆ. ಇದು ಅವರ 5ನೇ ಬಜೆಟ್ ಆಗಿದೆ. ಬುಧವಾರ ಬೆಳಗ್ಗೆ ಹಣಕಾಸು ಸಚಿವಾಲಯಕ್ಕೆ ಬಂದ ಅವರು, ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ. ನಿರ್ಮಲಾ ಸೀತಾರಾಮನ್ ಜೊತೆ ರಾಜ್ಯಖಾತೆ ಸಚಿವರಾದ ಪಂಕಜ್ ಚೌಧರಿ ಮತ್ತು ಭಗವತ್ ಕರಾಡ್ ಹಾಗು ಹಣಕಾಸು ಇಲಾಖೆ ಕಾರ್ಯದರ್ಶಿಗಳು ರಾಷ್ಟ್ರಪತಿಗಳ ಭೇಟಿ ವೇಳೆ ಇದ್ದರು.
ಬೆಳಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಪುಟ ಸಭೆ ನಡೆಸಲಿದ್ದಾರೆ. ಅದಾದ ಬಳಿಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ನ ಜಂಟಿ ಅಧಿವೇಶನದಲ್ಲಿ ಬೆಳಗ್ಗೆ 11ಗಂಟೆಗೆ ಬಜೆಟ್ ಮಂಡನೆ ಮಾಡಲಿದ್ದಾರೆ.
ಇದನ್ನೂ ಓದಿ: Budget 2023 Live Stream: ಇಂದು ಕೇಂದ್ರ ಬಜೆಟ್; ಮಂಡನೆ ಸಮಯ, ಲೈವ್ ವಿಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ
ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಡಾ. ಭಾಗವತ್ ಕೆ ಕರಾಡ್ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಸಮಾಜದ ಪ್ರತಿಯೊಂದು ವರ್ಗದ ಜನರ ನಿರೀಕ್ಷೆಗಳನ್ನು ಈ ಬಜೆಟ್ನಲ್ಲಿ ಪೂರೈಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
ಮುಂದಿನ ವರ್ಷ ಲೋಕಸಭಾ ಚುನಾವಣೆ ಇರುವುದರಿಂದ ಇದು ಕೇಂದ್ರ ಸರ್ಕಾರಕ್ಕೆ ಕೊನೆಯ ಪೂರ್ಣಪ್ರಮಾಣದ ಬಜೆಟ್ ಆಗಿದೆ. ಬಹಳಷ್ಟು ನಿರೀಕ್ಷೆಗಳನ್ನು ಇಟ್ಟುಕೊಳ್ಳಲಾಗಿದೆ. ಆದಾಯ ತೆರಿಗೆಯ ಸ್ಲಾಬ್ಗಳಲ್ಲಿ ಸರ್ಕಾರ ಬದಲಾವಣೆ ತರುವ ಸಾಧ್ಯತೆ ಇದೆ.
Published On - 9:35 am, Wed, 1 February 23